ಟೋಲ್ ಗೇಟ್ ಎದುರು ಜಮಾಯಿಸಿರುವ ಪ್ರತಿಭಟನಾಕಾರರು ಬಿಜೆಪಿ ಸರ್ಕಾರ, ಸಂಸದ, ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.ಸುರತ್ಕಲ್ ಟೋಲ್ ಗೇಟ್ ಅನ್ನು ಅಕ್ಟೋಬರ್ 18 ರೊಳಗೆ ರದ್ದುಪಡಿಸುವಂತೆ ಸೆ.13 ರಂದು ಸರ್ಕಾರಕ್ಕೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಗಡುವು ನೀಡಿತ್ತು, ಸರ್ಕಾರ ತಮ್ಮ ಮನವಿಗೆ ಮಣಿಯದಿದ್ದರೆ ಅಕ್ಟೋಬರ್ 18 ರಂದು ಟೋಲ್ ಗೇಟ್‌ಗೆ
ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕೋಲ್ ಸಾಗಾಟ ಮಾಡುತ್ತಿದ್ದ ಟ್ರಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬಂದಿಗಳ ಸಕಾಲಿಕ ಕಾರ್ಯಾಚರಣೆಯಿಂದಾಗಿ ಭಾರಿ ಅವಘಡವೊಂದು ತಪ್ಪಿದಂತಾಗಿದೆ. ಟ್ರಕ್‌ನಲ್ಲಿ ತುಂಬಿದ್ದ ಕೋಲ್‌ನಲ್ಲಿ ಘರ್ಷಣೆಯುಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು ಟ್ರಕ್ ಚಾಲಕ ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಡುಪಿ ಅಗ್ನಿಶಾಮಕದಳಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ
ಮ.ನ.ಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ , ಆ ಹೊತ್ತಿನಲ್ಲಿ ಹೋಗಿ ಕಿರುಕುಳ ನೀಡುವ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದು , ಇದು ಹೋರಾಟಗಾರರ ಧ್ವನಿ ಅಡಗಿಸುವ ಕೆಲಸ ಮಾಡಲಾಗುತ್ತಿದೆ . ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳುವ ಅಗತ್ಯ ಇದೆ ಎಂದು ಹೇಳಿದ್ದಾರೆ . ಇದು ಪ್ರತಿಭಟನಾಕಾರರನ್ನು ಹತ್ತಿಕ್ಕುವ ಕಾರ್ಯವಾಗಿದ್ದು ,
ಬೆಂಗಳೂರು : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಬೆಂಗಳೂರು ಜಯನಗರ ಶಾಖೆಯಲ್ಲಿ ಫಾರ್ ಏವರ್‍ಮಾರ್ಕ್ ಸೊಲಿಟೇರ್ ವಜ್ರಾಭರಣ ಪ್ರದರ್ಶನವನ್ನು ನಟಿ , ಮೊಡೆಲ್ ಮತ್ತು ಸಾಮಾಜಿಕ ಕಾರ್ಯಕರ್ತೆ ಪ್ರಾಚಿ ಗೌಡ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಚಿ ಗೌಡ ಅವರು, ಚಿನ್ನಾಭರಣ ಹಾಗೂ ವಜ್ರಾಭರಣಗಳಿಗೆ ಅತ್ಯಂತ ವಿಶ್ವಾಸನೀಯ ಪರಂಪರೆಯನ್ನು ಮ¯ಬಾರ್ ಸಂಸ್ಥೆ ಹೊಂದಿದೆ , ವೈವಿಧ್ಯಮಯ ಡಿಸೈನ್‍ನ ಫಾರ್ ಏವರ್ ಮಾರ್ಕ್ ಸೊಲಿಟೇರ್
ಬೆಂಗಳೂರು, ಅ, 17; ಅನುದಾನಿತ ಶಾಲೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ನೌಕರರು ನಿಶ್ಚಿತ ಪಿಂಚಣಿ, ಕಾಲ್ಪನಿಕ ವೇತನ , ಅನುದಾನಿತ ನೌಕರರಿಗೆ ಆರೋಗ್ಯ ಸಂಜೀವಿನಿ ಮತ್ತಿತರ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪಿಂಚಣಿ ವಂಚಿತ ನೌಕರರ ಸಂಘ ನಡೆಸುತ್ತಿರುವ ಧರಣಿ ಸತ್ಯಾಗ್ರಹ 11 ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ, ಅರೆಬೆತ್ತಲೆ ಪ್ರತಿಭಟನೆ, ರಕ್ತದಾನ ಮತ್ತಿತರ ವಿಧಾನಗಳ ಮೂಲಕ ಹೋರಾಟ ನಡೆಸಿರುವ ಸಂಘದ
