Home Archive by category benagaluru (Page 2)

ಐಸಿಎಸ್ಐ ನಿಂದ ಕಂಪನಿಗಳ ವ್ಯಾಜ್ಯ ಇತ್ಯರ್ಥಕ್ಕಾಗಿ ಬೆಂಗಳೂರಿನಲ್ಲಿ ಮಧ್ಯಸ್ಥಿಕೆ ಕೇಂದ್ರ ತೆರೆಯಲು ನಿರ್ಧಾರ: ಸಿಎಸ್ ಮನೀಶ್ ಗುಪ್ತಾ

ಬೆಂಗಳೂರು, ಏ, 15; ಭಾರತೀಯ ಕಂಪೆನಿ ಕಾರ್ಯದರ್ಶಿಗಳ ಸಂಸ್ಥೆಯಿಂದ ಕಂಪೆನಿಗಳ ವ್ಯಾಜ್ಯ ಇತ್ಯರ್ಥಕ್ಕಾಗಿ ಬೆಂಗಳೂರಿನಲ್ಲಿ “ಮಧ‍್ಯಸ್ಥಿಕೆ ಕೇಂದ್ರ” ತೆರೆಯಲು ನಿರ್ಧರಿಸಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಪ್ ಕಂಪೆನಿ ಸೆಕ್ರೆಟರೀಸ್ ನ ನೂತನ ಅಧ್ಯಕ್ಷ ಸಿಎಸ್ ಮನೀಶ್ ಗುಪ್ತಾ ಹೇಳಿದ್ದಾರೆ. ಬೆಂಗಳೂರಿನ ಐಸಿಎಸ್ಐ ಕಚೇರಿಯಲ್ಲಿ ನಡೆದ ಮಹತ್ವದ

“ನನ್ನ ಮತ ಉತ್ತಮ ಕೌಶಲ್ಯ, ಉಜ್ವಲ ಭವಿಷ್ಯ” ಕುರಿತು ಯುವ ಮತದಾರರೊಂದಿಗೆ ಸಂವಾದ ; ಶೇ 40 ರ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಯುವ ಶಕ್ತಿ ಮುಂದಾಗಬೇಕು – ಶಶಿ ‌ತರೂರ್

ಯುವ ಜನಾಂಗ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಬೆಂಬಲಿಸಬೇಕು. ಸ್ವಚ್ಛ ಆಡಳಿತ ನೀಡುವ ಸರ್ಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ. ನಗರದ ಹೊರ ವಲಯದ ಭಾರತೀಯ ವಾಯುಪಡೆ ಸಮೀಪದ ಹೊಸಹಳ್ಳಿಯಲ್ಲಿ ಆಯೋಜಿಸಿದ್ದ “ಯುವ ಮತ” ಅಭಿಯಾನದಡಿ “ನನ್ನ ಮತ ಉತ್ತಮ ಕೌಶಲ್ಯ, ಉಜ್ವಲ ಭವಿಷ್ಯಕ್ಕಾಗಿ” ಎಂಬ ಯುವ ಜನಾಂಗದೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ

“ಯುವ ಮತ” ಅಭಿಯಾನಕ್ಕೆ ಏಐಸಿಸಿ ಕಾರ್ಯದರ್ಶಿ ಅಭಿಶೇಖ್ ದತ್ತ್ ಚಾಲನೆ

ಬೆಂಗಳೂರು, ಮಾ, 30; ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 18 ರಿಂದ 23 ವರ್ಷ ವಯಸ್ಸಿನ, ಅದರಲ್ಲೂ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರನ್ನು ಸೆಳೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ “ಯುವ ಮತ” – ನಿಮ್ಮ ಮೊದಲ ಮತವನ್ನು ಸಂಭ್ರಮಿಸಿ ಅಭಿಯಾನ ಆರಂಭಿಸಲಾಗಿದೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಏಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಶೇಖ್ ದತ್ತ್ ಹಾಗೂ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರನ್ನು

ಮಹಾವೀರ ಜಯಂತಿ ಅಂಗವಾಗಿ ಜಿತೋನಿಂದ “ಅಹಿಂಸಾ ಓಟ”: ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗುರಿ – ರಾಜ್ಯಪಾಲರು ಭಾಗಿ

