Home Archive by category ರಾಷ್ಟ್ರೀಯ (Page 30)

‘ಪುನೀತ ನೆನಪು’ ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಅಪ್ಪು ‘ನುಡಿನಮನ’ : ದ್ವಾರಕೀಶ್, ಎಂ.ಬಿ ಪಾಟೀಲ್ ಭಾಗಿ

ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾದ ಕನ್ನಡ ಚಿತ್ರರಂಗದ ಯುವರತ್ನ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ‘ಪುನೀತ ನೆನಪು’ ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು. ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ್ಲಿ ನೆಲೆಸಿರುವ 38ಕ್ಕೂ

ಲಂಡನ್‌ನಲ್ಲಿ ವಿಶ್ವ ಪ್ರವಾಸೋದ್ಯಮ ಮಾರುಕಟ್ಟೆ ಸಮಾವೇಶ

ಲಂಡನ್ ನಗರದಲ್ಲಿ ವಿಶ್ವ ಪ್ರವಾಸೋದ್ಯಮ ಮಾರುಕಟ್ಟೆ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಮಳಿಗೆಯನ್ನು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷರಾದ ಶ್ರೀ ಅಪ್ಪಣ್ಣ ರವರು ಉದ್ಘಾಟಿಸಿದರು. ಇವರೊಂದಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವಿಜಯ್ ಶರ್ಮ, ನಿರ್ದೇಶಕರಾದ ಶ್ರೀಮತಿ ಸಿಂಧು ಬಿ ರೂಪೇಶ್ ಹಾಗೂ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಪ್ರಧಾನ ವ್ಯವಸ್ಥಾಪಕರಾದ ಯುವರಾಜ್ ರವರು ಭಾಗವಹಿಸಿದ್ದರು. ಕೋವಿಡ್

ಮಲಾಡ್ ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಪನ್ನ

ಮುಂಬೈ: ಉಪನಗರ ಮಲಾಡ್ ಪೂರ್ವದ ಕುರಾರ್ ವಿ ಲೇಜಿನಲ್ಲಿ ಸುಮಾರು 50 ವರ್ಷಗಳ ಹಿಂದೆ ಕೈವಲ್ಯ ಶ್ರೀ ಪ್ರೇಮಾನಂದ ಸ್ವಾಮೀಜಿ ಸ್ಥಾಪಿಸಿರುವ ಶ್ರೀ ಮೂಕಾಂಬಿಕಾ ದೇವಸ್ಥಾನ ಈ ವರ್ಷ ಪೂರ್ಣ ನವೀಕೃತಗೊಂಡ ಜೀರ್ಣೋದ್ದಾರ ವಾಗಿದೆ. ಶ್ರೀ ಪ್ರೇಮಾನಂದ ಸ್ವಾಮೀಜಿ ಯವರು ಶ್ರದ್ಧಾ ಭಕ್ತಿಯೊಂದಿಗೆ ನವರಾತ್ರಿ ಉತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದರು. ಅದೇ ಧಾರ್ಮಿಕತೆಯ ನಿಯಮದಲ್ಲಿ ಸ್ವಾಮೀಜಿಯವರ ಸುಪುತ್ರ ಶ್ರೀ ವೇದ ನಂದ ಸ್ವಾಮೀಜಿಯವರು ಈ ವರ್ಷ ನವರಾತ್ರಿ ಉತ್ಸವವನ್ನು

ಕನ್ನಡ ಸಿನಿಮಾ ನಟ ಸತ್ಯಜಿತ್ ನಿಧನ

ಹಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ತಡರಾತ್ರಿ ಎರಡು ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ. ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸತ್ಯಜಿತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದ ಸತ್ಯಜಿತ್ ಆ ಮೂಲಕ ಚಿತ್ರರಂಗದಲ್ಲಿ ಹೆಸರು ಮಾಡಿದ್ದರು. ಚಂದನವನದ ಹಲವಾರು ಸ್ಟಾರ್​ ಕಲಾವಿದರ ಸಿನಿಮಾಗಳಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು. ಸತ್ಯಜಿತ್

ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿಯಾದ ಕನ್ನಡ ಸಂಘ ಬಹರೈನ್ ನಿಯೋಗದ ಸದಸ್ಯರು

ಕನ್ನಡ ಸಂಘ ಬಹ್ರೈನ್‌ನ ನಿಯೋಗದ ಸದಸ್ಯರು ಇಂದು ಬಹ್ರೈನ್‌ನಲ್ಲಿರುವ ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿ ಮಾಡಿದರು. ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಿರಣ್ ಉಪಾಧ್ಯಾಯ, ಮಾಜಿ ಅಧ್ಯಕ್ಷರು ಮತ್ತು ಕನ್ನಡ ಭವನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಆಸ್ಟಿನ್ ಸಂತೋಷ್, ಕಟ್ಟಡ ನಿಧಿ ಸಂಗ್ರಹಣೆ ಸಮಿತಿಯ ಅಧ್ಯಕ್ಷರಾದ ಅಮರನಾಥ್ ರೈ ಇದ್ದರು. ಭೇಟಿಯ ಸಂದರ್ಭದಲ್ಲಿ ನೂತನ ಕಟ್ಟಡ ನಿರ್ಮಾಣ, ಕರ್ನಾಟಕ

ಭವಾನಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು

ಭವಾನಿಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58,389 ಮತಗಳಿಂದ ಜಯಗಳಿಸಿದ್ದಾರೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದು, ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರು. ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ ಅವರನ್ನು 58 ಸಾವಿರ ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಮಮತಾ ಬ್ಯಾನರ್ಜಿಗೆ ಉಪಚುನಾವಣೆ ಗೆಲುವು ಮುಖ್ಯವಾಗಿತ್ತು. ಆರಂಭಿಕ

