ಕಳೆದ 12 ವರ್ಷಗಳಿಂದ ಸಾರ್ವಜನಿಕ ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿಯಿಂದ ಹಲವಾರು ಜನಪರ ಹಾಗೂ ಸಮಾಜಮುಖಿ ಕೆಲಸ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಇತ್ತಿಚೆಗೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು, ಮುದ್ದು ಮನೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು
ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದ ಮಹಿಳೆಯರ 54 ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾರತದ ಬಾಕ್ಸರ್ ಪ್ರೀತಿ ಪವಾರ್ ಪ್ರೀ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಶನಿವಾರ ರಾತ್ರಿ ನಡೆದ ಪೈಪೋಟಿಯಲ್ಲಿ ವಿಯೆಟ್ನಾಂನ ವೋ ಥಿ ಕಿಮ್ ಅನ್ಹ್ ಎದುರು ಪ್ರಾಬಲ್ಯ ಮೆರೆದ ಪ್ರೀತಿ, 5–0 ಅಂತರದ ಗೆಲುವು ಸಾಧಿಸಿದ್ದಾರೆ.ಏಷಿಯನ್ ಗೇಮ್ಸ್ ಕಂಚಿನ ಪದಕ ವಿಚೇತೆ ಪ್ರೀತಿ ಅವರಿಗೆ ಇದು ಚೊಚ್ಚಲ ಒಲಿಂಪಿಕ್ ಸ್ಪರ್ಧೆಯಾಗಿದೆ. ಹರಿಯಾಣದ 20 ವರ್ಷದ ಈ
ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಕೊರಗಜ್ಜನ ಕಟ್ಟೆಯಲ್ಲಿ ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಯಿಂದ ಸಂಕಷ್ಟ ಪರಿಹಾರ ಹಾಗೂ ಇಷ್ಟಾರ್ಥ ಸಿದ್ಧಿಗಾಗಿ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸೇವೆಯು ಶನಿವಾರದಂದು ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಇವರು ಚುನಾವಣಾ ಪೂರ್ವದಲ್ಲಿಯೇ ಕಾಂಗ್ರೆಸ್ ನಾಯಕರು ಹಾಗೂ ಮಂಗಳೂರಿನ ನನ್ನ ಸ್ನೇಹಿತರು ಕೋಲ ಸೇವೆ ಕೊಡುವ ಬಗ್ಗೆ ಹೇಳಿದ್ದರು.ಈಗ ಘಳಿಗೆ
ಪುತ್ತೂರು : ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ. ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರಿ ಸಜರಾ (40) ಹಲ್ಲೆಗೊಳಗಾದವರು. ಆಕೆಯ ಪತಿ ಮಡಂತ್ಯಾರು ಸಮೀಪದ ಕೊಲತ್ತಬೈಲು ಮಾಲಾಡಿ ನಿವಾಸಿ ಹಕೀಂ ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಹಕೀಂ ಮತ್ತು ಸಜರಾ ಅವರ ವಿವಾಹ 15 ವರ್ಷಗಳ ಹಿಂದೆ ನಡೆದಿತ್ತು. ವಿವಾಹವಾದ ಕೆಲ
ಕಾರ್ಕಳದ ಪುಲ್ಕೇರಿ ಬೈಪಾಸ್ ಬಳಿಯ ಕಟ್ಟಡವೊಂದರ ಕೊಠಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಶನಿವಾರ ತಡರಾತ್ರಿ ನಡೆದಿದೆ. ವಸತಿಗೃಹದ ಹೊರಾಂಗಣದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ ರಾತ್ರಿ 11.30ರ ವೇಳೆಗೆ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ ಗೋಡೆ, ಬಾಗಿಲು ಸಂಪೂರ್ಣ ನುಚ್ಚು ನೂರಾಗಿದೆ. ಫ್ಲ್ಯಾಟ್ ನ ಒಳಗಿರುವ ಪೀಠೋಪಕರಣಗಳು, ಬಟ್ಟೆಬರೆ, ಅಡುಗೆಮನೆ ವಸ್ತುಗಳು ಬೆಂಕಿಗಾಹುತಿಯಾಗಿದೆ. ಫ್ಲ್ಯಾಟ್ ನಲ್ಲಿದ್ದವರ ಸಮಯ ಪ್ರಜ್ಞೆಯಿಂದ ಯಾವುದೇ
ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗಾರಿಕಾ ಕಂಪನಿಗಳನ್ನು ಸರಕಾರದ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸುವಂತೆ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜ್ಯ ಬೃಹತ್ ಕೈಗಾರಿಕಾ ಮಂತ್ರಿ ಎಂ ಬಿ ಪಾಟೀಲ್ ಅವರಿಗೆ ಬೇಡಿಕೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸರಕಾರದ ಪಶುಸಂಗೋಪನ ಸಚಿವರಾದ k ವೆಂಕಟೇಶ್ ಅವರನ್ನು ಭೇಟಿಯಾಗಿ ಕೊಯಿಲಾ ಪಶು ವೈದ್ಯಕೀಯ ಕಾಲೇಜು ಶೀಘ್ರವಾಗಿ ಆರಂಭಿಸುವಂತೆ ಮತ್ತು ಸುಳ್ಯ ಕೊಡಿಯಾಲಬೈಲಿನಲ್ಲಿ ಖಾಸಗಿ
ಉಪ್ಪುಂದ: ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಮೀನುಗಾರಿಕಾ ಮನೆಗಳು ಮಂಜೂರಾಗಿ ನಿಯಮ ಪ್ರಕಾರ ಹಂಚಿಕೆಯಾಗುತ್ತಿದೆ. ಬೈಂದೂರು ಕ್ಷೇತ್ರದಲ್ಲಿ ಮಾತ್ರ ಮೀನುಗಾರಿಕಾ ಮನೆಗಳು ಖಾಸಗಿಯಾಗಿ ಬಿಕರಿ ಆಗುತ್ತಿರುವ ಆರೋಪ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಸಮಗ್ರ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಉಪ್ಪುಂದದ ಕಾರ್ಯಕರ್ತ ದಲ್ಲಿ ಮೀನುಗಾರಿಕೆ
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಮಿಲಾಗ್ರಿಸ್ ಕಾಲೇಜಿನಲ್ಲಿ ಜುಲೈ 30 ರಂದು ಉದ್ಯೋಗ ಮೇಳೆವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ವಂ|.ಡಾ| ಮೈಕಲ್ ಸಾಂತುಮಯೋರ್ ಅವರು ತಿಳಿಸಿದ್ದಾರೆ. ಜುಲೈ 30ರಂದು ಬೆಳಿಗ್ಗೆ 9ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಉದ್ಯೋಗ ಮೇಳ ನಡೆಯಲಿದ್ದು, ಯಾವುದೇ ನೋಂದಣಿ ಶುಲ್ಕವಿಲ್ಲದೆ ಅಭ್ಯರ್ಥಿಗಳು ಭಾಗವಹಿಸಲು ಅವಕಾಶವಿದೆ. ಅಜಿತ್ ಎಂಟರ್‌ಪ್ರೈಸಸ್, ಸಿ.ಐ.ಐ ಮಂಗಳೂರು ಮತ್ತು ವ್ಯವಸ್ಥಾಪಕ ನಿದೇರ್ಶಕರು, ಹಾಗೂ
ಮೂಡುಬಿದಿರೆ: ಬಹುಮುಖ ಪ್ರತಿಭೆಯ ಹೆಸರಾಂತ ಕಲಾವಿದೆ ಅಯನಾ. ವಿ. ರಮಣ್ ಮೂಡುಬಿದಿರೆ, ದೂರದರ್ಶನ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ .ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮಾರ್ಗದರ್ಶನದಲ್ಲಿ, ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು “ಬಿ” ಗ್ರೇಡ್ ಮಾನ್ಯತೆ ಪಡೆದಿದ್ದಾರೆ.ಬೆಂಗಳೂರಿನ ಕರ್ನಾಟಕ ಕಲಾಶ್ರೀ ವಿದ್ವಾನ್ ಸತ್ಯನಾರಾಯಣ ರಾಜು ಅವರಲ್ಲಿ ವಿಶೇಷ
ಪ್ರವಾಸಿಗರನ್ನು ತನ್ನತ್ತ ಸೆಳೆಯುವ ರಾಷ್ಟ್ರೀಯ ಮಾನ್ಯತೆ ಪಡೆದ ಪಡುಬಿದ್ರಿಯ ಬ್ಲೂ ಪ್ಲ್ಯಾಗ್ ಬೀಚ್ ಸಂಪರ್ಕ ರಸ್ತೆ ಕಡಿತಗೊಳ್ಳುವ ಆತಂಕದಲ್ಲಿ ಬ್ಲೂ ಪ್ಲ್ಯಾಗ್ ಬೀಚ್ ಮುಚ್ಚುಗಡೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಪಡುಬಿದ್ರಿ ಬ್ಲೂ ಪ್ಲ್ಯಾಗ್ ಬೀಚ್ ನ ಪ್ರಬಂಧಕ ವಿಜಯ ಶೆಟ್ಟಿ, ಕಡಲಿನ ಅಬ್ಬರಕ್ಕೆ ಬ್ಲೂ ಪ್ಲ್ಯಾಗ್ ಬೀಚ್ ನ ಸಂಪರ್ಕ ಕೊಂಡಿ ಕಾಂಕ್ರೀಟ್ ರಸ್ತೆ ಕಡಲು ಪಾಲಾಗುವ ಎಲ್ಲಾ ಲಕ್ಷಣಗಳು ಗೊಚರಿಸುತ್ತಿದ್ದು, ಪ್ರವಾಸಿಗರ ಹಾಗೂ ಸಿಬ್ಬಂದಿಗಳ




























