Home Archive by category Fresh News (Page 617)

ಕಾಠ್ಮಂಡು: 72 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ

ನೇಪಾಳದ ಕಾಠ್ಮಂಡುವಿನಿಂದ ಹೊರಟ ವಿಮಾನವೊಂದು ಪೋಖರಾ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದಿದ್ದು, ವಿಮಾನದಲ್ಲಿದ್ದ 45ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಯೇತಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವು ಪೋಖರಾ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗುವ ವೇಳೆ ಪತನವಾಗಿದೆ. ಇದುವರೆಗೆ 45 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ವಿಮಾನದಲ್ಲಿ 68 ಪ್ರಯಾಣಿಕರು

ಉಪ್ಪಿನಂಗಡಿ : ಪುರುಷರ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ಮಂಗಳೂರು ವಿವಿಯು ಐದು ದಿನಗಳ ಕಾಲ ಆಯೋಜಿಸಿರುವ ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅದ್ದೂರಿಯ ಚಾಲನೆ ದೊರಕಿದೆ. ರಾಷ್ಟ್ರ ಧ್ವಜದ ಬಣ್ಣವನ್ನು ಸಂಕೇತಿಸುವ ಬಲೂನುಗಳನ್ನು ಗಗನದೆತ್ತರಕ್ಕೆ ಹಾರಿಬಿಡುವ ಮೂಲಕ ಶಾಸಕ ಹಾಗೂ ಕಾಲೇಜಿನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಸಂಜೀವ ಮಠಂದೂರು ಅವರು ಪಂದ್ಯಾಟಕ್ಕೆ ಚಾಲನೆ ನೀಡಿದರು. ಅದರೊಂದಿಗೆ ನೂರಾರು ಬಣ್ಣಬಣ್ಣದ ಬಲೂನುಗಳನ್ನು

ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ :ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮ

ಮಂಗಳೂರಿನ ಅದ್ಯಪಾಡಿ ಬೈಲು ಮಾಗಣಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್‍ನಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವವು ಫೆ2ರಿಂದ ಫೆ.9ರ ವರೆಗೆ ನಡೆಯಲಿದ್ದು, ಆ ಪ್ರಯುಕ್ತ ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮವು ನಗರದ ಶ್ರೀ ಕ್ಷೇತ್ರ ಶರವು ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಂಗಳೂರು ನಗರದಲ್ಲಿರುವ ಶ್ರೀ ಕ್ಷೇತ್ರ ಶರವು ದೇವಸ್ಥಾನದ ವಠಾರದಲ್ಲಿ ಹೊರೆಕಾಣಿಕೆ ಕಾರ್ಯಾಲಯದ

ಮಂಗಳೂರಿನಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

ಮಂಗಳೂರಿನಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದಲ್ಲಿಂದು ಪ್ರತಿಭಟನೆ ನಡೆಸಿದರು.ಮಂಗಳೂರು ಕ್ಲಾಕ್ ಟವರ್ ಎದುರು ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಧಿಕ್ಕಾರ ಕೂಗಿ ಡ್ರಗ್ಸ್ ನಿಯಂತ್ರಣಕ್ಕೆ ಆಗ್ರಹಿಸಿದರು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ನಾಯಕರು ಗಡಿ ಭಾಗದಿಂದ ಮಂಗಳೂರಿಗೆ ಸರಬರಾಜು ಆಗುತ್ತಿರುವ ಮಾದಕದ್ರವ್ಯಕ್ಕೆ ತಡೆ ಹಾಕಬೇಕು ಎಂದು ಆಗ್ರಹಿಸಿದರು.ಡ್ರಗ್ಸ್ ಜಾಲಕ್ಕೆ

ಪುತ್ತೂರಿಗೆ ಸಮಗ್ರ ಕುಡಿಯುವ ನೀರು ಪೂರೈಕೆ : ನಗರಸಭೆಯ ಪರಿಶೀಲನಾ ಸಭೆಯಲ್ಲಿ ತೀವ್ರ ಟೀಕೆ

ಪುತ್ತೂರು: ಪುತ್ತೂರಿಗೆ ಸಮಗ್ರ ಕುಡಿಯುವ ನೀರು ಪೂರೈಕೆ ಮಾಡಲು ಸುಮಾರು 117 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಜಲಸಿರಿ ಯೋಜನೆಯ ಕಾಮಗಾರಿಯಲ್ಲಿ ಹೆಜ್ಜೆ ಹೆಜ್ಜೆಗೂ ಸಾರ್ವಜನಿಕರಿಗೆ ಕಿರಿಕಿರಿ ಆಗುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು, ಕಾಮಗಾರಿ ಅನುಷ್ಠಾನದಲ್ಲಿ ವ್ಯಾಪಕ ಅಸಮರ್ಪಕತೆ ತೋರುತ್ತಿರುವ ಅಂಶಗಳು ಬಯಲಾಗಿವೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರಸಭೆಯಲ್ಲಿ ನಡೆದ ಜಲಸಿರಿ ಯೋಜನೆಯ ಪರಿಶೀಲನಾ ಸಭೆಯಲ್ಲಿ ಈ ಅಂಶ ತೀವ್ರ

ಆಲೂರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು

ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಪಾಳ್ಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮುಂಜಾನೆ ವೈದ್ಯ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದ ಅಮಾನವೀಯ ಘಟನೆ ನೆಡೆದಿದೆ.ಇದಕ್ಕೆ ಹಲವು ಭಾರಿ ಇಂತಹ ಘಟನೆ ಪ್ರತ್ಯಕ್ಷವಾದರೂ ಹಿರಿಯ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳದಿರುವುದೇ ಪ್ರಮುಖ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂಭಾಗ ರಸ್ತೆತಡೆದು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು ನಂತರ ಪೆÇೀಲಿಸ್ ಮಧ್ಯಸ್ಥಿಕೆಯಿಂದ ಸಮಾಧಾನಗೊಳಿಸಿದರು

ಮದುವೆ ನಿಶ್ಚಯವಾಗಿದ್ದ ಯುವಕ ಆತ್ಮಹತ್ಯೆ

ಮೂಡುಬಿದಿರೆ: ಮದುವೆ ನಿಶ್ಚಯವಾಗಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಇರುವೈಲಿನಲ್ಲಿ ನಡೆದಿದೆ.ಇರುವೈಲು ಗುಂಡಾಲ ಮನೆಯ ಸದಾನಂದ ಶೆಟ್ಟಿ ಅವರ ಪುತ್ರ ಪ್ರತಾಪ್ ಶೆಟ್ಟಿ( 30)ಆತ್ಮಹತ್ಯೆ ಮಾಡಿಕೊಂಡ ಯುವಕ. ಕೃಷಿಕನಾಗಿದ್ದ ಈತ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಜ.22ರಂದು ಮದುವೆ ನಿಶ್ಚಯವಾಗಿತ್ತು. ಸಾಧು ಸ್ವಭಾವದ ಯುವಕನಾಗಿದ್ದ ಈತನಿಗೆ ಆರ್ಥಿಕವಾಗಿ ತೊಂದರೆ ಇರಲಿಲ್ಲ.ಆದರೆ ವಿಡಿಯೋ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

ಮಣಿಪಾಲ, 13ನೇ ಜನವರಿ 2023: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR), ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ (YDR) ಹಂತ III ಮತ್ತು ವೈದ್ಯಕೀಯ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲವು ಮಕ್ಕಳ ವಿಭಾಗ ಮತ್ತು ಮಕ್ಕಳ ಎಂಡೋಕ್ರೈನಾಲಜಿ ಕ್ಲಿನಿಕ್, ಮಣಿಪಾಲ ಇದರ ಸಹಯೋಗದೊಂದಿಗೆ ಯುವ ಮಧುಮೇಹಿಗಳಿಗಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಿತ್ತು. ಅನೇಕ ಯುವ ಮಧುಮೇಹಿಗಳು (2-25 ವರ್ಷ

ಜನವರಿ 15:ಮಂಗಳೂರಿಗೆ ಸಂಪೂಜ್ಯ ಸ್ವಾಮಿಪೂರ್ಣಾಮೃತಾನಂದ ಪುರಿ

ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಹಿರಿಯ ಶಿಷ್ಯ ಹಾಗೂ ಮಠದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಂಪೂಜ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿಯವರು ಜನವರಿ15 ರಂದು ಭಾನುವಾರ ಮಂಗಳೂರಿಗೆ ಆಗಮಿಸಲಿರುವರು.ಅಂದು ಸಂಜೆ ಮಂಗಳೂರು ನಗರದ ಬೋಳೂರಿನಲ್ಲಿರುವ ಅಮೃತ ವಿದ್ಯಾಲಯಂನಲ್ಲಿ ಜರುಗುವ ಆಧ್ಯಾತ್ಮಿಕ ಕಾರ್ಯಕ್ರಮ ” ಅಮೃತ ವೈಭವ” ದಲ್ಲಿ ಭಾಗವಹಿಸಲಿರುವರು. ಸ್ವಾಮಿನಿ ಮಂಗಳಾಮೃತ ಪ್ರಾಣ ಇವರ ಉಪಸ್ಥಿತಿಯಲ್ಲಿ ,ಸ್ವಾಮೀಜಿಯವರ ಸಾರಥ್ಯದಲ್ಲಿ ಶ್ರೀ