ಪಡುಬಿದ್ರಿ: ಕಳೆದ ಎರಡು ದಿನದ ಹಿಂದೆ ನಾಪತ್ತೆಯಾದ ಪಲಿಮಾರು ಗುಂಡಿ ನಿವಾಸಿ ವ್ಯಕ್ತಿಯ ಶವ ಪಕ್ಕದ ಕೆಸರು ತುಂಬಿದ ಹಳ್ಳವೊಂದರಲ್ಲಿ ಪತ್ತೆಯಾಗಿದೆ.ಮೃತರು ಪಲಿಮಾರು ಗುಂಡಿ ನಿವಾಸಿ, ಮುಂಬೈ ಮಹಾ ನಗರದಲ್ಲಿ ವಾಸವಿದ್ದ ಆನಂದ ಪೂಜಾರಿ(51), ಊರಿನ ಮನೆಯಲ್ಲಿ ಕುಟುಂಬದ ದೈವದ ಧಾರ್ಮಿಕ ಕಾರ್ಯಕ್ರಮವಿದ್ದು ಅದರಲ್ಲಿ ಪಾಲ್ಗೊಂಡಿದ್ದ ಇವರು ರಾತ್ರಿ ಸುಮಾರು ಹನ್ನೆರಡರ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್ ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದ್ದು, ಆರೋಪಿಗಳಿಗೆ ಆಶ್ರಯ ನೀಡಿದ್ದ
ಮಂಗಳೂರು : ಕಾವೂರಿನ ಬಿ.ಜಿ.ಎಸ್. ಹೈಸ್ಕೂಲ್ ವಿದ್ಯಾರ್ಥಿ ಮಹಿತ್ ಕುಮಾರ್ ಈ ಬಾರಿಯ SSLC ಪರೀಕ್ಷೆಯಲ್ಲಿ 607 ಅಂಕ ಪಡೆದು 97.12 % ದಾಖಲೆಯ ಸಾಧನೆ ಮಾಡಿದ್ದಾನೆ. ಬಿ.ಜಿ.ಎಸ್. ಶಾಲೆಯ ಗರಿಷ್ಠ ಅಂಕ ಪಡೆದ ಟಾಪರ್ ವಿದ್ಯಾರ್ಥಿಯಾಗಿರುವ ಮಹಿತ್ ಕುಮಾರ್ ಅವರು ಭಾಸ್ಕರ್ ಗಟ್ಟಿ ಕೌಡೂರು ಹಾಗೂ ಸೌಮ್ಯ ಗಟ್ಟಿ ನಡಾರ್ ಇವರ ಪುತ್ರ. ಗರಿಷ್ಠ ಅಂಕದೊಂದಿಗೆ ಶಾಲೆಗೆ ಕೀರ್ತಿ ತಂದ ಸಾಧನೆ ಮಾಡಿದ ಮಹಿತ್ ಅವರನ್ನು ಶಾಲಾಡಳಿತ ಮಂಡಳಿ ಅಭಿನಂದಿಸಿದೆ.
ಫ್ಯಾಶನ್ ಉದ್ಯಮವು ಜನಪ್ರಿಯತೆಯನ್ನು ಗಳಿಸಿದೆ. ಫ್ಯಾಶನ್ ವಿನ್ಯಾಸದಲ್ಲಿ ವೃತ್ತಿ ಜೀವನದಲ್ಲಿ ಉತ್ತಮವಾದಂತಹ ಆಯ್ಕೆಯಾಗಿರುತ್ತದೆ ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವತಿಯಿಂದ” ಮೇಕಪ್ ಅಂಡ್ ಹೇರ್ ಸ್ಟೈಲ್” ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕುಮಾರಿ ಆಶಿಕಾ ಫೌಂಡರ್ ಶಿಯಾ ಮೇಕ್ ಓವರ್ ಬೆಂಗಳೂರು ಇವರು ಆಗಮಿಸಿ
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ
ಬಂಟ್ವಾಳ ತಾಲೂಕಿನ ಬಹುತೇಕ ಭಾಗಗಳಲ್ಲಿ ರಸ್ತೆ ಇಕ್ಕೆಲಗಳು, ಇಳಿಜಾರು ಗುಂಡಿಗಳು ಕಸ ಎಸೆಯುವ ತಾಣಗಳಾಗುತ್ತಿದೆ. ಕೊಳೆಯುವ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಾಹನಗಳಲ್ಲಿ ಬಂದು ಸಾರ್ವಜನಿಕ ಸ್ಥಳದಲ್ಲಿ ಎಸೆದು ಹೋಗುವ ಅನಾಗರಿಕ ಪ್ರವೃತ್ತಿ ಹೆಚ್ಚಾಗುತ್ತಿದೆ. ಮನೆ, ಅಂಗಡಿಗಳ ತ್ಯಾಜ್ಯಗಳು ರಸ್ತೆ ಬದಿಗಳಲ್ಲಿ ಎಸೆಯುತ್ತಿರುವ ಪರಿಣಾಮ ಸುತ್ತಮುತ್ತಲ ಪ್ರದೇಶ ದುರ್ವಾಸನೆ ಬೀರುತ್ತಿದೆ. ಜನರಲ್ಲಿ ಸ್ವಚ್ಚತೆಯ ಪರಿಕಲ್ಪನೆ ಕೇವಲ ಅಕ್ಟೋಬರ್ 2ರ ಸ್ವಚ್ಛತಾ
