Home Archive by category Fresh News (Page 146)

ಎಸ್‌ಜಿಎಫ್‌ಐ ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್: ಈಜು ಸ್ಪರ್ಧೆಗೆ ಮಂಗಳಾ ಕ್ಲಬ್‌ನ 10 ಮಂದಿ ಆಯ್ಕೆ

ಇತ್ತೀಚೆಗೆ ಕರ್ನಾಟಕ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ರಾಜ್ಯಮಟ್ಟದ ಹಾಗೂ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಣ ಸಂಸ್ಥೆಯ ವತಿಯಿಂದ ಭೋಪಾಲ್‌ನಲ್ಲಿ ನಡೆದ ರಾಷ್ಟçಮಟ್ಟದ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಕ್ಲಬ್‌ನ ಸದಸ್ಯರಾದ ಚಿಂತನ್ ಎಸ್. ಶೆಟ್ಟಿ, 2 ಚಿನ್ನ, 3 ಬೆಳ್ಳಿ. ಗ್ಯಾನ್ ಡಿ 1 ಬೆಳ್ಳಿ, 1

ಮೂಡುಬಿದಿರೆ: ಶ್ರೀಕ್ಷೇತ್ರ ಪುತ್ತಿಗೆಯಲ್ಲಿ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಮೂಡುಬಿದಿರೆ: ಇಲ್ಲಿನ ಚೌಟರ ಅರಮನೆಯ ಆಡಳಿತಕ್ಕೆ ಒಳಪಟ್ಟ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಫೆ.28ರಿಂದ ಮಾರ್ಚ್ 7ರವರೆಗೆ ಧಾರ್ಮಿಕ ಕಾರ್ಯಕ್ರಮ, ಮಾರ್ಚ್ 6ರಂದು ಬ್ರಹ್ಮಕಲಶೋತ್ಸವ‌‌ ನಡೆಸುವುದೆಂದು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಭಾನುವಾರ ಸಾಯಂಕಾಲ ದೇವಳದ ಆವರಣದಲ್ಲಿ ನಡೆದ ಸಭೆಯ ಮೊದಲು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನಾಂಕವನ್ನು ತಂತ್ರಿವರೇಣ್ಯರು, ಅರ್ಚಕವರ್ಗ,

ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ: ಎಸ್‌ಜೆಇಸಿ ಮಹಿಳಾ ತಂಡಕ್ಕೆ ರನ್ನರ್ಸ್ ಅಪ್ ಟ್ರೋಫಿ

ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್.ಜೆ.ಇ.ಸಿ) ಮಹಿಳಾ ವಾಲಿಬಾಲ್ ತಂಡವು 12 ಮತ್ತು13 ನವೆಂಬರ್ 2024 ರಂದು ಎಜಿಎಂಆರ್ಸಿಇ ವರೂರು ಹುಬ್ಬಳ್ಳಿಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಮಹಿಳಾವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್ ಅಪ್ ಟ್ರೋಫಿಯನ್ನು ಪಡೆದುಕೊಂಡಿತು. ದೈಹಿಕ ಶಿಕ್ಷಣ ನಿರ್ದೇಶಕಿ(ಪಿಇಡಿ) ವನೀಷಾ ವಿ ರೋಡ್ರಿಗಸ್ ಮತ್ತು ಎಸ್.ಜೆ.ಇ.ಸಿ ವಾಲಿಬಾಲ್ ತರಬೇತುದಾರ ಜಮುನಾ ರವರಮಾರ್ಗದರ್ಶನದಲ್ಲಿ ಪಡೆದ ಈ ಅಗಾಧ ಸಾಧನೆಗಾಗಿ ಇಡೀ ತಂಡ ಮತ್ತು ದೈಹಿಕ

ಮೂಡುಬಿದಿರೆ: ರಾಜ್ಯಮಟ್ಟದ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ : ಯೆನೆಪೋಯ ಕಾಲೇಜ್ ತಂಡ ಚಾಂಪಿಯನ್

ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ತೋಡಾರಿನ ಯೆನೆಪೋಯ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು 2 ಚಿನ್ನ ಮತ್ತು 2 ಬೆಳ್ಳಿಯ ಪದಕದೊಂದಿಗೆ ತಂಡ ಚಾoಪಿಯನ್ ಪ್ರಶಸ್ತಿ ಪಡೆದುಕೊಂಡಿದೆ. ಪುರುಷರ ವಿಭಾಗದಲ್ಲಿ 1 ಚಿನ್ನದ ಪದಕ,1 ಬೆಳ್ಳಿಯ ಪದಕ, 3 ಕಂಚಿನ ಪದಕ ಗೆದ್ದು ತೃತಿಯ ತಂಡ ಚಾoಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪುರುಷರ 67 ಕೆ.

ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ – ಆಳ್ವಾಸ್ ಶಾಲೆಗೆ 11 ಪದಕದೊಂದಿಗೆ ತಂಡ ಪ್ರಶಸ್ತಿ

ಮೂಡುಬಿದಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 03 ಚಿನ್ನ, 06 ಬೆಳ್ಳಿ ಮತ್ತು 02 ಕಂಚಿನ ಪದಕಗಳೊಂದಿಗೆ 11

ಉಚ್ಚಿಲ ಕ್ಷೇತ್ರಕ್ಕೆ ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ ಭೇಟಿ

ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಳದ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀ ಗಿರಿಧರ್ ಸುವರ್ಣ, ಶ್ರೀ ಮನೋಹರ್ ಶೆಟ್ಟಿ ’ ಸಾಯಿರಾಧ’, ಸಂತೋಷ್ ಶೆಟ್ಟಿ ತೆಂಕರಗುತ್ತು, ಯೋಗೀಶ್ ಶೆಟ್ಟಿ ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು,

ಮೂಡುಬಿದಿರೆಯಲ್ಲಿ 45 ಎಕ್ರೆ ಜಾಗ ವಕ್ಫ್ ಗೆ ಮೀಸಲು ಬಿಜೆಪಿಯಿಂದ ಸುಳ್ಳು ಸುದ್ಧಿ – ಅರುಣ್ ಶೆಟ್ಟಿ ಆರೋಪ

ಮೂಡುಬಿದಿರೆ ತಾಲೂಕಿನ ಪಡುಕೊಣಾಜೆ ಗ್ರಾಮದಲ್ಲಿ ಸುಮಾರು 45 ಎಕ್ರೆ ಜಾಗವನ್ನು ಸರಕಾರ ವಕ್ಫ್ ಗೆ ಮೀಸಲಿಟ್ಟಿದೆ ಎಂದು ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ಧಿ ಹಬ್ಬಿಸಿ ಸಾರ್ವಜನಿಕವಾಗಿ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸುತ್ತಿದೆ ಎಂದು ಮೂಡುಬಿದಿರೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ಆರೋಪಿಸಿದ್ದಾರೆ. ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಈ ಸುದ್ಧಿಯ

ಬಂಟ್ವಾಳ: ಪ್ರೊ. ಡಾ. ಶಿವಪ್ರಸಾದ್. ಕೆ ಅವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

ಬಂಟ್ವಾಳ: ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ನೀಡುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಯನ್ನು ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ದೇರಳಕಟ್ಟೆಯ ಯೆನಪೊಯ ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಮತ್ತು ಡೀನ್ ಪ್ರೊ. ಡಾ.ಶಿವಪ್ರಸಾದ್ ಕೆ. ಅವರಿಗೆ ನೀಡಿ ಗೌರವಿಸಲಾಯಿತು. ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ಪುಂಜಲಾಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ ೪೦ನೇ ವರ್ಷದ ಪ್ರಯುಕ್ತ ದ.ಕ.

ಬೈಂದೂರು : 71ನೇ ಅಖಿಲ ಭಾರತ ಸಹಕಾರ ಸಪ್ತಾಹ

ಕರ್ನಾಟಕ ಸಹಕಾರಿ ಮಹಾಮಂಡಲ ಬೆಂಗಳೂರು, ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಕಂಬದಕೊಣೆ ರೈತರ ಸೇವಾ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವಧನ ವಿತರಣಾ ಸಮಾರಂಭ ನಾಗೂರು ನಲ್ಲಿ ನೆಡೆಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿಇಂದು ಬ್ಯಾಂಕಿಂಗ್ ಕ್ಷೇತ್ರ ದೊಡ್ಡಮಟ್ಟದಲ್ಲಿ ವಿಸ್ತರಣೆಗೊಂಡರೂ ಅವುಗಳಿಗೆ ಸವಾಲೆಸೆಯುವ

ಬೈಂದೂರು: ಸರ್ಕಾರದ ಧಮನಕಾರಿ‌ ನೀತಿ ಖಂಡನೀಯ – ಡಾ. ಅತುಲ್ ಕುಮಾರ್ ಶೆಟ್ಟಿ

ಬೈಂದೂರು: ಕಸ್ತೂರಿ ರಂಗನ್ ವರದಿ‌ ಜಾರಿ ವಿರೋಧಿಸಿ ಮಲೆನಾಡು ಜನ ಹಿತರಕ್ಷಣ ವೇದಿಕೆ ದ.ಕ. ವತಿಯಿಂದ ಗುಂಡ್ಯ ಶಿರಾಡಿ ಬಳಿ‌ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿರುದ್ಧ ರಾಜ್ಯ ಸರ್ಕಾರ ಎಫ್ ಐ ಆರ್ ದಾಖಲಿಸಿರುವುದು ಖಂಡನೀಯ. ಪ್ರತಿಭಟಿಸುವ ಹಕ್ಕು ಎಲ್ಲರಿಗೂ ನಮ್ಮ ಸಂವಿಧಾನ ನೀಡಿದೆ. ಸರ್ಕಾರದ ಧೋರಣಿ ಖಂಡಿಸಿ ಪ್ರತಿಭಟಿಸುವವರ ವಿರುದ್ಧ ಸರ್ಕಾರ ಧಮನಕಾರಿ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಮಲೆನಾಡು ಜನ