ಮಂಗಳೂರಿನ ಕಂಕನಾಡಿಯ ಶಾಮ್ ಇನ್ಸ್ಟಿಟ್ಯೂಟ್‌ನ ಫ್ರೆಷರ್‍ಸ್ ಡೇ ಕಾರ್ಯಕ್ರಮವನ್ನು ನಗರದ ಕೊಡಿಯಾಲ್‌ಬೈಲ್ ನ ದಿ ಓಶಿಯನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಈಗಾಗಲೇ ಶಿಕ್ಷಣ ಕ್ಷೇತ್ರದಲ್ಲಿ ಕಾಂತ್ರಿ ಮಾಡಿರುವ ಶಾಮಲಾ ಎಜ್ಯುಕೇಷನ್ ಟ್ರಸ್ಟ್‌ನ ಕಂಕನಾಡಿಯ ಶಾಮ್ ಇನ್ಸ್ಟಿಟ್ಯೂಟ್‌ನ ಫ್ರೆಷರ್‍ಸ್ ಡೇ ಕಾರ್ಯಕ್ರಮವನ್ನು ಚಿತ್ರನಟ ಅರವಿಂದ
ಡಾ.ಟಿ ಎಮ್ ಎ ಪೈ ಪಾಲಿಟೆಕ್ನಿಕ್ ಮಣಿಪಾಲ ಇದರ 2024-25ನೇ ಸಾಲಿನ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಪ್ರವೇಶಾವಕಾಶಕ್ಕಾಗಿ ಸೆ 27 ರವರೆಗೆ ದಿನಾಂಕ ವಿಸ್ತರಣೆ ಬಗ್ಗೆ ಮಾನ್ಯ ನಿರ್ದೇಶಕರು ಆದೇಶ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಾದ ಕಾಂತರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಸಂಸ್ಥೆಯಲ್ಲಿಕೆಲವೇ ಸೀಟುಗಳು ಬಾಕಿ ಉಳಿದಿದ್ದು ಐಟಿಐ ಪಾಸಾಗಿರುವ ಅರ್ಹ ಅಭ್ಯರ್ಥಿಗಳಿಗೆ
ಮಂಗಳೂರು: ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ ಕುಟುಂಬವೊಂದು ಕೊರಗಜ್ಜನನ್ನು ಆರಾಧಿಸಿಕೊಂಡು ಬರುವ ಕತೆ, ಮತ್ತು ಕುಟುಂಬ ಸಂಕಷ್ಟಕ್ಕೆ ಸಿಲುಕಿದಾಗ ಕುಟುಂಬದ ಬೆನ್ನಿಗೆ ನಿಲ್ಲುವ ಕೊರಗಜ್ಜ,
ಬೆಂಗಳೂರು : ಸುವರ್ಣ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಅಕ್ಟೋಬರ್ 24 ಹಾಗೂ 25 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರದಂದು ಆಹ್ವಾನ ನೀಡಲಾಯಿತು.ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ನಡೆಸಿದ ವಿವಿಧ ಅಕಾಡೆಮಿ ಅಧ್ಯಕ್ಷರುಗಳು ಮುಖ್ಯಮಂತ್ರಿ ಜೊತೆಗೆ ಸಮಾಲೋಚನೆ ನಡೆಸಿ ಆಹ್ವಾನ ನೀಡಿದರು .ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕೊಂಕಣಿ ಅಕಾಡೆಮಿ, ಬ್ಯಾರಿ ಅಕಾಡೆಮಿ, ಅರೆ ಭಾಷೆ
ಮಂಗಳೂರು: ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ/ವೈ.ಭರತ್
ಕರ್ನಾಟಕದ ಕಲ್ಬುರ್ಗಿಯಲ್ಲಿ 2024 ರ ಸೆಪ್ಟೆಂಬರ್ 8 ರಿಂದ 12 ರವರೆಗೆ ನಡೆದ ಸಿಬಿಎಸ್ಇ ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ.17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ, 10ನೇ ತರಗತಿಯ ಸಾತ್ವಿಕ್ ನಾಯಕ್ ಸುಜಿರ್ 50 ಮೀ ಮತ್ತು 100 ಮೀ ಫ್ರೀಸ್ಟೈಲ್ ನಲ್ಲಿ ಬೆಳ್ಳಿ ಪದಕ, 400 ಮೀ ಫ್ರೀಸ್ಟೈಲ್‌ನಲ್ಲಿ ಮತ್ತು 50 ಮೀ. ಬ್ರೆಸ್ಟ್‌ಸ್ರೋಕ್ ಸ್ಪರ್ಧೆಗಳಲ್ಲಿ ಕಂಚಿನ ಪದಕಗಳನ್ನು ಪಡೆದರು.
