Home Archive by category Fresh News (Page 725)

ಐತಿಹಾಸಿಕ ಟೋಲ್ ತೆರವು ಹೋರಾಟದ ಸಿದ್ದತೆಗೆ ಮಂಗಳೂರು ನಗರ ಮಟ್ಟದ ಯಶಸ್ವಿ ಸಭೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗಾಗಿ ಅಕ್ಟೋಬರ್ 18ರಂದು ನೇರ ಕಾರ್ಯಾಚರಣೆ ಟೋಲ್ ಗೇಟ್ ಮುತ್ತಿಗೆ ಕಾರ್ಯಕ್ರಮದ ತಯಾರಿಗಾಗಿ ಮಂಗಳೂರು ನಗರ ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಿದ್ದತಾ ಸಭೆಯು ನಗರದ ವುಡ್ ಲ್ಯಾಂಡ್ ಹೋಟೇಲ್ ನಲ್ಲಿ ನಡೆಯಿತು. ತಾತ್ಕಾಲಿಕ ಅವಧಿಗೆ ಆರಂಭಗೊಂಡ ಸುರತ್ಕಲ್ ಟೋಲ್ ಗೇಟ್ ಜನರ ಪ್ರಬಲ ವಿರೋಧದ ಹೊರತಾಗಿಯೂ ಏಳು ವರುಷ ಅಕ್ರಮವಾಗಿ

ನೆಲ್ಯಾಡಿ: ಶಾರ್ಟ್‌ಸರ್ಕ್ಯೂಟ್‌ನಿಂದ ಕಾರು ಭಸ್ಮ

ನೆಲ್ಯಾಡಿ : ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಸಂಭವಿಸಿದೆ. ಕಾರಿನಲ್ಲಿ ಪುತ್ತೂರು ಮೂಲದ ಗೋಕುಲದಾಸ ಹಾಗೂ ಮೆಲ್ವಿನ್ ಬೆಂಗಳೂರಿನಿಂದ ತಮ್ಮ ಊರಿಗೆ ಪ್ರಯಾಣಿಸುತ್ತಿದ್ದರು. ದುರ್ಘಟನೆಯಲ್ಲಿ ಪ್ರಯಾಣಿಕರಿಬ್ಬರೂ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬೈಂದೂರು: 49ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಂಭ್ರಮ

ಬೈಂದೂರಿನ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 49ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತ್ತು.ಈ  ಪುಣ್ಯ ಕಾರ್ಯಕ್ಕೆ  ಬೈಂದೂರು ಭಾಗದ ಸಾರ್ವಜನಿಕರು ಪಾಲ್ಗೊಂಡು ಶ್ರೀದೇವಿ ಕೃಪಾಕಟಾಕ್ಷಕ್ಕೆ ಹಾಜರಿದ್ದು ಇನ್ನು ಮೂರು ದಿನ ನಡೆಯುವ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಕ್ಕೆ ಉತ್ಸವದಿಂದ ಪಾಲ್ಗೊಂಡು ಸೇವೆಯಲ್ಲಿ ನಿರತರಾಗಿದ್ದಾರೆ. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ನೆಲ್ಯಾಡಿ,

ಕಾಂಗ್ರೆಸ್‌ನಿಂದ ಕೀಳುಮಟ್ಟದ ರಾಜಕೀಯ: ಸಚಿವ ಎಸ್ ಅಂಗಾರ ತಿರುಗೇಟು

ಸುಳ್ಯ:ಪ್ರಾಕೃತಿಕ ವಿಕೋಪದಲ್ಲಿ ನಷ್ಟ ಆದವರಿಗೆ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 76.84 ಲಕ್ಷ ರೂ ಪರಿಹಾರ ಬಿಡುಗಡೆಯಾಗಿದೆ. ಪ್ರಾಕೃತಿಕ ವಿಕೋಪದ ಹೆಸರಲ್ಲಿ ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಾಕೃತಿಕ ವಿಕೋಪಕ್ಕೆ ಪರಿಹಾರ ನೀಡಲಾಗಿಲ್ಲ ಎಂಬ ಕಾಂಗ್ರೆಸ್ ಮುಖಂಡರ ಹೇಳಿಕೆ ಸತ್ಯಕ್ಕೆ

