Home Archive by category Fresh News (Page 206)

ಬಂಟ್ವಾಳ : ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಮಾಸಿಕ ಸಭೆ ಸಂಘದ ನೂತನ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಆಟೋಲೈನ್ಸ್ ಗ್ಯಾರೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸೌಹಾರ್ದ ಸಹಕಾರ ಸಂಘದ

ಬಂಟ್ವಾಳ: ನೂರುಲ್ ಇಸ್ಲಾಂ ಮದ್ರಸ, ಅಲ್-ಮಸ್ಜಿದುಲ್ ಬದ್ರಿಯಾ ನೂತನ ಮದ್ರಸ ಕಟ್ಟಡ ಲೋಕಾರ್ಪಣೆ

ಬಂಟ್ವಾಳ: ವಾಮದಪದವು ಸಮೀಪದ ಆಲದಪದವು ಎಂಬಲ್ಲಿ ನೂರುಲ್ ಇಸ್ಲಾಂ ಮದ್ರಸ ಹಾಗೂ ಅಲ್-ಮಸ್ಜಿದುಲ್ ಬದ್ರಿಯಾ ಇದರ ನೂತನ ಮದ್ರಸ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕೃಷ್ಣಾಪುರ ಬದ್ರಿಯಾ ಜುಮಾ ಮಸ್ಜಿದ್ ಮುಸ್ಲಿಂ ಜಮಾಅತ್ ಖಾಝಿ ಹಾಜಿ ಇ ಕೆ ಇಬ್ರಾಹಿಂ ಮುಸ್ಲಿಯಾರ್ ನೂತನ ಮದ್ರಸ ಕಟ್ಟಡ ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಸೀದಿ ಹಾಗೂ ಮದ್ರಸ ಆಡಳಿತ ಸಮಿತಿ ಅಧ್ಯಕ್ಷ ಹಂಝ ಬಸ್ತಿಕೋಡಿ ಪ್ರಾಸ್ತವಿಕವಾಗಿ ಮಾತನಾಡಿ ಸ್ಥಳೀಯ ಮದ್ರಸ

ನೈಋತ್ಯ ಶಿಕ್ಷಕರ ಕ್ಷೇತ್ರದ ಮತದಾನ : ದ.ಕ. ಉಡುಪಿ, ಚಿಕ್ಕಮಗಳೂರಿನಲ್ಲಿ ಯಶಸ್ವೀ ಕ್ಯಾಂಪೇನ್

ಕರ್ನಾಟಕ ವಿಧಾನ ಪರಿಷತ್ ನ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಖ್ಯಾತ ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಉತ್ತಮ ಪ್ರಚಾರವನ್ನು ಮಾಡಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ, ಅಲ್ಲಿನ ಶಿಕ್ಷಕರನ್ನು ಭೇಟಿಯಾಗಿ ಅವರೊಂದಿಗೆ ಚರ್ಚಿಸಿ,

ಫೇಮಸ್  ಯೂತ್ ಕ್ಲಬ್ ಮಹಿಳಾ ಮಂಡಲ ಹತ್ತನೇ ತೋಕರು ಇದರ ನೂತನ ಅಧ್ಯಕ್ಷರಾಗಿ ಪ್ರೇಮಲತಾ ಯೋಗೀಶ್ ಅವಿರೋಧ ಆಯ್ಕೆ

ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆಯು ಸಂಸ್ಥೆ ಕಾರ್ಯಾಲಯದಲ್ಲಿ ನೆರವೇರಿತು. ನೂತನ ಅಧ್ಯಕ್ಷರಾಗಿ  ಸತತ ಮೂರನೇ ವರ್ಷಕ್ಕೆ ಶ್ರೀಮತಿ ಪ್ರೇಮಲತಾ ಯೋಗೀಶ್ ರವರು ಅವಿರೋಧವಾಗಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿಯಾಗಿ ಶ್ರೀಮತಿ ಕುಸುಮಾ ಎಚ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಶ್ರೀಮತಿ ಇಂದಿರಾ ಸಂಜೀವ ಕರ್ಕೇರ, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೀಮತಿ ಮಿತ್ರ ಮತ್ತು ಶ್ರೀಮತಿ ನಮಿತಾ ನವೀನ್ ಚಂದ್ರ, ಸಾಂಸ್ಕೃತಿಕ

ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್‌ಶಿಪ್: ಫೈನಲ್‌ನಲ್ಲಿ ತಮಿಳುನಾಡು ಸರ್ಫರ್‌ಗಳ ಹಣಾಹಣಿ

ಸುರತ್ಕಲ್‌ನ ಸಸಿಹಿತ್ಲು ಬೀಚ್‌ನಲ್ಲಿ ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್‌ಶಿಪ್ ನಡೆಯುತ್ತಿದ್ದು, ಇಂದು ಫೈನಲ್‌ನಲ್ಲಿ ಸ್ಪರ್ಧಿಗಳು ಸೆಣೆಸಾಡಲಿದ್ದಾರೆ. ನಗರದ ಮಂತ್ರ ಸರ್ಫ್ ಕ್ಲಬ್ ಮತ್ತು ಸರ್ಫಿಂಗ್ ಸ್ವಾಮಿ ಫೌಂಡೇಷನ್ ಸಹಯೋಗದಲ್ಲಿ ಭಾರತ ಸರ್ಫಿಂಗ್ ಫೆಡರೇಷನ್ ಆಯೋಜಿಸಿರುವ ಚಾಂಪಿಯನ್‌ಷಿಪ್‌ನ ಎರಡನೇ ದಿನವೂ ತಮಿಳುನಾಡು ಸರ್ಫರ್‌ಗಳು ಪಾರಮ್ಯ ಮೆರೆದರು. ಮಂತ್ರ ಸರ್ಫ್ ಕ್ಲಬ್‌ನ ರಾಜು ಪೂಜಾರ್, ಪ್ರದೀಪ್ ಪೂಜಾರ್ ಮತ್ತು ಆಕಾಶ್ ಪೂಜಾರ್ ಬಾಲಕರ ವಿಭಾಗದ

