Home Archive by category Fresh News (Page 145)

ಮೂಡುಬಿದಿರೆ; ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಶೈಕ್ಷಣಿಕ ಸಮ್ಮೇಳನ

ಮೂಡುಬಿದಿರೆ : ಕ.ರಾ. ಪ್ರೌಢಶಾಲಾ ಸಹಶಿಕ್ಷಕರ ಸಂಘದ ದ.ಕ. ಜಿಲ್ಲಾ ಘಟಕ ಮತ್ತು ಮೂಡುಬಿದಿರೆ ತಾಲೂಕು ಘಟಕ ಇವುಗಳ ಸಹಯೋಗದಲ್ಲಿ ಇಲ್ಲಿನ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಜಿಲ್ಲಾ ಶೈಕ್ಷಣಿಕ ಸಮ್ಮೇಳನ,ಪ್ರತಿಭಾ ಪುರಸ್ಕಾರ, ಅಭಿನಂದನ ಕಾರ್ಯಕ್ರಮವು ನಡೆಯಿತು.ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಉದ್ಘಾಟಿಸಿ ಮಾತನಾಡಿ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಹಾಸಭೆ :ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

ಪುತ್ತೂರು, ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ವಾರ್ಷಿಕ ಮಹಾ ಸಭೆಯು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದಿವಂಗತ ವಸಂತ ಬಂಗೇರ ವೇದಿಕೆಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರಾದ ಪೀತಾಂಬರ ಹೆರಾಜೆಯವರು ವಹಿಸಿ ಮಾತನಾಡಿ ವಿಶ್ವ ಬಿಲ್ಲವರು ಸೇರಿ ನಿರ್ಮಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ  ಮೂಲಸ್ಥಾನವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯು ಇಂದು ವಿಶ್ವ ಪ್ರಸಿದ್ಧಿಯಾಗಿ

ನವೋದ್ಯಮಿಗಳನ್ನು ಸಶಕ್ತಗೊಳಿಸುವುದು: ಅಟಲ್ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಎಸ್.ಜೆ.ಇ.ಸಿ ಹ್ಯಾಂಡ್ಸ್-ಆನ್ ಐಓಟಿ ಕಾರ್ಯಾಗಾರ

ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ(ಎಸ್.ಜೆ.ಇ.ಸಿ) ಎಐಸಿಟಿಇ ಐಡಿಯಾ ಲ್ಯಾಬ್  ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್, ಮಂಗಳೂರು), ಎಟಿಎಲ್ ಪಠ್ಯಕ್ರಮ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ ಕುರಿತು ಮೂರು ದಿನಗಳ ಪ್ರಾಯೋಗಿಕ ಕಾರ್ಯಾಗಾರವನ್ನು ಆಯೋಜಿಸಲು ಸಜ್ಜಾಗಿದೆ. (ಐಓಟಿ) ಅಟಲ್ ಟಿಂಕರಿಂಗ್ ಲ್ಯಾಬ್ (ಎಟಿಎಲ್) ಶಾಲಾ ಶಿಕ್ಷಕರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ

ಎಸ್.ಜೆ.ಇ.ಸಿ  ಬಾಂಬೂ ಸೊಸೈಟಿ ಆಫ್ ಇಂಡಿಯಾ ಸಹಯೋಗದೊಂದಿಗೆ ಸಸ್ಟೈನಬಲ್ ಎಂಜಿನಿಯರಿಂಗ್ ಕ್ಲಬ್ ಆರಂಭ

ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್.ಜೆ.ಇ.ಸಿ), ಬಾಂಬೂ ಸೊಸೈಟಿ ಆಫ್ ಇಂಡಿಯಾದೊಂದಿಗೆ ಸಂಯೋಜಿತವಾಗಿರುವ ತನ್ನ ಸುಸ್ಥಿರ ಎಂಜಿನಿಯರಿಂಗ್ ಕ್ಲಬ್‌ನ ಭವ್ಯ ಉದ್ಘಾಟನೆಗೆ ಸಾಕ್ಷಿಯಾಯಿತು. ಈ ಕಾರ್ಯಕ್ರಮವನ್ನು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಮತ್ತು ಉದ್ಯಮ ಇನ್ನೋವೇಶನ್ ಗ್ರೂಪ್ ಸಹಯೋಗದೊಂದಿಗೆ ಪ್ರೇರಣಾ ಸಭಾಂಗಣದಲ್ಲಿಆಯೋಜಿಸಲಾಯಿತು.  ಸುಸ್ಥಿರತೆಗೆ ಒತ್ತು ನೀಡಲು ಶೈಕ್ಷಣಿಕ ಮತ್ತು ಉದ್ಯಮದ ನಾಯಕರನ್ನು ಒಟ್ಟುಗೂಡಿಸುವಲ್ಲಿ ಇ ಕಾರ್ಯಕ್ರಮ

ಶಿಗ್ಗಾಂವಿ ಫಲಿತಾಂಶ, ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆ ಗೆಲುವು

ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಯಾಸೀರ್​ ಪಠಾಣ್​ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಅವರಿಗೆ

ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆ ಗೆಲುವು

 ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್​​ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ. ಅತ್ತ ನಿಖಿಲ್​ಗೆ ಮೂರನೇ ಬಾರಿಯೂ

ಸಂಡೂರು ಕ್ಷೇತ್ರದ ಉಪಚುನಾವಣೆ: ಅನ್ನಪೂರ್ಣ ತುಕರಾಂಗೆ ಗೆಲುವು

ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ ತುಕಾರಾಂ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆದರೆ, 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇ

ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಮಲ್ಲಕಂಬ ಸ್ಪರ್ಧೆ: ಆಳ್ವಾಸ್ ಶಾಲೆಗೆ ತಂಡ ಪ್ರಶಸ್ತಿ

ಮೂಡುಬಿದಿರೆ: ನ. 18ರಿಂದ 20ರವರೆಗೆ ನಡೆದ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಬಾಗಲಕೋಟೆ, ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬಾಗಲಕೋಟೆ, ಹ.ಉ.ಪೂ ಸರಕಾರಿ ಪ್ರೌಢ ಶಾಲೆ, ತುಳಸಿಗಿರಿ, ಸರಕಾರಿ ಕುವೆಂಪು ಶತಮಾನೋತ್ಸವ ಮಾದರಿ ಪ್ರಾಥಮಿಕ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಜೆ.ಪಿ ತುಳಸಿಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 14ವರ್ಷ ಮತ್ತು 17 ವರ್ಷ ವಯೋಮಿತಿಯ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಎಲೆವೆಂಶಿಯಾ 2ಕೆ24 ಫೆಸ್ಟ್

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಎಂಬ ಫೆಸ್ಟ್ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಮತಿ ಲಕ್ಷ್ಮೀ ಶೆಟ್ಟಿ ಎಚ್ .ಆರ್ ರೋಬೊಸಾಫ್ಟ್ ಉಡುಪಿ ಮತ್ತು ಸಮಾಜ ಸೇವಕ ಈಶ್ವರ್ ಮಲ್ಪೆ ಇವರು ಆಗಮಿಸಿದರು. ವಿದ್ಯಾರ್ಥಿಗಳಿಗೆ ಜೊತೆ ಮಾತನಾಡಿ ಬಿ.ಸಿ.ಎ ವಿಭಾಗದಲ್ಲಿರುವ ಅವಕಾಶಗಳು ಹಾಗೂ ಹೊಸ ರೀತಿಯ ಪ್ರೋಗ್ರಾಮ್ ಗಳನ್ನು ನಡೆಸುವ ಕುರಿತು ವೈಯಕ್ತಿಕ ಸಾಧನೆಯನ್ನು

ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ವಿಧಿವಶ

ವಿಜಯವಾಣಿ, ಕರಾವಳಿ ಅಲೆ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಪುದುವೆಟ್ಟು ಗ್ರಾಮದ ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