Home Archive by category Fresh News (Page 131)

ಸುಳ್ಯ: ಅಗಲಿದ ಪತ್ರಕರ್ತ ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಣೆ

ಸುಳ್ಯ: ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನ ಪ್ರಾರ್ಥನೆ ನಡೆಸಿ ನುಡಿನಮನ ಸಲ್ಲಿಸಲಾಯಿತು. ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ

ಸುಳ್ಯ : 24 ವರ್ಷದ ನಂತರ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಸುಳ್ಯ ಪೊಲೀಸ್ ಠಾಣಾ ಅಕ್ರ: 60/2002 ಕಲಂ: 457, 380 ಐಪಿಸಿ (LPC no. 04/2007)ರಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ V.T ಬಾಬು @ ಆಗಸ್ಟಿನ್ (55 ವರ್ಷ ) ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಮತ್ತು V.T.ರಾರಿ @ V. T ತೋಮಸ್ (52ವರ್ಷ )ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಎಂಬುವವರುಗಳನ್ನು ಕೇರಳದ ಕೊಟ್ಟಯಂ ಬಳಿ ಮಾನ್ಯ ಡಿವೈಎಸ್ಪಿ ಪುತ್ತೂರು ಉಪವಿಭಾಗ ಮತ್ತು ಮಾನ್ಯ ಸಿ ಪಿ […]

ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಪಾದಕ ಶಶಿ ಆರ್. ಬಂಡಿಮಾರ್ ಹೃದಯಾಘಾತದಿಂದ ನಿಧನ

“ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಬುಧವಾರ ರಾತ್ರಿ ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು.ಅವರು ತಾಯಿ, ಪತ್ನಿ, ಸಹೋದರಿ, ಇಬ್ಬರು ಸಹೋದರರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿ “ಟೈಮ್ಸ್ ಆಫ್ ಕುಡ್ಲ” ಎಂಬ ತುಳು ವಾರಪತ್ರಿಕೆಯನ್ನು 15 ವರ್ಷಗಳಿಂದ ನಡೆಸಿಕೊಂಡು ಬಂದಿದ್ದರು. ಸಣ್ಣ ಕೈಗಾರಿಕೆಯಲ್ಲೂ,

ಕಾಣಿಯೂರಿನ ಸೌಮ್ಯ ಪೂಜಾರಿ – ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಆಯ್ಕೆ

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ. ಇವರು ಕಾಣಿಯೂರು ಸರಕಾರಿ ಹಿರಿಯ

ಕರ್ನಾಟಕ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್ ಆಯ್ಕೆ

ಪುತ್ತೂರು : ಇದೇ ಜನವರಿ 28 ರಿಂದ ಫೆಬ್ರವರಿ 1 ರ  ತನಕ ಉತ್ತರಾಖಂಡ್ ರಾಜ್ಯದಲ್ಲಿ ನಡೆಯಲಿರುವ ರಾಷ್ಟಿಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕ ರಾಜ್ಯ ಪುರುಷರ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್ ಇವರು ಆಯ್ಕೆಯಾಗಿದ್ದಾರೆ. ಖೋಖೋ ಕೋಚಿಂಗ್‌ನಲ್ಲಿ ಎನ್.ಐ.ಎಸ್ ಅರ್ಹತೆ ಇರುವ ತರಬೇತುದಾರರಾಗಿರುವ ಇವರು ಪ್ರಸ್ತುತ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಾ ಇದ್ದಾರೆ. ಇವರು

ವಿಶ್ವಕರ್ಮ ಬ್ಯಾಂಕ್ :ನಿರ್ದೇಶಕರಾಗಿ ಸೀತಾರಾಮ್ ಮರು ಆಯ್ಕೆ

ವಿಶ್ವಕರ್ಮ ಸಹಕಾರ ಬ್ಯಾಂಕ್ ನಿರ್ದೇಶಕರಾಗಿ ಪತ್ರಕರ್ತ ಬೆಳುವಾಯಿ ಸೀತಾರಾಮ್ ಆಚಾರ್ಯ ಅವರು ತೃತೀಯ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮಂಗಳೂರು ವಿಶ್ವಕರ್ಮ ಬ್ಯಾಂಕ್ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಸಹಕಾರ ಸಂಘಗಳ ಉಪನಿಬಂಧಕರಾದ ವಿಲಾಸ್ ಚುನಾವಣಾಧಿಕಾರಿಯಾಗಿದ್ದರು.

