Home Archive by category Fresh News (Page 105)

ಸುಳ್ಯ :ಮಾಜಿ ಸೈನಿಕರ ಸಂಘದಿಂದ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ ಯಂತ್ರ ಹಸ್ತಾಂತರ

ಸುಳ್ಯ ತಾಲೂಕಿನ ಮಾಜಿ ಸೈನಿಕರ ಸಂಘ(Ex Servicemen Association Sullia) ದ ವತಿಯಿಂದ ಪಶು ಸಂಗೋಪನ ಇಲಾಖೆಯ ಸುಳ್ಯ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ (Electric Autoclave) ಯಂತ್ರವನ್ನು 2024 25 ನೇ ಸಾಲಿನ ಕೊಡುಗೆಯಾಗಿ ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರಾದ ನಿತಿನ್ ಪ್ರಭು ಕೆ ಇವರಿಗೆ ಹಸ್ತಾಂತರಿಸಿದರು. ಈ ಉಪಕರಣವನ್ನು ದಿನನಿತ್ಯ

ಕನ್ನಡದ ಲೇಖಕಿ ಬಾನು ಮುಷ್ತಾಕ್- ಪ್ರತಿಷ್ಟಿತ ಬೂಕರ್ ಪ್ರಶಸ್ತಿಗೆ ಭಾಜನ

ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರು ಬರೆದಿರುವ ಹಸೀನಾ ಮತ್ತು ಇತರ ಕತೆಗಳು ಕೃತಿಯ ಇಂಗ್ಲಿಷ್ ಅನುವಾದ ಹಾರ್ಟ್ ಲ್ಯಾಂಪ್ ಕೃತಿಯು ಪ್ರತಿಷ್ಟಿತ ಬೂಕರ್ ಪ್ರಶಸ್ತಿಗೆ ಭಾಜನವಾಗಿದೆ. ದೀಪಾ ಭಸ್ತಿ ಅವರು ಬಾನು ಅವರ ಕೃತಿಯನ್ನು ಇಂಗ್ಲಿಷಿಗೆ ಅನುವಾದಿಸಿದ್ದರು. ಮೇ 20ರಂದು ತೀರ್ಪು ಆಗಿದ್ದು, ಈ ಬಗೆಗೆ ಬುಧವಾರ ಅಧಿಕೃತ ಘೋಷಣೆಯಾಗಿದೆ. ಬೂಕರ್ ವಿಜೇತ ಕೃತಿಗೆ 50,000 ಪೌಂಡ್ ರೊಕ್ಕ ಬಹುಮಾನವಿದ್ದು, ಅದು ಲೇಖಕಿ ಮತ್ತು ಅನುವಾದಕಿಯ ನಡುವೆ ಸಮಾನ

ಸುಹಾಸ್ ಹತ್ಯೆ: ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಶ್ವೇತಾ ಪೂಜಾರಿ ವಿರುದ್ಧ ಎಫ್‌ಐಆರ್!

ಮಂಗಳೂರು: ಇತ್ತೀಚಿಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಹಿಂದೂ ನಾಯಕಿ, ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮನಪಾ ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಾಗಿದ್ದು

ದೇರಳಕಟ್ಟೆ: ಯೆನೆಪೋಯ ವಿವಿ ವತಿಯಿಂದ ಐಕಾನ್ ಯೂತ್-2025:ಸಮಾರೋಪ

ಅಂತಾರಾಷ್ಟ್ರೀಯ ಸಮ್ಮೇಳನದ ಪ್ರಯೋಜನ ಯುವಜನತೆಗೆ ಆಗಲಿ. ಜಾಗತಿಕ ಮಟ್ಟದಲ್ಲಿ ವ್ಯಕ್ತಿತ್ವ ವಿಕಾಸವಾಗಲಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಣದೀಪ್ ಐಎಎಸ್ ಹೇಳಿದರು. ಅವರು ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಯಿಂಡ್ಯೂರನ್ಸ್ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾದ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ಐಕಾನ್ ಯೂತ್-೨೦೨೫ರ ಸಮಾರೋಪದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ

ಶ್ರೀಹರಿಕೋಟಾ: ಇಸ್ರೋದ 101ನೇ ಉಪಗ್ರಹ ಉಡಾವಣೆ ವಿಫಲ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಶ್ರೀಹರಿಕೋಟಾದಿಂದ ತನ್ನ 101ನೇ ರಾಕೆಟ್ ಉಡಾವಣೆಯನ್ನು ಕೈಗೊಂಡಿದೆ. ಆದರೆ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಇಸ್ರೋ ಮುಖ್ಯಸ್ಥ ವಿ.ನಾರಾಯಣನ್ ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಇಸ್ರೋದ 101 ನೇ ಬಾಹ್ಯಾಕಾಶ ಯಾನವು ಉಡಾವಣೆಯಾದ ಸ್ವಲ್ಪ ಸಮಯದ ನಂತರ ತಾಂತ್ರಕ ದೋಷ ಕಂಡುಬಂದ