ಸುರತ್ಕಲ್ : ಮುಕ್ಕದಲ್ಲಿ ನಂದಿನಿ ಮೂ ಕೆಫೆ ಶುಭಾರಂಭ

ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕೆಎಂಎಫ್ ವತಿಯಿಂದ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆ ಉದ್ಘಾಟನೆಗೊಂಡಿತ್ತು. ಮುಕ್ಕದಲ್ಲಿ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆಯನ್ನು ಕರ್ನಾಟಕ ಹಾಲು ಮಹಾ ಮಂಡಳಿ ಇದರ ವ್ಯವಸ್ಥಾಪಕ ನಿದೇಶಕರಾದ ಬಿ.ಸಿ ಸತೀಶ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದ್ರು. ತದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಎರಡು ಕೇಂದ್ರ ಮುಕ್ಕ ಮತ್ತು ಹೊಸಬೆಟ್ಟಿನಲ್ಲಿ

ಅತಿವೃಷ್ಟಿಯಿಂದಾಗಿ ಅಡಿಕೆ ಬೆಳೆಗೆ ಉಂಟಾದ ಹಾನಿ : ಪರಿಹಾರ ನೀಡುವಂತೆ ಒತ್ತಾಯ

ಪುತ್ತೂರು : ಅತಿವೃಷ್ಠಿಯಿಂದ ಅಡಿಕೆ ಬೆಳೆಗೆ ಉಂಟಾದ ಹಾನಿಗೆ ಪರಿಹಾರ ಮತ್ತು ಕೇಂದ್ರ ಸರಕಾರ ಜಾರಿಗೆ ತಂದ ಮೂರು ಕೃಷಿ ಕಾನೂನು ರಾಜ್ಯದಲ್ಲಿ ಇನ್ನೂ ಜಾರಿಯಲ್ಲಿದ್ದು, ಅವುಗಳನ್ನು ತಕ್ಷಣವೇ ರದ್ದುಗೊಳಿಬೇಕೆಂದು ಆಗ್ರಹಿಸಿ ರೈತಸಂಘ,ಹಸಿರು ಸೇನೆಯಿಂದ ಪುತ್ತೂರು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ಪ್ರತಿಭಟಮೆ ನಡೆಯಿತು. ರೈತಸಂಘದ ಕಛೇರಿಯಿಂದ ಮೆರವಣಿಗೆ ಮೂಲಕ ಹೊರಟ ರೈತಸಂಘದ ಕಾರ್ಯಕರ್ತರು ಪುತ್ತೂರು ಮಿನಿ ವಿಧಾನಸೌಧದ ಮುಂದೆ ಸೇರಿ ಪ್ರತಿಭಟನೆ ನಡೆಸಿದರು. ಈ

ಅ.4: ದಸರಾ ಬಹುಭಾಷಾ ಕವಿಗೋಷ್ಠಿ

ಮಂಗಳೂರು : ತುಳು ಪರಿಷತ್, ಮಯೂರಿ ಫೌಂಡೇಶನ್, ಕರ್ನಾಟಕ ಥಿಯೋಲಾಜಿಕಲ್ ಕಾಲೇಜು, ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಸಾಮರಸ್ಯ ಮಂಗಳೂರು ಜಂಟಿ ಆಶ್ರಯದಲ್ಲಿ ಅ.4 ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ಬಲ್ಮಠದ ಸಹೋದಯ ಸಭಾಂಗಣದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಮುಂಬಯಿಯ ಹಿರಿಯ ಕವಿ ಹಾಗೂ ಮಯೂರಿ ಫೌಂಡೇಶನ್ ಅಧ್ಯಕ್ಷ ಜಯ ಕೆ.ಶೆಟ್ಟಿ ಅವರು ಉದ್ಘಾಟಿಸುವರು, ಕರಾವಳಿ ಲೇಖಕಿಯರ-ವಾಚಕಿಯರ ಸಂಘದ ಅಧ್ಯಕ್ಷೆ