ಉಳ್ಳಾಲ : ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿಯ ಸದಸ್ಯರು ಸೋಮವಾರದಂದು ಸಂಸದ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.ತೊಕ್ಕೊಟ್ಟು – ತಲಪಾಡಿ ಹೆದ್ದಾರಿಯಲ್ಲಿ ಕಾಪಿಕಾಡ್ ಅವೈಜ್ಞಾನಿಕ ಯೂ ಟರ್ನ್ ನಿಂದಾಗಿ ಪ್ರತಿ ನಿತ್ಯ ಅಪಘಾತ ನಡೆಯುತ್ತಿದ್ದು , ಇಲ್ಲಿನ ಅಪಘಾತ ನಿಯಂತ್ರಿಸುವ ಸಲುವಾಗಿ ಅಂಬಿಕಾರೋಡ್ ನಲ್ಲಿ ಯೂ ಟರ್ನ್ ತೆರೆಯುವಂತೆ ಮನವಿ ಮಾಡಲಾಯಿತು. ತೊಕ್ಕೊಟ್ಟುನಿಂದ ಕುಂಪಲ ಬೈಪಾಸ್ ತನಕ ಎರಡೂ ಬದಿಗಳಲ್ಲಿ
ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ವೃತ್ತದ ಬಳಿ ನಡೆದಿದೆ. ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ ನಿವಾಸಿ ಕರುಣಾಕರ ಬೆಳ್ಚಡ ಅವರ ಪುತ್ರ ರಕ್ಷಣ್(13) ಎಂದು ಗುರುತಿಸಲಾಗಿದೆ. ಪಡೀಲಿನ ಕಪಿತಾನಿಯೋ ಸ್ಕೂಲಿನಲ್ಲಿ ಎಂಟನೇ ತರಗತಿ ಓದುತ್ತಿದ್ದ ರಕ್ಷಣ್ ಇವತ್ತು ಮನೆಯಲ್ಲಿ ಪೂಜೆ ಇದೆಯೆಂದು ಶಾಲೆಗೆ ರಜೆ ಹಾಕಿದ್ದ. ಬೆಳಗ್ಗೆ ಚಿಕ್ಕಪ್ಪ ಪಡು ಬೊಂಡಂತಿಲ
ಸುರತ್ಕಲ್ ಎನ್‍ಐಟಿಕೆ ಬಳಿಯ ಟೋಲ್‍ಗೇಟ್ ತೆರವಿಗೆ ಅಧಿಕಾರಿಗಳು 20 ದಿನಗಳ ಕಾಲಾವಕಾಶ ಕೋರಿದ್ದು ಅಲ್ಲಿಯವರೆಗೆ ಕಾಯುವಂತೆ ವಿನಂತಿಸಿರುವುದಾಗಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕೂಡ ಲೋಕಸಭೆಯಲ್ಲಿ ಟೋಲ್‍ಗೇಟ್ ತೆರವು ಬಗ್ಗೆ ಪ್ರಸ್ತಾವ ಮಾಡಿದ್ದರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ತೆರವಿಗಾಗಿ ಕೆಲವು ಸಭೆಗಳನ್ನು ನಡೆಸಲಾಗಿದೆ.
ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಮತ್ತು ಕಾರ್ಯಕರ್ತರ ಸಭೆ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್‍ನಲ್ಲಿ ನಡೆಯಿತು. ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ವೇಗವಾಗಿ ಬಲವರ್ಧನೆಗೊಳ್ಳಲಿದೆ ಎಂದು ಅವರು ಹೇಳಿದರು.ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ ,
ಪುತ್ತೂರು:ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಂಗಳೂರಿನಲ್ಲಿ ತನ್ನ ಮೇಲೆ ತಲವಾರು ದಾಳಿ ಆಗಿದೆ ಎಂದು ಹೇಳಿರುವುದು ಸ್ವತಃ ಶಾಸಕರ ಕಟ್ಟುಕಥೆಯಾಗಿದೆ. ಇದು ಜನರಲ್ಲಿ ಗೊಂದಲ, ಆಘಾತ ಉಂಟುಮಾಡುವ ಹುಚ್ಚಾಟವಾಗಿದ್ದು, ಈ ಘಟನೆಯನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ತೀವೃವಾಗಿ ಖಂಡಿಸುತ್ತದೆ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಅಮಲ ರಾಮಚಂದ್ರ ಹೇಳಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿ ಈ




























