Home Archive by category Fresh News (Page 176)

ಪುತ್ತೂರು: ಗುಡ್ಡ ಕುಸಿದು ಮಾಣಿ-ಮೈಸೂರು ಹೆದ್ದಾರಿ ಬಂದ್

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಇಂದು ನಸುಕಿನ ಜಾವ ಗುಡ್ಡ ಕುಸಿದ ಘಟನೆ ನಡೆದಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡಕುಸಿಯುತ್ತಲೇ ಇದ್ದು ಇದೀಗ ಭಾರಿ ಪ್ರಮಾಣದ

ಮೂಡುಬಿದಿರೆ: ಮಳೆ ಹಾನಿ – ನೀರಿನಲ್ಲಿ ಕೊಚ್ಚಿ ಹೋದ ದನಗಳು

ಮೂಡುಬಿದಿರೆ: ಬುಧವಾರ ರಾತ್ರಿ ಸುರಿದ ವಿಪರೀತ ಮಳೆಗೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂಜಾರುವಿನ ಪ್ರಕಾಶ್ ಎಂಬವರ ಮನೆಯ ಕೊಟ್ಟಿಗೆಯಲ್ಲಿದ್ದ 5 ದನಗಳು ನೀರಿನಲ್ಲಿ ಕೊಚ್ಚಿಹೋಗಿದ್ದು ಅದರಲ್ಲಿ 1 ದನ ಅಸುನೀಗಿದೆ.2 ದನಗಳು ವಾಪಾಸು ಬಂದಿದ್ದು ಇನ್ನೆರಡು ದನಗಳು ಕಾಣೆಯಾಗಿರುತ್ತದೆ.ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೊಕೇಶ್ ಬಿ., ಸಹಾಯಕ ನಿರ್ದೇಶಕರು(ಗ್ರಾ.ಉ), ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಉಪಾಧ್ಯಕ್ಷೆ ಸುಶೀಲಾ

ಬೈಂದೂರು: ಸುತ್ತಲೂ ಹೊಳೆಯಿಂದ ಆವೃತವಾದ ನಾವುಂದದ ಕುದ್ರು

ಬೈಂದೂರು: ವೈಶಾಖದಲ್ಲಿ ನದಿಯಾಚೆಗಿನ ಮನೆಗೆ ತೆರಳಲು ದೋಣಿಯಲ್ಲಾದರೂ ಪ್ರಯಾಣಿಸ ಬಹುದಿತ್ತು. ಆದರೆ ಈಗ ಮಳೆಯಬ್ಬರ ಜೋರಿದೆ ಸೌಪರ್ಣಿಕ ನದಿಯಲ್ಲಿ ನೀರಿನ ಮಟ್ಟವು ಹೆಚ್ಚಿದೆ. ಕುದ್ರುವಿನಿಂದ ನಾವುಂದಕ್ಕೆ ಅಥವಾ ನಾವುಂದದಿಂದ ಕುದ್ರುವಿಗೆ ಹೋಗುವುದಾದರೂ ಹೇಗೆ ಎಂಬುದೇ ಯಕ್ಷಪ್ರಶ್ನೆ. ಬೇಸಗೆಯಿರಲಿ ಅಥವಾ ಮಳೆಗಾಲವಿರಲಿ ಅನೇಕ ವರ್ಷಗಳಿಂದ ಈ ಕುದ್ರುವಿನ ನಿವಾಸಿಗಳಿಗೆ ದೋಣಿಯೊಂದೇ ಆಧಾರ. ನಾವುಂದ ಕುದ್ರುವಿನಲ್ಲಿ 7 ಮನೆಗಳಿದ್ದು, ಒಟ್ಟು ಸುಮಾರು 20 ಮಂದಿ

ಬಂಟ್ವಾಳ: ಮತ್ತೆ ನೆರೆಯಾತಂಕ, ರಾತ್ರಿ ನಿದ್ದೆ ಬಿಟ್ಟು ಕಾರ್ಯ ನಿರ್ವಹಿಸಿದ ಪುರಸಭೆ ಸಿಬ್ಬಂದಿಗಳು

ಬಂಟ್ವಾಳ: ರಾತ್ರಿ ಮತ್ತೆ ನೆರೆ ಭೀತಿ ಎದುರಾದ ಹಿನ್ನಲೆಯಲ್ಲಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅವರು ತನ್ನ ಅಧಿಕಾರಿಗಳು ಹಾಗೂ ಪೌರಕಾರ್ಮಿಕರೊಂದಿಗೆ ಮಧ್ಯರಾತ್ರಿ 1.30 ರ ವೇಳೆಗೆ ನೆರೆಪೀಡಿತ ತಗ್ಗು ಪ್ರದೇಶಗಳಿಗೆ ದೌಡಾಯಿಸಿ ಜನರ ಸುರಕ್ಷತೆಯ ದೃಷ್ಟಿಯಿಂದ ಅಪಾಯಕಾರಿ ರಸ್ತೆಗಳಾದ ಗೂಡಿನಬಳಿ, ಕಂಚುಗಾರ ಪೇಟೆ, ಆಲಡ್ಕ, ನಂದಾವರ, ಬಡ್ಡಕಟ್ಟೆಯಲ್ಲಿ ಬ್ಯಾರಿಕೇಡ್ ಹಾಗೂ ರಿಬ್ಬನ್ ಗಳನ್ನು ಕಟ್ಟಿ ಮುಂಜಾಗೃತ ಕ್ರಮಗಳನ್ನು ಕೈಗೊಂಡರು.