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ:   ಡಾ. ಅನುರಾಧಾ ಕುರುಂಜಿ

ಶಿಕ್ಷಣ ವ್ಯಕ್ತಿಯ ಬದುಕನ್ನು ರೂಪಿಸುವುದರೊಂದಿಗೆ ಮೌಲ್ಯಯುತ ಜೀವನವನ್ನು ನಿರ್ವಹಿಸಲು ಸಾಧ್ಯವಾಗಬೇಕು. ಆ ನಿಟ್ಟಿನಲ್ಲಿ  ಶಿಕ್ಷಣ ವ್ಯವಸ್ಥೆಯ ಪರೀಕ್ಷೆ ನಿಮ್ಮ ಜೀವನದ ಅವಿಭಾಜ್ಯ ಅಂಗವೆಂದರಿಯಿರಿ. ಆ ಮೂಲಕ ನೀವು ಪಡೆದ ಶಿಕ್ಷಣ ಸಾರ್ಥಕವಾಗಲಿ. ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ.  ಅನುರಾಧಾ ಕುರುಂಜಿಯವರು ಅಭಿಪ್ರಾಯ ಪಟ್ಟರು. ಅವರು ಸರ್ಕಾರಿ ಪ್ರೌಢಶಾಲೆ ಎಡಮಂಗಲ ಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್ ಅವರ ನೇತೃತ್ವದಲ್ಲಿ  8, 9 ಮತ್ತು

ಮಂಗಳೂರು : 3 ಸಾವಿರ ಲಂಚ ಸ್ವೀಕಾರಿಸುತ್ತಿದ್ದಾಗ ಲೋಕಾಯುಕ್ತ ದಾಳಿ,ಪೊಲೀಸ್ ನಿರೀಕ್ಷಕ, ಠಾಣೆ ಸಿಬ್ಬಂದಿ ವಶಕ್ಕೆ

ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ಕೆ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ.ಓರ್ವ ವ್ಯಕ್ತಿ ಸ್ಕೂಟರ್ ವೊಂದನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸಲು ಮಾನ್ಯ ನ್ಯಾಯಾಲಯದಿಂದ ಆದೇಶವಾಗಿದ್ದು, ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ರವರನ್ನು ಭೇಟಿ ಮಾಡಿದಾಗ ರೂ. 5000 ಲಂಚದ ಹಣಕ್ಕೆ ಬೇಡಿಕೆ

ಮುಡಿಪುವಿನ ಸೂರಜ್ ಪಿಯು, ಜ್ಞಾನದೀಪ ಶಾಲೆ: ಸಂಭ್ರಮದಿಂದ ನಡೆದ ಗಣರಾಜ್ಯೋತ್ಸವ

ಮುಡಿಪುವಿನ ಸೂರಜ್ ಪದವಿ ಪೂರ್ವ ಕಾಲೇಜು ಮತ್ತು ಜ್ಞಾನದೀಪ ಶಾಲೆ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿದರು ತೇಜಶ್ರೀ ಇವರು ಅತಿಥಿಗಳನ್ನು ಹಾಗೂ ನೆರೆದವರನ್ನು ಸ್ವಾಗತಿಸಿದರು ನಂತರ ಅತಿಥಿಗಳು ಧ್ವಜಾರೋಹಣವನ್ನು ನೆರವೇರಿಸಿದರು. ವಿದ್ಯಾರ್ಥಿಗಳಾದ ದೀಕ್ಷಿತ ಹಾಗೂ ಪ್ರತ್ವಿಕ್ ಅವರು ಈ ದಿನದ ಮಹತ್ವವನ್ನು ತಿಳಿಸಿದರು.ನಂತರ ಅತಿಥಿಗಳು ಕಾರ್ಯಕ್ರಮದ ಮತ್ತು ಭಾರತ ಸಂವಿಧಾನದ ಬಗ್ಗೆ

ಓಂ ಕ್ರಿಕೆಟರ್ಸ್ ಪಾವಂಜೆ ನೂತನ ಅಧ್ಯಕ್ಷರಾಗಿ ಸುಕೇಶ್ ಪಾವಂಜೆ ಆಯ್ಕೆ

ಓಂ ಕ್ರಿಕೆಟರ್ಸ್ ಪಾವಂಜೆ, ಹಳೆಯಂಗಡಿ ಇದರ ವಾರ್ಷಿಕ ಮಹಾಸಭೆಯನ್ನು ದಿನಾಂಕ 26.01.2027ನೇ ಭಾನುವಾರ ಸಂಸ್ಥೆಯ ಕಾರ್ಯಾಲಯದಲ್ಲಿ ಅಧ್ಯಕ್ಷರಾದ ಶ್ರೀ ಶರತ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.ವಾರ್ಷಿಕ ವರದಿ ಮತ್ತು ಆಯವ್ಯಯದ ಮಂಡನೆಯನ್ನು ಕಿರಣ್ ರಾಜ್ ರವರು ನೆರವೇರಿಸಿ ಅನುಮೋದನೆಯನ್ನು ಪಡೆದರು.ಮುಂದಿನ ವರ್ಷಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷರಾಗಿ ಶ್ರೀ ಸುಕೇಶ್ ಪಾವಂಜೆ, ಉಪಾಧ್ಯಕ್ಷರಾಗಿ ಶ್ರೀ ಮಿಥುನ್ ಸುವರ್ಣ,