Home Archive by category Fresh News (Page 650)

ತ್ಯಾಜ್ಯ ಗುಂಡಿಗೆ ಬಿದ್ದು ಎರಡು ವರ್ಷ ಪ್ರಾಯದ ಬಾಲಕನ ಧಾರುಣ ಅಂತ್ಯ

ಮಂಜೇಶ್ವರ : ತ್ಯಾಜ್ಯ ಗುಂಡಿಗೆ ಬಿದ್ದು ಎರಡು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ನಗರದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಸಮದ್ ಎಂಬವರ ಪುತ್ರ ಶೆಹಝಾದ್ (2) ಸಾವನ್ನಪ್ಪಿದ ದುರ್ದೈವಿ. ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿದೆ. ಶುಚೀಕರಣಕ್ಕಾಗಿ ತೆರೆದಿಟ್ಟ ಮನೆಯ ಅಂಗಳದ ಹಿಂಬಾಗದಲ್ಲಿರುವ ತ್ಯಾಜ್ಯ ಗುಂಡಿಗೆ ಬಾಲಕ ಆಟವಾಡುತ್ತಿರುವ

ಡಿ.16, 17ರಂದು ಮಂಗಳೂರು ಟೆಕ್ನೋವಾನ್‍ಝ

ಕರ್ನಾಟಕ ಡಿಜಿಟಲ್ ಎಕಾನಮಿ, ಮಿಷನ್, ಕೆ-ಟೆಕ್ ಮತ್ತು ಬಿಯಾಂಡ್ ಬೆಂಗಳೂರು ಸಹಯೋಗದಲ್ಲಿ ಮಂಗಳೂರು ಟೆಕ್ನೋವಾನ್‍ಝ ಡಿಸೆಂಬರ್ 16 ಮತ್ತು 17ರಂದು ನಗರದ ಡಾ. ಟಿಎಂಎಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ನಡೆಯಲಿದೆ. ಡಿ.17ರಂದು ಬೆಳಿಗ್ಗೆ 6.30ಕ್ಕೆ ವಾಕಥಾನ್ ನಡೆಯಲಿದೆ. ಬೆಳಗ್ಗೆ 10ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಇಲೆಕ್ಟ್ರಾನಿಕ್ಸ್, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ

ಬಂಟ್ವಾಳ : ಶಾಲಾ ಮಕ್ಕಳ ಕಿಡ್ನಾಪ್ ಯತ್ನ? : ಸೂಕ್ತ ತನಿಖೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಮನವಿ

ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ದ.ಕ.ಜಿ.ಪ.ಹಿ.ಪ್ರಾ ಶಾಲೆ ಕುಟ್ಟಿಕಳ ಶಾಲೆಯ ಮಕ್ಕಳನ್ನು ಅಪಹರಣ ಮಾಡಲು ವಿಫಲಯತ್ನ ಮಾಡಿದವರನ್ನು ತಕ್ಷಣ ಪತ್ತೆ ಹಚ್ಚಿ ಸೂಕ್ತ ತನಿಖೆ ನಡೆಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ಮನವಿಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ್, ವಿಶ್ವ ಹಿಂದೂ ಪರಿಷದ್ ಪ್ರಖಂಡ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ, ಪ್ರಖಂಡ

ಟ್ರಾಕ್ಟರ್‍ಗೆ ಕಂಟೈನರ್ ಲಾರಿ ಢಿಕ್ಕಿ ; ಟ್ರಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರು

ಉಪ್ಪಿನಂಗಡಿ: ಓವರ್‍ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್‍ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಟ್ರಾಕ್ಟರ್‍ನ ಹಿಂಬದಿಯ ಟ್ರಾಲಿ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ್ದು, ಘಟನೆಯಿಂದ ಅದೃಷ್ಟವಶಾತ್ ಟ್ರಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ನೆಲ್ಯಾಡಿ ಕಡೆಯಿಂದ ಬಿ.ಸಿ.ರೋಡು ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿಯು ಅದೇ ಮಾರ್ಗವಾಗಿ

ಡಿ.17ರಂದು ಬೆಳ್ತಂಗಡಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

ಇದೇ ತಿಂಗಳ 17 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ ಎಂದು ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಮಾದ್ಯಮದ ಜೊತೆ ಮಾತನಾಡಿ ಈ ತಿಂಗಳ 17ರಂದು ವಸಂತ ವಿನ್ಯಾಸ ಪುಸ್ತಕ ಬಿಡುಗಡೆ ಗೊಳಿಸಿ ನಂತರ ಕಾಂಗ್ರೆಸ್ ವತಿಯಿಂದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.ಬೆಳ್ತಂಗಡಿ ಕಾಂಗ್ರೆಸ್ ಕಾರ್ಯಕರ್ತರ ಹುರಿದುಂಬಿಸಲು ಪಕ್ಷ ಬಲವರ್ಧನೆ ಮತ್ತು ಪಕ್ಷ

ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತಾರೆ : ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ

ಕುಂದಾಪುರ : ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್

ಜಾಂಬೂರಿಗೆ ಮೆರಗು ನೀಡಲಿರುವ ಕೃಷಿ ,ವಿಜ್ಞಾನ ಮೇಳ

ಮೂಡುಬಿದಿರೆ: ದೇಶಿಯ ಸಂಸ್ಕೃತಿಯನ್ನು ಆಳ್ವಾಸ್ ನುಡಿಸಿರಿ, ವಿರಾಸತ್ ಮುಖೇನ ಕಳೆದ ಎರಡುವರೆ ದಶಕಗಳಲ್ಲಿ ಸಾದರಪಡಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಈ ಬಾರಿ ಒಂದು ವಾರಗಳ ಅಂತಾರಾಷ್ಟ್ರೀಯ ಸ್ಕೌಟ್‍ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯನ್ನು ಆಯೋಜಿಸುತ್ತಿದೆ. ಈ ಬಾರಿ ಜಾಂಬೂರಿಗೆ ವಿಶೇಷವಾಗಿ ಕೃಷಿ ಮತ್ತು ವಿಜ್ಞಾನ ಮೇಳಗಳು ವಿಶೇಷ ಮೆರುಗು ನೀಡಲಿದೆ. ಕೃಷಿ ಮಹತ್ವವನ್ನು ಬಿಂಬಿಸುವ ನಿಟ್ಟಿನಲ್ಲಿ ಜಾಂಬೂರಿಯಂದು ಆಳ್ವಾಸ್ ಆವರಣದ ಸುಮಾರು 12 ಎಕರೆ

ಆಟೋ ಮತ್ತು ಸ್ಕೂಟರ್ ಢಿಕ್ಕಿ-ಪ್ರಗತಿಪರ ಕೃಷಿಕ ದಾರುಣ ಅಂತ್ಯ – belthangady

ಬೆಳ್ತಂಗಡಿ: ಆಟೋ ಮತ್ತು ಸ್ಕೂಟರ್ ಪರಸ್ಪರ ಢಿಕ್ಕಿ ಹೊಡೆದು ಪ್ರಗತಿಪರ ಕೃಷಿಕರೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿಯ ಕಾಶಿಪಟ್ಟ ಗ್ರಾಮದಲ್ಲಿ ನಡೆದಿದೆ.ಕೊಕ್ರಾಡಿ- ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಹಂಬಡ ನಿವಾಸಿ,ನಿತ್ಯಾನಂದ ಪೂಜಾರಿ (48) ಮೃತಪಟ್ಟ ದುರ್ದೈವಿ. ನಿತ್ಯಾನಂದ ಪೂಜಾರಿ ಅವರು ಶಿರ್ತಾಡಿ ಕಡೆಯಿಂದ ಪೆರಾಡಿಯತ್ತ ಸ್ಕೂಟರ್‌ನಲ್ಲಿ ಸಾಗುತ್ತಿದ್ದರು. ವಿರುದ್ಧ

ಮಂಗಳೂರು: ಮ್ಯಾಂಡಸ್ ಚಂಡಮಾರುತ – ಮೀನುಗಾರಿಕೆ ದೋಣಿಗಳು ದಡ ಸೇರಲು ಸೂಚನೆ

ಡಿ.16ರವರೆಗೆ ಮ್ಯಾಂಡಸ್ ಚಂಡಮಾರುತದಿಂದ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ, ಈ ವೇಳೆ ಸಂಭವಿಸುವ ಅನಾಹುತವನ್ನು ತಡೆಗಟ್ಟಲು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಂಗಳೂರು ಕೋಸ್ಟ್‍ಗಾರ್ಡ್ ನೀಡಿರುವ ಹವಾಮಾನ ಮುನ್ಸೂಚನೆ ಆಧರಿಸಿ ಅವರು ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಡಿ.18ರಂದು ಶಕ್ತಿಸಂಗಮ

ರಾಜ್ಯ ಬಿಜೆಪಿಯ 24 ಪ್ರಕೋಷ್ಟಗಳ ರಾಜ್ಯ ಸಮಾವೇಶ ಶಕ್ತಿಸಂಗಮವು ಡಿಸೆಂಬರ್ 18ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ ಎಂದು ರಾಜ್ಯ ಸಂಚಾಲಕರಾದ ಕೆ. ಪ್ರತಾಪ ಸಿಂಹ ನಾಯಕ್ ಹೇಳಿದರು.ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಮಂಡಲ, ಜಿಲ್ಲೆ ಹಾಗೂ ರಾಜ್ಯ ಸಮಿತಿ ಸಂಚಾಲಕ, ಸಹ ಸಂಚಾಲರು, ಜಿಲ್ಲಾ ಸಂಯೋಜಕರು, ಸಂಕುಲ ಪ್ರಮುಖರು ಇದಕ್ಕೆ ಅಪೇಕ್ಷಿತರು. ದಕ್ಷಿಣ ಕನ್ನಡ ಜಿಲ್ಲೆಯಿಂದ 1,500 ಕ್ರಿಯಾಶೀಲಾ ಕಾರ್ಯಕರ್ತರು