Home Archive by category Fresh News (Page 179)

ಕರಾವಳಿಯನ್ನು ನಡುಗಿಸಿದ್ದ ಭೀಕರ ಪ್ರವಾಹಕ್ಕೆ 50 ವರ್ಷ..!

ಬಂಟ್ವಾಳ: ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದ್ದ 1923ರ ಮಾರಿಬೊಳ್ಳ (ಭೀಕರ ಪ್ರವಾಹ)ಕ್ಕೆ ಕಳೆದ ವರ್ಷ ನೂರು ವರ್ಷ ತುಂಬಿತ್ತು. ಇದೀಗ 1974ರಲ್ಲಿ ಕಾಣಿಸಿಕೊಂಡಿದ್ದ ಭೀಕರ ಪ್ರವಾಹಕ್ಕೆ ಈ ವರ್ಷ 50 ತುಂಬುತ್ತಿದೆ. ಅಂದು ಜುಲೈ 26ರಂದು ಶುಕ್ರವಾರ ಪ್ರವಾಹ ಕಾಣಿಸಿಕೊಂಡಿತ್ತು, ಇದೀಗ ಮತ್ತೆ ಜುಲೈ 26 ಕೂಡ ಶುಕ್ರವಾರವೇ ಬರುತ್ತಿರುವುದು ವಿಶೇಷ. 1923ರ ಪ್ರವಾಹದ

ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಆಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ದಿನಾಚರಣೆ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಇನ್ಸಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾಮೆಡಿಕಲ್ ಸೈನ್ಸಸ್ ಕಾಲೇಜಿನಲ್ಲಿ ರಾಷ್ಟ್ರೀಯ ಅಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ದಿನವನ್ನು ಆಚರಿಸಲಾಯಿತು. ಈ ದಿನದ ಅಂಗವಾಗಿ ಕಾಲೇಜಿನ ಒಟಿ ಎಟಿ ವಿಭಾಗದ ವತಿಯಿಂದ ಆಯೋಜಿಸಿದ “ಸಂಗಮ 2024” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿಯ ಸಿಟಿ ಆಸ್ಪತ್ರೆಯ ಹಿರಿಯ ಸಮಾಲೋಚಕ, ಶಸ್ತ್ರ ಚಿಕಿತ್ಸಕ ಡಾ. ರಾಮಚಂದ್ರರವರು ವಿದ್ಯಾರ್ಥಿಗಳಿಗೆ

ಮೂಡುಬಿದಿರೆ ಮಾರುಕಟ್ಟೆ ಕಟ್ಟಡ ವಿವಾದ : ಆ.8 ಕ್ಕೆ ವಿಚಾರಣೆ

ಮೂಡುಬಿದಿರೆ: ಕಳೆದ ಕೆಲ ವರ್ಷಗಳಿಂದ ಮೂಡುಬಿದಿರೆ ನೂತನ ಮಾರುಕಟ್ಟೆ ಕಟ್ಟಡ ವಿವಾದವು ಹೈಕೋರ್ಟ್ ನಲ್ಲಿದ್ದು ಇದರ ವಿಚಾರಣೆಯನ್ನು ಮತ್ತೆ ಆ.8 ಕ್ಕೆ ಮುಂದೂಡಿದೆ.ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಯಲ್ಲಿ ಹೊಸ ಮಾರುಕಟ್ಟೆ ಕಟ್ಟಡ ನಿರ್ಮಾಣ ಮಾಡುವ ಮೂಡುಬಿದಿರೆ ಪುರಸಭೆಯ ಕ್ರಮವನ್ನು ಪ್ರಶ್ನಿಸಿ ಜೈಸನ್ ಮಾರ್ಷಲ್ ಸುವಾರಿಸ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಮಾರುಕಟ್ಟೆ ಕಟ್ಟಡ ನಿರ್ಮಾಣ ಅನುಮತಿಯನ್ನು ತಿರಸ್ಕರಿಸಿದ

ಆಳ್ವಾಸ್‌ನ ಐವರು ಹಿರಿಯ ವಿದ್ಯಾರ್ಥಿಗಳು ಪ್ಯಾರಿಸ್ ಅಂಗಳದಲ್ಲಿ

ಮೂಡುಬಿದಿರೆ: ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ಜುಲೈ 26ರಿಂದ ಆರಂಭವಾಗಲಿರುವ ಒಲಿಂಪಿಕ್ಸ್ ಗೇಮ್ಸ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ಹಿರಿಯ ವಿದ್ಯಾರ್ಥಿಗಳು ನಮ್ಮ ದೇಶವನ್ನೂ ಪ್ರತಿನಿಧಿಸಲಿದ್ದಾರೆ. ಇದರೊಂದಿಗೆ ಈ ವರೆಗೆ ಒಟ್ಟು 11 ಕ್ರೀಡಾಪಟುಗಳು ವಿವಿಧ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಭಾಗವಹಿಸಿದ ಕೀರ್ತಿ ಆಳ್ವಾಸ್ ಸಂಸ್ಥೆಗೆ ಸಲ್ಲುತ್ತದೆ. ಇದು ಕರ್ನಾಟಕ ರಾಜ್ಯದಿಂದ ಒಂದು ಸಂಸ್ಥೆಯಿಂದ ಅತೀ

