Home Archive by category Fresh News (Page 142)

ದುಬೈ : “ಮಿಡ್ಲ್ ಕ್ಲಾಸ್ ಫ್ಯಾಮಿಲಿ ” ತುಳು ಚಿತ್ರದ ಪ್ರೀಮಿಯರ್ ಟಿಕೆಟ್ ಬಿಡುಗಡೆ ಕಾರ್ಯಕ್ರಮ

ದುಬೈ : ಯುವ ನಟ – ನಿರ್ದೇಶಕ ರಾಹುಲ್ ಅಮೀನ್ ನಿರ್ದೇಶಿಸಿ, ವಿನೀತ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಚಿತ್ರದ ಯುಎಇ ರಾಷ್ಟ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು. ಡಿಸೆಂಬರ್ .8 ರಂದು ದುಬೈನ ಮಾರ್ಕೊ ಪೋಲೊ ಹೊಟೇಲ್ ನ ಸಭಾಂಗಣದಲ್ಲಿ ನಡೆದ ಟಿಕೆಟ್ ಬಿಡುಗಡೆ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ,

ವಿಟ್ಲ: ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿ ಸಾವು

ವಿಟ್ಲ: ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಇದೊಂದು ಆತ್ಮಹತ್ಯೆ ಎಂದು ತಿಳಿದು ಬಂದಿದೆ ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೇರಾ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿನಿ ಮಡಲ ನಿವಾಸಿ ಕಿಶೋರ್ ರವರ ಪುತ್ರಿ ತೀರ್ಥಶ್ರೀ (8) ಮೃತಪಟ್ಟ ಬಾಲಕಿ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ವಿಟ್ಲ ಪೊಲೀಸರು ಬಾಲಕಿಯ

ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ – ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ

 ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ,  ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ, ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಮಟ್ಟದ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ -2024 ದಿನಾಂಕ 05.12.2024 ರಂದು ಕಾಲೇಜಿನ ಸಭಾಂಗಣದಲ್ಲಿ   ನಡೆಯಿತು.  ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಇವರು ಅಧ್ಯಕ್ಷತೆ

ಮೂಡುಬಿದಿರೆ : ದ್ವಿಚಕ್ರ ವಾಹನದಿಂದ ಬಿದ್ದು ಸಂಶಯಾಸ್ಪದ ಸಾವು

ಮೂಡುಬಿದಿರೆ : ಪಡುಮಾರ್ನಾಡು ಗ್ರಾಮದ ಬನ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಬೈಕ್‌ನಿಂದ ಬಿದ್ದು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ(49) ಮೃತಪಟ್ಟಿದ್ದು ಪೋಲಿಸರು ಸಂಶಯಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ.ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು ಜನವರಿ 3ರಂದು ನಡೆಯಲಿದ್ದ ಅವರ ಪುತ್ರನ ಉಪನಯನದ ಆಮಂತ್ರಣ ಪತ್ರಿಕೆಯನ್ನು ವಿತರಿಸಿ ವಾಪಸ್ಸು

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ. ಮೃತರು ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕುಂಜತ್ ಬೈಲ್ ರಸ್ತೆ ಕಾಮಗಾರಿ ಗುದ್ದಲಿ ಪೂಜೆ

ವಾರ್ಡ್ -15 ಕುಂಜತ್ ಬೈಲ್ ದಕ್ಷಿಣದಲ್ಲಿ 39 ಲಕ್ಷ ಮೊತ್ತದ ರಸ್ತೆ ಕಾಮಗಾರಿ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು. ವಾರ್ಡ್ ವ್ಯಾಪ್ತಿಯ ಗಾಂಧಿನಗರ ಅಡ್ಡರಸ್ತೆ 20 ಲಕ್ಷ, ಗಾಂಧಿನಗರ – ಪಳನೀರು ರಸ್ತೆ -ಕಾಲೇಜು ಅಭಿವೃದ್ಧಿ ರಸ್ತೆ 10 ಲಕ್ಷ, ಗಾಂಧಿನಗರ ಪ್ರಮೋದ್ ಮನೆ ಬಳಿ ಇಂಟರ್ ಲಾಕ್ ವ್ಯವಸ್ಥೆ ಮತ್ತು ಪಳನೀರು ನಾರಾಯಣ ಗುರು ಮಂದಿರ ಬಳಿಯ ರಸ್ತೆ ಅಭಿವೃದ್ಧಿ 9 ಲಕ್ಷ ಮೊತ್ತದ ಕಾಮಗಾರಿಗೆ ಮಂಗಳೂರು

ಚಿತ್ರಾಪುರ:ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಚಿತ್ರಾಪುರ: ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ,ರಂಗ ಮಂದಿರ ದ ಉದ್ಘಾಟನೆ ಮತ್ತು ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಮಂದಿರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ, ಶಾಸಕರಾದ ಡ.ಭರತ್ ಶೆಟ್ಟಿ ವೈ ಅವರು ಗುರುವಾರ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿಸಿದರು.ಚಿತ್ರಾಪುರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ

ಮಂಗಳೂರು: ಪೇಯ್ಡ್ ನ್ಯೂಸ್ ಸಂಸ್ಕೃತಿ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ‌ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜವನ್ನು

ಕಳತ್ತೂರು: ದ.ಸಂ.ಸ ಕಳತ್ತೂರು ಗ್ರಾಮ ಶಾಖೆ ಉದ್ಘಾಟನೆ

ಶ್ರೀ ಬಬ್ಬುಸ್ವಾಮಿ ದೇವಸ್ಥಾನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಪ್ರೋ.ಕೃಷ್ಣಪ್ಪ ಸ್ಥಾಪಿತ ಕಳತ್ತೂರು ಶಾಖೆ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆ ನೇರವೆರಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೊರಕೆ, ದೇಶದಲ್ಲಿ ಅಸ್ಪೃಶ್ಯತೆ ಅಸಮಾನತೆ ಸೃಷ್ಟಿಯಿಂದ ಪ್ರಾರಂಭವಾಗಿದ್ದಲ್ಲ,ಅದು ಮಾನವರಿಂದ ಆದದ್ದು, ಅದರ ವಿರುದ್ಧ ಅಂಬೇಡ್ಕರರು ನ್ಯಾಯೋಚಿತ ಹೋರಾಡಿ ಸಂವಿಧಾನವನ್ನು ರಚಿಸಿದರು ಅದನ್ನು ಉಳಿಸಿ ಪೋಷಿಸಿದರೆ