Home Archive by category Fresh News (Page 53)

ಲೀಲಾವತಿ ಬೈಪಾಡಿತ್ತಾಯ ಯಕ್ಷಗಾನದಲ್ಲಿ ಹೊಸಬೆಳಕು ಮೂಡಿಸಿದ ಮೇರು ವ್ಯಕ್ತಿತ್ವ- ಡಾ.ಪ್ರಭಾಕರ ಜೋಶಿ

ಮಂಗಳೂರು,ಅ.12; ಭಾಗವತರಾದ ಲೀಲಾವತಿ ಬೈಪಾಡಿತ್ತಾಯ ಅವರು ಯಕ್ಷಗಾನದಲ್ಲಿ ಹೊಸಬೆಳಕು ಮೂಡಿಸಿದ ಮೇರು ವ್ಯಕ್ತಿತ್ವ ವನ್ನು ಹೊಂದಿದ್ದರು ಎಂದು ಯಕ್ಷಗಾನ ವಿದ್ವಾಂಸ ಡಾ.ಪ್ರಭಾಕರ ಜೋಶಿ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘದ ಸಹಯೋಗದೊಂದಿಗೆ ಮಂಗಳೂರಿನ ತುಳು ಭವನದಲ್ಲಿ ರವಿವಾರ ಹಮ್ಮಿಕೊಂಡ ಮಹಿಳಾ ಭಾಗವತೆ

ಪೌರ ಕಾರ್ಮಿಕರಿಗೆ ಸಂಸದರಿಂದ ಹೆಲಿಕಾಪ್ಟರ್ ಪ್ರವಾಸದ ವಿಶೇಷ ಅವಕಾಶ

ಹಾಸನ: ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ಹೆಲಿಕಾಪ್ಟರ್ ಪ್ರವಾಸದಲ್ಲಿ ನಗರ ಸ್ವಚ್ಛತೆಗೆ ದಿನರಾತ್ರಿ ಶ್ರಮಿಸುತ್ತಿರುವ ಮಹಾನಗರ ಪಾಲಿಕೆ ಪೌರ ಕಾರ್ಮಿಕರನ್ನು ಸಂಸದ ಶ್ರೇಯಸ್ ಪಟೇಲ್ ಗೌರವಿಸಿದ್ದಾರೆ. ನಗರದ ಹೊಳಪಿಗಾಗಿ ಶ್ರಮಿಸುವ ಈ “ಮೌನ ಯೋಧರ” ಸೇವೆಗೆ ಕೃತಜ್ಞತೆಯ ಸೂಚಕವಾಗಿ, ಸಂಸದರು ನಾಲ್ವರು ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ಪ್ರವಾಸದ ಅವಕಾಶ ನೀಡಿದ್ದಾರೆ. ಆಕಾಶದಲ್ಲಿ ಹಾರಾಡಿದ ಹೆಲಿಕಾಪ್ಟರ್ ಪ್ರವಾಸವು

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಉಪಕುಲಪತಿ ಡಾ. ವಿದ್ಯಾಶಂಕರ್ ಎಸ್ ಪತ್ನಿ ಸಮೇತ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಜಗತ್ತಿನ ಶ್ರೇಷ್ಟ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಉಪಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್ ಅವರು ಪತ್ನಿಯೊಂದಿಗೆ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಡಾ.

ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನೆ

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ.ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್ ಕೆ ಹನೀಫ್ ಸಂಪಾಜೆ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಜಿ ಕೆ ಹಮೀದ್ ಗೂನಡ್ಕ, ಜಗದೀಶ್

ಎನ್ನೆಂಸಿ; ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ನೆಹರೂ ಮೆಮೋರಿಯಲ್ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾ ಸಭೆ ಅ.10ನೇ ಶುಕ್ರವಾರದಂದು ನಡೆಯಿತು. ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾತನಾಡಿ ಕಾಲೇಜಿನ ಸಮಗ್ರ ಅಭಿವೃದ್ಧಿಯನ್ನು ಬೆಳೆಸುವಲ್ಲಿ ರಕ್ಷಕ ಶಿಕ್ಷಕ ಸಂಘ ಬಹಳ ಮುಖ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ಪೋಷಕರ ಜವಾಬ್ದಾರಿಗಳ ಕುರಿತು ಮಾತನಾಡಿ ಮಾರ್ಗದರ್ಶನ

ಕಾಪು ತಾಲೂಕು ಏಳನೇ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಹೆಜಮಾಡಿಯ ಬಿಲ್ಲವ ಸಂಘದಲ್ಲಿ ಪೂರ್ವಭಾವಿ ಸಭೆ

