Home Archive by category Fresh News (Page 275)

ಜನವರಿ 29,ಭಾರತೀಯ ವೃತ್ತಪತ್ರಿಕೆ ದಿನ

ಕೆಲವರ ದಿನ ಆರಂಭವಾಗುವುದೇ ದಿನ ಪತ್ರಿಕೆಯನ್ನು ಓದುವ ಮೂಲಕ. ಕೈಯಲ್ಲಿ ಒಂದು ಕಪ್ ಕಾಫಿ ಅಥವಾ ಟೀ ಜೊತೆಗೆ ದಿನಪತ್ರಿಕೆಯಿದ್ದರೆ ಸುದ್ದಿಯನ್ನು ಓದುತ್ತಾ ಓದುಗರು ತಮ್ಮ ದಿನವನ್ನು ಆರಂಭಿಸುತ್ತಾರೆ. ರಾಜ್ಯ, ದೇಶ, ವಿದೇಶಗಳಲ್ಲಿ ನಡೆಯುವ ಸುದ್ದಿಗಳನ್ನು ಜನರಿಗೆ ತಲುಪಿಸುವ ದಿನ ಪತ್ರಿಕೆಗಳು ಇವತ್ತಿಗೂ ನಂಬಿಕೆಗೆ ಅರ್ಹವಾಗಿದೆ. ಹೀಗಾಗಿ ಪ್ರತಿ ವರ್ಷ ಜ. 29ರಂದು

ಭಾರತದ ಡಬಲ್ಸ್ ಟೆನ್ನಿಸಿಗರು

ಆಸ್ಟ್ರೇಲಿಯಾ ಓಪನ್ ಟೆನ್ನಿಸ್‍ನಲ್ಲಿ 43ರ ಪ್ರಾಯದಲ್ಲಿ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೊತೆಗೆ ಪುರುಷರ ಡಬಲ್ಸ್ ಗೆದ್ದು ರೋಹನ್ ಬೋಪಣ್ಣ ಸಾಧನೆ ಮಾಡಿದರು. ಅತಿ ಹಿರಿಯ ಗ್ರಾನ್‍ಸ್ಲಾಮ್ ವಿನ್ನರ್, ಅತಿ ಹಿರಿಯ ಟೆನ್ನಿಸ್ ಡಬಲ್ಸ್ ಒನ್ ಇತ್ಯಾದಿ ಸಾಧನೆ ಕರ್ನಾಟಕದ ಕೊಡವ ರೋಹನ್ ಬೋಪಣ್ಣ ಅವರದಾಯಿತು. ಭಾರತದ ಜಾಗತಿಕ ಗ್ರಾನ್‍ಸ್ಲಾಮ್ ಸಾಧಕರಾದ ಸಾನಿಯಾ ಮಿರ್ಜಾ, ಲಿಯಾಂಡರ್ ಪಯಸ್, ಮಹೇಶ್ ಭೂಪತಿ ಮೊದಲಾದವರ ಸಾಲಿಗೆ ಬೋಪಣ್ಣ

ಬಂಟ್ವಾಳ: : ಬೆಂಕಿ ಅವಘಡ, ಅಗ್ನಿಗೆ ಬಲಿಯಾದ ದಂಪತಿ

ಬಂಟ್ವಾಳ: ಬೆಂಕಿ ಅವಘಡಕ್ಕೆ ಸಿಕ್ಕಿ ದಂಪತಿ ಸುಟ್ಟು ಮೃತಪಟ್ಟ ಘಟನೆ ಬಂಟ್ವಾಳದ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಗಿಲ್ಬರ್ಟ್ ಕಾರ್ಲೋ ( 78) ಹಾಗೂ ಕ್ರಿಸ್ಟಿನಾ ಕಾರ್ಲೋ ( 70) ಮೃತಪಟ್ಟ ದುರ್ದೈವಿಗಳು. ಮನೆಯ ಪಕ್ಕ ಕಸ ಕಡ್ಡಿಗೆ ಹಾಕಿದ ಬೆಂಕಿ ವ್ಯಾಪಿಸಿ ಮನೆಯ ಸಮೀಪದ ಕಾಡನ್ನು ಆವರಿಸಿದ ವೇಳೆ ಅದನ್ನು ನಂದಿಸಲು ತೆರಳಿದ ವೃದ್ದ ದಂಪತಿಗಳು ಬೆಂಕಿಗೆ ಸಿಕ್ಕಿ ಸುಟ್ಟು ಹೋಗಿದ್ದಾರೆ. ಮೃತರಿಗೆ  3

