Home Archive by category Fresh News (Page 175)

ತಕ್ಷಣವೇ ಬೈಂದೂರು ಕ್ಷೇತ್ರಕ್ಕೆ ಪಶುವೈದ್ಯರನ್ನು ನೇಮಿಸಿ – ಹೋರಾಟದ ಎಚ್ಚರಿಕೆ ನೀಡಿದ ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳಿಗೆ ಪಶು ವೈದ್ಯರನ್ನು ನೇಮಕ ಮಾಡುತ್ತಿದ್ದು, ಬೈಂದೂರು ತಾಲೂಕಿಗೆ ಇನ್ನೂ ಪಶುವೈದ್ಯರ ನೇಮಕ ಮಾಡದೆ ಇರುವ ರಾಜ್ಯ ಸರ್ಕಾರದ ಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆಯವರು ತೀವ್ರವಾಗಿ ಖಂಡಿಸಿದ್ದಾರೆ.ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಪಶುವೈದ್ಯರ ಕೊರತೆಯಿಂದ ಆಗುತ್ತಿರುವ ಸಮಸ್ಯೆಯ ಬಗ್ಗೆ ಈಗಾಗಲೇ ವಿಧಾನ ಮಂಡಲ

ಪ್ರವಾಹಪೀಡಿತ ಪ್ರದೇಶಗಳಿಗೆ ಪದ್ಮರಾಜ್ ಆರ್. ಪೂಜಾರಿ ಭೇಟಿ

ಬಂಟ್ವಾಳ ತಾಲೂಕಿನ ನಾವೂರು, ದೇವಸ್ಯಪಡೂರು, ಸರಪಾಡಿ ಗ್ರಾಮದಲ್ಲಿ ಮಳೆಹಾನಿ, ಪ್ರಾಕೃತಿಕ ವಿಕೋಪ, ಪ್ರವಾಹಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿಪಾದೆ ಚರ್ಚ್ ಧರ್ಮಗುರುಗಳಾದ ಫಾ.ರೋಬರ್ಟ್ ಡಿಸೋಜ, ಚರ್ಚ್ ಉಪಾಧ್ಯಕ್ಷರಾದ. ನವೀನ್ ಮೊರಾಸ್, ಸರಪಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ವಿನ್ಸೆಂಟ್ ಪಿಂಟೋ, ಬಾಲಕೃಷ್ಣ ಪೂಜಾರಿ, ನಾವೂರು ಗ್ರಾಮ ಪಂಚಾಯಿತಿ ಸದಸ್ಯರಾದ ಲವೀನಾ ಮೊರಾಸ್,

ಆಟಿದ ಗೇನ : ತುಳು ಅಕಾಡೆಮಿಯಲ್ಲಿ ಹೊಸ ಚಿಂತನೆಯ ಆಟಿ ಕೂಟ

ಮಂಗಳೂರು : ಆಟಿಯ ಗಮ್ಮತ್ತ್ , ಸಂಭ್ರಮ ಮೊದಲಾದ ಕಾರ್ಯಕ್ರಮಗಳಿಗಿಂತ ಭಿನ್ನವಾಗಿ ಆಟಿಯ ಬಗ್ಗೆ ನೈಜ ಚಿತ್ರಣ ನೀಡುವ ‘ಆಟಿದ ಗೇನ’ ಕಾರ್ಯಕ್ರಮ ಭಾನುವಾರ ಮಂಗಳೂರಿನ ತುಳು ಭವನದಲ್ಲಿ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಆಟಿಯ ಹಿನ್ನೆಲೆಯಲ್ಲಿ ಚಿತ್ರ ರಚನಾ ಸ್ಪರ್ಧೆ ಹಾಗೂ ವಿಚಾರ ಮಂಥನ ಕೂಟ ನಡೆಯಿತು. ಹಿರಿಯರು ಹೇಳಿದ ಆಟಿಯ ಮಾಹಿತಿಯ ಬಗ್ಗೆ ಹಾಗೂ ಆಟಿ