ಮಹಾವೀರ ಜಯಂತಿ ಅಂಗವಾಗಿ ಜಿತೋನಿಂದ “ಅಹಿಂಸಾ ಓಟ”: ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗುರಿ – ರಾಜ್ಯಪಾಲರು ಭಾಗಿ ಬೆಂಗಳೂರು; ಮಹಾವೀರ ಜಯಂತಿ ಅಂಗವಾಗಿ ಏಪ್ರಿಲ್ 2 ರಂದು ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಷನ್ ನಿಂದ ಐಐಎಫ್ಎಲ್ ಜಿತೋ “ಅಹಿಂಸಾ ಓಟ” ಆಯೋಜಿಸಲಾಗಿದೆ. ಶಾಂತಿ – ಸೌಹಾರ್ದತೆ ಸ್ಥಾಪನೆಯ ಮಹತ್ವಾಕಾಂಕ್ಷೆಯೊಂದಿಗೆ ಗಿನ್ನೆಸ್ ದಾಖಲೆ ಸ್ಥಾಪಿಸುವ ಓಟಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಲಿದ್ದಾರೆ. ಈ ಮೂಲಕ

ಕನ್ನಡಿಗ ಛಾಯಗ್ರಾಹಕ ಜಿನೇಶ್ ಪ್ರಸಾದ್ ಗೆ ರಾಷ್ಟ್ರೀಯ ‘ ಚಿತ್ರಾಂಜಲಿ ಪ್ರಶಸ್ತಿ’

ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಪ್ರಧಾನ ಮಾಡುವ ನವದೆಹಲಿಯ ಇಂದಿರಾಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ ಸಂಸ್ಥೆಯ ಅತ್ಯುನ್ನತ ವಾರ್ಷಿಕ ಚಿತ್ರಾಂಜಲಿ ಪ್ರಶಸ್ತಿ ಯನ್ನು ಅಂತರಾಷ್ಟ್ರೀಯ ಖ್ಯಾತಿಯ ಕನ್ನಡಿಗ ಛಾಯಗ್ರಾಹಕ ಜಿನೇಶ್ ಪ್ರಸಾದ್ ಅವರಿಗೆ ಭಾನುವಾರ ಪ್ರಧಾನ ಮಾಡಲಾಯಿತು. ಭಾನುವಾರ ನವ ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು .ಪ್ರಶಸ್ತಿಯು ಒಂದು ಲಕ್ಷ ರೂಪಾಯಿಗಳ ನಗದು, ಫಲಕ

ಜ. 4 ಮತ್ತು 5 ರಂದು ವಿಶ್ವ ಹಿಂದೂ ಅಂತರ್ಜಾತಿ ವಿವಾಹಿತರ ಸ್ನೇಹ ಸಮ್ಮೇಳನ

ಬೆಂಗಳೂರು; ಹಿಂದೂ ಧರ್ಮದಲ್ಲಿ ಜಾತಿಯ ಮೇಲು ಕೀಳು ತಾರತಮ್ಯ ನಿವಾರಣೆಗಾಗಿ ಬೆಳಗಾವಿಯ ಗೋಕಾಕ ತಾಲ್ಲೂಕಿನ ಮನ್ನಿಕೇರಿ ಮಹಾಂತಲಿಂಗೇಶ್ವರ ಮಠದಲ್ಲಿ ಜ. 4 ಮತ್ತು 5 ರಂದು ವಿಶ್ವ ಹಿಂದೂ ಅಂತರ್ಜಾತಿ ವಿವಾಹಿತರ ಸ್ನೇಹ ಸಮ್ಮೇಳನ ಆಯೋಜಿಸಿದ್ದು, ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡುವ ಜನ ಜಾಗೃತಿ ಮೂಡಿಸಲಾಗುತ್ತಿದೆ. ಹಿಂದೂ ಧರ್ಮದ ಉದಾತ್ತ ಚಿಂತನೆಗಳನ್ನು ಅಳವಡಿಸಿಕೊಂಡು ಎಲ್ಲಾ ಜಾತಿ, ಜನಾಂಗದವರು ಸಮಾನರು ಎಂಬುದನ್ನು ನಿರೂಪಿಸಲು ಇಂತಹ ಸಮಾವೇಶ

