ಕಡಬ : ತಮಿಳು ನಟ ವಿಶಾಲ್ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಹಾಗೂ ದೇವಾಲಯದ ಆನೆಯ ಆಶೀರ್ವಾದ ಪಡೆದರು ನಂತರ ಆಶ್ಲೇಷ ಬಲಿ ಪೂಜೆ ನೆರವೇರಸಿದರು. ನಟ ವಿಶಾಲ್ ಜೊತೆಯಲ್ಲಿ ಮೈಸೂರಿನ ಆತ್ಮೀಯ ಸ್ನೇಹಿತ ಸ್ವಾಮಿ ಹಾಗೂ ಮತ್ತಿತರ ಸ್ನೇಹಿತರು ಜೊತೆಯಲ್ಲಿದ್ದು ಸಾಥ್ ನೀಡಿದರು.ನಿನ್ನೆ ಶ್ರೀ ಕ್ಷೇತ್ರ
ದಕ್ಷಿಣ ಕನ್ನಡ ಜಿಲ್ಲೆಯ ಮತದಾರರು ಕರಡ ಪಟ್ಟಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ 17,08, 955 ಮತದಾರರಿದ್ದು, 8, 71,364 ಮಹಿಳಾ ಮತ್ತು 8,37,527 ಪುರುಷ ಮತದಾರರಿದ್ದಾರೆ. ಡಿ.8ರ ವರೆಗೆ ಮತದಾರರ ಪಟ್ಟಿ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯ ಹಿನ್ನಲೆಯಲ್ಲಿ ವಿಶೇಷ
ಮೂಡುಬಿದಿರೆ: ಡೀಮ್ಡ್ ಅರಣ್ಯ ಕಾನೂನನ್ನು ಸರಕಾರ ಸರಳೀಕೃತಗೊಳಿಸಿದರಿಂದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಸೂಚನೆಯಂತೆ 94ಸಿ ಮತ್ತು 94ಸಿಸಿ ಪಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಮೂಲ್ಕಿ,ಮೂಡುಬಿದಿರೆ, ಮಂಗಳೂರು ತಾಲೂಕುಗಳಲ್ಲಿ 3 ಸಾವಿರಕ್ಕೂ ಅಧಿಕ ಹಕ್ಕುಪತ್ರ ವಿತರಣೆಯಾಗಿದೆ ಆದರೆ ಮಾಜಿ ಸಚಿವ ಅಭಯಚಂದ್ರ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾಹಿತಿ ಕೊರತೆಯಿಂದ ಮಾತನಾಡುತ್ತಿದ್ದಾರೆ ಎಂದು
ಉಡುಪಿ: ಕೋಟ ಠಾಣಾ ವ್ಯಾಪ್ತಿಯಲ್ಲಿ 20 ದಿನಗಳ ಹಿಂದೆ ಕಾಲಿಗೆ ಗಾಯವಾಗಿ, ಅನಾರೋಗ್ಯ ಪೀಡಿತರಾಗಿ ಅನಾಥ ಸ್ಥಿತಿಯಲ್ಲಿದ್ದ ಹಿರಿಯ ವೃದ್ಧರನ್ನು ವಿಶು ಶೆಟ್ಟಿ ಅವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಯ ಬಳಿಕ ಗುಣಮುಖರಾಗಿರುವ ಅವರನ್ನು ಎಲ್ಲಿಗೆ ಸೇರಿಸೋದು ಎಂಬ ಧರ್ಮ ಸಂಕಟ ಸಾಮಾಜಿಕ ಕಾರ್ಯಕರ್ತರನ್ನು ಕಾಡುತ್ತಿದೆ ! ವೃದ್ಧರನ್ನು ಆಸ್ಪತ್ರೆಗೆ ದಾಖಲಿಸಿದ ವಿಶು ಶೆಟ್ಟಿ ಅವರಿಗೆ ವೃದ್ಧರನ್ನು ಕರೆದುಕೊಂಡು ಹೋಗುವಂತೆ ಜಿಲ್ಲಾಸ್ಪತ್ರೆಯಿಂದ
ಮಂಗಳೂರು ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ 2022-23 ನೆ ಸಾಲಿನ ಚಟುವಟಿಕೆಗಳ ಉದ್ಘಾಟನೆ ನೆರವೇರಿತು. ಕೆನರಾ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ, ಅಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಎಸ್ ಅವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಎನ್ನೆಸ್ಸೆಸ್ ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನವಾಗುವುದರ ಜೊತೆಗೆ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲು
ಗೋವಿಗಾಗಿ ಮೇವು ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಮುಂದೆ ನಿಂತು ಅಶಾಂತಿಗೆ ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ನ.6 ರಂದು ಸಂಜೆ 4.30 ರ ವೇಳೆಗೆ ಕುತ್ತಾರು ಮದನಿನಗರ ಜುಮಾ ಮಸೀದಿ ಎದುರುಗಡೆ ವಾಹನಗಳನ್ನು ನಿಲ್ಲಿಸಿದ ಕಿಡಿಗೇಡಿಗಳು ಮುಸ್ಲಿಂ ಬಾಂಧವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಬಾವುಟವನ್ನು ಪ್ರದರ್ಶಿಸಿ ಶಾಂತಿಭAಗ ಹಾಗೂ
ಕನ್ನಡ ನೆಲ, ಜಲ ಭಾಷೆ, ಸಂಸ್ಕೃತಿ ಮತ್ತು ಸಂಸ್ಕಾರ ಉಳಿಸುವಲ್ಲಿ ಕಸಾಪ ಬಹುಮುಖ್ಯ ಭೂಮಿಕೆ ವಹಿಸುತ್ತಿದೆ : ಡಾ ಚೂಂತಾರುಕನ್ನಡ ನಾಡಲ್ಲಿ ಎಲ್ಲರೂ ಕನ್ನಡದಲ್ಲಿಯೇ ವ್ಯವಹರಿಸುವಂತಾಗಬೇಕು. ಇತರ ರಾಜ್ಯದ ನೌಕರರು ನಮ್ಮ ರಾಜ್ಯದಲ್ಲಿ ಕೆಲಸ ಮಾಡುವಾಗ ಕನ್ನಡ ಭಾಷೆ ಕಲಿತು ಇಲ್ಲಿನ ಜನರೊಂದಿಗೆ ವ್ಯವಹರಿಸಬೇಕಾಗುತ್ತದೆ. ಕನ್ನಡ ಭಾಷೆಯಲ್ಲಿ ವ್ಯವಹರಿಸಿದರೆ ಇಲ್ಲಿಯ ಕನ್ನಡಿಗರ ಮನಸ್ಸನ್ನು ಗೆಲ್ಲಲು ಸಾಧ್ಯವಿದೆ ಎಂದು ಕಸಾಪ ನ ಗೌರವ ಕಾರ್ಯದರ್ಶಿ ಡಾ|| ಮುರಲೀ ಮೋಹನ್
ಬಂಟ್ವಾಳ: ಜೆಸಿಐ ಬಂಟ್ವಾಳದ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಸಿ. ರೋಡಿನ ವರ್ಣ ಸ್ಟುಡಿಯೋದ ಮಾಲಕ, ಸೃಜನಶೀಲ ಛಾಯಾಗ್ರಾಹಕ ರಾಜೇಂದ್ರ ಅವರು ಆಯ್ಕೆಯಾಗಿದ್ದಾರೆ. ಜೆಸಿಐ ಬಂಟ್ವಾಳದ ಅಧ್ಯಕ್ಷ ರೋಷನ್‌ರೈ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ನೂತನ ಕಾರ್ಯದರ್ಶಿಯಾಗಿ ರಶ್ಮಿ ವಚನ್ ಶೆಟ್ಟಿ, ಕೋಶಾಧಿಕಾರಿಯಾಗಿ ಶ್ರೀನಿವಾಸ್ ಹಾಗೂ ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಗಣೇಶ್ ಕುಲಾಲ್, ಕಿರಣ್, ಮನೋಜ್ ಕನಪಾಡಿ, ವಚನ್
ಉಳ್ಳಾಲ: ಬೆಂಗಳೂರು ನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಬಸ್ ಕ್ಲೀನರ್ ವೊಬ್ಬ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಘಟನೆ ವಿವರ: ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯ ದಲ್ಲಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ (KA51 AB 3649) ಬಸ್‌ನಲ್ಲಿ ಪ್ರಯಾಣ
ಸುಳ್ಯ: ಆಟೋ ಚಾಲಕರೊಬ್ಬರು ಇದ್ದಕಿದ್ದಂತೆ ಪಾಶ್ರ್ವವಾಯುಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ನಗರದಲ್ಲಿ ನಡೆದಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಹೇಮನಾಥ್ ಆರ್.ಬಿ.(32) ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ ಚಾಲಕ. ಇವರು ಸುಳ್ಯ ತಾಲೂಕಿನ ದೊಡ್ಡಡ್ಕದ ರಾಜರಾಂಪುರದ ನಿವಾಸಿಯಾಗಿದ್ದಾರೆ. ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬರನ್ನು ಸಂಪಾಜೆಯಿಂದ ಸುಳ್ಯದ ಕೆವಿಜಿ ಆಸ್ಪತ್ರೆಗೆ ತಮ್ಮ ಆಟೋದಲ್ಲಿ ಕರೆದುಕೊಂಡು



