ಮೂಡುಬಿದಿರೆ : ಗುಡ್ಡ ಕುಸಿದ ಸ್ಥಳಕ್ಕೆ ಮಾಜಿ ಸಚಿವ ಅಭಯಚಂದ್ರ ಜೈನ್ ಭೇಟಿ

ಮೂಡುಬಿದಿರೆ: ಪಾಲಡ್ಕ – ಕಲ್ಲಮುಂಡ್ಕೂರು ಕೂಡು ರಸ್ತೆಯ ಗುಂಡ್ಯಡ್ಕ ಎಂಬಲ್ಲಿ ವಿಪರೀತ ಮಳೆಯಿಂದಾಗಿ ಶನಿವಾರ ರಸ್ತೆಯ ಬದಿಯಲ್ಲಿದ್ದ ಗುಡ್ಡ ಜರಿದು ಬಿದ್ದು, ಜನರು ನಡೆದಾಡುವ ಹಾಗೂ ವಾಹನ ಸಂಚರಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದ ಸ್ಥಳಕ್ಕೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಭಾನುವಾರ ಭೇಟಿ ನೀಡಿದರು.ಗುಂಡ್ಯಡ್ಕದಲ್ಲಿ ಎಲ್ಲಾ ಮನೆ ವಿದ್ಯುತ್ ಸಂಪರ್ಕ ಕಡಿದು ಹೋಗಿರುವ ಬಗ್ಗೆ ಮಾಹಿತಿಯನ್ನು ಪಡೆದ ಜೈನ್ ತಕ್ಷಣವೇ ಸಂಬಂಧಪಟ್ಟ ಮೆಸ್ಕಾಂ ಹಾಗೂ

ಉಡುಪಿ : ಪತ್ರಕರ್ತರ ಸಂಘದಿಂದ ‘ನೆರೆ ಹಾವಳಿ- ಬೆಂಕಿ ದುರಂತ- ಭೂಕುಸಿತ’ ಚರ್ಚಾ ಕಾರ್ಯಕ್ರಮ

ಉಡುಪಿ : ಕಳೆದ ಕೆಲವು ವರ್ಷಗಳಿಂದ ಪಶ್ಚಿಮ ಘಟ್ಟಗಳಲ್ಲಿ ಹಾಗೂ ಅದರ ತಪ್ಪಲಿನಲ್ಲಿ ಭೂಕುಸಿತ ದುರಂತಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಮುಖ್ಯ ಕಾರಣ ಅಭಿವೃದ್ಧಿ ಹೆಸರಿನಲ್ಲಿ ಪಶ್ಚಿಮಘಟ್ಟಗಳ ಮೇಲೆ ಹೆಚ್ಚುತ್ತಿರುವ ಯಂತ್ರಗಳ ದಾಳಿಯಾಗಿದೆ ಎಂದು ಮಣಿಪಾಲದ ಹಿರಿಯ ಭೂಗರ್ಭ ಶಾಸ್ತ್ರಜ್ಞ ಡಾ.ಉದಯ ಶಂಕರ್ ಆತಂಕ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ‌ ಸಮಾರಂಭ ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು. ನೂತನ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಪುಷ್ಪರಾಜ ಶೆಟ್ಟಿ ನೇತೃತ್ವದ ತಂಡ ಅಧಿಕಾರ ವಹಿಸಿಕೊಂಡರು. ನಿರ್ಗಮನ ಅಧ್ಯಕ್ಷ ದಯಾನಂದ ಕಲ್ನಾರ್, ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ ಅಧಿಕಾರ ಹಸ್ತಾಂತರಿಸಿದರು. ದ.ಕ.ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ

ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು“ – ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ

ಮಂಗಳೂರು: ಮಾನವೀಯತೆ ಮೆರೆದ ಬಸ್ ಸಿಬ್ಬಂದಿಗೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘದಿಂದ ಅಭಿನಂದನೆ