ಹೆಜಮಾಡಿ:ಏಳನೇ ಕಾವು ತಾಲೂಕು ಸಾಹಿತ್ಯ ಸಮ್ಮೇಳನವು ನ. 15 ರಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ನಡೆಯಲಿದ್ದು,ಆ ಪ್ರಯುಕ್ತ ಇಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ಪೂರ್ವಭಾವಿ ಸಭೆಯು ನಡೆಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅವರು ಮಾತನಾಡಿ ಸಾಹಿತ್ಯ ಸಮ್ಮೇಳನ ಯಶಸ್ವಿ ಗೊಳಿಸೋಣ ಹಾಗೂಸಾಮಾಜಿಕ ನ್ಯಾಯ, ಪ್ರತಿಭಾ ನ್ಯಾಯ, ಪ್ರಾದೇಶಿಕ ನ್ಯಾಯವನ್ನು ಪ್ರತಿಪಾದಿ ಸುತ್ತಲೇ ಹಿಂದಿನ ಕಾಪು ತಾಲೂಕು ಸಮ್ಮೇಳನಗಳನ್ನು

ಇಬ್ಬರು ಯುವತಿಯರು ನಾಪತ್ತೆ : ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಇಬ್ಬರು ಯುವತಿಯರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ (23ವ) ಮತ್ತು ಮಂಡ್ಯ ಪಾಂಡವಪುರ ನಿವಾಸಿ ದಿವ್ಯಾ (20ವ) ನಾಪತ್ತೆಯಾದವರು. ಇಬ್ಬರು ಮಂಡ್ಯದ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ನಾಲ್ಕು ದಿನಗಳ ಹಿಂದೆ ಅವರಿಬ್ಬರೂ ಮೋನಿಶಾ ಮನೆಗೆ ಬಂದಿದ್ದರು. ಅಲ್ಲಿಂದ ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರೂ ಮೂಗಿಯಾಗಿರುತ್ತಾರೆ (ಮಾತನಾಡಲು

ಪುತ್ತೂರು: ಸಿಡಿಲು ಬಡಿದು ಯುವಕ ಸಾವು

ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ.ಆನಡ್ಕ ನಿವಾಸಿ ವಾಮನ (೪೦) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30 ರ ವೇಳೆಗೆ ತನ್ನ ಕೆಲಸ ಮುಗಿಸಿ ಮನೆಗೆ ಬಂದು ಮನೆಯ ಮುಂಭಾಗದಲ್ಲಿ ಕುಳಿತುಕೊಂಡಿದ್ದ ವೇಳೆಯಲ್ಲಿ ಬಡಿದ ಸಿಡಿಲು ಗಂಭೀರ ಗಾಯಗೊಂಡು

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ನಾಟಕ ಪ್ರದರ್ಶನ

ಬೆಂಗಳೂರು:ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಲಯನ್ಸ್ ಕ್ಲಬ್ ವತಿಯಿಂದ ಕಿರು ನಾಟಕ ಪ್ರದರ್ಶನ ಬೆಂಗಳೂರಿನ ಟಿ.ಜಾನ್ ನರ್ಸಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಯಿತು. ವೃತ್ತಿಪರ ರಂಗಭೂಮಿ ಕಲಾವಿದರು ಪ್ರದರ್ಶಿಸಿದ ಈ ನಾಟಕವು ಒತ್ತಡ, ಗಲಾಟೆ ಹಾಗೂ ಮನೋವೈಕಲ್ಯಗಳಂತಹ ವಿಷಯಗಳು ಮಾನಸಿಕ ಆರೋಗ್ಯದ ಮೇಲೆ ಬೀರುವ ಪ್ರಭಾವವನ್ನು ಮನಮುಟ್ಟುವಂತೆ ತೋರಿಸಿತು.ಸುಮಾರು 300 ವಿದ್ಯಾರ್ಥಿಗಳು, ಬೋಧಕ ವರ್ಗ ಮತ್ತು ಲಯನ್ಸ್ ಸದಸ್ಯರು

ಬಂಟ್ವಾಳ:ಜಾತಿ ಗಣತಿಗೆ ಹೋದ ಶಿಕ್ಷಕನ ಮೇಲೆ ಜೇನುನೊಣ ದಾಳಿ

ಬಂಟ್ವಾಳ: ಜಾತಿ ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕರೋರ್ವರು ಜೇನು ನೊಣದ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡ ಘಟನೆ ಸಜೀಪಮುನ್ನೂರು ಗ್ರಾಮದ ಆಲಾಡಿ ಬಳಿ ಶನಿವಾರ ನಡೆದಿದೆ. ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಶಿಕ್ಷಕ ವೆಂಕಟರಮಣ ಆಚಾರ್ ಜೇನು ನೊಣದ ದಾಳಿಗೊಳಗಾಗಿದ್ದು ಚೇತರಿಸಿಕೊಂಡಿದ್ದಾರೆ. ಶಿಕ್ಷಣ ವೆಂಕಟರಮಣ ಆಚಾರ್ ಅವರು ಸಜೀಪಮುನ್ನೂರು ಗ್ರಾಮದ ಆಲಾಡಿ, ಶಾರಾದನಗರದ ಬಳಿ ಗಣತಿ ಕಾರ್ಯಕ್ಕೆ ತೆರಳಿದ್ದ ವೇಳೆ ಅಲ್ಲಿನ