ರೈತರಿಂದ ಭಾರತ್ ಬಂದ್ : ಹಲವು ರಾಜ್ಯಗಳಲ್ಲಿ ಯಶಸ್ವಿ

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್‌ಗೆ ದೇಶಾದಂತ್ಯ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಗ್ಗೆ 6 ಗಂಟೆಗೆ ಜನ ಬೀದಿಗಿಳಿದು ರೈತರಿಗೆ ಬೆಂಬಲ ನೀಡಿದ್ದಾರೆ. ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ವಿವಾದಿತ ಕೃಷಿ ಕಾನೂನುಗಳ ಜಾರಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ರೈತ ಸಂಘಟನೆಗಳು “ಭಾರತ್ ಬಂದ್” ಗೆ ಕರೆ ನೀಡಿವೆ. ಬೆಳಗ್ಗೆ 6 ಗಂಟೆಗೆ ಬಂದ್ ಆರಂಭವಾಗಿದ್ದು, ಇಂದು ಸಂಜೆ 4 ಗಂಟೆಯವರೆಗೂ ಮುಂದುವರಿಯಲಿದೆ.ಪಂಜಾಬ್

ರಾಜ್ಯ ಮಟ್ಟದ ಸ್ವಿಮ್ಮಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಈಜುಪಟುಗಳಿಂದ ಪದಕಗಳ ಬೇಟೆ

ಬೆಂಗಳೂರಿನ ಬಸವನಗುಡಿಯ ಅಕ್ವಾಟಿಕ್ ಸೆಂಟರ್ ನಲ್ಲಿ ರಾಜ್ಯ ಸಬ್ ಜೂನಿಯರ್ ಮತ್ತು ಜೂನಿಯರ್ ಅಕ್ವಾಟಿಕ್ ಚಾಂಪಿಯನ್ ಶಿಪ್ ಸ್ಮಿಮ್ಮಿಂಗ್ ಸ್ಪರ್ಧೆ ನಡೆಯುತ್ತಿದ್ದು ಮಂಗಳೂರಿನ ವಿ ವನ್ ಅಕ್ವಾ ಸೆಂಟರ್‌ನ ಈಜು ಪಟುಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.ಇನ್ನು ಈ ಈಜುಪಟುಗಳು ಬೆಂಗಳೂರಿನ ಡಾಲ್ಪಿನ್ ಅಕ್ವಾಟಿಕ್ ಸೆಂಟರನ್ನು ಪ್ರತಿನಿಧಿಸುತ್ತಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ವಿ ವನ್ ಅಕ್ವಾ ಸೆಂಟರ್‌ನ ಈಜುಪಟುಗಳು ರಾಜ್ಯಮಟ್ಟದಲ್ಲಿ ಅದ್ವಿತೀಯ ಸಾಧನೆಯನ್ನು

ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿ: ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ, ಭಜನೆ, ಸ್ಥಳೀಯ ಬಂಟ ಮಹಿಳಾ ಸಾಧಕಿಯರಿಗೆ ಸನ್ಮಾನ

ಮೀರಾರೋಡ್ : ಬಂಟರ ಸಂಘ ಮುಂಬಯಿ ಇದರ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಸೆ. 14ರಂದು ಮೀರಾ ರೋಡ್ ಪೂರ್ವದ ಸಿನೆಮೆಕ್ಸ್ ಥಿಯೇಟರ್ ಎದುರಗಡೆ ಹೋಟೆಲ್ ಕೃಷ್ಣಾ ಪ್ಯಾಲೇಸನ ಸಭಾಂಗಣದಲ್ಲಿ ಹಳದಿ – ಕುಂಕುಮ , ಭಜನೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸ್ಥಳೀಯ ಬಂಟ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ್ ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ

ವ್ಯಾಪಾರ ಜಗತ್ತು ಡಿಜಿಟಲೀಕರಣಕ್ಕೆ ಸಜ್ಜಾಗಿ: ಬಿಸಿಸಿಐ ಯುಎಇ ವೆಬಿನಾರಿನಲ್ಲಿ ರಾಶಿದ್ ಹಜಾರಿ

‘ಡಿಜಿಟಲ್ ರೆವಲ್ಯೂಶನ್ ಆನ್ ಬ್ಯುಸಿನೆಸ್ ಆಂಡ್ ಎಂಟ್ರಪನರ್’ಶಿಪ್’ ಎಂಬ ವಿಷಯದಲ್ಲಿ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಯುಎಇ ವತಿಯಿಂದ ಸೆಪ್ಟೆಂಬರ್ 10ರಂದು‌ ಯಶಸ್ವಿ ವೆಬಿನಾರ್ ನಡೆಯಿತು. ಬಿಸಿಸಿಐ ಯುಎಇ ಚಾಪ್ಟರ್ ಅಧ್ಯಕ್ಷ ಎಸ್.ಎಂ ಬಶೀರ್ ತಮ್ಮ ಸ್ವಾಗತ ಮತ್ತು ಪ್ರಾಸ್ತಾವಿಕ ಭಾಷಣದಲ್ಲಿ ಬಿಸಿಸಿಐನ ಧ್ಯೇಯೋದ್ದೇಶಗಳನ್ನು ಸರಳವಾಗಿ ವಿವರಿಸಿ, ಯುಎಇ ಚಾಪ್ಟರ್ ನ ತಂಡವನ್ನು ಪರಿಚಯಿಸಿದರು.. ಉಪಾಧ್ಯಕ್ಷರಾದ