ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನೆರವೇರಿತು. ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ
ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ. ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (4) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ
ಸುರತ್ಕಲ್: ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ. ಪ್ರಜ್ವಲ್ ಸುಮಾರು ೮ ಮಂದಿ ಸ್ನೇಹಿತರ ಜೊತೆ ಇಂದು ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ
ಆಶೀರ್ವಾದ್ ಎಂಟರ್‌ಪ್ರಸೈಸ್ ಸ್ಕೀಮ್ ಮೂಲಕ ಗ್ರಾಹಕರಿಗೆ ವಿಶೇಷ ಕೊಡುಗೆಳನ್ನು ನೀಡುತ್ತಿದೆ. ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಿ ಅದೃಷ್ಟಶಾಲಿಗಳಾಗಲು ಅವಕಾಶವನ್ನು ಮಾಡಿಕೊಡುತ್ತಿದ್ದಾರೆ. ಕೇವಲ ಒಂದು ಸಾವಿರ ರೂಪಾಯಿಗೆ 2 ಮನೆ ಸಿಗುವ ಅವಕಾಶವಿದೆ. ಇಷ್ಟು ಮಾತ್ರವಲ್ಲದೆ ಪ್ರತೀ ತಿಂಗಳು 10 ಸದಸ್ಯರಿಗೆ ಚಿನ್ನದ ಉಂಗುರು ಹಾಗೂ 30 ಸರ್ಪ್ರೈಸ್ ಗಿಫ್ಟ್ ಪಡೆಯಬಹುದು. 5 ಸೆನ್ಸ್ ಜಾಗವನ್ನು ಸುಲಭವಾಗಿ ಪಡೆದುಕೊಳ್ಳಬಹುದು. ಕಾರು, ಬೈಕ್, ಸ್ಕೂಟರ್, ಆಟೋ
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ‘ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ’ ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಓದುವ ಅಭಿಯಾನಕ್ಕೆ ಚಾಲನೆ ನೀಡುವ ಹಾಗೂ ಪ್ರಥಮ ಕಾರ್ಯಕ್ರಮದ ಉದ್ಘಾಟನೆಯು ಅ.25ರಂದು ಬೆಳಿಗ್ಗೆ 10.00 ಗಂಟೆಗೆ ಉರ್ವಾಸ್ಟೋರ್ ನಲ್ಲಿರುವ ತುಳು ಅಕಾಡೆಮಿಯ ತುಳು ಭವನದ ಗ್ರಂಥಾಲಯದಲ್ಲಿ ನಡೆಯಲಿದೆ.ಓದುವ ಅಭಿಯಾನಕ್ಕೆ ಹಿರಿಯ
ಮೂಲ್ಕಿಯ ಲಯನ್ಸ್ ಸೌಧದಲ್ಲಿ ಕಾರ್ಯಾಚರಿಸುತ್ತಿರುವ ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ದೀಪಾವಳಿ ಮತ್ತು ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡುತ್ತಿದ್ದಾರೆ. ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ 2000 ರೂಗಳ ಖರೀದಿಗೆ ಗ್ರಾಹಕರಿಗೆ 100ಗ್ರಾಂ ಬಾದಾಮಿ ಉಚಿತ, ಹಾಗೂ ಮೊದಲ 100 ಗ್ರಾಹಕರಿಗೆ 50ಗ್ರಾಂನ ಡ್ರೈಫ್ರೂಟ್ಸ್ ಮಿಕ್ಸ್ ಹಾಗೂ 100 ಗ್ರಾಂನ ಖರ್ಜೂರ ಉಚಿತವಾಗಿ ಪಡೆಯುವ ಅವಕಾಶ ನೀಡಿದ್ದಾರೆ.ಇದು ಸೀಮಿತ ಅವಧಿಗೆ
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಗೋವಾದಲ್ಲಿ ತುಳುಕೂಟ ಆರಂಭಿಸಲು ಕಾರಣವಾದ ಅಂಶಗಳನ್ನು ವಿವರಿಸಿದರು. ಮುಂಬೈ ಮತ್ತು
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಬಂದಡ್ಕ ಗ್ರಾಮ ಗೌಡ ಸಮಿತಿ ಕೇರಳ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ -2024 ಅ.27ರಂದು ಬಂದಡ್ಕದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಮಂಟಪ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಮೊದಲು ಮೆರವಣಿಗೆ ನಡೆಯಲಿದ್ದು, ಕಾರ್ಯಕ್ರಮವನ್ನು ಬಂದಡ್ಕದ ಹಿರಿಯ ವರ್ತಕರಾದ ಕೃಷ್ಣಪ್ಪ ಗೌಡ ಕೊಯಿಂಗಾಜೆ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮವನ್ನು ರವಿಪ್ರಸಾದ್ ಇಳಂದಿಲ ನಡೆಸಿಕೊಡಲಿದ್ದಾರೆ.
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ 16ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ ಹಿಡಿದಿದೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆದಿದೆ.ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ನಡೆದ ಟೂರ್ನಿಯ ಪುರುಷರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ೩-೦
ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು ಶಾಂತಿನಿಕೇತನ ಪದವಿಪೂರ್ವ ಕಾಲೇಜು ಕುಪ್ಪಟಗೇರಿ ಇವರ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 2 ಕಂಚು ಒಟ್ಟು 5 ಪದಕ ಪಡೆದುಕೊಂಡರು.ಫಲಿತಾಂಶ : ಟೆನ್ನಿ ಕೃಷ್ಣ – 120ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ –




























