ಬೆಂಗಳೂರು: ‘ಮಂಗಳೂರು ಸ್ಫೋಟ ಪ್ರಕರಣದಿಂದ ನಾವೆಲ್ಲರೂ ಪಾಠ ಕಲಿಯಬೇಕಿದೆ’ ಎಂದು ಎಡಿಜಿಪಿ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ” ಮಂಗಳೂರು ಸ್ಫೋಟ ಪ್ರಕರಣದಿಂದ ಪಾಠ ಕಲಿಯಬೇಕಿದೆ. ನಿಮ್ಮ ಆಧಾರ್ ಕಳೆದುಕೊಂಡಾಗ ಎಚ್ಚರಿಕೆ ಇರಲಿ.
ಬೆಂಗಳೂರು, ನ, 13;ಕರ್ನಾಟಕ ಎಲ್ಲಾ ಕ್ಷೇತ್ರಗಳಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು, ಅಮೃತ ಕಾಲದ ಕನಸುಗಳನ್ನು ನನಸು ಮಾಡಲಿದೆ ಎಂದು ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಪ್ರಸಾರ ಭಾರತಿ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ “ಮಾಧ್ಯಮ ಮೈಲುಗಲ್ಲು ನಲವತ್ತರ ಹೊಸ್ತಿಲು” ಕಾರ್ಯಕ್ರಮ ಉದ್ಘಾಟಿಸಿ, ಕೇಕ್ ಕತ್ತರಿಸಿ ಹಿರಿಯ ಪತ್ರಕರ್ತರಿಗೆ ಗೌರವ ಸಮರ್ಪಿಸಿ ಮಾತನಾಡಿದ
ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಮಂಗಳೂರಲ್ಲಿ ಚಾಲನೆ ಸಿಕ್ಕಿತ್ತು. ನಗರದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಇರುವ ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದ ಆವರಣದಲ್ಲಿ ಆದಿಚುಂಚನಗಿರಿ ಶಾಖಾ ಮಠದ ಡಾ|ಧರ್ಮಪಾಲನಾ ಸ್ವಾಮೀಜಿ ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಇಂತಹ ಒಂದು ಕಾರ್ಯಕ್ರಮ ಮಾಡ್ತಿರೋದು
ಮಂಗಳೂರಿಗೆ ಬಂದಿದ್ದ ಬೆಂಗಳೂರು ಮಹಾಲಕ್ಷ್ಮೀ ಲೇಔಟ್ ಭಾರ್ಗವಿ (14) ನಾಪತ್ತೆಯಾಗಿದ್ದಾಳೆ. ಕಳೆದ ಸೋಮವಾರ ಈಕೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದು ಬಸ್ ಮೂಲಕ ಮುಂಜಾವ 3 ಗಂಟೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಳು.ಅಲ್ಲಿಂದ ರಿಕ್ಷಾದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಚಿಕ್ಕಮ್ಮನ ಮನೆಗೆ ಹೋಗುವುದಾಗಿ ರಿಕ್ಷಾ ಚಾಲಕನಲ್ಲಿ ಹೇಳಿರುವ ಮಾಹಿತಿ ಇದೆ. ಆದರೆ ಇದುವರೆಗೆ ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಗೀತ ಹಾಗು ನೃತ್ಯಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗೆ ಮತ್ತು ವಿಟ್ಲ ಸಮೀಪದ ಪಡೀಬಾಗಿಲು ನಿವಾಸಿಯಾದ ಸ್ಯಾಕ್ಸೋಫೆÇೀನ್‍ವಾದಕ ಡಾ.ಪಿ.ಕೆ. ದಾಮೋದರ ರಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗಾನ ಕಲಾಭೂಷಣ ವಿದುಷಿ ವಸಂತ ಮಾಧವಿ , ಉಷಾದಾತಾರ್ , ಡಾ ಎಸ್ ಮಂಜುಳಾ , ಶ್ರೀ ಪ್ರಕಾಶ್ , ರಾಜಗೋಪಾಲ್
ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನ.ಬೆಳಗ್ಗೆ ಜಿಮ್‍ಗೆ ಹೋಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ನಿಧನ ಹೊಂದಿದ್ದಾರೆ. ಬೊಮ್ಮಾಯಿ ಗೃಹ ಸಚಿವರಾದಾಗಿಂದ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದ ಇವರು ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ
ಪ್ರವೀಣ್ ನೆಟ್ಟಾರು ಕೊಲೆಯನ್ನು ಖಂಡಿಸಿ ಆರ್ಯ ಈಡಿಗ ಮಹಾಮಂಡಲದ ರಾಷ್ಟ್ರೀಯ ಅಧ್ಯಕ್ಷ ಡಾ.ಪ್ರಣಾವನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಗುರುವಾರದಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.ಬೆಂಗಳೂರು ಕಬ್ಬನ್ ಪಾರ್ಕ್ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶ್ರೀ ಪ್ರಣಾವನಂದ ಸ್ವಾಮೀಜಿ ಅವರು , ಮೃತ ಪ್ರವೀಣ್ ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಹಾಗೂ ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು.
ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಮಾನವ ಕುವೆಂಪು ಕಲಾ ಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ ಹಾಗೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಮಾಡುವ ಏಕೈಕ ಸಂಸ್ಥೆಯಿಂದ ಕುವೆಂಪು 118ನೇ ಜಯಂತಿ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಜಯಂತಿ ಗುರು-ಶಿಷ್ಯರ ಕಾರ್ಯಕ್ರಮದ ಪ್ರಯುಕ್ತ ವಿವಿಧ ಕನ್ನಡ ಸಾಂಸ್ಕೃತಿಕ ಉತ್ಸವ ಹಾಗೂ ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿಯವರಿಗೆ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಪ್ರಶಸ್ತಿಯನ್ನು ದಿನಾಂಕ 6
ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ ತಂತ್ರಜ್ಞಾನದ ಸ್ಪರ್ಷ ನೀಡಲಾಗಿದೆ. ಈ ರೋಬೋಟ್ ಬಹುಪಯೋಗಿಯಾಗಿದ್ದು, ವಿಶೇಷವಾಗಿ ಸ್ವಾಗತಕಾರನ
ಬೆಂಗಳೂರು, ನ 18; ನಾಡಿನ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಆರ್ಥಿಕ ಬಲ ತುಂಬುವುದು ತಮ್ಮ ಪ್ರಧಾನ ಆದ್ಯತೆಯಾಗಿದ್ದು, ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಶಾಶ್ವತ ನಿಧಿ ಸ್ಥಾಪಿಸಲು ಶ್ರಮಿಸುವುದಾಗಿ ಪರಿಷತ್ತಿನ ಅಧ್ಯಕ್ಷ ಸ್ಥಾನದ ಸ್ಪರ್ಧಿ ಮಾಯಣ್ಣ ಹೇಳಿದ್ದಾರೆ.ಇದೇ ತಿಂಗಳ 21 ರಂದು ನಡೆಯಲಿರುವ ಕ.ಸಾ.ಪ ಚುನಾವಣೆಗೆ ಬೆಂಗಳೂರು ನಗರದ ಜಿಲ್ಲೆಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಲೇಖಕ ಎಂ. ತಿಮ್ಮಯ್ಯ