Home Archive by category Fresh News (Page 745)

ನಟಿ ಪೂಜಾ ಹೆಗ್ಡೆಗೆ ಅತ್ಯುತ್ತಮ ನಟಿ ಪ್ರಶಸ್ತಿ

2022 ರ ಪ್ರತಿಷ್ಠಿತ SIIMA ಪ್ರಶಸ್ತಿ ಸಮಾರಂಭದಲ್ಲಿ 2 ಪ್ರಶಸ್ತಿಗಳನ್ನು ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರಿಗೆ ಲಭಿಸಿದೆ.ಅವರು ಯೂತ್ ಐಕಾನ್ ಆಫ್ ಸೌತ್ ಇಂಡಿಯಾ ಪ್ರಶಸ್ತಿ ಮತ್ತು ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ನಿವೃತ್ತ ಶಿಕ್ಷಕ ಕೇಶವ ಪ್ರಕಾಶ್ ನಿಧನ

ಮೂಡುಬಿದಿರೆ : ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕೇಶವ ಪ್ರಕಾಶ್ ( 60ವ) ಅವರು ಇಂದು ಮುಂಜಾನೆ ತನ್ನ ಬೆಳುವಾಯಿಯಲ್ಲಿರುವ ಮನೆಯಲ್ಲಿ ಹೃದಯಾಘಾತವಾಗಿ ನಿಧನ ಹೊಂದಿದರು.ಕಳೆದ 30 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಎರಡು ತಿಂಗಳ ಹಿಂದೆ ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ನಿವೃತ್ತಿಯನ್ನು ಹೊಂದಿದ್ದರು.ಹಳೆಯಂಗಡಿ ಸರಕಾರಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು

ದ.ಕ. ಮೊಗರವೀರ ಮಹಾಜನ ಸಂಘದಿಂದ ವಿದ್ಯಾರ್ಥಿ ವೇತನ, ಗುರಿಕಾರರಿಗೆ ಗೌರವಧನ ವಿತರಣೆ

ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವತಿಯಿಂದ ಉಚ್ಚಿಲ ಮೊಗವೀರ ಭವನದಲ್ಲಿ ಆಯೋಜಿಸಲಾಗಿದ್ದ ಉಪ್ಪಳದಿಂದ ಶಿರೂರುವರೆಗಿನ ಮೊಗವೀರ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಗುರಿಕಾರರಿಗೆ ಗೌರವಧನ ವಿತರಣಾ ಕಾರ್ಯಕ್ರಮವನ್ನು ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಾಡೋಜ ಜಿ. ಶಂಕರ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಜೀಣೋದ್ಧಾರ ಸಂದರ್ಭ ಸಮಾಜದ

ಮೂಡುಬಿದಿರೆ : ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಶಿಕ್ಷಕರ ದಿನಾಚರಣೆ

ನಮ್ಮ ದೇಶ ಹಾಗೂ ಸದೃಢವಾದ ಸಮಾಜ ಕಟ್ಟಬಲ್ಲಂತ ಸಾಮರ್ಥ್ಯವಿರುವ ಏಕೈಕ ಸಮರ್ಥ ಕ್ಷೇತ್ರವೆಂದರೆ ಅದು ಶಿಕ್ಷಣ ಕ್ಷೇತ್ರಕ್ಕೆ ಮಾತ್ರ. ಮಕ್ಕಳಿಗೆ ಪಠ್ಯಪುಸ್ತಕದಲ್ಲಿ ಇರುವುದನ್ನು ಮಾತ್ರ ಹೇಳುವುದಲ್ಲದೆ, ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ ಹೇಳಿದರು. ಅವರು ಇಲ್ಲಿನ ಕನ್ನಡ ಭವನದಲ್ಲಿ ದ.ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ (ರಿ.) ವಿವಿಧ ವಿಷಯವಾರು ಉಪನ್ಯಾಸಕರ ಸಂಘಗಳು,

ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಗೆ ಉದ್ಯಮಿ ರಮೇಶ್ ದೇವಾಡಿಗ ಭೇಟಿ, ಮಕ್ಕಳೊಂದಿಗೆ ಚರ್ಚೆ

