Home Archive by category Fresh News (Page 649)

5, 8ನೇ ತರಗತಿಗೆ ಪೂರಕ ಪರೀಕ್ಷೆ ಹಿಂಪಡೆದ ಶಿಕ್ಷಣ ಇಲಾಖೆ

ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಹಿಂದೇಟು ಹಾಕಿದೆ. ಈ ಹಿಂದೆ ಮಾಡಿರುವ ಆದೇಶದ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಜೂನ್‌ ಹಾಗೂ ಜುಲೈ ತಿಂಗಳ ಅಂತ್ಯದಲ್ಲಿ ಪರಿಹಾರ ಬೋಧನೆ ಮಾಡಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ

ಹಾಡು ಹಗಲೆ ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ

ನವದೆಹಲಿ: ಬೈಕ್ ನಲ್ಲಿ ಬಂದ ಇಬ್ಬರು ಯುವಕರು 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಆತಂಕಕಾರಿ ಘಟನೆ ನೈಋತ್ಯ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ. ಆ್ಯಸಿಡ್ ದಾಳಿಯ ಪರಿಣಾಮ ಬಾಲಕಿಯ ಮುಖ ಹಾಗೂ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಬಾಲಕಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರಸ್ತೆ ಬದಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದು, ಈ

ಮಂಗಳೂರಿನ ಪಚ್ಚನಾಡಿ ಕಾರ್ಮಿಕ ನಗರದಲ್ಲಿಅಕ್ರಮ ಸರ್ಕಾರಿ ನಿವೇಶನ ಹಂಚಿಕೆ ವಿರುದ್ಧ ಪ್ರತಿಭಟನೆ

ಮಂಗಳೂರಿನ ಪಚ್ಚನಾಡಿ ಕಾರ್ಮಿಕ ನಗರದಲ್ಲಿ ಅಕ್ರಮ ಸರಕಾರಿ ನಿವೇಶನ ಹಂಚಿಕೆ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಗ್ರಾಮದ ಕಾರ್ಮಿಕನಗರದ ಸರ್ವೇ ನಂ 158ರಲ್ಲಿ ಸುಮಾರು ಎರಡು ಎಕರೆ ಸರಕಾರಿ ಜಾಗವಿದ್ದು ಸದ್ರಿ ಸ್ಥಳದಲ್ಲಿ ಸುಮಾರು 50 ವರುಷಗಳಿಂದ ಒಂದು ಸಾರ್ವಜನಿಕ ವೇದಿಕೆಯಿದೆ. ಈ ವೇದಿಕೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು ಮತ್ತು ಸ್ಥಳೀಯ ಹುಡುಗರು ಈ

ಡಿ. 24,25 ರಂದು ಶೂನ್ಯ ತ್ಯಾಜ್ಯ ಪರಿಕಲ್ಪನೆಯಡಿಯಲ್ಲಿ ಕೋಟಿ-ಚೆನ್ನಯ ಕಂಬಳ

ಮೂಡುಬಿದಿರೆ ಡಿ. 24,25ರಂದು ನಡೆಯುವ ಕೋಟಿ-ಚೆನ್ನಯ ಕಂಬಳದಲ್ಲಿ ಏಕ ಬಳಕೆಯ ವಸ್ತುಗಳನ್ನು ಬಳಸದ ಮರುಬಳಕೆಯ ವಸ್ತುಗಳನ್ನು ಬಳಸುವ ಮೂಲಕ ಶೂನ್ಯ ತ್ಯಾಜ್ಯದ ಕಂಬಳವನ್ನಾಗಿ ಆಯೋಜಿಸಿ ಮಾದರಿಯಾಗುವಂತೆ ಮಾಡಲು ತಾವು ಸಂಪೂರ್ಣವಾಗಿ ಬೆಂಬಲವನ್ನು ನೀಡುತ್ತೇವೆಂದು ವ್ಯಾಪಾರಸ್ಥರ ಪರವಾಗಿ ಭರತ್ ಅವರು ಭರವಸೆಯನ್ನು ನೀಡಿದ್ದಾರೆ. ಒಂಟಿಕಟ್ಟೆಯ ರಾಣಿ ಅಬ್ಬಕ ಸಂಸ್ಕೃತಿ ಗ್ರಾಮದಲ್ಲಿ ನಡೆಯಲಿರುವ ಹೊನಲು ಬೆಳಕಿನ ಕಂಬಳವನ್ನು ಶೂನ್ಯ ತ್ಯಾಜ್ಯ ಮಾಡುವ ನಿಟ್ಟಿನಲ್ಲಿ ಕಂಬಳ

ಕುಂದಾಪುರ: ಡಿ.19ರಂದು ಎನ್‍ಪಿಎಸ್ ವಿರುದ್ಧ ಸರ್ಕಾರಿ ನೌಕರರ ಮುಷ್ಕರ

ಎಪ್ರಿಲ್ 1, 2006ರಿಂದ ನಿಯೋಜನೆಗೊಂಡ ಸರ್ಕಾರಿ ನೌಕರರಿಗೆ ಸರ್ಕಾರ ನಿಗಧಿಪಡಿಸಿದ ಷೇರು ಮಾರುಕಟ್ಟೆ ಆಧಾರಿತ ಪಿಂಚಣಿ ಯೋಜನೆಯಾದ ನ್ಯಾಷನಲ್ ಪೆನ್ಷನ್ ಸ್ಕೀಂ (ಓPS) ವಿರೋಧಿಸಿ ಎನ್.ಪಿ.ಎಸ್. ನೌಕರರ ಹೋರಾಟ ವೇಗ ಪಡೆಯುತ್ತಿದೆ. ನವೆಂಬರ್ 23ರಂದು ಉಡುಪಿಯಲ್ಲಿ ನಡೆದ ಕಾಲ್ನಡಿಗೆ ಪ್ರತಿಭಟನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ ರಾಜ್ಯ ಮಟ್ಟದ ಸರ್ಕಾರಿ ಎನ್ .ಪಿ.ಎಸ್ ನೌಕರರು ‘ಮಾಡು ಇಲ್ಲವೇ ಮಡಿ’ ಎನ್ನುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