ಬೆಳ್ಳಂಬೆಳಗ್ಗೆ ಮಂಗಳೂರು ಕಾರಾಗೃಹಕ್ಕೆ ಪೊಲೀಸರ ದಾಳಿ – ಮೊಬೈಲ್‌ಗಳ ಸಹಿತ ಗಾಂಜಾ, ಡ್ರಗ್ಸ್ ವಶ

ಮಂಗಳೂರು: ಮಂಗಳೂರು ನಗರದಲ್ಲಿರುವ ಜೈಲಿಗೆ ಗುರುವಾರ ಬೆಳ್ಳಂಬೆಳಗ್ಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮಾಡಿದ ದಾಳಿ ನಡೆಸಿ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿಗೆ ಸುಮಾರು 150 ಸಿಬಂದಿಗಳ ಜೊತೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ ವೇಳೆ ಖೈದಿಗಳಿಂದ 25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್ ಡ್ರೈವ್, 5 ಚಾರ್ಜರ್‌ಗಳು, 1 ಜೊತೆ ಕತ್ತರಿ, 3ಕೇಬಲ್‌ಗಳು ಸೇರಿದಂತೆ ಗಾಂಜಾ ಅಮಲು ಪದಾರ್ಥಗಳು

ಕುಂದಾಪುರ: ಭೀಕರ ಗಾಳಿ-ಮಳೆ: ಮರ ಬಿದ್ದು 2 ಗಂಟೆ ಕೊಲ್ಲೂರು ಮುಖ್ಯ ರಸ್ತೆ ಬಂದ್!

ಕುಂದಾಪುರ: ಬುಧವಾರ ರಾತ್ರಿ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಹೆಮ್ಮಾಡಿ ಸಮೀಪದ ಕೊಲ್ಲೂರು ಮುಖ್ಯ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಕೆಲಹೊತ್ತು ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಹೆಮ್ಮಾಡಿ ಸಮೀಪದ ಕಟ್ ಬೇಲ್ತೂರಿ ಗ್ರಾಮಪಂಚಾಯತ್ ವ್ಯಾಪ್ತಿಯ ಸುಳ್ಸೆ ತಿರುವಿನಲ್ಲಿ ಎರಡು ಬೃಹತ್ ಗಾತ್ರದ ಮರ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಗೆ ಅಡ್ಡಲಾಗಿ ಉರಳಿ ಬಿದ್ದು ಕೆಲ ಹೊತ್ತು ಸಂಚಾರ ವ್ಯತ್ಯಯ ಉಂಟಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯ ಯುವಕರು ಉರುಳಿ

ಮೂಡುಬಿದಿರೆ : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಶ್ರೀಧರ್ ಪಿ.

ಮೂಡುಬಿದಿರೆ: ಇಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಶ್ರೀಧರ್ ಪಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.ಮೂಡುಬಿದಿರೆ ಎ.ಸಿ.ಎಫ್ ಆಗಿದ್ದ ಸತೀಶ್ ಎನ್.ಅವರು ಕಾರ್ಕಳ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.ಶ್ರೀಧರ್ ಅವರು ಮಂಗಳೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ಅಲ್ಲಿಂದ ಮೂಡುಬಿದಿರೆಗೆ ವರ್ಗಾವಣೆಗೊಂಡು ಬಂದಿದ್ದಾರೆ. ಈ ಹಿಂದೆ ಮೂಡುಬಿದಿರೆ ವಲಯಾರಣ್ಯಾಧಿಕಾರಿಯಾಗಿ

ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಶಯದೇವಿಸುತೆ ಮರವಂತೆ ನೇಮಕ

ಇದೀಗಾಗಲೇ ಕನ್ನಡ ಸಾಹಿತ್ಯ ಪರಿಷತ್ ನ ಆಜೀವ ಸದಸ್ಯೆಯಾಗಿರುವ ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್ ಸ್ವರೂಪ್) ರವರು ಇದೀಗ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ನೂತನ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುತ್ತಾರೆ. ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ, ವಿವಿಧ ಪತ್ರಿಕೋದ್ಯಮ ಹಾಗೂ, ಹಲವಾರು ಮಾಧ್ಯಮ ವಾಹಿನಿಗಳಲ್ಲಿ ಸತತ ಸೇವೆಗೈಯ್ಧಿರುವಂತಹ ಇವರ ಕಲಾಪ್ರತಿಭೆಯ ನಿರಂತರ ಸೇವೆಗೆ ಅಕ್ಕಮಹಾದೇವಿ

ಮೂಡುಬಿದಿರೆ: ವಿದ್ಯಾರ್ಥಿಗಳು ಸಂಶೋಧನಾ ಕೃತಿಗಳಿಂದ ಪ್ರೇರಣೆಗೊಳಗಾಗಬೇಕು – ಡಾ.ಕುರಿಯನ್

ವಿದ್ಯಾರ್ಥಿಗಳು ಸಂಶೋಧನಾ ಕೃತಿಗಳಿಂದ ಪ್ರೇರಣೆಗೊಳಗಾಗಬೇಕು: ಡಾ.ಕುರಿಯನ್ಮೂಡುಬಿದಿರೆ: ಸಾಹಿತ್ಯ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಸ್ಫೂರ್ತಿಗೊಳಗಾಗುವಂತೆ, ಸಂಶೋಧನಾ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಪ್ರೇರಣೆಗೊಳಗಾಗಬೇಕು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿಪ್ರಾಯ ಪಟ್ಟರು. ಅವರು ಆಳ್ವಾಸ್ ಕನ್ನಡ ವಿಭಾಗದ ಉಪನ್ಯಾಸಕ ಹರೀಶ್ ಟಿ.ಜಿ.ಯವರ ‘ಉದ್ದ ಲಂಗದ ಕಾಲೇಜು ದಿನಗಳು’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಾವು

ಮಂಗಳೂರು: ಶಿರೂರು ದುರಂತ – ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