ಮಂಗಳೂರು: ಕುಂಟಿಕಾನದಲ್ಲಿ ‘ಕಲರವ’ ಮಕ್ಕಳ ಅಭಿವೃದ್ಧಿ ಕೇಂದ್ರದ ಉದ್ಘಾಟನೆ

ಮಂಗಳೂರಿನ ಕುಂಟಿಕಾನದ ಎಜೆ ಅಸ್ಪತ್ರೆಯ ಸಮೀಪದಲ್ಲಿ ಕದ್ರಿಯ ಫೈರ್ ಸ್ಟೇಷನ್ ಹಿಂಭಾಗದಲ್ಲಿ ’ಕಲರವ’ ಮಕ್ಕಳ ಅಭಿವೃದ್ಧಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಡಾ. ಶಿಲ್ಪ ಹೆಗ್ಡೆ ಮಾಲಕತ್ವದಲ್ಲಿ ಕಲರವ ಸೆಂಟರ್ ಫಾರ್ ಚೈಲ್ಡ್ ಡೆವಲಪ್‌ಮೆಂಟ್ ನಗರದ ಕುಂಟಿಕಾನ ಸಮೀಪದಲ್ಲಿ ಕಾರ್ಯಾರಂಭಗೊಂಡಿದೆ. ಕಲರವ ನೂತನ ಕೇಂದ್ರವನ್ನು ಜಯಶ್ರೀ ಹೆಗ್ಡೆ ಮತ್ತು ಗಜಾನನ ಹೆಗ್ಡೆ ಅವರು ರಿಬ್ಬನ್ ಕತ್ತರಿಸಿ ಉದ್ಘಟಿಸಿದರು. ನಂತರ ತರಗತಿ ಕೊಠಡಿಗಳನ್ನು ಸಂಸದ ಬ್ರಿಜೇಶ್ ಚೌಟ

ಕಡಬ :ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ ಶೈಕ್ಷಣಿಕ ಮಾರ್ಗದರ್ಶನ

ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಕಡಬ ತಾಲೂಕು ಇದರ ವತಿಯಿಂದ ಇಂದು ಒಕ್ಕಲಿಗ ಗೌಡ ಸಮುದಾಯ ಭವನ ಹೊಸಮಠ ಇಲ್ಲಿ, ಕಡಬ ತಾಲೂಕಿನ ಎಲ್ಲಾ ಸಮುದಾಯದ ೯ನೇ, ೧೦ನೇ ತರಗತಿ ಮತ್ತು ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣ, ಉದ್ಯೋಗವಕಾಶಗಳು, ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃಧ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರವು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರಾದ

ಬೆಳ್ಳಾರೆ : ಮೇ.20ರಂದು ’ಸುಸ್ಥಿರ ಕೃಷಿಗಾಗಿ’ ರೈತ ಸಂಗೋಷ್ಟಿ ಕಾರ್ಯಕ್ರಮ

ಬೆಳ್ಳಾರೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ’ಸುಸ್ಥಿರ ಕೃಷಿಗಾಗಿ’ ರೈತ ಸಂಗೋಷ್ಟಿ ಎಂಬ ಕಾರ್ಯಕ್ರಮವು ಮೇ.20ರಂದು ಬೆಳಿಗ್ಗೆ 9.30ಕ್ಕೆ ಬೆಳ್ಳಾರೆಯ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಇಂದೋರ್‌ನ ಶ್ರೀ ಸಿದ್ಧಿ ಅಗ್ರಿ ಕೋ ಪ್ರೈವೇಟ್ ಲಿಮಿಟೆಡ್‌ನ ಪೆರುವೋಡಿ ನಾರಾಯಣ ಭಟ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ.ಡಿ

ಬಂಟ್ವಾಳ: ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿ-ಮುಂದಿನ ಬೇಸಗೆಯೊಳಗೆ ಪೂರ್ಣಗೊಳಿಸಿ – ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ: ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಳಂಬ ನೀತಿಯನ್ನು ಬಿಟ್ಟು ಮುಂದಿನ ಬೇಸಗೆಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಸೇತುವೆ ಕಾಮಗಾರಿಯ ವಿಳಂಬದ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ ನಡೆಸಿದರು. ಸೇತುವೆಯ ಕುರಿತು ಯಾವುದೇ ರೀತಿಯ ಕ್ರೆಡಿಟ್ ನನಗೆ

ಕಡಬ: ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಾಳೆ(ಮೇ17) ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಗಾರ

ಕಡಬ: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಎಲ್ಲಾ ಸಮುದಾಯದ ಪ್ರಸ್ತುತ ಸಾಲಿನ ಪ್ರೌಢ ಶಿಕ್ಷಣದಲ್ಲಿ 9 ನೇ ತರಗತಿ, 10 ನೇ ತರಗತಿ ಮತ್ತು 10 ನೇ ತರಗತಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿ.ಯು.ಸಿ ಮತ್ತು ದ್ವಿತೀಯ ಪಿ.ಯು.ಸಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮೇ.17 ರಂದು ಮುಂದಿನ ಶಿಕ್ಷಣ ಮತ್ತು ಉದ್ಯೋಗವಕಾಶಗಳು, ಉದ್ಯಮಶೀಲತೆ & ಕೌಶಲ್ಯಾಭಿವೃದ್ದಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