ಮೂಡುಬಿದಿರೆ ” ಸ್ಬಚ್ಚತಾ ಹೀ ಸೇವಾ” ಆಂದೋಲನ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಚ ಭಾರತ್ ಮಿಷನ್ (ಗ್ರಾಮೀಣ), ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ, ರೇಡಿಯೋ ಸಾರಂಗ್, ಮಂಗಳೂರು ಸಹಭಾಗಿತ್ವದಲ್ಲಿ ” ಸ್ಬಚ್ಚತಾ ಹೀ ಸೇವಾ” ಆಂದೋಲನ ಕಾರ್ಯಕ್ರಮವನ್ನು ಮೂಡುಬಿದಿರೆ ತಾಲೂಕಿನ ಐತಿಹಾಸಿಕ ತಾಣ ಸಾವಿರ ಕಂಬದ ಬಸದಿ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಸ್ವಚ್ಚತೆ‌ ಹಾಗೂ ಪ್ಲಾಸ್ಟಿಕ್ ನಿಷೇಧ ಮಾಹಿತಿಯನ್ನೊಳಗೊಂಡ ಕರಪತ್ರ

ಬಾಲವನ ಪ್ರಶಸ್ತಿ 2022ಕ್ಕೆ ಹಿರಿಯ ರಂಗಕರ್ಮಿ ಅಕ್ಷರ ಕೆ.ವಿ.ಆಯ್ಕೆ

ಪುತ್ತೂರು: ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ| ಶಿವರಾಮ ಕಾರಂತ ಬಾಲವನ, ಪರ್ಲಡ್ಕ, ಪುತ್ತೂರು, ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಪ್ರತಿ ವರ್ಷ ಕೊಡಮಾಡುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ:-2022ಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ ಎಂದು ಬಾಲವನ ಪ್ರಶಸ್ತಿ 2022ರ ಆಯ್ಕೆ ಸಮಿತಿಯ ಅಧ್ಯಕ್ಷರಾದ ಮತ್ತೂರು ವಿಧಾನಸಭಾ

ತುಳು ಭಾಷೆಗೆ ಮಾನ್ಯತೆಗಾಗಿ ಪ್ರಯತ್ನ ನಿರಂತರ: ಡಾ.ಭರತ್ ಶೆಟ್ಟಿ ವೈ

ತುಳುನಾಡಿನ ಆಡುಭಾಷೆ ತುಳುವಾಗಿದ್ದು, ಇಲ್ಲಿನ ಜನತೆ ಬೆಂಗಳೂರಿಗರಂತೆ ಅಪ್ಪಟ ಶುದ್ದ ಮಾತನಾಡುತ್ತಾರೆ. ಯಾವುದೇ ಕಾರಣಕ್ಕೂ ಕನ್ನಡವನ್ನು ಯಾರೂ ವಿರೋಧಿಸುವುದಿಲ್ಲ. ತುಳು ಭಾಷಿಕಕರ ಬಗ್ಗೆ ಅಪಪ್ರಚಾರ ಸಲ್ಲದು ,ಇಂತಹ ತಪ್ಪು ಕಲ್ಪನೆಯಿಂದ ಹೊರಬರಬೇಕಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಕೋಡಿಕಲ್‍ನ ಹತ್ತು ಅಡ್ಡ ರಸ್ತೆ, ಮೂರು ಮುಖ್ಯ ರಸ್ತೆಗೆ ಸ್ಥಳೀಯ ಮನಪಾ ಸದಸ್ಯ ಕಿರಣ್ ಕುಮಾರ್ ಕೋಡಿಕಲ್ ಅವರು ಮನಪಾ