ಅಂಪಾರು- ಮೂಡುಬಗೆಯಲ್ಲಿರುವ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಗೆಉದ್ಯಮಿ ರಮೇಶ್ ದೇವಾಡಿಗ ವಂಡ್ಸೆ ಹಾಗೂ ತಲ್ಲೂರು ಸಪ್ತಸ್ವರ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ರವಿ ತಲ್ಲೂರು ಇವರು ಭೇಟಿ ನೀಡಿ ವಿಶೇಷ ಮಕ್ಕಳೊಂದಿಗೆ ಚರ್ಚಿಸಿದರು. ಮಕ್ಕಳು ತಮ್ಮದೇ ಆದ ಭಾಷೆಯಲ್ಲಿ ಪರಿಚಯ ಮಾಡಿಕೊಂಡರು. ಮಕ್ಕಳಿಗೆ ಅಗತ್ಯ ಇರುವ ಪಠ್ಯಪುಸ್ತಕವನ್ನು ಹಾಗೂ ಅಡುಗೆ ಮನೆಗೆ ಗ್ರೈಂಡರ್ ಕೊಡುವೆಯಾಗಿ ನೀಡಿದರು.ವಿಶೇಷ ಮಕ್ಕಳ ಸೇವೆಯಲ್ಲಿ ಜೀವನದ ಸಾರ್ಥಕತೆ ಇದೆ

ಉಳ್ಳಾಲದಲ್ಲಿ ಸರಣಿ ಅಪಘಾತ

ಉಳ್ಳಾಲ : ಐದು ವಾಹನಗಳ ನಡುವೆ ಸರಣಿ ಅಪಘಾತ ನಡೆದು ಹಲವರು ಗಾಯಗೊಂಡ ಘಟನೆ ರಾ.ಹೆ 66 ರ ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಭಾನುವಾರ ತಡರಾತ್ರಿ ವೇಳೆ ಸಂಭವಿಸಿದೆ.ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಇನೋವಾ ಕಾರು ಎದುರುಗಡೆಯಿದ್ದ ವಾಹನವೊಂದನ್ನು ಓವರ್ ಟೇಕ್ ನಡೆಸಲು ಏಕಾಏಕಿ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂಬದಿಯಲ್ಲಿದ್ದ ಐ20 ಕಾರು ಇನೋವಾ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಬಳಿಕ ರಸ್ತೆಯಲ್ಲಿ ಒಂದು ಸುತ್ತು ತಿರುಗಿದ ಪರಿಣಾಮ, ಮತ್ತದೇ

ಸೌಪರ್ಣಿಕಾ ನದಿಯಲ್ಲಿ ತೀರ್ಥಸ್ನಾನದ ವೇಳೆ ಕೊಚ್ಚಿಹೋದ ಮಹಿಳೆ : ಶವ ಪತ್ತೆ

ಬೈಂದೂರು : ಕೊಲ್ಲೂರಿಗೆ ಯಾತ್ರಾರ್ಥಿಗಳಾಗಿ ಬಂದು, ಸೌಪರ್ಣಿಕಾ ನದಿಯಲ್ಲಿ ತೀರ್ಥ ಸ್ನಾನ ಮಾಡುವಾಗ ಆಕಸ್ಮಿಕವಾಗಿ ಕಾಲುಜಾರಿ ನದಿಪಾಲಾದ ಮಹಿಳೆಯ ಶವ ಇಂದು ಭಾನುವಾರ ಮಧ್ಯಾನ್ಹ ನಡೆದಿದೆ. ಘಟನಾ ಸ್ಥಳದಿಂದ ಮೂರೂವರೆ ಕಿ. ಮೀ. ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಮುಳುಗು ತಜ್ಞ , ಸಾಹಸಿಗ ಈಶ್ವರ್ ಮಲ್ಪೆ ಅವರು ಸತತ ಪರಿಶ್ರಮದಿಂದ ಹರಿವ ನೀರಿನ ಸೆಳೆತವನ್ನೂ ಜಯಿಸಿ, ಸಾಹಸದಿಂದ ಶವ ಪತ್ತೆಹಚ್ಚಿದ್ದಾರೆ. ಹೌದು ಆದರೆ, ಈಶ್ವರ್ ಅವರು ತಮ್ಮ ಸಂಗಡಿಗರೊಂದಿಗೆ ಛಲ

