Home Archive by category Fresh News (Page 217)

ರಾಜ್ಯದ ಪತ್ರಕರ್ತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಡೆಯಲಿದೆ ಪುರಸ್ಕಾರ

ಉಡುಪಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುತಿಭಾ ಪುರಸ್ಕಾರ – 2023 ಕಾರ್ಯಕ್ರಮ ಜುಲೈ 8 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಉಡುಪಿ ಜಿಲ್ಲೆಯ ಕೆಎಂಸಿ

ಉಳ್ಳಾಲ : ಕೃತಕ ನೆರೆ ದಾಟಿ 40 ಮನೆಗಳಿಗೆ ವಿದ್ಯುತ್ ಪೂರೈಸಿದ ಮೆಸ್ಕಾಂ ಸಿಬ್ಬಂದಿ

ಉಳ್ಳಾಲ: ಕರ್ತವ್ಯವಾದರೂ ನಿಭಾಯಿಸಲು ಛಲ ಬೇಕು. ಮಳೆಗಾಲದ ಸಂದರ್ಭ ಮೆಸ್ಕಾಂ ಪವರ್ಮೆನ್‍ಗಳು ಜನರ ಬಾಯಿಂದ ಕೇಳುವುದೇ ಜಾಸ್ತಿ. ಆದರೆ ಮೆಸ್ಕಾಂನ ಉಳ್ಳಾಲ-2 ಘಟಕದ ಪವರ್ಮೆನ್ ವಸಂತ್ ಹಾಗೂ ಸುರೇಶ್ ಗದ್ದೆಯೊಂದರಲ್ಲಿ ಕೃತಕ ನೆರೆಯಾಗಿದ್ದರೂ ಅದನ್ನು ಕಷ್ಟಪಟ್ಟು ದಾಟಿ 40 ಮನೆಗಳಿಗೆ ವಿದ್ಯುತ್ ಪೂರೈಸಿದ್ದಾರೆ. ಈ ಕುರಿತ ವೀಡಿಯೋವನ್ನು ಮೆಸ್ಕಾಂ ಜೆ.ಇ ನಿತೇಶ್ ಹೊಸಗದ್ದೆ ಇವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತಮ್ಮ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ

ಬಿಕರ್ನಕಟ್ಟೆ : ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್ಸ್ ಬಿದ್ದು ವಾಹನ ಜಖಂ

ಮಂಗಳೂರಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಕೆಲವೆಡೆ ಮಳೆಯಿಂದಾಗಿ ಹಾನಿ ಸಂಭವಿಸುತ್ತಿದೆ. ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಕಟ್ಟಡದ ಮೇಲಿದ್ದ ಜಾಹೀರಾತು ಹೋರ್ಡಿಂಗ್ ಬಿದ್ದು 12ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿರುವ ಘಟನೆ ನಡೆದಿದೆ. ಬಿಕರ್ನಕಟ್ಟೆಯಲ್ಲಿನ ಕಟ್ಟಡದಲ್ಲಿದ್ದ ಜಾಹೀರಾತು ಹೋರ್ಡಿಂಗ್ ಕಟ್ಟಡದ ಪಾರ್ಶ ಸಮೇತ ಬಿದ್ದಿದೆ. ಪರಿಣಾಮ ಕೆಳಗಡೆ ನಿಲ್ಲಿಸಿದ್ದ 12 ವಾಹನಗಳು ಜಖಂಗೊಂಡಿವೆ. ವಿದ್ಯುತ್ ಕಂಬ ಕೂಡ ಮುರಿದು ಬಿದ್ದಿದೆ.

ಉಳ್ಳಾಲ,ಉಚ್ಚಿಲದಲ್ಲಿ ತೀವ್ರಗೊಂಡ ಕಡಲ್ಕೊರೆತ – ಚರ್ಮುರಿ ಅಂಗಡಿ, ಮರಗಳು ಸಮುದ್ರಪಾಲು

ಉಳ್ಳಾಲ ಹಾಗೂ ಉಚ್ಚಿಲ ಭಾಗದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಉಳ್ಳಾಲ ಬೀಚ್ ಬಳಿ ಹಾಕಲಾಗಿದ್ದ ಚರ್ಮುರಿ ಅಂಗಡಿಗಳು ಸಮುದ್ರಪಾಲಾಗಿದೆ. ಉಚ್ಚಿಲ ಭಾಗದಲ್ಲಿ ಸಮುದ್ರ ತೀರದ ಮನೆಗಳಿಗೆ ಅಪ್ಪಳಿಸಿ, ಹಲವು ಮರಗಳು ಸಮುದ್ರಪಾಲಾಗಿವೆ. ಸಮುದ್ರತೀರದಲ್ಲಿ 80 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಭಾರೀ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಉಳ್ಳಾಲ ಬೀಚ್, ಮೊಗವೀರಪಟ್ನ, ಸುಭಾಷನಗರ, ಕೈಕೋ, ಕಿಲೆರಿಯಾನಗರ, ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ

ಗುರುಪುರ : ಗ್ರಾಮ ಸಭೆ ನಡೆಸದಂತೆ ಗ್ರಾಮಸ್ಥರಿಂದ ಪ್ರತಿಭಟನೆ

ಕಳೆದು ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಮನೆ ಕಳೆದುಕೊಂಡಿದ್ದ ಗ್ರಾಮಸ್ಥರು ಇಂದು ಗುರುಪುರ ಗ್ರಾಮಸಭೆ ನಡೆಸದಂತೆ ಪ್ರತಿಭಟನೆ ನಡೆಸಿದ್ದಾರೆ. ಗುಡ್ಡ ಕುಸಿತದಿಂದ 11 ಕುಟುಂಬಗಳು ಮನೆ ಕಳೆದುಕೊಂಡಿದ್ದಾರೆ. ಪರಿಹಾರ ಒದಗಿಸಬೇಕು ಎಂದು ಸಂತ್ರಸ್ತ ಕುಟುಂಬದವರು ಪ್ರತಿಭಟನೆ ನಡೆಸಿದ್ದಾರೆ. ಪರಿಹಾರ ಒದಗಿಸುವ ದಿನಾಂಕ ಮತ್ತು ಎಲ್ಲಾ ಅಧಿಕಾರಿಗಳು ಬಂದರೆ ಮಾತ್ರ ಸಭೆ ನಡೆಸಬೇಕೆಂದು ಒತ್ತಾಯಿಸಿದರು. ಇಂದು ಸಭೆಗೆ 28 ಅಧಿಕಾರಿಗಳ

ಪೂಜ್ಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಂಸ್ಥಾಪಕ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯು ಜುಲೈ 5ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ ಅವರು ಬೆಳಗ್ಗೆ 9.30ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ

ಜು.6: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣವು ಜು.6ರಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ‘ಸಮ್ಯಗ್ದರ್ಶನ’ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರು ಬೆಳಗ್ಗೆ 9.45ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ.

Mangaluru : ಹಿರಿಯ ನಾಗರಿಕರಿಗೆ ಬಸ್ಸಿನಲ್ಲಿ ಸೀಟು ಕೊಡಲ್ಲ ದೂರಿನ ಹಿನ್ನಲೆ ; ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿದ ಎಎಸ್‍ಐ

ಹಿರಿಯ ನಾಗರಿಕರಿಗೆ ಬಸ್‍ನಲ್ಲಿ ಸೀಟ್ ವ್ಯವಸ್ಥೆಯಿಲ್ಲ ಎಂದು ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ದೂರು ಕೇಳಿ ಬಂದ ಬೆನ್ನಲ್ಲೇ ಎಎಸ್‍ಐ ಒಬ್ಬರು ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿ ಪೊಲೀಸ್ ಕಮಿಷನರ್ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಫೋನ್ ಇನ್ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರೊಬ್ಬರು ಕರೆ ಮಾಡಿ ನಮಗೆ ಬಸ್ ನಲ್ಲಿ ಸೀಟ್ ಮೀಸಲಾತಿ ಇದ್ದರೂ ಅದು ಪಾಲನೆಯಾಗುತ್ತಿಲ್ಲ ಎಂದು ದೂರಿದ್ದರು. ಅದರ ಬೆನ್ನಲ್ಲೇ ಪಾಂಡೇಶ್ವರ ಸಂಚಾರ

ತುಂಬಿ ಹರಿಯುತ್ತಿದೆ ಉಡುಪಿಯ ಜೀವನಾಡಿ ‘ಸ್ವರ್ಣ ನದಿ’

ಉಡುಪಿ: ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮುಂಗಾರು ಮಳೆಯ ಹಿನ್ನಲೆಯಲ್ಲಿ ಉಡುಪಿ ನಗರದ ಜೀವನಾಡಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ಇದರಿಂದ ಸ್ವರ್ಣ ನದಿಗೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಅಡ್ಡಗಟ್ಟಿರುವ ಬಜೆ ಡ್ಯಾಮ್ ಭರ್ತಿಯಾಗಿ ನೀರು ಹೊರ ಹೋಗುತ್ತಿದೆ.

ಮಳೆಯ ಅಬ್ಬರಕ್ಕೆ ನಿಜಾಮುದ್ದೀನ್- ತಿರುವನಂತಪುರ ಎಕ್ಸ್ ಪ್ರೆಸ್ ಉಡುಪಿಯಲ್ಲಿ ಸ್ಥಗಿತ

ಉಡುಪಿ: ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೆನ್ನೆ ತಡರಾತ್ರಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಟಪಾಡಿ ಗ್ರಾಮದಲ್ಲಿ ರೈಲ್ವೆ ಟ್ರ್ಯಾಕ್ ನ ವಿದ್ಯುತ್ ಕಂಬದ ಮೇಲೆ ಮರ ಕುಸಿದು ಬಿದ್ದಿತ್ತು. ದೆಹಲಿ – ಕೇರಳ ನಡುವೆ ಓಡುವ ನಿಜಾಮುದ್ದೀನ್- ತಿರುವನಂತಪುರ ಎಕ್ಸ್ ಪ್ರೆಸ್ ರೈಲು ಎರಡು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಪರಿಣಾಮ, ಉಡುಪಿ ಜಿಲ್ಲೆಯ ರೈಲ್ವೆ ಟ್ರ್ಯಾಕ್ ನಲ್ಲಿ ಓಡುವ ಎಲ್ಲಾ ರೈಲುಗಳ ಸಂಚಾರ ಎರಡು ಗಂಟೆ ಸ್ಥಗಿತಗೊಂಡವು. ರೈಲ್ವೆ