Home Archive by category Fresh News (Page 687)

ಸರ್ವ ಧರ್ಮ ಸಮ್ಮೇಳನ : ಧರ್ಮ ಸಾಗರದಲ್ಲಿ ಸೌಹಾರ್ದತೆಯ ಅಲೆಗಳಾಗಿ ಸಾಗೋಣ – ಮುನಿ ಶ್ರೀ ರಶ್ನಿ ಕುಮಾರ್ ಜೀ

ಬೆಂಗಳೂರು: ನ, 6: ವಿಜಯನಗರಜ ಅರ್ಹಂ ಭವನದಲ್ಲಿ ಧರ್ಮ ಧರ್ಮಗಳ ನಡುವೆ ಸಾಮರಸ್ಯ ಬೆಸೆಯುವ ಸರ್ವ ಧರ್ಮ ಸಮ್ಮೇಳನ ಹಾಗೂ ಸರ್ವಧರ್ಮ ಆಧ್ಯಾತ್ಮಿಕ ಸ್ನೇಹ ಮಿಲನ-2022 ಕಾರ್ಯಕ್ರಮ ಸಂತಸ, ಸಡಗರದಿಂದ ನೆರವೇರಿತು. ಧರ್ಮ ಧರ್ಮಗಳ ನಡುವೆ, ಧಾರ್ಮಿಕ ಮುಖಂಡರ ಮಧ್ಯೆ ಪರಸ್ಪರ ಗೌರವ ನೀಡುವ, ಆಲಂಗಿಸಿಕೊಂಡು ಬೆನ್ನು ತಟ್ಟುವ, ಸಾಮರಸ್ಯದಲ್ಲಿ ನಿಮಗಿಂತ ನಾವೇ ಒಂದು ಹೆಜ್ಜೆ

ಕಾಪುವಿನಲ್ಲಿ ಜನಸಂಕಲ್ಪ ಯಾತ್ರೆಗೆ ಸಿಎಂ ಚಾಲನೆ

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್ ವಹಿಸಿದ್ದರು, ಮುಖ್ಯ ಅಥಿತಿಗಳಾಗಿ ಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರುಗಳಾದ ಎಸ್. ಅಂಗಾರ, ಸುನೀಲ್ ಕುಮಾರ್, ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಕಾಪು ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯಕ್, ಸುರೇಶ್ ಶೆಟ್ಟಿ ಗುರ್ಮೆ, ರಘಪತಿ ಭಟ್, ಉದಯ ಕುಮಾರ್ ಶೆಟ್ಟಿ ಮುಂತಾದವರಿದ್ದರು.

ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನ : ಧ್ವಜಸ್ತಂಭದ ಭವ್ಯ ಮೆರವಣಿಗೆ ವಾಹನ ಜಾಥಾ

ಮೂಡುಬಿದಿರೆ: ಮಹತೋಭಾರ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನ ದರೆಗುಡ್ಡೆ ಇಲ್ಲಿಗೆ ನೂತನ ಧ್ವಜಸ್ತಂಭ ನಿರ್ಮಾಣಕ್ಕಾಗಿ ಸುಳ್ಯದಿಂದ ತಂದಿರುವ ಕೊಡಿಮರವನ್ನು ಮೂಡುಬಿದಿರೆ ಜೈನ ಪ.ಪೂ.ಕಾಲೇಜು ಮೈದಾನದ ಬಳಿ ಸ್ವಾಗತಿಸಲಾಯಿತು. ನಂತರ ಕೊಂಬು, ಚೆಂಡೆ, ಕುಣಿತ ಭಜನೆ, ನಾಸಿಕ್ ಬ್ಯಾಂಡ್ ಮೂಲಕ ಕಲಾ ತಂಡಗಳು,ಭಜನಾ ತಂಡಗಳೊಂದಿಗೆ ದರೆಗುಡ್ಡೆಗೆ ಹೊರಟ “ಧ್ವಜಸ್ತಂಭದ ಭವ್ಯ ಮೆರವಣಿಗೆ ವಾಹನ ಜಾಥಾ”ಕ್ಕೆ ಶಾಸಕ ಉಮಾನಾಥ ಎ.ಕೋಟ್ಯಾನ್ ಚಾಲನೆಯನ್ನು ನೀಡಿದರು.