ಮಂಗಳೂರು: ಬಸ್‌ನಲ್ಲಿ ಅನಾರೋಗ್ಯಕ್ಕೀಡಾದ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕೃಷ್ಣ ಪ್ರಸಾದ್ ಟ್ರಾವೆಲ್ಸ್ ಬಸ್ ಚಾಲಕ ಗಜೇಂದ್ರ ಕುಂದ‌ರ್, ನಿರ್ವಾಹಕರಾದ ಸುರೇಶ್, ಮಹೇಶ್‌ರನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಬಂಟ್ಸ್ ಹಾಸ್ಟೇಲ್ ಬಳಿಯ ಹೊಟೇಲ್ ವುಡ್ ಲ್ಯಾಂಡ್ ನ‌ ಸಭಾಂಗಣದಲ್ಲಿ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು.ಸಂಘದ ಅಧ್ಯಕ್ಷ ಆರ್ ಧನರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.ನಿರ್ದೇಶಕ

ಕೇಂದ್ರ ಬಂದರು ಮತ್ತು ಮೀನುಗಾರಿಕೆ ನಿರ್ದೇಶಕ ಹೇಮಂತ್ ಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಗುರುರಾಜ್ ಗಂಟಿಹೊಳೆ

ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಕೇಂದ್ರ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ಹೇಮಂತ್ ಇವರನ್ನು ಭೇಟಿ ಮಾಡಿ ವಿವಿಧ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿದರು. ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ ರೂ 85.00ಕೋಟಿ ಮಂಜೂರಾಗಿದ್ದು, CRZ ಕ್ಲಿಯರೆನ್ಸ್ ಮಾಡಿ ಆದಷ್ಟು ಬೇಗ ಕಾಮಗಾರಿ ಕೈಗೊಳ್ಳಲು ಜೊತೆಗೆ ಗಂಗೊಳ್ಳಿ ಬಂದರು ಆಧುನಿಕರಣ, ಗಂಗೊಳ್ಳಿ ಕೋಸ್ಟಲ್ ಬರ್ತ್, ಕೊಡೇರಿ

ಉಳ್ಳಾಲ : ಮನವಿ ಸಲ್ಲಿಸಿದ್ದರೂ ಸ್ಪಂಧಿಸದ ಉಳ್ಳಾಲ ನಗರಸಭೆ – ಕುಸಿದುಬಿದ್ದ ಮನೆ ಮಹಡಿ, ಮನೆಮಂದಿಗೆ ಗಾಯ

ಉಳ್ಳಾಲ : ಮದನಿನಗರ ಬಳಿ ಕಂಪೌಂಡ್ ವಾಲ್ ಬಿದ್ದು ನಾಲ್ವರು ಮೃತಪಟ್ಟ ಬೆನ್ನಲ್ಲೇ ಉಳ್ಳಾಲ ನಗರಸಭಗೆ ಕೌನ್ಸಿಲರ್ ಓರ್ವರು ಅಪಾಯದಂಚಿನಲ್ಲಿರುವ ಮನೆಮಂದಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದ್ದು, ಮನವಿಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಇಂದು ಮನೆ ಮಹಡಿ ಕುಸಿದು ಮನೆಯೊಳಗಿದ್ದ ಬಾಲಕಿ ಸೇರಿದಂತೆ ತಂದೆ ಗಾಯಗೊಂಡ ಘಟನೆ ಉಳ್ಳಾಲ ನಗರಸಭೆ ವ್ಯಾಪ್ತಿಯ ಮೇಲಂಗಡಿ ಮಸೀದಿ ಸಮೀಪ ನಡೆದಿದೆ. ಮನೆಯೊಳಗಿದ್ದ ಅಬ್ಬಾಸ್ ಹಾಗೂ ಅವರ ಪುತ್ರಿ ಮನೆ ಕುಸಿತದ ಸಂದರ್ಭ