ಮೀಯಪದವು: ಬದುಕು ಕಟ್ಟೋಣ ಗೆಳೆಯರ ಬಳಗದಿಂದ ಆರೋಗ್ಯ ತಪಾಸಣಾ ಶಿಬಿರ

ಬದುಕು ಕಟ್ಟೋಣ ಗೆಳೆಯರ ಬಳಗ ಎಂಬ ಸಾಮಾಜಿಕ ಕಳಕಳಿಯ ಸಂಸ್ಥೆಯ ವತಿಯಿಂದ ಪ್ರಾಣಮ್ ಭಂಡಾರಿ ದಡ್ಡಗಡಿ ಇವರ ಸ್ಮರಣಾರ್ಥ ಕೆಎಸ್ ಹೆಗ್ಡೆ  ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದಲ್ಲಿ, ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಳಿಯೂರು ನಲ್ಲಿ ಅತ್ಯಾಪೂರ್ವ ಅರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ನಡೆಯಿತು. ವಿವಿಧ ಗಣ್ಯರ ಸಮ್ಮುಖದಲ್ಲಿ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಸುಮಾರು 160ಕ್ಕಿಂತಲೂ ಅಧಿಕ ಜನರು ಈ ಅರೋಗ್ಯ ಶಿಬಿರದಲ್ಲಿ

ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಹಾಗೂ ಅಮೃತ ಮಹೋತ್ಸವ ಸಮಿತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಮಂಗಳೂರು: ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಹಾಗೂ ಅಮೃತ ಮಹೋತ್ಸವ ಸಮಿತಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ಸಾಮಾಜಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಹಾಗೂ ಅಮೃತ ಮಹೋತ್ಸವ ಸಮಿತಿಯ ಸಹಯೋಗದೊಂದಿಗೆ ಇಂದು ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಬೆಂಗರೆಯ ಹಿಂದೂ ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ರಮದಲ್ಲಿ ಎಲ್ಲರೂ ಬೆಳಗ್ಗಿನಂದಲೇ ತೊಡಗಿಕೊಂಡಿದ್ದರು. ಸಮಿತಿಯ ಪ್ರತಿಯೊಬ್ಬರು ಸ್ವಚ್ಛತಾ

ದೇರಳಕಟ್ಟೆ: “ಮೇಲೋಗರ” ಕೃತಿ ಲೋಕಾರ್ಪಣೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಳ್ಳಾಲ ತಾಲೂಕು ವತಿಯಿಂದ ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಕೆ. ರವೀಂದ್ರ ರೈ ಕಲ್ಲಿಮಾರ್ ಅವರ ಚಿಂತನ ಶಾಲೆಯ ಸಂಚಿತ ಬರಹಗಳ ಸಂಕಲನ “ಮೇಲೋಗರ” ಕೃತಿ ಲೋಕಾರ್ಪಣೆ ಕಾರ್ಯಕ್ರಮ ದೇರಳಕಟ್ಟೆ ದಿ ಕಂಫರ್ಟ್ಸ್ ಇನ್ ಹೋಟೆಲ್ ನಲ್ಲಿ ನಡೆಯಿತು. ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ನಿವೃತ್ತ ಮುಖ್ಯಶಿಕ್ಷಕ ಕೆ. ರವೀಂದ್ರ ರೈ ಕಲ್ಲಿಮಾರ್ ಅವರ ಚಿಂತನ ಶಾಲೆಯ ಸಂಚಿತ

