Home Archive by category Fresh News (Page 126)

ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇಗುಲ ಧಾರ್ಮಿಕ ಸಭಾ ಕಾರ್ಯಕ್ರಮ

ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಅಷ್ಟ- ಬಂಧ ಬ್ರಹ್ಮಕಲಕೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.ವಾಸ್ತು ತಜ್ಞ ಯಕ್ಷಗಾನ ಪ್ರಸಂಗ ಕರ್ತರಾದ ಡಾ. ಬಸವರಾಜ್ ಶೆಟ್ಟಿಗಾರ್ ಕಾರ್ಯಕ್ರಮ ಉದ್ಘಾಟಿಸಿದರು ಅವರು ಮಾತನಾಡಿ ದಕ್ಷ ಸಂಹಾರ ವಾದ ನಂತರ ವೀರಭದ್ರನು ಶೃಂಗ ಗಿರಿಯಲ್ಲಿ

ಸುಳ್ಯ. ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ,  v4 ನ್ಯೂಸ್  ಹಾಗೂ ಎಂ.ಬಿ. ಫೌಂಡೇಶನ್ ಸಹಯೋಗದಲ್ಲಿ‌ ಅರೆಭಾಷೆ ಕಾಮಿಡಿ ಇದರ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮವು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ  ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅರೆಭಾಷೆಯ ಸಂಸ್ಕೃತಿ ಆಚಾರ

ಪುತ್ತೂರು: ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ

ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತೂರು ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ , ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್

ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಆಗಮಿಸಲಿದ್ದಾರೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕುಗಳನ್ನು

ಫೆ.18ರಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ, ಸಂವಿಧಾನ ಜಾಗೃತಿ ಸಮಾವೇಶ

ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಕಾರ್ಯಕ್ರಮ ಹಾಗೂ ಸಂವಿಧಾನ ಜಾಗೃತಿ ಸಮಾವೇಶ ಫೆ.18ರಂದು ನಗರದ ಊರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರು ತಿಳಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2ಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಾರಾಯಣ ಗುರು

ಮಹಾ ಕುಂಭ ಮೇಳದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅನಾವರಣ

ದಕ್ಷಿಣ ಕನ್ನಡ ಜಿಲ್ಲೆಯ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಸಂಚಾಲಕರಾದ ಡಾ. ರವಿಕಕ್ಕೆಪದವು ನೇತೃತ್ವದಲ್ಲಿ ಮಹಾ ಕುಂಭ ಮೇಳಕ್ಕೆ ತೆರಳಿದ 42 ಮಂದಿ ಸೇರಿ ಅಲ್ಲಿನ ಸ್ವಾಮಿಗಳ ನೇತೃತ್ವದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಪವಿತ್ರ ಧಾರ್ಮಿಕ ಸ್ಥಳವಾದ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ತ್ರಿವೇಣಿ ಸಂಗಮವಾದ ಮಹಾ ಕುಂಭ ಮೇಳದಲ್ಲಿ ಅನಾವರಣ ಗೊಳಿಸಲಾಯಿತು. ಈ ಸಂಧರ್ಭದಲ್ಲಿ ಜಾತ್ರಾ ಮಹೋತ್ಸವ ಯಶಸ್ವಿಯಾಗಬೇಕು ಸಮಾಜಕ್ಕೆ

ನಾಲ್ಕೂರು : ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ಮಂಜೂರು ಆದ ರೂ. 30,000/- ಅನುದಾನದ ಮಂಜೂರಾತಿ ಪತ್ರ ವಿತರಣೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾಲ್ಕೂರು ಗ್ರಾಮದ ಹಾಲೆಮಜಲಿನ ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ರೂ. 30,000/- ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಹಾಲೆಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ವಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಸೇವಾಪ್ರತಿನಿಧಿ

ದೇವಚಳ್ಳ : ಶಾಲಾ ರಂಗ ಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ಮಂಜೂರಾದ ರೂ 1,50,000/- ಅನುದಾನದ ಮಂಜೂರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಚಳ್ಳ ಗ್ರಾಮದ ದ ಕ ಜಿ ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ರೂ. 1,50,000/ ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಯೋಜನಾಧಿಕಾರಿರವರು ಮಾತನಾಡುತ್ತ, ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಮೂಡುಬಿದಿರೆ: ಲಾಡಿ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿದ ಬ್ಯಾನರ್ ಗೆ ಹಾನಿ – ಇಬ್ಬರ ಬಂಧನ

ಮೂಡುಬಿದಿರೆ: ಲಾಡಿ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಅಳವಡಿಸಿರುವ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಪುರಸಭಾ ಸದಸ್ಯ ಇಕ್ಬಾಲ್ ಕರೀಂ ಅವರು ಲಾಡಿ ಶ್ರೀ ಚತುಮು೯ಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಹಾಕಿರುವ ಬ್ಯಾನರ್ ನ್ನು ಹರಿದು ಹಾನಿಗೊಳಿಸಿದ್ದು ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಗೆ ಕರೀಂ ಅವರು ದೂರು

ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಿಂದ ಸಾಗುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಸ್ಕೂಟರ್ ಸವಾರರಿಬ್ಬರೂ ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆ ನಡೆಸಿದ ಜೀಪ್ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