ಅಮೃತಾ ಸ್ಪೋರ್ಟ್ಸ್ ಅಕಾಡೆಮಿ ಮತ್ತು 22Y ಸ್ಕೂಲ್ ಆಫ್ ಕ್ರಿಕೆಟ್ ಸಹಯೋಗದೊಂದಿಗೆ ಅಮೃತ ವಿದ್ಯಾಲಯಂ ಆಶ್ರಯದಲ್ಲಿ ಮಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ 12 ವರ್ಷದೊಳಗಿನವರ ಕ್ರಿಕೆಟ್ ಪ್ರೀಮಿಯರ್ ಲೀಗ್ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ. ಮಂಗಳೂರು ಬೋಳೂರಿನ ಅಮೃತ ವಿದ್ಯಾಲಯಂ ಮೈದಾನದಲ್ಲಿ ಕ್ರಿಕೆಟ್ ತಾರೆ ಕೆಎಲ್ ರಾಹುಲ್ ತರಬೇತಿಗೆ ಹೆಸರಾದ ಲೆಜೆಂಡರಿ ಕೋಚ್ ಜಯರಾಜ್ ನೇತೃತ್ವದಲ್ಲಿ ಈ ಪ್ರತಿಷ್ಠಿತ ಟೂರ್ನಿ ನಡೆಯಲಿದೆ. 7 ರಿಂದ 12
ಉಡುಪಿ ಜಿಲ್ಲಾ ನಿಯಂತ್ರಣ ಕೊಠಡಿಯ ಪೊಲೀಸ್ ಉಪನಿರೀಕ್ಷಕ ನಿತ್ಯಾನಂದ(51) ಶಿರ್ವ ಗ್ರಾಮದ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಕಳೆದ 3 ವರ್ಷಗಳಿಂದ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಸೆ.16ರಂದು ಬೆಳಗ್ಗೆ ಪಾಳಿ ಕರ್ತವ್ಯ ಮುಗಿಸಿ ವಿಶ್ರಾಂತಿಗೆ ತೆರಳಿದ್ದರು. ರಾತ್ರಿ ಮನೆಯಲ್ಲಿ ಊಟದ ನಂತರ ಮಲಗಿದ್ದ ಇವರು, ಬೆಳಗ್ಗೆ ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದರು.ಮೃತರು ಪತ್ನಿ,
ಮೂಡುಬಿದಿರೆ ಅಲಂಗಾರು ಅಯ್ಯ ಜಗದ್ಗುರು ಮಠದಲ್ಲಿ ವಿಶ್ವಕರ್ಮ ಯಜ್ಞ ಹಾಗೂ ಪೂಜೆಯು ವ್ಯವಸ್ಥಾಪಕ ವಿಶ್ವನಾಥ ಪುರೋಹಿತ್ ಆಚಾರ್ಯತ್ವದಲ್ಲಿ ನಡೆಯಿತು. ಮೂಡುಬಿದಿರೆ ಕಲ್ಲಬೆಟ್ಟು ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ 48ನೇ ವರ್ಷದ ವಿಶ್ವಕರ್ಮ ಪೂಜೆಯು ಗಂಟಾಲ್‌ಕಟ್ಟೆ ಕಾಳಿಕಾಂಬಾ ನಿಲಯದಲ್ಲಿ ನಡೆಯಿತು. ಮೂಡುಬಿದಿರೆ ಪುತ್ತಿಗೆ ಗುಡ್ಡೆಯಂಗಡಿ ಪಾಲಡ್ಕ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ವಿಶ್ವಕರ್ಮ ಪೂಜೆಯು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಬೆಳುವಾಯಿ
ಉಡುಪಿ ಉಚ್ಚಿಲ ದಸರಾ 2024ರ ಪ್ರಯುಕ್ತ ನಡೆಯಲಿರುವ ಯುವ ನೃತ್ಯೋತ್ಸವದ ಆಡಿಷನ್ ರೌಂಡ್ ಸೆ.22ರಂದು ಮಧ್ಯಾಹ್ನ 3ರಿಂದ 6 ಗಂಟೆಯವರೆಗೆ ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿದೆ. ಆಡಿಷನ್ ಸುತ್ತಿನ ಸ್ಪರ್ಧಾ ನಿಯಮಗಳು :1. ಒಂದು ನೃತ್ಯ ತಂಡದಲ್ಲಿ ಕನಿಷ್ಠ 5 ಜನ ಇರತಕ್ಕದ್ದು.2. ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ.3. ಒಂದು ತಂಡಕ್ಕೆ 5 ನಿಮಿಷ (4+1)ದ ಸಮಯಾವಕಾಶ ಮಾತ್ರ ನೀಡಲಾಗುವುದು.4. ಆಡಿಷನ್ ಸುತ್ತಿನಲ್ಲಿ ಯಾವುದೇ ಕಾಸ್ಟ್ಯೂಮ್‌ನ (ವೇಷಭೂಷನ)




