ಮಂಗಳೂರು ಸ್ಫೋಟ ಪ್ರಕರಣದಿಂದ ಪಾಠ ಕಲಿಯಬೇಕಿದೆ : ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು: ‘ಮಂಗಳೂರು ಸ್ಫೋಟ ಪ್ರಕರಣದಿಂದ ನಾವೆಲ್ಲರೂ ಪಾಠ ಕಲಿಯಬೇಕಿದೆ’ ಎಂದು ಎಡಿಜಿಪಿ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ” ಮಂಗಳೂರು ಸ್ಫೋಟ ಪ್ರಕರಣದಿಂದ ಪಾಠ ಕಲಿಯಬೇಕಿದೆ.  ನಿಮ್ಮ ಆಧಾರ್ ಕಳೆದುಕೊಂಡಾಗ ಎಚ್ಚರಿಕೆ ಇರಲಿ. ಸಾರ್ವಜನಿಕರು ತಮ್ಮ ಗುರುತಿನ ಚೀಟಿ ಬಗ್ಗೆ ಎಚ್ಚರ ವಹಿಸಬೇಕು. ಐಡಿ ಕಾರ್ಡ್ ದುರ್ಬಳಕೆಗೆ ಕಡಿವಾಣ

ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ “ಮಾಧ್ಯಮ ಮೈಲುಗಲ್ಲು ನಲವತ್ತರ ಹೊಸ್ತಿಲು” ಕಾರ್ಯಕ್ರಮ

ಬೆಂಗಳೂರು, ನ, 13;ಕರ್ನಾಟಕ ಎಲ್ಲಾ ಕ್ಷೇತ್ರಗಳಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು, ಅಮೃತ ಕಾಲದ ಕನಸುಗಳನ್ನು ನನಸು ಮಾಡಲಿದೆ ಎಂದು ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಪ್ರಸಾರ ಭಾರತಿ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ “ಮಾಧ್ಯಮ ಮೈಲುಗಲ್ಲು ನಲವತ್ತರ ಹೊಸ್ತಿಲು” ಕಾರ್ಯಕ್ರಮ ಉದ್ಘಾಟಿಸಿ, ಕೇಕ್ ಕತ್ತರಿಸಿ ಹಿರಿಯ ಪತ್ರಕರ್ತರಿಗೆ ಗೌರವ ಸಮರ್ಪಿಸಿ ಮಾತನಾಡಿದ

ಮಂಗಳೂರು: ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನಕ್ಕೆ ಚಾಲನೆ

ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಮಂಗಳೂರಲ್ಲಿ ಚಾಲನೆ ಸಿಕ್ಕಿತ್ತು. ನಗರದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಇರುವ ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದ ಆವರಣದಲ್ಲಿ ಆದಿಚುಂಚನಗಿರಿ ಶಾಖಾ ಮಠದ ಡಾ|ಧರ್ಮಪಾಲನಾ ಸ್ವಾಮೀಜಿ ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಇಂತಹ ಒಂದು ಕಾರ್ಯಕ್ರಮ ಮಾಡ್ತಿರೋದು

ಬಾಲಕಿ ನಾಪತ್ತೆ ಪ್ರಕರಣ : ಪತ್ತೆಗೆ ಮನವಿ

ಮಂಗಳೂರಿಗೆ ಬಂದಿದ್ದ ಬೆಂಗಳೂರು ಮಹಾಲಕ್ಷ್ಮೀ ಲೇಔಟ್ ಭಾರ್ಗವಿ (14) ನಾಪತ್ತೆಯಾಗಿದ್ದಾಳೆ. ಕಳೆದ ಸೋಮವಾರ ಈಕೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದು ಬಸ್ ಮೂಲಕ ಮುಂಜಾವ 3 ಗಂಟೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಳು.ಅಲ್ಲಿಂದ ರಿಕ್ಷಾದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಚಿಕ್ಕಮ್ಮನ ಮನೆಗೆ ಹೋಗುವುದಾಗಿ ರಿಕ್ಷಾ ಚಾಲಕನಲ್ಲಿ ಹೇಳಿರುವ ಮಾಹಿತಿ ಇದೆ. ಆದರೆ ಇದುವರೆಗೆ ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.