ಬಿ.ಸಿ.ರೋಡಿನ ಕಾಮಾಜೆಯಲ್ಲಿರುವ ಸರಕಾರಿ ಪದವಿ ಕಾಲೇಜಿನ ಉಪನ್ಯಾಸಕಿ ವೇದಶ್ರೀ ನಿಡ್ಯ ಅವರು ತನ್ನ ಸ್ವಂತ ಕಾರಿನಲ್ಲಿ ಹೀಗೊಂದು ಸ್ಟಿಕ್ಕರ್ ಬರಹವನ್ನು ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ. ಜನರು ತಮ್ಮ ಸ್ವಂತ ವಾಹನಗಳಲ್ಲಿ ತಮ್ಮ ಇಷ್ಟದ ದೇವರ ಹೆಸರು, ಮಕ್ಕಳ ಹೆಸರು ಅಥವಾ ಇಷ್ಟದ ವಾಕ್ಯಗಳನ್ನು ಸ್ಟಿಕರ್ ಮೂಲಕ ಬರೆಸುವುದು ಸಾಮಾನ್ಯ. ಆದರೆ ಉಪನ್ಯಾಸಕಿ ವೇದಶ್ರೀ ಅವರು ತನ್ನ ವೇಗನ್ ಆರ್ ಕಾರಿನ ಹಿಂಭಾಗ ಹಾಗೂ ಮುಂಭಾಗದಲ್ಲಿ ತಾನು ಕರ್ತವ್ಯ ನಿರ್ವಹಿಸುತ್ತಿರುವ
ಒಲಿಂಪಿಕ್ಸ್ ಬೆಳಕಿನ ಪಂಜು ಗ್ರೀಸಿನ ಅಥೆನ್ಸ್‍ನಿಂz 12 ದಿನಗಳ ಸಾಗರ ಪಯಣದ ಬಳಿಕ ಫ್ರಾನ್ಸಿನ ಮಾರ್ಸೆಲ್ ಬಂದರು ತಲುಪಿದೆ. ಸಾವಿರ ದೋಣಿಗಳು ಕವಾಯತಿನ ನಡುವೆ ಒಲಿಂಪಿಕ್ಸ್ ದೊಂದಿ ತಂದ 1896ರ ಬೆಲೆಮ್ ವ್ಯಾಪಾರಿ ಹಡಗನ್ನು ಮಾರ್ಸೆಲ್‍ನಲ್ಲಿ ಸ್ವಾಗತಿಸಲಾಯಿತು. ಕಳೆದ ಮೂರು ಒಲಿಂಪಿಕ್ಸ್‍ಗಳಲ್ಲಿ ಮಾರ್ಸೆಲ್‍ನವರೇ ಇದ್ದ ಫ್ರಾನ್ಸಿನ ಹುಟ್ಟು ಹಾಕು ತಂಡವು ಚಿನ್ನ ಗೆದ್ದಿತ್ತು. ಮಾಜೀ ಒಲಿಂಪಿಕ್ಸ್ ಆಟಗಾರ ಟೋನಿ ವಿಸ್ಟಾಂ ಸಕಲ ಸೇನಾ, ಪೋಲೀಸು, ನಾಗರಿಕ
ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ.ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು
ಬೆಳ್ತಂಗಡಿ: ಹಿರಿಯ ರಾಜಕಾರಣಿ ಮಾಜಿ ಶಾಸಕ ಶ್ರೀ ಕೆ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಡಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ ವಸಂತ ಬಂಗೇರರಾಗಿದ್ದು, ಪಕ್ಷಾತೀತವಾಗಿ ಜನತೆ ಅವರನ್ನು ಬೆಂಬಲಿಸಿದುದರ ನಿದರ್ಶನವಾಗಿದೆ. ಪ್ರಜಾಪ್ರಭುತ್ವಕ್ಕೆ ಕರಾಳವಾಗಿ ಜಾರಿಯಾಗಿದ್ದ ತುರ್ತುಪರಿಸ್ಥಿತಿ ವಿರುದ್ಧ ವಸಂತ ಬಂಗೇರರ ಹೋರಾಟ,




























