Home Archive by category Fresh News (Page 46)

ಮಂಗಳೂರು: ಫೆ.12 ರಿಂದ 16 ವರಗೆ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಕುಂಭ ಮಹೋತ್ಸವ

ಮಂಗಳೂರು: ಕಳೆದ ವರ್ಷ ಸಂಪೂರ್ಣವಾಗಿ ನವೀಕರಣಗೊಂಡು ಸಂಭ್ರಮದಿಂದ ಬ್ರಹ್ಮಕಲಶೋತ್ಸವವನ್ನು ಆಚರಿಸಿರುವ ಕುಲಶೇಖರದ ಶ್ರೀ ವೀರನಾರಾಯಣ ದೇವರ ವರ್ಷಾವಧಿ ಜಾತ್ರೋತ್ಸವ “ಕುಂಭ ಮಹೋತ್ಸವ” ಎಂಬ ಪದನಾಮದಲ್ಲಿ ಆಚರಿಸಲ್ಪಡುತ್ತಿದ್ದು, ಈ ಬಾರಿಯ ಮಹೋತ್ಸವ ಫೆ. 12 ರಿಂದ 16ರ ತನಕ ಸಂಭ್ರಮದಿಂದ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಶ್ರೀ

ಮಂಗಳೂರು: ಇಂದು ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್‌ನಿಂದ ಸ್ವರ ಶ್ರದ್ಧಾಂಜಲಿ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ನಗರದ ಉರ್ವಸ್ಟೋರ್ ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್ ವತಿಯಿಂದ ಕನ್ನಡ ಮತ್ತು ಸಂಸ್ಕೃತ ಇಲಾಖೆ ಕರ್ನಾಟಕ ಸರಕಾರ ಸಹಯೋಗದೊಂದಿಗೆ ಸ್ವರ ಶ್ರದ್ಧಾಂಜಲಿ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಫೆ.೧೦ರಂದು ಸಂಜೆ ೫ ಗಂಟೆಗೆ ನಗರದ ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ.ಇತ್ತೀಚೆಗೆ ನಿಧನಹೊಂದಿದ ಹಿಂದೂಸ್ತಾನಿ ಸಂಗೀತ ದಿಗ್ಗಜರಾದ ಪ್ರಭಾ ಅತ್ರೆ,ಪಮಡಿತ್ ರಶೀದ್ ಖಾನ್ ಪಂಡಿತ್ ಕೇದಾರ್ ಬೋಡಸ್ ಅವರ ಸ್ಮರಣಾರ್ಥವಾಗಿ

ಮತ ಯತ್ನದ ಭಾರತ ರತ್ನ 

ಭಾರತ ರತ್ನ ಪ್ರಶಸ್ತಿಯ ಬಗೆಗೆ ಪ್ರಧಾನಿಯವರು ರಾಷ್ಟ್ರಪತಿಗಳಿಗೆ ಹೆಸರು ಸೂಚಿಸುತ್ತಾರೆ. ಅದಕ್ಕೆ ರಾಷ್ಟ್ರಪತಿ ಅವರು ಅಂಗೀಕಾರ ಮುದ್ರೆ ಒತ್ತುತ್ತಾರೆ. ಹಿಂದೆಲ್ಲ ಸಮಿತಿ ರಚನೆ, ಅಭಿಪ್ರಾಯ, ಮಂತ್ರಿ ಮಂಡಲದಲ್ಲಿ ಚರ್ಚೆ ಮೂಲಕ ಹೆಸರನ್ನು ಪ್ರಧಾನಿಯವರು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡುತ್ತಿದ್ದರು. ಈಗ ಪ್ರಧಾನಿ ಮೋದಿಯವರು ಕಿಸೆಯಿಂದ ತೆಗೆದುಕೊಟ್ಟಂತೆ ಭಾರತ ರತ್ನ ಎಂದು ಸದ್ದು ಮಾಡಿದ್ದಾರೆ. ಕ್ರಮ ಪ್ರಕಾರ ಕರ್ಪೂರಿ ಠಾಕೂರ್, ಆಮೇಲೆ ಲಾಲ್ ಕೃಷ್ಣ ಅಡ್ವಾಣಿ,

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ-ಮೂವರಿಗೆ ಗಾಯ

ಕೊಕ್ಕಡ:ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9ರಂದು ರಾತ್ರಿ ನಡೆದಿದೆ.ನೆಲ್ಯಾಡಿ ಪಡ್ಡಡ್ಕ ನಿವಾಸಿ ಬೆನ್ನಿ, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪದ ಮುಂಡ್ರೇಲು ನಿವಾಸಿಗಳಾದ ಮಹೇಂದ್ರ ಹಾಗೂ ಮಂಜುನಾಥ ಎಂಬವರು ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ರಿಂಗ್ ವರ್ಕ್ಸ್ ಕೆಲಸ ನಿರ್ವಹಿಸುತ್ತಿರುವ ಪಡ್ಡಡ್ಕ ನಿವಾಸಿ

ಬಂಟ್ವಾಳ: ಸೇವಾಂಜಲಿಯ ಕೆ.ಕೃಷ್ಣ ಕುಮಾರ್ ಪೂಂಜ ಅವರಿಗೆ ವಿಷ್ಣು ಪ್ರಸಾದ ಪ್ರಶಸ್ತಿ ಪ್ರದಾನ

ಬಂಟ್ವಾಳ: ತಾಲೂಕು ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ ಕೊಡ ಮಾಡುವ ವಿಷ್ಣು ಪ್ರಸಾದ ಪ್ರಶಸ್ತಿಯನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ ಅವರಿಗೆ ಪ್ರದಾನ ಮಾಡಲಾಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಸೇವೆಯಿಂದ ಸಾರ್ಥಕತೆ ಎಂಬ ಧ್ಯೇಯ