ಜೂ. 3 ವಿಧಾನಪರಿಷತ್ ಚುನಾವಣೆ ಹಿನ್ನೆಲೆ: ಸೋಮವಾರದ ಸಂತೆ ರದ್ದುಮಾಡಿದ ಅಧಿಕಾರಿಗಳು: ಸಂತೆ ರದ್ದು ಇಲ್ಲ: ಶಾಸಕ ಅಶೋಕ್ ರೈ

ಪುತ್ತೂರು: ಜೂ. 3 ರಂದು ನಡೆಯುವ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಿ ಅಧಿಕಾರಿಗಳು ಆದೇಶ ಮಾಡಿದ್ದು ಈ ಆದೇಶವನ್ನು ರದ್ದು ಮಾಡಿ ಸಂತೆ ಎಂದಿನಂತೆ ಅದೇ ಜಾಗದಲ್ಲಿ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ತಾಪಂ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯ ಹಿನ್ನೆಲೆಯಲ್ಲಿ ವಾರದ ಸಂತೆಯನ್ನು ರದ್ದು ಮಾಡಲಾಗಿತ್ತು. ಸಂತೆ ರದ್ದು ಮಾಡಿರುವ ಬಗ್ಗೆ

ಕಾಪು: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿ ಪೊಲೀಸ್ ವಶಕ್ಕೆ

ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಫಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ  ತಂಡವೊಂದನ್ನು  ಕಾಪು ಪೊಲೀಸರು ಶನಿವಾರ ರಾತ್ರಿ ಬಂದಿಸಿದ್ದಾರೆ. ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್  ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ ಪರಂಗಿಪೇಟೆ ಎಂಬವರನ್ನು ಬಂದಿಸಿದ್ದಾರೆ. ಇವರಲ್ಲಿ ಕೆಲವರು ಬೇರೆ ಬೇರೆ

ಬ್ರಹ್ಮಾವರ: ಹಲಸು ಮತ್ತು ಹಣ್ಣು ಮೇಳಕ್ಕೆ ಚಾಲನೆ

ಬ್ರಹ್ಮಾವರ: ಬ್ರಹ್ಮಾವರ ರೋಟರಿ ಕ್ಲಬ್, ಕೃಷಿ ವಿಜ್ಞಾನ ಕೇಂದ್ರ ಮತ್ತು ನಾನಾ ಸಂಘ ಸಂಸ್ಥೆಯವರ ಸಹಕಾರದಲ್ಲಿ ಎಸ್‌ಎಂಎಸ್ ಸಮುದಾಯ ಭವನದಲ್ಲಿ ಹಲಸು ಮತ್ತು ಹಣ್ಣು ಮೇಳಕ್ಕೆ ಚಾಲನೆ ನೀಡಲಾಯಿತು. ಹಲಸು ಮತ್ತು ಹಣ್ಣು ಮೇಳ 2024 ಕಾರ್ಯಕ್ರಮವನ್ನು ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಬಿ ಎಂ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿಸರ್ಗದತ್ತ ಆಹಾರವಾದ ಹಲಸು ಮಾತ್ರ ರಾಸಾಯನಿಕ ರಹಿತವಾಗಿರುವ ಹಣ್ಣು. ಗ್ರಾಮೀಣ ಭಾಗದ ಹಲವಾರು ಹಣ್ಣುಗಳಿಗೆ ಸೂಕ್ತ

ಸುಳ್ಯ : ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಬೆಳ್ಳಾರೆ ವಲಯದ ಐವ೯ನಾಡು ಒಕ್ಕೂಟದ ಜ್ಞಾನಶ್ರೀ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ಭವಾನಿ ರವರಿಗೆ ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ಮಂಜುರಾಗಿದ್ದು ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಶ್ರೀಮತಿ ವೇದ ಎಚ್ ಶೆಟ್ಟಿ ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಉಪಾಧ್ಯಕ್ಷರಾದ ಶ್ರೀಮತಿ ರೋಹಿತಾಕ್ಷಿ ಕೃಷಿ ಮೇಲ್ವಿಚಾರಕರಾದ ರಮೇಶ್

ಸುಳ್ಯ : ಎಎನ್‌ಎಂಸಿ ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕ

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿನ ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕವಾಗಿದ್ದು, ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಉಪಾಧ್ಯಕ್ಷೆ ಶೋಭಾ ಚಿದಾನಂದ ಮತ್ತು ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಯವರ ಉಪಸ್ಥಿತಿಯಲ್ಲಿ ಜವಾಬ್ದಾರಿ ವಹಿಸಿಕೊಂಡರು. ಇವರು ಈ ಹಿಂದೆ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಪದವಿ