Home Archive by category Fresh News (Page 383)

ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಹಾಗೂ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ

ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಆರಂಭಿಸಿದ ಭಾರತ್ ಜೋಡೋ ಯಾತ್ರೆ ಸೋಮವಾರ ಕಾಶ್ಮೀರದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಹಾಗೂ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ ಜರಗಿತು. ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್

ಕಟಪಾಡಿ ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದ ಕೊರಗಜ್ಜ ಸನ್ನಿಧಿಗೆ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಭೇಟಿ

ಕಟಪಾಡಿ ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದಲ್ಲಿನ ಕಾರ್ಣಿಕ ಪ್ರಸಿದ್ಧ ಕರಾವಳಿಯ ಅತ್ಯಂತ ನಂಬಿಕೆಯ ದೈವ ಕೊರಗಜ್ಜ ಸನ್ನಿಧಿಗೆ ಜೊತೆ ಜೊತೆಯಲಿ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಭೇಟಿ ನೀಡಿ, ಕೊರಗಜ್ಜನಲ್ಲಿ ಇಷ್ಟಾರ್ಥ ಸಿದ್ದಿಗೆ ಬೇಡಿಕೊಂಡರು.ಇತ್ತೀಚಿನ ದಿನಗಳಲ್ಲಿ ಸೆಲೆಬ್ರೆಟಿಗಳ ದಂಡೇ ಕೊರಗಜ್ಜ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಸಿನಿಮಾ ನಟ, ನಟಿಯರು, ಉದ್ಯಮಿಗಳು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಕೊರಗಜ್ಜ ಕ್ಷೇತ್ರಗಳಿಗೆ ಭೇಟಿ

ಪ್ರವೀಣ್ ನೆಟ್ಟಾರ್ ಕೊಲೆಗೆ ಪ್ರತಿಕಾರವಾಗಿ ಸುರತ್ಕಲ್ ನಲ್ಲಿ ಫಾಝಿಲ್ ಕೊಲೆ ಹೇಳಿಕೆ ಆಘಾತಕಾರಿ : ದ.ಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ

ಪ್ರವೀಣ್ ನೆಟ್ಟಾರ್ ಕೊಲೆಗೆ ಪ್ರತಿಕಾರವಾಗಿ ಸುರತ್ಕಲ್ ನಲ್ಲಿ ಫಾಝಿಲ್ ಕೊಲೆ ನಡೆಸಿದ್ದೇವೆ ಎಂದು ಹಿಂದೂ ಮುಖಂಡ ವಿ ಹೆಚ್ ಪಿ ನಾಯಕ ಶರಣ್ ಪಂಪ್ವೆಲ್ ನೀಡಿರುವ ಹೇಳಿಕೆ ನಾಗರೀಕ ಸಮಾಜಕ್ಕೆ ಆಘಾತಕಾರಿ ವಿಚಾರವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಆತಂಕ ವ್ಯಕ್ತಪಡಿಸಿದ್ದಾರೆ. ಒರ್ವ ಹಿಂದೂ ಮುಖಂಡನಾಗಿ ಇಂತಹ ಹೇಳಿಕೆ ನ್ಯಾಯ ವ್ಯವಸ್ಥೆಗೆ ಎಸೆದಿರುವ ಸವಾಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರಂತೆ ಕ್ರಿಯೆಗೆ ತಕ್ಕ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಲೈವ್ (ನೇರ ಪ್ರಸಾರ) ಎಂಡೋಸ್ಕೋಪಿ ಮತ್ತು ಬಂಜೆತನ ಅಲ್ಟ್ರಾಸೌಂಡ್ ಕಾರ್ಯಾಗಾರ

ಮಣಿಪಾಲ, 30ನೇ ಜನವರಿ 2023: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ , ಅಂಗ ಸಂಸ್ಥೆಯಾಗಿರುವ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗವು 28 ಜನವರಿ 2023 ರಂದು ಶನಿವಾರ ಲೈವ್ (ನೇರ ಪ್ರಸಾರದ) ಎಂಡೋಸ್ಕೋಪಿ ಕಾರ್ಯಾಗಾರ ಮತ್ತು 29 ಜನವರಿ 2023 ಭಾನುವಾರ ಲೈವ್ (ನೇರ ಪ್ರಸಾರದ) ಬಂಜೆತನ ಅಲ್ಟ್ರಾಸೌಂಡ್ ಕುರಿತು ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಿತ್ತು. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡಾ

ಪುತ್ತೂರಿಗೆ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹ : ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯಿಂದ ಜಾಥಾ

ಪುತ್ತೂರು: ಪುತ್ತೂರಿಗೆ ಸುಸಜ್ಜಿತವಾದ ಮೆಡಿಕಲ್ ಕಾಲೇಜು ಸ್ಥಾಪನೆ ಆಗಬೇಕೆಂದು ಆಗ್ರಹಿಸಿ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾವು ಪುತ್ತೂರು ದರ್ಬೆಯಿಂದ ಬೊಳುವಾರು ತನಕ ನಡೆಯಿತು. ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮತ್ತು ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ ಅವರು ದರ್ಬೆಯಲ್ಲಿ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾದಲ್ಲಿ ಉಪಾಧ್ಯಕ್ಷರಾದ ಝೇವಿಯರ್ ಡಿ’ಸೋಜಾ, ಎ ರೂಪೇಶ್ ರೈ

ನಂದಾವರ ಅಷ್ಟಬಂಧ ಬ್ರಹ್ಮಕಲಶೋತ್ಸವ :ಅದ್ಧೂರಿಯಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ಇತಿಹಾಸ ಪ್ರಸಿದ್ದ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಡಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದ್ದೂರಿ ಹೊರೆಕಾಣಿಕೆ ಮೆರವಣಿಗೆಗೆ ಮಾರ್ನಬೈಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಚಾಲನೆ ನೀಡಿದರು. ಮಾರ್ನಬೈಲು ಮುಖ್ಯ ರಸ್ತೆಯ ಮೂಲಕ ದೇವಸ್ಥಾನಕ್ಕೆ ಸಾಗಿ ಬಂದ ಮೆರವಣಿಗೆಗೆ ಗೊಂಬೆ ಕುಣಿತ,

ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್‍ನ ಸಮಾರೋಪ ಸಮಾರಂಭ

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್‍ನ ಸಮಾರೋಪ ಹಾಗು ಉಡುಪಿ ಜಿಲ್ಲಾ ರಜತಮಹೋತ್ಸವದ ಸಮಾರೋಪ ಏಕಕಾಲದಲ್ಲಿಯೆ ನಡೆಯುತ್ತಿರುವುದು ಖುಷಿಯ ವಿಚಾರವಾಗಿದೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಪರಶುರಾಮ ಥೀಂ ಪಾರ್ಕ್‍ನ ಸಮಾರೋಪ ಸಮಾರಂಭ ಸಭೆಯಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದರು. ಉತ್ಸವಗಳು ಅರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲು ಸಹಕಾರಿಯಾಗಬೇಕು. ಕಾರ್ಕಳ ಉತ್ಸಾವವು ರಾಜ್ಯದಲ್ಲೆಲ್ಲ

ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್(ರಿ.) ಮಿಜಾರು. ದ.ಕ ಕರ್ನಾಟಕ : ತುರ್ತು ಸೇವಾ ಯೋಜನೆ ಹಸ್ತಾಂತರ

ಬಂಟ್ವಾಳ ತಾಲೂಕಿನ ಮಡವು ನಿವಾಸಿಯಾಗಿರುವ ಯಾದವ ಪೂಜಾರಿ ಇವರಿಗೆ ಅಪಘಾತವಾಗಿ ಕೈ ಹಾಗೂ ಹೊಟ್ಟೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದು ಈಗ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ(ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗೆ ನಮ್ಮ ತಂಡದಿಂದ 10,000/- ರೂಗಳ ಚೆಕ್ಕ್ ನ್ನುಶ್ರೀ ಗೋಪಾಲಕೃಷ್ಣ ದೇವಸ್ಥಾನ ಪುಂಜಾಲಕಟ್ಟೆ ಇಲ್ಲಿ ದೇವರ ಸನ್ನಿಧಿಯಲ್ಲಿ ಯಾದವ ಇವರ ಕುಟುಂಬದ ಪರವಾಗಿ ಸ್ವರ್ಣ ಸಂಜೀವಿನಿ ಮಡವು ತಂಡದ ಸ್ಥಾಪಕರಾದ ಸಚಿನ್ ಸುವರ್ಣ

ಕೊಲ್ಯ ಭೀಕರ ಕಾರು ಅಪಘಾತ : ಒರ್ವ ಸಾವು ಮೂವರಿಗೆ ಗಾಯ

ಮಂಜೇಶ್ವರ : ಗಡಿ ಪ್ರದೇಶಕ್ಕೆ ಸಮೀಪದ ಕೊಲ್ಯ ಎಂಬಲ್ಲಿ ಭಾನುವಾರದಂದು ರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿ ಇತರ ಮೂವರು ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡವರ ಪೈಕಿ ಒಬ್ಬನ ಸ್ಥಿತಿ ಚಿಂತಾಜನಕವಾಗಿರುವುದಾಗಿ ಮಾಹಿತಿ ಲಭಿಸಿದೆ. ರಾಷ್ಟ್ರೀಯ ಹೆದ್ದಾರಿ 66 ಕೊಲ್ಯದ ವಿಭಜಗಕ್ಕೆ ಕಾರು ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಕಾರು ಪೂರ್ಣವಾಗಿ ನುಜ್ಜು ಗುಜ್ಜಾಗಿದೆ. ಕುಂಜತ್ತೂರು ನಿವಾಸಿ

ಕಲ್ಲಾಪು : ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆ

ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಜ.30ರ ಸೋಮವಾರ ಬೆಳಗ್ಗೆ ನಡೆದಿದೆ.ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಕೂಡ ಪತ್ತೆಯಾಗಿದೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು,ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.ಬಜಾಲ್ ಅಥವಾ ಬಂಟ್ವಾಳ ಭಾಗದಲ್ಲಿ ನದಿಗೆ ಬಿದ್ದಿರುವ ಶಂಕೆ