Home Archive by category Fresh News (Page 169)

ಬೈಂದೂರು: ಗೋಮಾಳ ಜಾಗ ಸರ್ವೇ ಪೂರ್ಣಗೊಳಿಸಿದ ಗ್ರಾ.ಪಂ. ಪಿಡಿಒಗಳ ಜತೆ ಶಾಸಕ ಗುರುರಾಜ್ ಗಂಟಿಹೊಳೆ ಸಭೆ

ಬೈಂದೂರು: ಕ್ಷೇತ್ರವ್ಯಾಪ್ತಿಯ ಗೋಮಾಳ ಸರ್ವೇ ನಡೆಸುವ ಕಾರ್ಯ ಆದಷ್ಟುಬೇಗ ಪೂರ್ಣಗೊಳಿಸಬೇಕು ಹಾಗೂ ಮುಂದಿನ ಒಂದು ತಿಂಗಳೊಳಗೆ ಕನಿಷ್ಠ ಒಂದಾದರೂ ಗೋ ಶಾಲೆ ನಿರ್ಮಿಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನಿರ್ದೇಶಿಸಿದರು.ಗೋಮಾಳ ಸರ್ವೇ ಆದ ಗ್ರಾಮ ಪಂಚಾಯತಿಗಳ ಪಿಡಿಒ ಜೊತೆ ಸಭೆ ನಡೆಸಿದ ಶಾಸಕರು, ಸುಮಾರು 80 ಪ್ರತಿಶತ ತಯಾರಿಯಲ್ಲಿರುವ ನಾಡ ಗೋಮಾಳದ

ಮೂಡುಬಿದಿರೆ : ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ನೀರ್ಕೆರೆ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ ಆಯ್ಕೆ

ಮೂಡುಬಿದಿರೆ : ಪ್ರಸಕ್ತ ಸಾಲಿನ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ತೆಂಕಮಿಜಾರು ಗ್ರಾಪಂ ವ್ಯಾಪ್ತಿಯ ನಿರ್ಕೇರೆ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ.ಕೆ ಅವರು ಆಯ್ಕೆಯಾಗಿದ್ದಾರೆ. ಮೂಡುಬಿದಿರೆ : ಪ್ರಸಕ್ತ ಸಾಲಿನ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ತೆಂಕಮಿಜಾರು ಗ್ರಾಪಂ ವ್ಯಾಪ್ತಿಯ ನಿರ್ಕೇರೆ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ.ಕೆ ಅವರು

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜು ಗ್ರಂಥಾಲಯ ಸಹಾಯಕಿಯಾಗಿದ್ದ ಹೇಮಲತಾ ನಿಧನ

ಮೂಡುಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು, ಗ್ರಂಥಾಲಯ ಸಹಾಯಕಿಯಾಗಿದ್ದ ಶ್ರೀಮತಿ ಹೇಮಲತಾ (49) ಅಲ್ಪ ಕಾಲದ ಅಸ್ವಾಸ್ಥ್ಯದಿಂದ ಸೆ 2ರಂದು ನಿಧನ ಹೊಂದಿದರು. ಅವರು ಪತಿಯನ್ನು ಅಗಲಿದ್ದಾರೆ. ಕಳೆದ 10 ವರ್ಷಗಳಿಂದ ಅವರು ಕಾಲೇಜಿನ ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ನಿಧನಕ್ಕೆ ಮಹಾವೀರ ಕಾಲೇಜು ಆಡಳಿತ ಮಂಡಳಿ ಸಂತಾಪ ವ್ಯಕ್ತಪಡಿಸಿದೆ.