ಬಂಟ್ಸ್ ಬಹರೈನ್ ಪದಗ್ರಹಣಾ ಕಾರ್ಯಕ್ರಮ : ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗಿ

ಬಹರೈನ್; “ತಾನು ಕರಗಿ ಇತರರರಿಗೆ ಬೆಳಕು ಕೊಡುವ ಮೇಣದ ಬತ್ತಿಯಂತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಾಗ ಜೀವನದಲ್ಲಿ ಸಾರ್ಥಕೆಯನ್ನು ಕಾಣಬಹುದು . ಮಕ್ಕಳಿಗೆ ಮಾತೃ ಭಾಷೆಯನ್ನೂ ಕಳಿಸಿದಾಗ ಮಾತ್ರ ನಮ್ಮ ಸಂಸ್ಕ್ರತಿ ಉಳಿದು ಬೆಳೆಯಲು ಸಾಧ್ಯ . ನಾವು ಆರ್ಥಿಕವಾಗಿ ಬೆಳೆದಂತೆಲ್ಲಾ ಸಮಾಜವನ್ನೂ ಬೆಳೆಸಬೇಕು “ಎಂದು ಇಲ್ಲಿ ಇತ್ತೀಚಿಗೆ ಜರುಗಿದ ಬಂಟ್ಸ್ ಬಹರೈನ್ ನ ನೂತನ ಆಡಳಿತ ಮಂಡಳಿಯ ವಿದ್ಯುಕ್ತ ಪದಗ್ರಹಣ ಸಮಾರಂಭದಲ್ಲಿ ಬಂಟ್ಸ್ ಬಹರೈನ್ ನ ನೂತನ

ಅಲೆಮಾರಿ ಜನಾಂಗದ ಶ್ರೇಯಸ್ಸಿಗಾಗಿ ಸೇವೆ ಸಲ್ಲಿಸುತ್ತಿದ್ದ ಭಾಸ್ಕರ್ ದಾಸ್ ಎಕ್ಕಾರು ನಿಧನ

ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು (66) ಹಾಸನದಲ್ಲಿ ಶನಿವಾರ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ,   ಶನಿವಾರ ಬೆಂಗಳೂರಿನಿಂದ ಮಂಗಳೂರಿಗೆ ತಮ್ಮ ಇನೋವಾ ವಾಹನದಲ್ಲಿ ವಾಪಾಸ್ಸಾಗುವ ಸಂದರ್ಭ ಕುಣಿಗಲ್ ನಲ್ಲಿ ಬಾಸ್ಕರ್ ದಾಸ್ ಅವರು ಸಂಚರಿಸುತ್ತಿದ್ದ ವಾಹನಕ್ಕೆ ಎಮ್ಮೆಯೊಂದು ಅಡ್ದ ಬಂದ್ದಿದೆ. ಕೂಡಲೇ ಚಾಲಕ ಅಪಘಾತ ತಪ್ಪಿಸಲು ಚಾಲ ಕೂಡಲೇ ಬ್ರೇಕ್ ಹಾಕಿದ್ದು ಈ ಸಂದರ್ಭ ತಮ್ಮ ವಾಹನಕ್ಕೆ ಹಿಂಬದಿಯಿಂದ ಬಂದ ಮಿನಿ ಬಸ್ ಡಿಕ್ಕಿ

ಕಾಲಮಿತಿ ಯಕ್ಷಗಾನಕ್ಕೆ ವಿರೋಧ:ಕಟೀಲಮ್ಮನೆಡೆ ಭಕ್ತರ ನಡೆ

ಮಂಗಳೂರು:ಕಟೀಲು ಮೇಳದ  ಈ ಬಾರಿಯ ತಿರುಗಾಟ ಇದೇ ನವೆಂಬರ್ ತಿಂಗಳಲ್ಲಿ ಆರಂಭಗೊಳ್ಳಲಿದೆ ಅದರೆ ಈ ವರ್ಷದಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನ ನೀಡಲು ಕಟೀಲು ದೇವಸ್ಥಾನ ಅಡಳಿತ ಮಂಡಳಿ ನಿರ್ಧರಿಸಿದ್ದು ಅದ್ರೆ ಕಾಲಮಿತಿ ಯಕ್ಷಗಾನಕ್ಕೆ ಭಕ್ತರ ಕಡೆಯಿಂದ ಅಸಮಾಧಾನ ಉಂಟಾಗಿದೆ.ಇಂದು ಬಜಪೆ ಪೇಟೆಯಿಂದ ಕಟೀಲಮ್ಮನೆಡೆ ಭಕ್ತರ ನಡೆ  ಪಾದಯಾತ್ರೆ ಜರಗಿತು.ಬಜಪೆಯ ಶಾರದಾ ಮಂಟಪದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಾದಯಾತ್ರೆ ಆರಂಭವಾಯಿತು.ಹೆಚ್ಚಿನ ಸಂಖ್ಯೆಯಲ್ಲಿ