ಶ್ರೀಮತಿ ಶಾಂತಾ ಕುಂಟಿನಿ ಇವರಿಗೆ ಕಾಶಿ ಕನ್ನಡದ ಕಂಪು “ಸಾಧನ ಶ್ರೀ ” ಪ್ರಶಸ್ತಿ ಪುರಸ್ಕಾರ

ಶ್ರೀ ಕಾಶಿ ಜಗದ್ಗುರು ಚಂದ್ರಶೇಖರಶಿವಾಚಾರ್ಯ ಮಹಾ ಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ಜಂಗಮವಾಡಿಮಠ ವಾರಣಾಸಿ ಕಾಶಿ ಕನ್ನಡದ ಕಂಪು ಸರಣಿಯ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ಶಾಂತಾ ಕುಂಟಿನಿ ಇವರ ಸಾಹಿತ್ಯ ಹಾಗೂ ಸಂಘಟನೆ ಕಾರ್ಯವನ್ನು ಗುರುತಿಸಿ “ಸಾಧನಶ್ರೀ ” ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಎಂದುಕಾರ್ಯಕ್ರಮದ ಆಯೋಜಕರುತಿಳಿಸಿರುತ್ತಾರೆ..ಅಂತೆಯೇ ಈ ಕಾರ್ಯಕ್ರಮವನ್ನು ಕಥಾ ಬಿಂದು

ಉಡುಪಿಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಹಾಗೂ ಸಮಾನ ಮನಸ್ಕರ ಸಭೆ

ಸುರತ್ಕಲ್ ನಿಂದ ತೆರವುಗೊಳಿಸಿರುವ ಅಕ್ರಮ ಟೋಲ್ ಗೇಟ್ ಅನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿಲೀನಗೊಳಿಸಿ ಸುರತ್ಕಲ್ ಟೋಲ್ ಸುಂಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದ್ಯಾದೇಶ ಜಾರಿಗೊಳಿಸಲು ತೆರಮೆರೆಯಲ್ಲಿ ಪ್ರಯತ್ನಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ನಡೆಸಬೇಕಾದ ಹೋರಾಟದ ಕುರಿತು ಚರ್ಚಿಸಲು ಉಡುಪಿ ಅಜ್ಜರಕಾಡಿನಲ್ಲಿ ಇಂದು ಸಮಾನ ಮನಸ್ಕ ಸಂಘಟನೆಗಳ ಸಭೆ ನಡೆಯಿತು. ವಿನಯ ಕುಮಾರ್ ಸೊರಕೆ, ಮುನೀರ್ ಕಾಟಿಪಳ್ಳ, ಅಭಯ ಚಂದ್ರ

ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಬಗ್ಗೆ ಮನವಿ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಡಿಸೆಂಬರ್ 19 ರಂದು ಬೆಳಗಾವಿ ವಿಧಾನಸೌಧದ ಎದುರುಗಡೆ ಗ್ರಾಮ ಪಂಚಾಯಿತಿ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಹೋರಾಟದ ಬಗ್ಗೆ ಬೆಂಬಲ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯವರಾದ ಶ್ರೀ ಡಾ.ಕುಮಾರ್ IAS ಇವರಿಗೆ ಮನವಿಯನ್ನು ನೀಡಲಾಯಿತು. ಮಾನ್ಯ ಮುಖ್ಯ

ಲಾರಿಯೊಂದು ಢಿಕ್ಕಿ ಹೊಡೆದು ಆನೆ ಸಾವು

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂಬುವರನ್ನು ಬಂಧಿಸಲಾಗಿದೆ.. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 766ಯಲ್ಲಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆಯೊಂದು ಮಂಗಳವಾರ ರಾತ್ರಿ ಮೃತಪಟ್ಟಿದೆ. ಮಂಗಳವಾರ ರಾತ್ರಿ 8

ಅಸೈಗೋಳಿ:ಮೆಡಿಕಲ್ ರೆಪ್ ಆತ್ಮಹತ್ಯೆ

ಉಳ್ಳಾಲ: ಯುವಕನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸೈಗೋಳಿ ಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.ಅಸೈಗೋಳಿ ನಿವಾಸಿ ಜಯರಾಮ್ ಶೆಟ್ಟಿ ಎಂಬವರ ಪುತ್ರ ಅಭಿಲಾಷ್(35) ಆತ್ಮಹತ್ಯೆಗೆ ಶರಣಾದವರು. ಬೆಳಿಗ್ಗೆ ಎಂದಿನಂತೆ ವಾಕಿಂಗ್ ಗೆ ತೆರಳಿದ್ದ ಅಭಿಲಾಷ್ , ವಾಪಸ್ಸಾಗಿ ಮನೆಯಲ್ಲೆ ಇದ್ದರು. ತಾಯಿ ಮದುವೆಗೆಂದು ತೆರಳಿದ್ದ ಸಂದರ್ಭ, ತಂದೆ ಮನೆಯ ಹೊರಗೆ ಕುಳಿತಿದ್ದ ಸಂದರ್ಭ ಅಭಿಲಾಷ್ ಮನೆಯ ಕೋಣೆಯೊಳಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