Home Archive by category Fresh News (Page 216)

ದ. ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ: ಜಿಲ್ಲಾಧಿಕಾರಿಗಳಿಂದ ನಗರ ಪ್ರದಕ್ಷಿಣೆ

ಮಂಗಳೂರು, :- ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು. 5ರ ಬುಧವಾರ ನಗರ ಪ್ರದಕ್ಷಿಣೆ ಕೈಗೊಂಡಿದ್ದರು.ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ, ಮಳೆಯಿಂದ ಉದ್ಬವಿಸಿದ ಪರಿಸ್ಥಿತಿಯನ್ನು

ಮೃತರ ಕುಟುಂಬಕ್ಕೆ ಪರಿಹಾರ – ಜಿಲ್ಲಾಡಳಿತದಿಂದ ಅಗತ್ಯ ಕ್ರಮ : ಡಿಸಿ

*ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಸುರತ್ಕಲ್‌ ಹೋಬಳಿ ಕುಳಾಯಿ ಗ್ರಾಮದ ಸಂತೋಷ್ (34 ವರ್ಷ) ಜು.5ರ ಬುಧವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿರುವ ಸೋಲಾರ್ ಕಂಪೆನಿಗೆ ಮನೆಯಿಂದ ಕೆಲಸಕ್ಕೆ ತೆರಳುವಾಗ ಮರ ಬಿದ್ದು ದಾರಿ ಬಂದ್ ಆದ ಕಾರಣ ಕಂಪೌಂಡ್ ಹಾರಲು ಯತ್ನಿಸಿದಾಗ ಮರದೊಂದಿಗೆ ಬಿದ್ದ ವಿದ್ಯುತ್‌ ದೀಪದ ತಂತಿ ತಗುಲಿ ಮರಣ ಹೊಂದಿರುತ್ತಾರೆ.ಈ ಬಗ್ಗೆ ಮಂಗಳೂರು ತಹಶೀಲ್ದಾರರು ವರದಿ ಸಲ್ಲಿಸಿರುತ್ತಾರೆ.ಮೃತರ ವಾರಸುದಾರರಿಗೆ ಮೆಸ್ಕಾಂ ಇಲಾಖಾ

ದ. ಕ : ಜುಲೈ 6 ನಾಳೆ ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.6ರ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ರಜೆ ಘೋಷಿಸಿದ್ದಾರೆ

ಸೋಲಿನಿಂದ ಎದೆಗುಂದದಿರಿ… ನಾನಿರುವೆ ಸದಾ ನಿಮ್ಮೊಂದಿಗೆ.. : ಕಾರ್ಯಕರ್ತರಿಗೆ ಸೊರಕೆ ಅಭಯ

 ಸೋಲು- ಗೆಲುವು ಎಲ್ಲಾ ರಂಗಗಳಲ್ಲಿಯೂ ಸಹಜ, ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮೂಲಕ, ಸೋಲಿನ ಪರಾಮರ್ಶೆ ನಡೆಸಿ ಎಲ್ಲಿ ಎಡವಿದ್ದೇವೆಯೋ ಅಲ್ಲಿ ಎಚ್ಚೆತ್ತು ಕ್ರೀಡಾಸ್ಪೂರ್ತಿಯೊಂದಿಗೆ ಇನ್ನಷ್ಟು ಬಲಿಷ್ಠವಾಗಿ ಸಂಘಟನಾತ್ಮಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷ ಬಲವರ್ಧನೆಗೆ ಪಣ ತೊಡೋಣ ಎಂದು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರು ಕಾರ್ಯಕರ್ತರಿಗೆ ಕರೆ ನೀಡಿದರು.    ಅವರು ಕಾಪು

ಪಿಲಾರು, ಮಳೆ ನೀರಿಗೆ ಬಿದ್ದುಉಸಿರುಗಟ್ಟಿ ಸಾವು : ಮೃತರ ಮನೆಮಂದಿಗೆ ರೂ.5 ಲಕ್ಷ ಪರಿಹಾರ

ಉಳ್ಳಾಲ: ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ಖಜಾನೆ 2 ಮುಖೇನ ನೀಡಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ,. ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಮಹಜರು ವರದಿಯನ್ನು ಸಂಗ್ರಹಿಸಿ, ಮೃತ ಪ್ರಮಾಣ ಪತ್ರವನ್ನು

ಪಡುಬಿದ್ರಿ ಕಡಲು ಕೊರೆತ ಪ್ರದೇಶಕ್ಕೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಭೇಟಿ

ಮಾಜಿ ಸಚಿವರು ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ಸನ್ಮಾನ್ಯ ವಿನಯ್ ಕುಮಾರ್ ಸೊರಕೆ ಯವರು, ಇಂದು ಕಡಲ್ಕೊರೆತದಿಂದ ತೀವ್ರ ಹಾನಿಗೊಳಗಾಗಿ, ಅಪಾಯದ ಅಂಚಿಗೆ ತಲುಪಿರುವ ಕಾಡಿಪಟ್ನ – ಪಡುಬಿದ್ರಿ ಬೀಚ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಬಂಧ ಪಟ್ಟ ಇಲಾಖೆಯ ಅಭಿಯಂತರ ರಿಗೆ ಕರೆ ಮಾಡಿ ತುರ್ತು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಈ ಸಂದರ್ಭ ಮಾಜಿ ಸಚಿವರೊಂದಿಗೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪ್ರಧಾನ ಕಾರ್ಯದರ್ಶಿ