ಪುತ್ತೂರು : ನವ ವಿವಾಹಿತೆ ಆತ್ಮಹತ್ಯೆ

ಪುತ್ತೂರು :  ನವ ವಿವಾಹಿತೆಯೊಬ್ಬರು ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ ವೈಶಾಲಿ (26) ಆತ್ಮಹತ್ಯೆ ಮಾಡಿಕೊಂಡವರು. ಜಯ ಪ್ರಕಾಶ್‌ ಹಾಗೂ ವೈಶಾಲಿ ಮದುವೆ 7 ತಿಂಗಳ ಹಿಂದೆ ನಡೆದಿತ್ತು, ಶನಿವಾರ ಸಂಜೆ ಪತಿಯ ಮನೆಯಲ್ಲಿದ್ದ ವೈಶಾಲಿಯವರು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು

ಮಂಗಳೂರು: 1 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆ; ಶಾಸಕ ಡಾ ವೈ. ಭರತ್ ಶೆಟ್ಟಿ ಅವರಿಂದ ಉದ್ಘಾಟನೆ

ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್೧೮ ಕಾವೂರು ವ್ಯಾಪ್ತಿಯ ಆಕಾಶಭವನ ಮುಖ್ಯ ರಸ್ತೆಯನ್ನು ಮಹಾತ್ಮಗಾಂಧಿ ಯೋಜನೆಯಡಿ ೧ ಕೋಟಿ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣವಾಗಿದ್ದು ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿದರು. ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮ.ನ.ಪಾ ಸದಸ್ಯೆ ಗಾಯತ್ರಿ ಎ ರಾವ್,ಕಾವೂರು ೨ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಸಚಿನ್ ಶೆಟ್ಟಿ, ಪ್ರಮುಖರಾದ ಮಂಜುನಾಥ್

ಉಳ್ಳಾಲ: ಸ್ಕೂಟರ್‌ಗೆ ಲಾರಿ ಢಿಕ್ಕಿ: ಇಬ್ಬರು ಮೃತ್ಯು: ಇಬ್ಬರು ಮಕ್ಕಳಿಗೆ ಗಾಯ

ಉಳ್ಳಾಲ: ರಾ.ಹೆ. 66 ರಲ್ಲಿ ಸಂಚರಿಸುತ್ತಿದ್ದ ಸ್ಕೂಟರಿಗೆ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಿಂದ ಹೊರಬರುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಜೆಪ್ಪು ತಂದೊಳಿಗೆ ನಿವಾಸಿ ಗಂಗಾಧರ್ (45 ಹಾಗೂ ಕೊಣಾಜೆ ಪಜೀರು ನಿವಾಸಿ ನೇತ್ರಾವತಿ(48) ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ಬಳಿ ಸಂಭವಿಸಿದೆ. ಸ್ಕೂಟರಿನಲ್ಲಿದ್ದ  ಮೃತ ನೇತ್ರಾವತಿ ಅವರ ಮಗಳು ಮೋಕ್ಷಾ(4), ಹಾಗೂ ಅಕ್ಕನ ಮಗ ಜ್ಞಾನೇಶ್ ಗಂಭೀರ ಗಾಯಗೊಂಡಿದ್ದಾರೆ. ಗಂಗಾಧರ್ ಅವರು ಪರಿಚಯದ 

ಮೂಡುಬಿದರೆ: ನ.10ರಂದು ಕಿಸಾನ್ ಸಂಘದಿಂದ ಬೃಹತ್ ಹಕ್ಕೊತ್ತಾಯ ಜಾಥಾ

ಮೂಡುಬಿದಿರೆ: ದ.ಕ ಜಿಲ್ಲೆಯ ರೈತರಿಗೆ ಕುಮ್ಕಿ ಹಕ್ಕಿಗೆ  ಆತನೇ ಹಕ್ಕುದಾರನೆಂದು ಘೋಷಿಸಿ ಹಕ್ಕುಪತ್ರವನ್ನು ನೀಡಬೇಕು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಸರಕಾರವು ಈಡೇರಿಸಬೇಕೆಂದು  ಒತ್ತಾಯಿಸಿ ನ.10 ರಂದು ಮೂಡುಬಿದಿರೆ ತಾಲೂಕಿನಾದ್ಯಾಂತ ರೈತರ ಬೃಹತ್ ಹಕ್ಕೊತ್ತಾಯ ಜಾಥವನ್ನು ಹಮ್ಮಿಕೊಳ್ಳಲಾಗಿದೆ ಎಂದು ದ.ಕ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಜಾಥದಲ್ಲಿ ಮೂಡುಬಿದಿರೆಯ 25