ಶಾಲಾ ಮಕ್ಕಳಿಗೆ ದಸರಾ ರಜೆ ನೀಡುವಂತೆ ಸಚಿವರಿಗೆ ಶಾಸಕರು ಮನವಿ

ಶಾಲಾ ಮಕ್ಕಳಿಗೆ ದಸರಾ ರಜೆ ನೀಡುವ ವಿಚಾರದಲ್ಲಿ, ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಶಿಕ್ಷಣ ಸಚಿವರಾದ‌ ಬಿ.ಸಿ ನಾಗೇಶ್ ಅವರೊಂದಿಗೆ ಚರ್ಚಿಸಿ ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಕಾಮತ್, 26ರಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತಿದ್ದು ಶಾಲಾ ಮಕ್ಕಳ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಶಾಸಕರು ಮನವಿ ಮಾಡಿದ್ದೇನೆ. ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ,

ಬೈಂದೂರು ತಾಲೂಕು ಬಿಲ್ಲವರ ಸಂಘ : ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆ

ಬೈಂದೂರು ತಾಲೂಕು ಬಿಲ್ಲವರ ಸಂಘಇವರ ನೇತ್ರತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನದಪ್ರಯುಕ್ತ ಬೃಹತ್ ಗುರು ಸಂದೇಶ ವಾಹನ ಜಾಥಾ ಇಂದು ಬೈಂದೂರು ಹೊಸ ಬಸ್ ನಿಲ್ದಾಣ ದಿಂದ ಹೊರಟು ಮರವಂತೆ ಮೈದಾನದಲ್ಲಿ ಮುಕ್ತಾಯಗೊಂಡಿತು.ಬೈಂದೂರು ತಾಲೂಕು ಬಿಲ್ಲವ ಸಂಘದ ಗೌರವಾಧ್ಯಕ್ಷರಾದ ಶ್ರೀ ಕೆ ಗೋಪಾಲ ಪೂಜಾರಿಯವರುಕಾರ್ಯಕ್ರಮವನ್ನು ಉದ್ಘಾಟಿಸಿದರು ಮಾತನಾಡಿದರು. ಎಸ್ ರಾಜು ಪೂಜಾರಿ ಕಾರ್ಯಕ್ರಮ ಉದ್ದೇಶಿಸಿ ಪ್ರಾಸ್ತಾವಿಕ ಮಾತನಾಡಿದರು.ಈ

ಪಡುಮಾರ್ನಾಡು ಮಹಿಳೆಗೆ ಹಲ್ಲೆ : ಇಬ್ಬರ ಬಂಧನ

ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ ಕಲ್ಲೊಟ್ಟುವಿನಲ್ಲಿ ಕುಮ್ಮಿ ಜಾಗದ ವಿಚಾರದಲ್ಲಿ ವಿವಾದ ಉಂಟಾಗಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಶನಿವಾರ ಬಂದಿ ಸಿದ್ದಾರೆ. ಪಡುಮಾರ್ನಾಡು ಗ್ರಾ.ಪಂ. ಉಪಾಧ್ಯಕ್ಷ ಅಭಿನಂದನ್ ಬಲ್ಲಾಳ್ ಮತ್ತು ಅವರ ಸ್ನೇಹಿತ ಹರೀಶ್ ಹೆಗ್ಡೆ ಬಂಧಿತರು. ಪಡುಮಾರ್ನಾಡಿನಲ್ಲಿ ಕುಮ್ಮಿ ಹಕ್ಕಿಗೆ ಸಂಬಂಧಿಸಿದಂತೆ ಹರೀಶ್ ಮತ್ತು ಶಕುಂತಳ ಮಧ್ಯೆ ವ್ಯಾಜ್ಯ