ಪುತ್ತೂರು: ಫೆ.11ರಂದು ಯುವ ಕ್ರೀಡಾ ಸಂಭ್ರಮ-2024

ಪುತ್ತೂರು: ಯುವ ಒಕ್ಕಲಿಗ ಗೌಡರ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2024 ಫೆ.11ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಕ್ರೀಡಾ ಸಂಯೋಜಕ ಮಾಧವ ಗೌಡ ಪೆರಿಯತ್ತೋಡಿ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿ, ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದೊಂದಿಗೆ ಯುವ ಒಕ್ಕಲಿಗ ಗೌಡ ಸೇವಾ ಸಂಘ

ತೇಲುವತ್ತ ತೇಲಿಗಳು

ರಾಹುಲ್ ಗಾಂಧಿಯವರ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆದಿದೆ. ರಾಹುಲ್ ಗಾಂಧಿಯವರು ಒಂದು ಕಡೆ ಮಾತನಾಡುತ್ತ ಮೋದಿಯವರು ಓಬಿಸಿ ಇತರ ಹಿಂದುಳಿದ ವರ್ಗಕ್ಕೆ ಸೇರಿಲ್ಲ. ಅವರು ವೈಶ್ಯ ಸಾಮಾನ್ಯ ವರ್ಗಕ್ಕೆ ಸೇರಿದವರು ಎಂದು ಹೇಳಿದರು. ಇದನ್ನು ಬಿಜೆಪಿ ಅಲ್ಲಗಳೆದಿದೆ. ಆದರೆ ಇದು ಒಂದಷ್ಟು ಸತ್ಯ ಒಂದಷ್ಟು ಸುಳ್ಳನ್ನು ಒಳಗೊಂಡಿದೆ. ತುಳುನಾಡಿನಲ್ಲಿ ಗಾಣಿಗರು ಇದ್ದಾರೆ. ಇವರು ಜನಿವಾರ ಧರಿಸುತ್ತಾರೆ. ಊರಿಗೆ ಎಣ್ಣೆ ತೆಗೆಯುವ ಗಾಣ ಹೊಂದಿರುವ ಜಾತಿಯವರು ಇವರು.

ಪುತ್ತೂರು: ಉದ್ಯೋಗ ನೀಡುವುದಾಗಿ ವಂಚನೆ: ಮೂವರು ಆರೋಪಿಗಳ ಸೆರೆ

ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್‌ ಕುಮಾರ್ ನಾಯ್ಕ(19) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ

ಕಾವೂರು: ಪ್ರಧಾನಿಗೆ ಪೋಸ್ಟ್ ಕಾರ್ಡ್ ಮೂಲಕ ಅಭಿನಂದನೆ ಸಲ್ಲಿಸುವ ಅಭಿಯಾನ

ಕಾವೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ವೈಭವವನ್ನು ಮರು ಸೃಷ್ಟಿಸಿ ಶ್ರೀ ಬಾಲರಾಮನ ಪ್ರತಿಷ್ಟೆಯನ್ನು ಮಾಡಿ ಕೋಟಿ ಕೋಟಿ ಜನರ ಆಶಯ ಈಡೇರಿಸಿದ್ದು, ಇದಕ್ಕಾಗಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಪ್ರಧಾನಿಗೆ ಸಾವಿರಾರು ಪೋಸ್ಟ್ ಕಾರ್ಡ್ ಮೂಲಕ ಅಭಿನಂದನೆ ಸಲ್ಲಿಸುವ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು, ಸಂತನಂತೆ ಬದುಕು ನಡೆಸುತ್ತಾ ಸನಾತನ ಧರ್ಮದ ಅಸ್ಮಿತೆಯ ಪ್ರತೀಕವಾದ ಶ್ರೀರಾಮನ ಮಂದಿರವನ್ನು

ಬಂಟ್ವಾಳ: ಫೆ. 10ರಿಂದ 13ರ ವರೆಗೆ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ

ಬಂಟ್ವಾಳ: ಫೆ. 10ರಿಂದ 13ರ ವರೆಗೆ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ ವಿಜೃಂಭಣೆಯಿಂದ ನಡೆಯಲಿದೆ.ಫೆಬ್ರವರಿ 10ರಂದು ಸಂಜೆ ಮಹಮ್ಮಾಯಿ ದೇವರ ರಾಶಿ ಪೂಜೆ, ನರ್ತನ ಸೇವೆ, ವಿಷ್ಣುಮೂರ್ತಿ ದೈವದ ನೇಮ, ಫೆಬ್ರವರಿ 11ರಂದು ಬೆಳಿಗ್ಗೆ ನಾಗದೇವರಿಗೆ ತಂಬಿಲ ಸೇವೆ, ಆಶ್ಲೇಷ ಬಲಿ, ಕ್ಷೇತ್ರದ ಎಲ್ಲಾ ದೈವಗಳಿಗೆ ಕಲಶ ಪರ್ವ, ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 8 ಕ್ಕೆ ಶ್ರೀ