ಕಾಶ್ಮೀರದ ಪಹಲ್ಗಾಂನಲ್ಲಿ ನಿನ್ನೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಹಾಗೆಯೇ ಮೃತರ ಆತ್ಮಕ್ಕೆ ಶಾಂತಿಕೋರುತ್ತೇವೆ. ಈ ಸಂಕಷ್ಟದ ಸಂದರ್ಭದಲ್ಲಿ ನಾವು ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಲು ಬಯಸುತ್ತೇವೆ. ಘಟನೆ ನಡೆದ ಕ್ಷಣದಿಂದ ನಮ್ಮ ಮನಸ್ಸಿನಲ್ಲಿ ಸಹಿಸಲಸಾಧ್ಯವಾದ ನೋವು ಕಾಡುತ್ತಿದೆ. “ಕೊಂದು ಉಳಿಸಿಕೊಳ್ಳಬೇಕಾದ ಧರ್ಮ
ನಗರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿರುವ ದೇರಳಕಟ್ಟೆಯ ಯೆನಪೋಯ ಡೀಮ್ಡ್ ಡು ಬಿ ಯುನಿವರ್ಸಿಟಿಯು ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಲು ಅಗತ್ಯವಿರುವ ಜ್ಞಾನ, ಕೌಶಲ್ಯ ಮತ್ತು ಅವಕಾಶವನ್ನು ಕಲ್ಪಿಸಿ ಅವರ ಭವಿಷ್ಯ ರೂಪಿಸುವಲ್ಲಿ ಯಶಸ್ವಿಯಾಗಿದೆ. ವಿಶ್ವವಿದ್ಯಾನಿಲಯವು 5ಕ್ಕೂ ಹೆಚ್ಚು ಕ್ಯಾಂಪಸ್ ಹೊಂದಿದ್ದು, ನ್ಯಾಕ್ ಎ+ ಮಾನ್ಯತೆ ಪಡೆದ ವಿಶ್ವವಿದ್ಯಾಲಯವಾಗಿದ್ದು, NIRF 2024 ರ ಪ್ರಕಾರ ಭಾರತದಲ್ಲಿ 95ನೇ ಸ್ಥಾನದಲ್ಲಿದೆ. ವಿಶ್ವ ದರ್ಜೆಯ
ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಕೃತ್ಯ ಖಂಡನೀಯ ಮತ್ತು ಹೇಯ. ಈ ದಾಳಿಯಲ್ಲಿ ಇಬ್ಬರು ಕರ್ನಾಟಕದವರು ಸೇರಿದಂತೆ 28 ಜನ ಪ್ರವಾಸಿಗರು ಬಲಿಯಾಗಿರುವುದು ಅತೀವ ನೋವು ತಂದಿದೆ. ಉಗ್ರರ ಹೇಯ ಕೃತ್ಯವನ್ನು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಕಟುವಾಗಿ ಖಂಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದಿರುವುದು ಕೇವಲ ಉಗ್ರರ ದಾಳಿಯಲ್ಲ. ಅದು ಮನುಷ್ಯತ್ವದ ವಿರುದ್ಧದ ದಾಳಿ, ಈ ನೆಲದ ಅಸ್ಮಿತೆಯ ಮೇಲಿನ ದಾಳಿ. ಈ ದಾಳಿಯ ಹಿಂದಿನ
ಮಾಧ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆಗಾಗಿ ವಿ4 ನ್ಯೂಸ್‌ನ ವರದಿಗಾರ ಕೆ.ಎಂ. ಖಲೀಲ್ ಅವರು ಮಾಧ್ಯಮ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕವಿತಾ ಮೀಡಿಯಾ ಸೋರ್‍ಸ್ ಪ್ರೈವೆಟ್ ಲಿಮಿಟೆಡ್ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿವಾಹಿನಿ ವತಿಯಿಂದ ಏ.27ರಂದು ಕೊಪ್ಪಳದಲ್ಲಿ ಕರುನಾಡ ಸಂಭ್ರಮ ಕಿರು ಚಿತ್ರೋತ್ಸವ ಸೀಸನ್-02ರಲ್ಲಿ ನಾಡು, ನುಡಿ, ಸಂಸ್ಕೃತಿಕ ಝೇಂಕಾರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸುಮಾರು 20 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ
ಕೊಲ್ಲೂರಿನಲ್ಲಿ ಕಾನೂನು ಕೋರ್ಟು ಆದೇಶ ನೆಪದಲ್ಲಿ ಒಂಚೂರು ಮಾನವೀಯತೆ ಇಲ್ಲದೇ ಕಳೆದ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದ ಸಮಾಜದಲ್ಲಿ ಅತೀ ನಿರ್ಲಕ್ಷಿತ ಹಾಗೂ ಸೂಕ್ಷ್ಮ ಸಮುದಾಯವಾದ ಕೊರಗ ಕುಟುಂಬದ ವಾಸ್ತವ್ಯದ ಮನೆಯನ್ನು ನಾಶ ಪಡಿಸಿರುವುದು ತೀರಾ ದುಃಖಕರ ಹಾಗೂ ದುರದೃಷ್ಟಕರ ಸಂಗತಿಯಾಗಿದೆ.ಈ ಪ್ರಕ್ರಿಯೆಯಲ್ಲಿ ಪೊಲೀಸ್ ಇಲಾಖೆಯೂ ಸೇರಿದಂತೆ ಈ ಪ್ರಕರಣವು ಈ ಹಂತದವರೆಗೆ ಬರುವಲ್ಲಿ ಜಿಲ್ಲಾಡಳಿತ ನಡೆದು ಕೊಂಡ ರೀತಿ ತೀರಾ ಖಂಡನೀಯ. ಹಲವು ವರ್ಷಗಳಿಂದ ಆ
