Home Archive by category Fresh News (Page 679)

ಆಟೋ ಚಾಲಕನ ಮೇಲೆ ದುಷ್ಕರ್ಮಿಗಳಿಂದ ತಲವಾರು ದಾಳಿ

ಬಂಟ್ವಾಳ : ಆಟೋ ಚಾಲಕನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಲು ಯತ್ನಿಸಿದ ಘಟನೆ ಬಂಟ್ವಾಳದ ವಿಟ್ಲದ ಬೋಳಂತೂರು ಸಮೀಪದ ನಾಡಾಜೆ ಎಂಬಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿಯಾಗಿರುವ ಅಬೂಬಕ್ಕರ್ ಎಂಬವರ ಪುತ್ರ ಆಟೋ ಚಾಲಕ ಶಾಕೀರ್ (30) ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಯುವಕ. ನಿನ್ನೆ ರಾತ್ರಿ ಸುಮಾರು 2 ಗಂಟೆಯ ಸುಮಾರಿಗೆ ಕಬಡ್ಡಿ ಮ್ಯಾಚ್ ಮುಗಿಸಿ

ನವಂಬರ್ 18 ರಾಜ್ಯದಾದ್ಯಂತ ಸಮುದಾಯ ಆರೋಗ್ಯ ನೌಕರರ ಪ್ರತಿಭಟನೆ

ಪುತ್ತೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಮುದಾಯ ಆರೋಗ್ಯ ನೌಕರರ ಸಂಘದ ನೇತೃತ್ವದಲ್ಲಿ ನವೆಂಬರ್ 18 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ದಕ್ಷಿಣಕನ್ನಡ ಜಿಲ್ಲಾಧ್ಯಕ್ಷೆ ಜ್ಯೋತಿ. ಜೆ.ಆರ್ ಹೇಳಿದರು. ಪುತ್ತೂರು ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತ ಸರಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ

ಕಾಪು ಕೊಪ್ಪಲಂಗಡಿ : ಸ್ಕೂಟರ್‍ಗೆ ಕಾರು ಢಿಕ್ಕಿ : ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ವಯೋವೃದ್ಧರೋರ್ವರು ಚಲಾಯಿಸುತ್ತಿದ್ದ ಸ್ಕೂಟರ್ ಗೆ ಕಾರೊಂದು ಡಿಕ್ಕಿಯಾದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸ್ಕೂಟರ್ ಸವಾರಗೆ ತಲೆಗೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಸುಮಾರು 74 ವಯಸ್ಸಿನ ಮುಸ್ಲಿಂ ಸಮೂದಯದ ವಯೋವೃದ್ದರು ಇವರಾಗಿದ್ದು ಸ್ಥಳೀಯ ಆಸುಪಾಸಿನವರಾಗಿದ್ದಾರೆ ಎನ್ನಲಾಗಿದೆ . ರಸ್ತೆಗೆ ಎಸೆಯಲ್ಪಟ್ಟ ಇವರಿಗೆ ತಲೆಗೆ ಗಂಭೀರ ಹೊಡೆತ ಬಿದ್ದಿದೆ, ಹೊಡೆತದ ತೀವೃತೆಗೆ ಪ್ರಜ್ಞೆ ಕಳೆದುಕೊಂಡಿದ್ದ ಇವರನ್ನು ಆಂಬುಲೆನ್ಸ್ ಮೂಲಕ ಉಡುಪಿ ನಗರದ

ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ “ಮಾಧ್ಯಮ ಮೈಲುಗಲ್ಲು ನಲವತ್ತರ ಹೊಸ್ತಿಲು” ಕಾರ್ಯಕ್ರಮ

