ಕಡಬ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸುವ ಹೈಯರ್ ಗ್ರೇಡ್ ಮತ್ತು ಲೋಯರ್ ಗ್ರೇಡ್ ಚಿತ್ರಕಲಾ ಪರೀಕ್ಷೆಯಲ್ಲಿ ಸೈಂಟ್ ಜೋಕಿಮ್ಸ್, ಸೈಂಟ್ ಆನ್ಸ್ ಪ್ರೌಢಶಾಲೆಗೆ ಶೇಕಡ 100 ಫಲಿತಾಂಶ ಬಂದಿರುತ್ತದೆ. ಹೈಯರ್ ಗ್ರೇಡ್ ವಿಭಾಗದಲ್ಲಿ ಸೈಂಟ್ ಆನ್ಸ್ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಅಂಜನಾ ಜೇಮ್ಸ್ 491 ಅಂಕ
ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು ಶಾಂತಿನಿಕೇತನ ಪದವಿಪೂರ್ವ ಕಾಲೇಜು ಕುಪ್ಪಟಗೇರಿ ಇವರ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 2 ಕಂಚು ಒಟ್ಟು 5 ಪದಕ ಪಡೆದುಕೊಂಡರು.ಫಲಿತಾಂಶ : ಟೆನ್ನಿ ಕೃಷ್ಣ – 120ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ –
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು 2024-25ನೇ ಶೈಕ್ಷಣಿಕ ವರ್ಷದಿಂದಲೇ
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಜರುಗಿದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ
ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆ ನಡೆಯಿತು. ವಿದ್ಯಾರ್ಥಿಗಳು ಸಂಭ್ರಮದಿಂದ ಶಿಕ್ಷಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಿ, ಮನೋರಂಜನೆ ಕಾರ್ಯಕ್ರಮವನ್ನು ನೀಡಿದರು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯ ಮಹತ್ವ ಹಾಗೂ ಕಾರ್ಯಕ್ರಮ ಆಯೋಜನೆ ಕುರಿತು
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ, ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಸ್ಕೌಟ್ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್, ಗೈಡ್ ಶಿಕ್ಷಕಿಯರಾದ
ರೋಟರಿ ಕ್ಲಬ್ ಬಾರ್ಕೂರು ಆಶ್ರಯದಲ್ಲಿ ಬಾರ್ಕೂರು ಅಂಚೆ ಕಛೇರಿ ಬಳಿ ವನ ಮಹೋತ್ಸವ ಮತ್ತು850 ಉಚಿತ ಔಷಧಿ ಗಿಡ ಹಾಗೂ ಹಣ್ಣಿನ ಗಿಡ ವಿತರಣೆ ಕಾರ್ಯಕ್ರಮ ಜರುಗಿತು. ಈ ಸಂದರ್ಭ ಬಾರಕೂರು ರೋಟರಿಯ ಗಣೇಶ್ ಶೆಟ್ಟಿ ಮಾತನಾಡಿ, ಮನು ಕುಲದ ಸೇವೆಯಲ್ಲಿ ಮೂಂಚೂಣಿಯಲ್ಲಿರುವ ರೋಟರಿ ಬಾರಕೂರು ಮುಂದಿನ ಮಾನವ ಜನಾಂಗ ಆರೋಗ್ಯದಿಂದ ಇರಲು ಮನುಷ್ಯನ ಉಸಿರಿಗೆ ಕಾರಣವಾಗುವ ಉತ್ತಮ ಗಿಡವನ್ನು ಉಚಿತವಾಗಿ ವಿತರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಕೃಷಿ ವಿಜ್ಞಾನಿ ಡಾ, ಬಿ.ಧನಂಜಯ್,
ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು, ಮುಲ್ಲಡ್ಕ, ಇನ್ನಾ, ಇದರ ವತಿಯಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ, ಆಟಿಡು ಒಂಜಿ ದಿನ ಕಾರ್ಯಕ್ರಮ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಿತು. ತೋಟ ಮನೆ ಉಷಾ ವಾಸು ಅಂಚನ್ ದೀಪ ಬೆಳಗಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕಿ ಸವಿತಾ ಸದಾನಂದ ಪೂಜಾರಿ ಮುಖ್ಯ ಅತಿಥಿಯಾಗಿ ಮಾತನಾಡಿ ತುಳುನಾಡಿನಲ್ಲಿ ಆಷಾಡ
ಮಗು ಮದುವೆ, ಬಾಲ್ಯ ವಿವಾಹ ಭಾರತ ಮತ್ತು ಕರ್ನಾಟಕದ ಒಂದು ಅಂಟು ಜಾಡ್ಯವಾಗಿ ಬಲಿತು ಕುಳಿತಿದೆ.ಲಗ್ನದ ವಯಸ್ಸನ್ನು 21ಕ್ಕೆ ಏರಿಸಿದರೂ ಸಮಸ್ಯೆ ಪರಿಹಾರ ಆಗಿಲ್ಲ. ಮದುವೆಯ ವಯಸ್ಸು 21 ಎಂದಾಗ ಹೆಣ್ಣು ಉನ್ನತ ಓದು ಮುಗಿಸಿರುವುದು ಸಾಧ್ಯ. 18 ಎಂದರೆ ಕಲಿಕೆ ಕಡೆ ಇಲ್ಲವೇ ಸಂಸಾರ ತೂಗಿಸಿಕೊಂಡು ಓದಬೇಕು. 21ಕ್ಕೆ ಹೆಣ್ಣು ಕೆಲಸಕ್ಕೆ ಸೇರಿರುವುದೂ ಸಾಧ್ಯ. ಇದು ಸಂಸಾರಕ್ಕೆ ಅನುಕೂಲ. ಭಾರತೀಯ ಸಮಾಜದಲ್ಲಿ ಅನಾನುಕೂಲವೂ ಆಗಬಹುದು. 21ರಲ್ಲಿ ಹೆಣ್ಣು ಸ್ವತಂತ್ರವಾಗಿ