ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ರೋಟರಿ ಕ್ಲಬ್ ಬೈಕಂಪಾಡಿ ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ ಪ್ರಾಯೋಜಕತ್ವದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಫೇಮಸ್ ಯೂತ್ ಕ್ಲಬ್ಬಿನ
ಕಳೆದ ಒಂಬತ್ತೂವರೆ ವರುಷಗಳಿಂದ ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟನಾಗಿ ಸೇವೆ ಸಲ್ಲಿಸುತ್ತಿರುವ ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ಡಾ. ಮುರಲೀಮೋಹನ್ ಚೂಂತಾರುರವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.ಇವರು ಸಲ್ಲಿಸಿದ ಪ್ರಾಮಾಣಿಕ, ಪಾರದರ್ಶಕ, ನಿಷ್ಪಕ್ಷಪಾತ ಮತ್ತು ನಿಷ್ಕಾಮ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಗೃಹ ಮಂತ್ರಾಲಯದ ಶಿಫಾರಸಿನಂತೆ ಪ್ರತಿಷ್ಟಿತ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಇವರ ತಾಯಿ ಸರೋಜಿನಿ
ಸುರತ್ಕಲ್ ಕೃಷ್ಣಾಪುರದ ಬಿಎಂಆರ್ ಗೋಲ್ಡ್, ಗೋಲ್ಡ್ & ಡೈಮಂಡ್ಸ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕಾಟಿಪಳ್ಳದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಆಟೋಟ ಸ್ಪರ್ಧೆಗಳನ್ನು ಆಗಸ್ಟ್ 14ರಂದು ಆಯೋಜಿಸಲಾಗಿದೆ. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಕಾರ್ಯಕ್ರಮವು ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ 6ನೇ ಬ್ಲಾಕ್ ಕಾಟಿಪಳ್ಳದ ಮಕ್ಕಳಿಗೆ ಮಾತ್ರ
ಬೈಂದೂರು: ಶಾಸಕರು ಅಧಿಕಾರಿಗಳ ಸಭೆ ಕರೆಯುವ ಅಧಿಕಾರಕ್ಕೆ ಚ್ಯುತಿ ಬಂದಿರುವ ಹಿನ್ನೆಲೆಯಲ್ಲಿ ದಿಢೀರ್ ಧರಣಿ ಕೂರಲು ಮುಂದಾದ ಶಾಸಕ ಗುರುರಾಜ್ ಗಂಟಿಹೊಳೆ. ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಿಗದಿಯಾಗಿತ್ತು. ಈ ಸಭೆಗೆ ಅಧಿಕಾರಿಗಳು ಹೋಗದಂತೆ ಮೇಲಾಧಿಕಾರಿಗಳಿಂದ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಾರದೆ ಇರುವುದನ್ನು ಖಂಡಿಸಿ ಮತ್ತು ಶಾಸಕರು ಸಭೆ ಕರೆಯುವ ಅಧಿಕಾರವನ್ನು ಮಟಕುಗೊಳಿಸುತ್ತಿರುವ ಹಾಗೂ
ಉಡುಪಿ: ನಗರದ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ಡ್ರಗ್ಸ್ ನಿಯಂತ್ರಣ ಇಲಾಖೆಯ ಸಹಯೋಗದೊಂದಿಗೆ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿಯ ಔಷಧ ನಿಯಂತ್ರಣ ಇಲಾಖೆಯ ಸಹಾಯಕ ಔಷಧ ನಿಯಂತ್ರಕರಾದ ಶಂಕರ್ ನಾಯಕರವರು ಮಾತನಾಡಿ ವಿದ್ಯಾರ್ಥಿಗಳು ದೇಶದ ಆಸ್ತಿ ಯಾವುದೇ ಕಾರಣಕ್ಕೂ ಡ್ರಗ್ಸ್ನ ಮಾಯಾಜಾಲಕ್ಕೆ ಒಳಗಾಗದಿರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ.
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. ಕೋಡಿ, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಆಶ್ರಯದಲ್ಲಿ ಕ್ರೀಡಾಕೂಟವನ್ನು ದಿನಾಂಕ 11.08.2024 ರಂದು ಭಾರತ್ ಮಾತಾ ಪ್ರಾಥಮಿಕ ಶಾಲೆ, ಪುನರೂರು ಇಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಕೋಟ್ಯಾನ್ ಹರಿಪಾದೆಯವರು ವಹಿಸಿ ಕ್ರೀಡೆಯಿಂದ ಮಕ್ಕಳ ಮಾನಸಿಕ,ಶೈಕ್ಷಣಿಕ ಮತ್ತು ದೈಹಿಕ ಸಮತೋಲನ ಸಾಧ್ಯ
ಕೊಪ್ಪಳ:ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್ ಲಿಂಕ್ ಮುರಿದು ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವ ಕಾರಣ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವ ಕೆ ನಟ್ವರ್ ಸಿಂಗ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ದೆಹಲಿ ಬಳಿಯ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ಕಳೆದೆರಡು ವಾರಗಳಿಂದ ದಾಖಲಾಗಿದ್ದ ಅವರು ತಡರಾತ್ರಿ ಕೊನೆಯುಸಿರೆಳೆದರು. ನಟ್ವರ್ ಸಿಂಗ್ ಅವರು ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ 1931 ರಲ್ಲಿ ಜನಿಸಿದರು. ಅವರು ವೃತ್ತಿಯಲ್ಲಿ ರಾಜತಾಂತ್ರಿಕರಾಗಿದ್ದರು,
ಮೂಡುಬಿದಿರೆ : ಕಳೆದ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತುಳುನಾಡಿನ ಕಂಬಳವನ್ನು ಆಯೋಜಿಸಿ ಸೈ ಎನಿಸಿಕೊಂಡಿರುವ ಕಂಬಳ ಸಮಿತಿಯು ಈ ಬಾರಿ ಮಲೆನಾಡಿನ ಶಿವಮೊಗ್ಗದಲ್ಲಿ ಕಂಬಳ ನಡೆಸಲು ನಿರ್ಧರಿಸಿದೆ ಎಂದು ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದ್ದಾರೆ. ಮೂಡುಬಿದಿರೆ ಸ್ವರ್ಣ ಮಂದಿರದಲ್ಲಿ ನಡೆದ ಜಿಲ್ಲಾ ಕಂಬಳ ಸಮಿತಿಯ ವಿಶೇಷ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಂಬಳದ ಬಗ್ಗೆ ಅಪಾರ ಆಸಕ್ತಿಯನ್ನು ಹೊಂದಿರುವ




























