Home Archive by category Fresh News (Page 198)

ಉಡುಪಿ ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಗೋವುಗಳ ಕಳ್ಳತನ

ನಿನ್ನೆ ರಾತ್ರಿ ಸುಮಾರು 10-30 ಗಂಟೆಗೆ ಭಟ್ಕಳದಿಂದ ಶಿರೂರು ಮಾರ್ಗವಾಗಿ ಅಕ್ರಮವಾಗಿ ಸಾಗಿಸುತ್ತಿರುವ ಗೋವನ್ನು ಮಾಹಿತಿ ಪಡೆದ ಹಿಂದೂ ಕಾರ್ಯಕರ್ತರ ಅದನ್ನು ಪೋಲಿಸರಿಗೆ ಮಾಹಿತಿ ನೀಡಿದಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಗೋಕಳ್ಳರನ್ನು ಶಿರೂರಿನ ಕರ್ಕಿಕಳಿ ಕೇರಿ ವಠಾರದಲ್ಲಿ ವಾಹನವನ್ನು ಬಿಟ್ಟು ಗೋಕಳ್ಳರು ಪರಾರಿಯಾಗಿರುತ್ತಾರೆ , ರಾತ್ರಿ ಆ ಸಮಯದಲ್ಲಿ

ವಿಟ್ಲ ಲಯನ್ಸ್ ಕ್ಲಬ್ ಪದಾಧಿಕಾರಿಗಳ ನೂತನ ಅಧ್ಯಕ್ಷರಾಗಿ ರಜಿತ್ ಆಳ್ವ ಎರ್ಮೆನಿಲೆ ಪದಗ್ರಹಣ

ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ 2024-25ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ರಜಿತ್ ಆಳ್ವ ಎರ್ಮೆನಿಲೆ, ಕಾರ್ಯದರ್ಶಿಯಾಗಿ ಅರವಿಂದ ರೈ ಮೂರ್ಜೆಬೆಟ್ಟು, ಕೋಶಾಧಿಕಾರಿಯಾಗಿ ಮನೋಜ್ ಕುಮಾರ್ ರೈ ಮತ್ತು ಪದಾಧಿಕಾರಿಗಳಿಗೆ ಲಯನ್ಸ್ ಪ್ರಥಮ ಉಪರಾಜ್ಯಪಾಲ ಕುಡುಪಿ ಅರವಿಂದ ಶೆಣೈ ಅವರು ಪದಗ್ರಹಣ ನಡೆಸಿಕೊಟ್ಟರು.ಬಳಿಕ ಮಾತನಾಡಿದ ಅವರು ವಿಟ್ಲ ಲಯನ್ಸ್ ಕ್ಲಬ್ ಜಿಲ್ಲೆಯಲ್ಲಿಯೇ ಉತ್ತಮ

ಸರಕಾರದಿಂದ ನಾಮನಿರ್ದೇಶನಗೊಂಡ ವಿವಿಧ ಸಮಿತಿಗಳ ಸದಸ್ಯರಿಗೆ ಮಾಹಿತಿ ಕಾರ್ಯಗಾರ

ಸರಕಾರದಿಂದ ನಾಮನಿರ್ದೇಶನಗೊಂಡ ವಿವಿಧ ಸಮಿತಿಗಳ ಸದಸ್ಯರಿಗೆ ಮಾಹಿತಿ ಕಾರ್ಯಗಾರವು ಪುತ್ತೂರು ಶಾಸಕರ ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಕಾರ್ಯಗಾರವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಅವರು, ಕ್ಷೇತ್ರದ ಜನರ ಸೇವೆ ಮಾಡುವ ಉದ್ದೇಶದಿಂದ ಸರಕಾರದಿಂದ ವಿವಿಧ ಸಮಿತಿಗಳ ರಚನೆ ಮಾಡಲಾಗಿದ್ದು, ಸಮಿತಿಯ ಪ್ರತಿಯೊಬ್ಬ ಸದಸ್ಯರೂ ತಮ್ಮ ಸಮಿತಿಯ ಕಾರ್ಯವೈಖರಿಯನ್ನು ತಿಳಿದುಕೊಂಡು ಕೆಲಸ ಮಾಡಬೇಕು ಎಂದರು. ಸರಕಾರದಿಂದ ನಾಮ