ಮೂಡುಬಿದಿರೆ: ವೃದ್ಧೆಯ ಕುತ್ತಿಗೆಯಿಂದ ಚೈನ್ ಎಳೆದು ಪರಾರಿಯಾದ ಖದೀಮರು

ಮೂಡುಬಿದಿರೆ : ದ್ವಿಚಕ್ರ ವಾಹನ ಸವಾರರಿಬ್ಬರು ವೃದ್ಧೆಯೋರ್ವರ ಬಳಿ ದಾರಿ ಕೇಳುವ ನೆಪದಲ್ಲಿ ಮಾತನಾಡಿ ಆಕೆಯ ಕುತ್ತಿಗೆಯಲ್ಲಿದ್ದ 3 ಪವನಿನ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ತಾಲೂಕಿನ ಪಡುಮಾರ್ನಾಡು ಗ್ರಾ.ಪಂ.ನ ಮಾರ್ನಾಡಿನಲ್ಲಿಸೋಮವಾರ ಮಧ್ಯಾಹ್ನ ನಡೆದಿದೆ. ಮಾರ್ನಾಡು ವರ್ಧಮಾನ ಬಸದಿ ಬಳಿಯ 82 ರ ವಯಸ್ಸಿನ ವೃದ್ಧೆ ಪ್ರೇಮಾ ಅವರು ತಮ್ಮ ಮನೆಯ ಸಮೀಪದ ಅಂಗಡಿಯಿಂದ ಹಾಲು ಹಾಲು ತರುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸವಾರರಿಬ್ಬರು

ಪುತ್ತೂರು ನಗರಸಭೆಗೆ 2ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಪುತ್ತೂರು: ಪುತ್ತೂರು ನಗರಸಭೆ 2ನೇ ಅವಧಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆಗೆ ಮೀಸಲಾಗಿದ್ದ ಕಾರಣ ಪುತ್ತೂರು ವಾರ್ಡ್ ಸಂಖ್ಯೆ 13ರ ಸದಸ್ಯೆ ಶಶಿಕಲಾ ಸಿ.ಎಸ್ ಮತ್ತು ವಾರ್ಡ್ ಸಂಖ್ಯೆ ಚಿಕ್ಕಮುನ್ನೂರು 1ರ ಲೀಲಾವತಿ ಅವರಿಗೆ ಮಾತ್ರ ಅವಕಾಶವಿತ್ತು. ಬಿಜೆಪಿ ಪಕ್ಷದಿಂದ ಲೀಲಾವತಿ ಅಣ್ಣು ನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಲು ಸೂಚನೆಯಂತೆ ಅವರು ಅಧ್ಯಕ್ಷ ಸ್ಥಾನ

ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ಸ್, ಕಾನೂನು ಬಾಹಿರ ಚಟುವಟಿಕೆ ತಡೆಯಲು ಶಾಸಕ ಮಂಜುನಾಥ್ ಭಂಡಾರಿ ಒತ್ತಾಯ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಕಠಿಣಕ್ರಮ ಜರುಗಿಸುವ ಕುರಿತು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅವರು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದಾರೆ.ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು ಡ್ರಗ್ಸ್ ಮಾಫಿಯಾದ ಹಾವಳಿಯೂ ಹೆಚ್ಚಾಗಿದೆ. ಅತ್ಯಾಚಾರ ಪ್ರಕರಣಗಳಲ್ಲಿ ಇದರ ಪಾತ್ರ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಪ್ಯಾರಾಲಿಂಪಿಕ್ಸ್: ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಚಿನ್ನ ಗೆದ್ದ ನಿತೇಶ್

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಇಂದು ಎರಡನೇ ಚಿನ್ನದ ಪದಕ ಲಭಿಸಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್​ಎಲ್3 ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ನಿತೇಶ್ 21-14, 18-21, 23-21 ರಿಂದ ಗೆಲುವು ಸಾಧಿಸಿ ಚಿನ್ನಕ್ಕೆ ಮುತ್ತಿಟ್ಟರು. ಇದರೊಂದಿಗೆ ಭಾರತ ಈ ಬಾರಿಯ ಪ್ಯಾರಾಲಿಂಪಿಕ್ಸ್‌ನಲ್ಲಿ ಇದುವರೆಗೆ ಒಟ್ಟು 9 ಪದಕಗಳನ್ನು ತನ್ನದಾಗಿಸಿಕೊಂಡಂತ್ತಾಗಿದೆ.

ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ನೂತನ ಅಧ್ಯಕ್ಷರಾಗಿ ಮೋಹನ್ ಪೂಜಾರಿ ಆಯ್ಕೆ

ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಇದರ 5ನೇ ವಾರ್ಷಿಕ ಮಹಾಸಭೆಯನ್ನು ದಿನಾಂಕ 01.09.2024 ನೇ ಭಾನುವಾರ ಅಪರಾಹ್ನ ಗಂಟೆ 3.00 ಕ್ಕೆ ಸರಿಯಾಗಿ ಓಂಕಾರೇಶ್ವರಿ ಮಂದಿರದಲ್ಲಿ ಅಧ್ಯಕ್ಷರಾದ ಶ್ರೀ ಸದಾಶಿವ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶ್ರೀ ಭಾಸ್ಕರ್ ಅಮೀನ್ ತೋಕೂರುರವರು ವಾರ್ಷಿಕ ಆಯವ್ಯಯದ ಮಂಡನೆಯನ್ನು ಮಂಡಿಸಿ ಅನುಮೋದನೆಯನ್ನು ಪಡೆದರು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು,

ಎಕ್ಕದ ಟ್ರೇಡ್ ಮಾರ್ಕ್ : ಸುಳ್ಳು ವರದಿ ವಿಚಾರ: ಕಾರ್ಕಳ ಠಾಣೆಯಲ್ಲಿ ದೂರು ದಾಖಲು

ಎಕ್ಕದ ಎಂಬ ರಿಜಿಸ್ಟರ್ಡ್ ಟ್ರೇಡ್ ಮಾರ್ಕ್ ಹೊಂದಿರುವ ಸುಧಾಕರ್ ಎಮ್ ಪೂಜಾರಿಯವರ ಬಗ್ಗೆ ಸುಳ್ಳು ವರದಿಯನ್ನು ಬಿತ್ತರಿಸಿದ ಮೊಹಿದ್ದೀನ್ ಕುಂಜ್ಜಿ ಯಾನೇ ಎಮ್ ಕೆ ಗರ್ಡಾಡಿ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಸುಧಾಕರ್ ಎಂ. ಪೂಜಾರಿ ಅವರ ರಿಜಿಸ್ಟರ್ಡ್ ಟ್ರೇಡ್ ಮಾರ್ಕ್ ಹೊಂದಿರುವ “ಎಕ್ಕದ ఎంబ ಟ್ರೇಡ್ ಮಾರ್ಕ್ ಸಂಬಂಧಪಟ್ಟಂತೆ, ಈ ಟ್ರೇಡ್ ಮಾರ್ಕ್ ಉಲ್ಲಂಘಿಸಿ ‘ಎಕ್ಕಮಾಲೆ’

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಜೂ. ಎನ್‌ಟಿಆರ್ ಭೇಟಿ

ಬೈಂದೂರಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಜೂನಿಯರ್ ಎನ್‌ಟಿಆರ್ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಅವರಿಗೆ ನಟ ರಿಷಬ್ ಶೆಟ್ಟಿ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಅವರು ಸಾಥ್ ನೀಡಿದರು. ನಟ ತಾರಕ್ ರಾಮ್, ರಿಷಬ್, ನೀಲ್ ಕುಟುಂಬದಿಂದ ತಾಯಿ ಮೂಕಾಂಬಿಕೆಯ ದರ್ಶನ ಪಡೆದರು. ತಾಯಿ ಶಾಲಿನಿ ನಂದಮೂರಿ, ಪತ್ನಿ ಲಕ್ಷ್ಮೀ ಪ್ರಣತಿ, ಪ್ರಗತಿ ರಿಷಬ್ ಶೆಟ್ಟಿ, ಪ್ರಶಾಂತ್ ನೀಲ್, ಲಿಖಿತಾ ನೀಲ್ ಅವರಿಗೆ ಕೊಲ್ಲೂರು ಆಡಳಿತ ವತಿಯಿಂದ ಗೌರವಿಸಿದರು. ಇದೇ ವೇಳೆ