ಮಂಗಳೂರು: ಆತ್ಮಶಕ್ತಿ ಸ್ಥಾಪನಾ ದಿನ: ಸೌರ ವಿದ್ಯುತ್ ಘಟಕದ ಉದ್ಘಾಟನೆ

ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆತ್ಮಶಕ್ತಿ ಸ್ಥಾಪನಾ ದಿನಾಚರಣೆ ಮತ್ತು ಹವಾ ನಿಯಂತ್ರಿತ ಸಭಾಂಗಣ ಹಾಗೂ ನೂತನ ಸೌರ ವಿದ್ಯುತ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಪಡೀಲ್‌ನ ಆತ್ಮಶಕ್ತಿ ಸೌಧದಲ್ಲಿ ನಡೆಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆತ್ಮಶಕ್ತಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಸಚಿವರಾದ ರಮಾನಾಥ ರೈ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಅವರು ಸೌರ ವಿದ್ಯುತ್ ಘಟಕವನ್ನು ಲೋಕಾರ್ಪಣೆಗೊಳಿಸಿದರು. ಇದೇ ವೇಳೆ

ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಕಸ್ಟಮ್ಸ್ ದಿನಾಚರಣೆ

ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಅಂತರರಾಷ್ಟ್ರೀಯ ಕಸ್ಟಮ್ಸ್ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಚಿನ್ನ ಹಾಗೂ ವನ್ಯಜೀವಿಗಳ ಕಳ್ಳಸಾಗಾಣೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಧಿಕಾರಿಗಳಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು. ಅಂತರರಾಷ್ಟ್ರೀಯ ಕಸ್ಟಮ್ಸ್ ದಿನಾಚರಣೆಯನ್ನು ಕೋಸ್ಟ್‌ಗಾರ್ಡ್ ಕರ್ನಾಟಕದ ಕಮಾಂಡೆಂಟ್ ಪ್ರವೀಣ್ ಕುಮಾರ್ ಮಿಶ್ರ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,

ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತು: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಬಿಹಾರ ಮುಖ್ಯಮಂತ್ರಿ ಬಿಜೆಪಿಯೊಂದಿಗೆ ಕೈಜೋಡಿಸುವ ವಿಚಾರದ ಬಗ್ಗೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರು ಐದು ದಿನಗಳ ಹಿಂದೆಯೇ ನನಗೆ ಮಾಹಿತಿ ನೀಡಿದ್ದರು. ಅದು ಈಗ ನಿಜವಾಗಿದೆ. ಅವರು ಹೋಗುವುದಾದರೆ ಹೋಗಲಿ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮುಂಚೆಯೇ ಸುಳಿವು

ಪಾಟ್ನಾ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ

ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು, ನಿತೀಶ್‌ ಕುಮಾರ್‌ ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್‌ ಕುಮಾರ್‌ ಅಧಿಕೃತವಾಗಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಆರ್‌ಜೆಡಿ, ಕಾಂಗ್ರೆಸ್‌, ಎಡರಂಗ ಹಾಗೂ ಜೆಡಿಯು ಮೈತ್ರಿ ಸರ್ಕಾರ ಪತನಗೊಂಡಿದೆ. ಇನ್ನೊಂದೆಡೆ, ಬಿಜೆಪಿ ಜತೆಗೆ ಸೇರಿ ಇಂದು ಸಂಜೆ ಮತ್ತೆ ಜೆಡಿಯು – ಬಿಜೆಪಿ ಸರ್ಕಾರ ರಚನೆಯಾಗೋದು ಸಹ ಬಹುತೇಕ ಖಚಿತವಾಗಿದೆ. ಭಾನುವಾರ