ಮನೆಗೊಂದು ಗೇರುಗಿಡ ಯೋಜನೆ:ನಿಗಮದ ಮಮತಾ ಡಿ.ಎಸ್ ಗಟ್ಟಿ ಹೇಳಿಕೆ

ಉಳ್ಳಾಲ: ಖಾಲಿಯಿರುವ ಗುಡ್ಡಪ್ರದೇಶಗಳನ್ನು ಉಪಯೋಗಿಸಿ ಗೇರು ಬೆಳೆ ಬೆಳೆಸುವ ಕಾರ್ಯಕ್ಕೆ ಮುಂದಾಗಿರಿ. ಕ್ಯಾಷ್ಯೂ ಕಾರ್ಖಾನೆಗಳು ಅನೇಕ ಇದ್ದರೂ ದೇಶಕ್ಕೆ ವಿದೇಶಗಳಿಂದ ಗೋಡಂಬಿ ಆಮದು ಮಾಡಲಾಗುತ್ತಿದೆ. ಶೀಘ್ರವೇ ಮನೆಗೊಂದು ಗೇರುಗಿಡ ಯೋಜನೆಯನ್ನು ನಿಗಮದಿಂದ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ ಹೇಳಿದರು. ಅವರು ತೊಕ್ಕೊಟ್ಟುವಿನ ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಲಾದ ತಿಂಗಳ

ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ

ಎರಡನೆಯ ಅತ್ಯಾಚಾರ ಪ್ರಕರಣದಲ್ಲಿ ಮಾಜೀ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತು. ಪ್ರಜ್ವಲ್ ರೇವಣ್ಣ ಮೇಲೆ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಮೊದಲ ಅತ್ಯಾಚಾರ ಪ್ರಕರಣ ಮತ್ತು ಒಟ್ಟು ಅಸಹ್ಯ ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಸೆರೆಮನೆಯಲ್ಲಿ ಇದ್ದಾರೆ. ಎರಡನೆಯ ಪ್ರಕರಣ ಸಂಬಂಧ ವಿಚಾರಣೆಗೆ ಕರೆತರಲಾಗಿತ್ತು.

ದರ್ಶನ್ ವಕೀಲ ನಾಲಾಯಕ್ ಎಂದ ಶಾಸಕ ಭೋಜೇಗೌಡ

ವಕೀಲರು ತನ್ನ ಕಕ್ಷಿದಾರನನ್ನು ಕೋರ್ಟಿನಲ್ಲಿ ಸಮರ್ಥಿಸಿಕೊಳ್ಳಬೇಕು, ಬೀದಿಯಲ್ಲಿ ಅಲ್ಲ, ಆತ ವಕೀಲ ಆಗಿರಲು ಅನ್‌ಫಿಟ್ ಎಂದು ಮೇಲ್ಮನೆ ಸದಸ್ಯ ಎಸ್. ಎಲ್. ಭೋಜೇಗೌಡ ಅವರು ದರ್ಶನ್ ವಕೀಲನ ಬಗೆಗೆ ಹೇಳಿದರು. ಚಿಕ್ಕಮಗಳೂರಿನಲ್ಲಿ ಅವರು ಪತ್ರಿಕಾಗೊಟ್ಟಿ ನಡೆಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾಗಿ ಎರಡನೆಯ ಬಾರಿ ಆಯ್ಕೆಯಾಗಿರುವ ಭೋಜೇಗೌಡರು ಬಾರ್ ಕೌನ್ಸಿಲ್‌ನ ಮಾಜೀ ಉಪಾಧ್ಯಕ್ಷರೂ ಆಗಿದ್ದವರು. ಗಾಂಧೀಜಿಯವರನ್ನು ಕೊಂದ ಗೋಡ್ಸೆ, ಇಂದಿರಾ ಗಾಂಧಿ ಹಂತಕರಿಗೂ

ಮಂಗಳೂರು : ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ

ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಮಂಗಳೂರಿನ ಲಾಲ್‌ಭಾಗ್‌ನ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಕೊಂಕಣಿ ಸಾಹಿತ್ಯ ಅಕಾಡೆಮಿಯ ಕಚೇರಿ ಆವರಣದಲ್ಲಿ ನಡೆಯಿತು. ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಜರುಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು, ಅಕಾಡೆಮಿಗಳು ರಾಜಕೀಯ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಬ್ರಿಜೇಶ್ ಚೌಟ ಭೇಟಿ

ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಲಿಸ್ಟ್ ಮಾಡಿ ಯಾವ್ಯಾವ ಹಂತದಲ್ಲಿದೆ, ಕಾನೂನು ತೊಡಕುಗಳು ಎಲ್ಲವನ್ನೂ

ಉಪ್ಪಿನಂಗಡಿ : ರಾತ್ರೋ ರಾತ್ರಿ ಮಹಿಳೆಯ ಕತ್ತು ಹಿಸುಕಿ ಕೊಲೆ

ಮಹಿಳೆಯೋರ್ವರನ್ನು ಕತ್ತು ಹಿಸುಕಿ ಕೊಲೆಗೈದ ಘಟನೆ ಪೆರ್ನೆ ಗ್ರಾ.ಪಂ ವ್ಯಾಪ್ತಿಯ ಬಿಳಿಯೂರಿನ ದರ್ಖಾಸ್ ನಲ್ಲಿ ನಡೆದಿದೆ. ಕೊಲೆಯ ಬಗ್ಗೆ ಅಕ್ಕನ ಮಗನಾದ ಅಪ್ರಾಪ್ತ ಬಾಲಕನ ಮೇಲೆ ತೀವ್ರ ಸಂಶಯ ವ್ಯಕ್ತವಾಗಿದೆ. ದರ್ಖಾಸ್ ನ ಹೇಮಾವತಿ ಮೃತ ಮಹಿಳೆಯಾಗಿದ್ದು, ಜೂನ್ 16 ರಂದು ಮಧ್ಯರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದ್ರೆ ಅವರ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಮೂಡಿದ್ದರಿಂದ ಪೊಲೀಸರು ಸ್ಥಳಕ್ಕಾಗಮಿಸಿ ಮಹಜರು ನಡೆಸಿದ್ದಾರೆ. ಈ

ಅಮೃತ ವಿದ್ಯಾಲಯಂ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಪದಗ್ರಹಣ, ವಿವಿಧ ಸಂಘಗಳ ಉದ್ಘಾಟನೆ

ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ನೂತನವಾಗಿ ರಚನೆಗೊಂಡ ವಿದ್ಯಾರ್ಥಿ ಮಂತ್ರಿ ಮಂಡಲದ ಪದಗ್ರಹಣ ಸಮಾರಂಭ ಮತ್ತು ವಿವಿಧ ಸಂಘಗಳ ಉದ್ಘಾಟನೆ ಕಾರ್ಯಕ್ರಮವು ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಲೆಫ್ಟಿನೆಂಟ್ ಕರ್ನಲ್ ವಿವೇಕ್ ಬಿಂದ್ರ, ಅಮೃತ ಕ್ಯಾಂಪಸ್ಸಿನ ನಿರ್ದೇಶಕರಾದ ಶ್ರೀಯುತ ಯತೀಶ್ ಬೈಕಂಪಾಡಿ, ಶಾಲಾ ಪ್ರಾಂಶುಪಾಲೆ ಶ್ರೀಮತಿ ಅಕ್ಷತಾ ಆರ್ ಶೆಣೈ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ನಂತರ ವಿದ್ಯಾರ್ಥಿ ಮಂತ್ರಿಮಂಡಲಕ್ಕೆ