ನಿಟ್ಟೆ ವಿಶ್ವವಿದ್ಯಾಲಯವು ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ನಾಲ್ಕನೇ ಆವೃತ್ತಿಯ ನಿಟ್ಟೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಛಾಯಾಚಿತ್ರಗಳ ಪ್ರದರ್ಶನಗಳನ್ನು ಜೂನ್ 8 ರಿಂದ 11 ರ ವರೆಗೆ ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ಆಯೋಜಿಸಲಾಗಿದೆ ಎಂದು ನಿಟ್ಟೆ ಇನ್ಸ್ಟಿಟ್ಯೂಷನ್ ಆಫ್ ಕಮ್ಯುನಿಕೇಶನ್ ನ ಮುಖ್ಯಸ್ಥ ಪ್ರೊ. ರವಿರಾಜ್ ಅವರು
ಉಜಿರೆ: ಶ್ರೇಷ್ಠ ಹವ್ಯಾಸಗಳು ಮಾನವನ ಅಭಿವೃದ್ಧಿಗೆ ಪೂರಕ ಎಂದು ರುಡ್ ಸೆಟಿ ಸಂಸ್ಥೆಯ ತರಬೇತುದಾರೆ ಅನಸೂಯಾ ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಇತ್ತೀಚೆಗೆ ಹಾಬಿ ಸರ್ಕಲ್ ವತಿಯಿಂದ ಆಯೋಜಿಸಲಾಗಿದ್ದ ಒಂದು ದಿನದ ‘ಸಂಚಯ’ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಹವ್ಯಾಸಗಳಲ್ಲಿ ತೊಡಗುವುದರಿಂದ ಸಂತೋಷ ಲಭಿಸುತ್ತದೆ. ಮನುಷ್ಯನ ಜೀವನವನ್ನು ಹಸನುಗೊಳಿಸುವ ಶಕ್ತಿ ಉತ್ತಮ ಹವ್ಯಾಸಗಳಿಗಿದೆ ಎಂದು ಅವರು ತಿಳಿಸಿದರು.
ಉಜಿರೆ, ಜೂನ್ 6: ಪರಿಸರಕ್ಕೆ ಸಂಬಂಧಿಸಿದಂತೆ ಉಂಟಾಗುತ್ತಿರುವ ನೈಸರ್ಗಿಕ ಬಿಕ್ಕಟ್ಟುಗಳಿಗೆ ಶಾಶ್ವತ ಪರಿಹಾರ ಹೊಳೆಸುವ ಆಲೋಚನಾ ಕ್ರಮಗಳು ಭೌತಶಾಸ್ತ್ರ ಮತ್ತು ಜೀವವಿಜ್ಞಾನದ ಸಂಶೋಧನಾತ್ಮಕ ಪ್ರಜ್ಞೆಯಿಂದ ನಿರೂಪಿತವಾಗುತ್ತವೆ ಎಂದು ಉಜಿರೆ ಎಸ್‍ಡಿಎಂ ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ. ಅಭಿಪ್ರಾಯಪಟ್ಟರು. ಎಸ್‍ಡಿಎಂ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರ ವಿಭಾಗ ಮತ್ತು ಫಿಜಿಕಾ ಸಂಘದ ಸಹಯೋಗದಲ್ಲಿ ‘ಇವೆಂಟ್ ಹಾರಿಜಾನ್’
ಉಜಿರೆ, ಜೂನ್ 6: ಸಮಾಜ ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ವೈಜ್ಞಾನಿಕ ಸಾಮಾಜಿಕ ಹೊಣೆಗಾರಿಕೆಯೊಂದಿಗಿನ ರಚನಾತ್ಮಕ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯವಿದೆ ಎಂದು ಇಂಡಿಯನ್ ನಾಷನಲ್ ಯಂಗ್ ಅಕಾಡೆಮಿ ಆಫ್ ಸೈನ್ಸಸ್ ಸದಸ್ಯ ಡಾ. ಹೆಚ್. ಎಸ್. ಎಸ್. ರಾಮಕೃಷ್ಣ ಮಟ್ಟೆ ಅಭಿಪ್ರಾಯಪಟ್ಟರು. ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ರಸಾಯನಶಾಸ್ತ್ರ ವಿಭಾಗ ಮತ್ತು ಇಂಡಿಯನ್ ನಾಷನಲ್ ಯಂಗ್ ಅಕಾಡೆಮಿ ಆಫ್ ಸೈನ್ಸಸ್ ಜಂಟಿಯಾಗಿ ‘ಮಾಲಿಕ್ಯುಲರ್ ಡಾಕಿಂಗ್ ಮತ್ತು
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ “ಮನೋರಂಜನೆ ಮಾಧ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶಗಳು” ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಫ್ರೀಲಾನ್ಸ್ ಕಂಟೆಂಟ್ ರೈಟರ್ ಹಾಗೂ ಎಸ್‌ಡಿಎಂಇ ಸೊಸೈಟಿಯ ಸೋಶಿಯಲ್ ಮೀಡಿಯಾ ಹೆಡ್ ಚರಿಷ್ಮಾ ಚೋಂದಮ್ಮ, ಇಂದಿನ ಡಿಜಿಟಲ್ ಯುಗದಲ್ಲಿ ಮಾಧ್ಯಮ