ಬೆಂಗಳೂರು, ನ, 13;ಕರ್ನಾಟಕ ಎಲ್ಲಾ ಕ್ಷೇತ್ರಗಳಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು, ಅಮೃತ ಕಾಲದ ಕನಸುಗಳನ್ನು ನನಸು ಮಾಡಲಿದೆ ಎಂದು ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಪ್ರಸಾರ ಭಾರತಿ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ “ಮಾಧ್ಯಮ ಮೈಲುಗಲ್ಲು ನಲವತ್ತರ ಹೊಸ್ತಿಲು” ಕಾರ್ಯಕ್ರಮ ಉದ್ಘಾಟಿಸಿ, ಕೇಕ್ ಕತ್ತರಿಸಿ ಹಿರಿಯ ಪತ್ರಕರ್ತರಿಗೆ ಗೌರವ ಸಮರ್ಪಿಸಿ ಮಾತನಾಡಿದ

ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ಮತ್ತು ದಾನಿಗಳ ಕೊಡುಗೆ : ಪಚ್ಚನಾಡಿಯಲ್ಲಿ ಸೋಮವ್ವ ಕುಟುಂಬದ ಮನೆ ಪುನರ್ ನಿರ್ಮಾಣ

ಪಚ್ಚನಾಡಿ ಆಶ್ರಯ ಕಾಲೋನಿಯ ಸೋಮವ್ವ ಕುಟುಂಬದ ಮನೆ ಪುನರ್ ನಿರ್ಮಾಣ ಕಾರ್ಯದ ಪ್ರಯುಕ್ತ ಶ್ರಮದಾನ ನಡೆಯಿತು. ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಊರ ಪರವೂರ ದಾನಿಗಳ ಕೊಡುಗೆಯಿಂದ ಸೋಮವ್ವ ಕುಟುಂಬದ ಮನೆ ಪುನರ್ ನಿರ್ಮಾಣ ಕಾರ್ಯದ ಪ್ರಯುಕ್ತ ಎಲೆಕ್ಟ್ರಿಷನ್ ಹಾಗೂ ಪ್ಲಮ್ಬಿಂಗ್ ಕೆಲಸವು ಶ್ರಮದಾನದ ಮೂಲಕ ನಡೆಯಿತು. ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲಾ ಎಲೆಕ್ಟ್ರಿಷನ್ ಹಾಗೂ ಪ್ಲಂಬರ್ ಗಳಿಗೆ ಸೋಮವ್ವ ಕುಟುಂಬ ಹಾಗೂ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ)

ಪಚ್ಚನಾಡಿ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ : ಅಬಾ ಕಾರ್ಡ್ ನೋಂದಣಿ ಕಾರ್ಯಕ್ರಮ

ಪಚ್ಚನಾಡಿ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಸಹಕಾರದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ವತಿಯಿಂದ ಯಶಸ್ವಿಯಾದ ಅಬಾ ಕಾರ್ಡ್ ನೋಂದಣಿ ಕಾರ್ಯಕ್ರಮ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಗ್ರಾಮದ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವೇದಿಕೆಯಲ್ಲಿ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಸಹಕಾರದೊಂದಿಗೆ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ(ರಿ) ವತಿಯಿಂದ ನಡೆದ ಉಚಿತ ಇ-ಶ್ರಮ್ ಕಾರ್ಡ್ ಹಾಗೂ