ಉಡುಪಿ, ಎ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರು. ಇವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಘಾತದಿಂದ ಬೆನ್ನು ಹುರಿ(ಸ್ಪೈನಲ್ ಕಾಡ್)ಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ
ಹಾಸನ: ಚನ್ನರಾಯಪಟ್ಟಣದ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನೊಳಗೆ ಗ್ರಾಮ ಪಂಚಾಯಿತಿ ನೌಕರರೊಬ್ಬರ ಶವ ಪತ್ತೆಯಾಗಿದೆ. ದಿಡಗ ಗ್ರಾಮ ಪಂಚಾಯಿತಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್ (32) ಎಂಬಾತ ತಮ್ಮ ಕಾರಿನೊಳಗೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಆಲೂರು ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಯಾಗಿದ್ದ ಶಿವಪ್ರಸಾದ್, ಅತಿಯಾಗಿ ಮದ್ಯ ಸೇವಿಸುವ ಚಟ ಹೊಂದಿದ್ದ ಎನ್ನಲಾಗಿದೆ. ನಿನ್ನೆ ತಡರಾತ್ರಿ ಮದ್ಯ
ಎಪ್ರಿಲ್ 29, ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬೃಹತ್ ರ‍್ಯಾಲಿ ಹಾಗೂ ಹಕ್ಕೊತ್ತಾಯ ಸಮಾವೇಶ ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಎಲ್ಲಾ ಜನವಿಭಾಗಗಳ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟು ಎಪ್ರಿಲ್ 29ರಂದು ಬೆಳಿಗ್ಗೆ 10.30ಕ್ಕೆ ದೇರಳಕಟ್ಟೆ ಜಂಕ್ಷನ್‌ನಲ್ಲಿ ಹಕ್ಕೊತ್ತಾಯ ಸಮಾವೇಶವು ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಬೆಳಿಗ್ಗೆ 10ಕ್ಕೆ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆ ಜಂಕ್ಷನ್ ಹಾಗೂ ನಾಟೆಕಲ್ ಜಂಕ್ಷನ್‌ನಿಂದ
ಚೈತನ್ಯ ಕಲಾವಿದರು ಬೈಲೂರು ತಂಡದ ವತಿಯಿಂದ ‘ಅಷ್ಟಮಿ ಶತ ಸಂಭ್ರಮ’ ಕಾರ್ಯಕ್ರಮ ಎ.20ರಂದು ಸಂಜೆ 5ರಿಂದ 10 ಗಂಟೆಗೆ ಬೈಲೂರು ಬಸ್ ಸ್ಟ್ಯಾಂಡ್ ಹತ್ತಿರ ಸೌಂದರ್ಯ ಕಾಂಪ್ಲೆಕ್ಸ್ ಬಳಿ ಜರಗಲಿದೆ ಎಂದು ತಂಡದ ಪ್ರವರ್ತಕ ಪ್ರಸನ್ನ ಶೆಟ್ಟಿ ಬೈಲೂರು ತಿಳಿಸಿದರು.ತನ್ನ ರಚನೆ, ನಿರ್ದೇಶನದಲ್ಲಿ ಇದು 10ನೇ ನಾಟಕವಾಗಿದ್ದು, ಅತೀ ಕಡಿಮೆ ಅವಧಿಯಲ್ಲಿ ಅಷ್ಟಮಿ ನಾಟಕ 100 ಪ್ರದರ್ಶನವನ್ನು ಪೂರೈಸಿದ್ದು, 115ನೇ ಪ್ರದರ್ಶನವರೆಗೂ ಬುಕ್ಕಿಂಗ್ ಪಡೆದುಕೊಂಡಿದೆ. ಜಿಲ್ಲೆ
ವಿದ್ಯೆ ಎಂಬುದು ಶಾಶ್ವತ, ಪುಸ್ತಕವೇ ನಮ್ಮ ಆಸ್ತಿ. ಕ್ರಮಬದ್ಧ ಕಲಿಕೆಯಿಂದ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಗಳಿಸಬಹುದು. ಹಾಗೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ. ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರತಿಭಾಶಾಲಿಗಳಾಗಿದ್ದು ಜೊತೆಗೆ ಇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಅಗ್ರಗಣ್ಯ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವರಾಗಿರುವ




