ಎಸ್.ಡಿ.ಎಂಕಾಲೇಜಿನಲ್ಲಿ ವಾರ್ಷಿಕೋತ್ಸವ

ಉಜಿರೆ, ಜುಲೈ 1: ಪದವಿ ಮತ್ತು ಸ್ನಾತಕೊತ್ತರ ಶಿಕ್ಷಣ ಪಡೆಯುವ ಹಂತಗಳಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಂಡು ಉನ್ನತ ಹುದ್ದೆಗಳನ್ನು ಪಡೆಯುವ ಮಹತ್ವಾಕಾಂಕ್ಷೆಯೊಂದಿಗೆ ವಿದ್ಯಾರ್ಥಿಗಳು ಮುನ್ನಡೆಯಬೇಕುಎಂದು ಬೆಂಗಳೂರಿನ ವಾಣ ಜ್ಯತೆರಿಗೆಇಲಾಖೆಯ ಸಹಾಯಕಆಯಕ್ತರಾದ ಸೌಮ್ಯ ಬಾಪಟ್‍ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧ.ಮಂ ಕಾಲೇಜಿನ ವಾರ್ಷಿಕೋತ್ಸವಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ವಿವಿಧ ವಲಯಗಳಲ್ಲಿ ಸಾಧನೆಗೈದ ವಿದ್ಯಾರ್ಥಿ

ಡಿ.ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಕನ್ನಡ ಚರ್ಚಾಸ್ಪರ್ಧೆ

ಉಜಿರೆ: ದೂರದೃಷ್ಟಿಯೊಂದಿಗಿನ ವಿಶಾಲ ಮನಸ್ಥಿತಿ ಮಹತ್ತರ ಕಾರ್ಯಗಳಿಗೆ ಪ್ರೇರಣೆಯಾಗುತ್ತದೆ ಎಂದು ಮೂಡಬಿದಿರೆಯ ಎಕ್ಸಲೆಂಟ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ್ ಹೇಳಿದರು. ಎಸ್.ಡಿ.ಎಂ. ಪದವಿ ಕಾಲೇಜಿನ ಸಮ್ಯಕ್‍ದರ್ಶನ ಸಭಾಂಗಣದಲ್ಲಿ ಡಿ. ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಬುಧವಾರ ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಸಾಧಾರಣ

ಉಡುಪಿಯಲ್ಲಿ ಬಿಡುವಿಲ್ಲದ ಮುಂಗಾರಿನ ಜೋರು

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕಳೆದ 24 ಗಂಟೆಯಲ್ಲಿ 121 ಮಿಲಿಮೀಟರ್ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಸರಾಸರಿ ಮಳೆಯ ವಿವರದ ಪ್ರಕಾರ ಉಡುಪಿ ನಗರದಲ್ಲಿ 131 ಮಿ.ಮೀ., ಬ್ರಹ್ಮಾವರದಲ್ಲಿ 106, ಬೈಂದೂರಿನಲ್ಲಿ 130, ಕುಂದಾಪುರದಲ್ಲಿ 85, ಕಾರ್ಕಳದಲ್ಲಿ 151, ಕಾಪುವಿನಲ್ಲಿ 126 ಮತ್ತು ಹೆಬ್ರಿಯಲ್ಲಿ 116 ಮಿ.ಮೀ. ಮಳೆ ದಾಖಲಾಗಿದೆ.

ಭಾರೀ ಮಳೆಯಿಂದ ಉಡುಪಿಯ ತಗ್ಗು ಪ್ರದೇಶಗಳು ಜಲಾವೃತ

ಉಡುಪಿ: ಎರಡು ‌ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಉಡುಪಿಯ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಉಡುಪಿ ನಗರದ ಮೂಡನಿಡುಂಬೂರು ಬ್ರಹ್ಮ ಬೈದರ್ಕಳ ಗರಡಿ ಮತ್ತು ಬನ್ನಂಜೆ ಶಿರಿಬೀಡು ವಾರ್ಡ್‌ನಲ್ಲಿವ ಗರಡಿಗೆ ವಿಪರೀತ ಮಳೆಯಿಂದಾಗಿ ನೀರು ನುಗ್ಗಿದೆ. ಸಾಕಷ್ಟು ಮನೆಗಳ ಅಂಗಳದವರೆಗೂ ನೀರು ನುಗ್ಗಿದ್ದು, ಹರಿಯುವ ನೀರಿನಲ್ಲಿ ಕಾರ್ಮಿಕರು ನಡೆದಾಡಲು ಹರಸಾಹಸ ಪಡುವಂತಾಗಿದೆ. ಇಂದ್ರಾಣಿ ನದಿ ಇದೀಗ ನೆರೆಯಿಂದ