ಮೂಡುಬಿದರೆಯ ಕೋಟಿ-ಚೆನ್ನಯ್ಯ ಕಂಬಳ ಕರೆಯಲ್ಲಿ ನಡೆದ ಕುದಿ ಕಂಬಳ

ಮೂಡುಬಿದಿರೆಯ ಒಂಟಿಕಟ್ಟೆಯ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಕಡಲಕೆರೆ ಬಳಿ ಇರುವ ಕೋಟಿ-ಚೆನ್ನಯ ಕಂಬಳ ಕರೆಯಲ್ಲಿ ಭಾನುವಾರ ನಡೆದ ಕುದಿ ಕಂಬಳವನ್ನು ಶಾಸಕ, ಮಾಜಿ ಸಚಿವ ಅರವಿಂದ ಲಿಂಬಾವಳಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಲಿಂಬಾವಳಿ ಅವರು ಒಂಟಿಕಟ್ಟೆಯ ಸಭಾಭವನದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಯೇ ಪಕ್ಕದಲ್ಲಿ ನಡೆಯುತ್ತಿದ್ದ ಕುದಿ ಕಂಬಳದ ಕಡೆಗೆ ಕಣ್ಣು ಹಾಯಿಸಿ ಸ್ವಲ್ಪ ಹೊತ್ತು ಅಲ್ಲಿಯೇ ಕಾಲ ಕಳೆದು ಕಂಬಳದ ಬಗ್ಗೆ ಕೇಳಿ

ಶ್ರೀ ಜ್ಞಾನೇಶ್ವರಿ ಮಹಾಮಾಯಿ ದೈವಜ್ಞ ಮಹಿಳಾ ಮಂಡಳಿ : ಪ್ರಥಮ ವರ್ಷದ ವಾರ್ಷಿಕೋತ್ಸವದ ಸಂಭ್ರಮ

ಬೈಂದೂರು ತಾಲೂಕಿನ ಬಡಾಕೆರೆ ಶ್ರೀಲಕ್ಷ್ಮೀ ಜನಾರ್ದನ ಸಭಾಭವನದಲ್ಲಿ ನಡೆದ ಶ್ರೀ ಜ್ಞಾನೇಶ್ವರಿ ಮಹಾಮಾಯಿ ದೈವಜ್ಞ ಮಹಿಳಾ ಮಂಡಳಿ ನಾವುಂದ-ಬಡಾಕೆರೆ ಪ್ರಥಮ ವರ್ಷದ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ ಶಿವಮೊಗ್ಗ ಅಧ್ಯಕ್ಷೆ ವಿನಯಾ ರಾಯ್ಕರ್ ಉದ್ಘಾಟಿಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಿದಾಗ ಮಾತ್ರ ಪ್ರತಿಯೊಂದು ಸಮಾಜದ ಜನಾಂಗವು ರಾಜಕೀಯವಾಗಿ,ಸಮಾಜಿಕವಾಗಿ ಅಭಿವೃದ್ಧಿ ಹೊಂದಲು

ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.), ಆದರ್ಶ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಮತ್ತು ಆದರ್ಶ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ನವೆಂಬರ್ ೧೪ ರಂದು ಆಚರಿಸಲಾಗುವ ವಿಶ್ವ ಮಧುಮೇಹ ದಿನದ ಅಂಗವಾಗಿ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಜರುಗಿತ್ತು. ಈ ಕಾರ್ಯಕ್ರಮವನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಮಯದಲ್ಲಿ ಮಾತನಾಡಿದ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ|

ಪುತ್ತೂರಿನ: ಬೈಕ್ ಸ್ಕೂಟರ್ ಮಧ್ಯೆ ಅಪಘಾತ: ಸ್ಕೂಟರ್ ಸವಾರ ಮೃತ್ಯು

ಪುತ್ತೂರು : ಬೈಕ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸ್ ನಿಲ್ದಾಣ ಕಟ್ಟಡದಲ್ಲಿರುವ ರೆಡ್ ಕ್ಲಬ್ ಪ್ರೀಮಿಯಮ್ ಬಟ್ಟೆ ಅಂಗಡಿಯ ಸಿಬ್ಬಂದಿ ನೌಷದ್ (20) ಮೃತಪಟ್ಟವರು. ಇವರು ಪುತ್ತೂರು ತಾಲೂಕು ಅರ್ಯಾಪು ಗ್ರಾಮದ ಸಂಪ್ಯದ ನಿವಾಸಿ ಅಬ್ದುಲ್ ಅಝೀಜ್ ಎಂಬವರ ಪುತ್ರ. ನೌಷದ್ ಅಕ್ಟಿವಾ ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ. ವಿಷಯ ತಿಳಿದ ಮೃತನ ಸ್ನೇಹಿತರು,