ಉಡುಪಿ : ಉಡುಪಿಯಲ್ಲಿ ಮೇ 29 ರಿಂದ ಶಾಲೆಗಳು ತೆರೆದುಕೊಂಡಿದ್ದು, ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳು ಇಲಾಖೆಯ ಸೂಚನೆಯಂತೆ ಶಾಲಾ ಪ್ರಾರಂಭೋತ್ಸವಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ನಿರ್ವಹಿಸಿದರು. ಮೇ 31 ರಂದು ತರಗತಿಗಳು ಆರಂಭಗೊಂಡು, ಬೇಸಿಗೆ ರಜೆಯನ್ನು ಮುಗಿಸಿ ಬಂದ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಾಗಿತ್ತು. ವಿಶೇಷವೆಂಬಂತೆ ಜಿಲ್ಲೆಯ ಹಲವು ಶಾಲೆಗಳಲ್ಲಿ ತೋರಣ, ರಂಗೋಲಿ ಹಾಕಿ ಮಕ್ಕಳನ್ನು ಬರಮಾಡಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಯ
ಉಜಿರೆ : ಸಾಹಿತ್ಯದಲ್ಲಿ ಬಳಕೆಯಾಗುವ ಭಾಷೆ ಸಂವಹಿಸುವ ವಿವಿಧ ಬಗೆಯ ಅರ್ಥವಿನ್ಯಾಸಗಳೊಂದಿಗೆ ಅನುಸಂಧಾನ ನಡೆಸುವ ಸಾಮಥ್ರ್ಯ ರೂಢಿಸಿಕೊಳ್ಳಬೇಕು ಎಂದು ವಿಮರ್ಶಕ ಪ್ರೋ. ಟಿ.ಪಿ.ಅಶೋಕ ಅಭಿಪ್ರಾಯಪಟ್ಟರು. ಉಜಿರೆ ಎಸ್. ಡಿ. ಎಂ ಸ್ವಾಯಕ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಂಘ ಹಾಗೂ ಹೆಗ್ಗೋಡು ನೀನಾಸಂ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿತ 25ನೆ ಸಾಹಿತ್ಯ ಶಿಬಿರ ರಜತ ಸಂಭ್ರಮದ ಕಲಾನುಸಂದಾನ ಶಿಬಿರದ ಮೊದಲನೇ ಗೋಷ್ಟಿ ಕಾವ್ಯಾನುಸಂದಾನದಲ್ಲಿ ಅವರು ಮಾತನಾಡಿದರು.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಟ್ಲದಲ್ಲಿರುವ ಕೇಶವ ಕೃಪಾ ವಸತಿ ಗೃಹದಲ್ಲಿ ರೂರಲ್ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಬೇಸಿಗೆ ಶಾಲಾ ಶಿಬಿರದ ಸಮಾರೋಪ ಕಾರ್ಯಕ್ರಮ ಮೇ 25, 2023 ರಂದು ಜರುಗಿತ್ತು. ಮಾರ್ಚ್ 28, 2023 ರಿಂದ ಏಪ್ರಿಲ್ 8, 2023 ರವರೆಗೆ ನಡೆದ ಈ ಶಿಬಿರದಲ್ಲಿ ವಿಷ್ಣು ಸಹಸ್ರನಾಮ, ಯೋಗ, ದೇಶಭಕ್ತಿ ಗೀತೆಗಳು, ಪೂರ್ವಭಾವಿ ಭಾಷಣ, ಚರ್ಚೆ, ರಸಪ್ರಶ್ನೆ, ಚಿತ್ರಕಲೆ ತರಗತಿಗಳು, ಕರಕುಶಲ ಮತ್ತು ಕ್ಲೇ ಮಾಡೆಲಿಂಗ್, ಮನರಂಜನಾ ನಾಟಕ, ಯುನಿಟಿ
ಉಜಿರೆ: ದೂರ ಸಂಪರ್ಕ ಸಾಧನಗಳ ಬಳಕೆ ಮಿತವಾಗಿರಲಿ ಎಂದು ಎಸ್.ಡಿ.ಎಂ ಕಾಲೇಜಿನ ಗಣಕಯಂತ್ರ ವಿಜ್ಞಾನ ವಿಭಾಗದ ಪ್ರೊ. ಶೈಲಜಾ ಅಭಿಪ್ರಾಯಪಟ್ಟರು.ಎಸ್.ಡಿ.ಎಂ. ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗವು ಗುರುವಾರ ‘ವಿಶ್ವ ದೂರ ಸಂಪರ್ಕ ದಿನ ಆಯೋಜಿಸಿದ್ದ ಗುರುತ್ವ-2023 ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ದೂರ ಸಂಪರ್ಕ ಸೌಲಭ್ಯದಿಂದಾಗಿ ವಿಶ್ವದ ಗಾತ್ರ ಸಣ್ಣದಾಗಿದೆ. ಪ್ರಪಂಚದ ಯಾವುದೇ ಮೂಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ತಕ್ಷಣ ವಿಶ್ವದಾದ್ಯಂತ ಪಸರಿಸುವ
ಮಂಗಳೂರಿನ ಬೋಂದೆಲ್‍ನಲ್ಲಿರುವ ಕರ್ನಾಟಕ ಸರ್ಕಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ 2023-24ನೇ ಪ್ರವೇಶಾತಿ ಆರಂಭಗೊಂಡಿದೆ.ಕಾಲೇಜಿನಲ್ಲಿ ಇಂಜಿನಿಯರಿಂಗ್ ಕೋರ್ಸ್‍ಗಳು, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ನಾನ್ ಇಂಜಿನಿಯರಿಂಗ್, ಕಮರ್ಶಿಯಲ್ ಪ್ರಾಕ್ಟೀಸ್, ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ ಬೋಧನೆಯನ್ನು ಮಾಡುತ್ತಿದ್ದಾರೆ.