ದಕ್ಷಿಣಕನ್ನಡ ಜಿಲ್ಲಾದ್ಯಂತ ಮುಂದುವರಿದ ಮಳೆಯ ಆರ್ಭಟ

ದಕ್ಷಿಣಕನ್ನಡ ಜಿಲ್ಲಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು ನಗರದ ಕುಲಶೇಖರ ಕೋಟಿಮುರ ಸಿಲ್ವರ್ ಗೇಟ್‌ನ ಗ್ರಂಥಾಲಯದ ಬಳಿ ಇರುವ ನಾಗೇಶ್ ಎಂಬುವವರ ಮನೆ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ರವರು ಕುಟುಂಬಸ್ಥರಿಗೆ ಧೈರ್ಯ ತುಂಬಿ ಪರಿಹಾರ ಕಾರ್ಯದ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕರೆ ಮಾಡಿ ಸೂಚಿಸಿದರು. ಸ್ಥಳದಲ್ಲಿ ಅಜಯ್ ಕುಲಶೇಖರ, ನಿತಿನ್ ಕುಮಾರ್, ಅನಿಲ್, ಹರಿಣಿ ಪ್ರೇಮ್,

ಬೈಕಂಪಾಡಿ ಪರಿಸರದಲ್ಲಿ ಅನಧಿಕೃತ ಅಂಗಡಿಗಳಿಗೆ ಟೈಗರ್ ಕಾರ್ಯಾಚರಣೆ

ಮಂಗಳೂರು ಮಹಾನಗರ ಪಾಲಿಕೆಯು ಟೈಗರ್ ಕಾರ್ಯಾಚರಣೆಯ ಮೂಲಕ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಪ್ರಕ್ರಿಯೆಯು ಇಂದು ಬೈಕಂಪಾಡಿ ಪರಿಸರದಲ್ಲಿ ನಡೆಯುತ್ತಿದೆ. ಇಂದು ನಗರದ ಸುರತ್ಕಲ್ – ಬೈಕಂಪಾಡಿ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬೈಕಂಪಾಡಿ ಪರಿಸರದಲ್ಲಿ ಗಿಡನೆಡುವ ಮೂಲಕ ಕಾರ್ಯಾಚರಣೆಗೆ ಚಾಲನೆಯನ್ನು ನೀಡಲಾಯಿತು. ಮನಪಾ ಅಧಿಕಾರಿಗಳು ಬಿಗಿ ಪೊಲೀಸ್ ಭದ್ರತೆ ಮೂಲಕ ಕಾರ್ಯಾಚರಣೆ ನಡೆಸಿ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುತ್ತಿದ್ದಾರೆ.

ಉಳ್ಳಾಲ : ಕರಂಬಾರು ಶಾಲೆಯಲ್ಲಿ ಆಟಿಡೊಂಜಿ ದಿನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಹಳೆ ವಿದ್ಯಾರ್ಥಿ ಸಂಘ, ದ.ಕ.ಜಿ.ಪಂ. ಪ್ರಾಥಮಿಕ ಶಾಲೆ ಕರಂಬಾರು ನೇತೃತ್ವದಲ್ಲಿ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗುಣಪಾಲ ದೇವಾಡಿಗ ಉದ್ಘಾಟನೆ ನೆರವೇರಿಸಿ ಮಾತನಾಡಿ, “ಹಿಂದಿನ ಕಾಲದಲ್ಲಿ ಆಟಿ ತಿಂಗಳು ತುಳುವರ ಕಷ್ಟದ ದಿನಗಳಾಗಿತ್ತು.

ದೇರಳಕಟ್ಟೆ : ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ

ಉಳ್ಳಾಲ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ ದೇರಳಕಟ್ಟೆಯ ಬಿಸಿಸಿ ಸಭಾಂಗಣದಲ್ಲಿ ನಡೆಯಿತು‌. ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್‌ ಫರೀದ್ ಸಭೆ ಉದ್ದೇಶಿಸಿ ಮಾತನಾಡಿ, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಎಲ್ಲಾ ಗ್ರಾಮಗಳಿಗೆ ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಬೇಕು. ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಅಧಿಕಾರಿಗಳಿಗೆ ಇರುವ ಸಮನ್ವಯ

ಮೂಡುಬಿದಿರೆ : ಅರ್ಚಕ ಅಡಿಗಳ್ ಶ್ರೀನಿವಾಸ ಭಟ್ ನಿಧನ

ಮೂಡುಬಿದಿರೆ : ಪುತ್ತಿಗೆ ಗ್ರಾಮದ ಹಿರಿಯ ಅರ್ಚಕ, ಶತಾಯುಷಿ ಅಡಿಗಳ್ ಶ್ರೀನಿವಾಸ ಭಟ್ (100) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಮೂವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸುಮಾರು 65 ವರ್ಷಗಳ ಕಾಲ ಸೋಮನಾಥೇಶ್ವರ ಹಾಗೂ ಸಪರಿವಾರ ದೇವರುಗಳ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.

ವಿದ್ಯಾರ್ಥಿನಿಗೆ ಹೃದಯಾಘಾತ : ಸಮಯಪ್ರಜ್ಞೆ ಮೆರೆದ ಚಾಲಕ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗು ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. 13ಈ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಕಾಲೇಜು ವಿದ್ಯಾರ್ಥಿ ತಟ್ಟನೆ