ಉಜಿರೆ:ಶ್ರೀ.ಧ.ಮಂ ಪದವಿ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮವು೧೫/೧೧/೨೦೨೧ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಹೊಸ ಶಿಕ್ಷಣ ನೀತಿಯನ್ನು ಕಾಲೇಜಿನಲ್ಲಿ ಸಮರ್ಪಕವಾಗಿ ಅನುಷ್ಠಾನದ ತಯಾರಿ ನಡೆಯುತ್ತಿದೆ.ದೇಶದಲ್ಲಿ ಕೇವಲ ೨೭% ಯುವಜನತೆ ಮಾತ್ರ ಉನ್ನತ
ವೇತನ ನೀಡಲು ವಿಳಂಬಿಸಿದ ಹೆಜಮಾಡಿ ಟೋಲ್ ಪ್ಲಾಜಾದ ಟಿಬಿಆರ್ ಕಂಪನಿಯ ನಿರ್ಲಕ್ಷ್ಯದ ವಿರುದ್ದ ತೊಂಭತ್ತಕ್ಕೂ ಅಧಿಕ ಸಿಬ್ಬಂದಿಗಳು ಸಿಡಿದ್ದೆದ್ದು ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ನಡೆಸಿದ ಹಿನ್ನಲೆಯಲ್ಲಿ ಸರಿ ಸುಮಾರು ಇಪ್ಪತ್ತಾರು ಗಂಟೆಗಳ ಬಳಿಕ ವೇತನ ನೀಡುವ ಮೂಲಕ ಸಮಸ್ಯೆ ಬಗೆಹರಿದು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಗುರುವಾರ ಮುಂಜಾನೆ ಎಂಟು ಗಂಟೆಗೆ ವೇತನಕ್ಕಾಗಿ ಮುಷ್ಕರ ಆರಂಭಿಸಿದ ಸಿಬ್ಬಂದಿಗಳನ್ನು ಕೆಲ ಅಧಿಕಾರಿಗಳು ಮನವೊಲಿಸಿ ಕರ್ತವ್ಯ
ಮಂಗಳೂರಿನ ವೆಲೆನ್ಸಿಯಾದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿಯಾದ ಅನನ್ಯಾ ಸಿಂಗ್ ಅವರು ’ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಕಿರೀಟವನ್ನು ಮುಡಿಗೇರಿಸಿದ್ದಾರೆ ನವದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್‌ಟೈನ್‌ಮೆಂಟ್ ಪ್ರೊಡಕ್ಷನ್ ಆಯೋಜಿಸಿರುವ ’ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್- 2021’ಸ್ಪರ್ಧೆಯಲ್ಲಿ ಅನನ್ಯಾ ಸಿಂಗ್ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಅವರು
ಮಂಜೇಶ್ವರ: ಕೇರಳ ಗಡಿ ಭಾಗದಿಂದ ಪ್ರಯಾಣಿಕರನ್ನು ಹೇರಿಕೊಂಡು ಆಗಮಿಸುತ್ತಿರುವ ಬಸ್ಸುಗಳು ಕೇರಳ ಕರ್ನಾಟಕದ ಗಡಿಯಲ್ಲಿರುವ ಕರ್ನಾಟಕದಲ್ಲಿ ಪ್ರಯಾಣಿಕರನ್ನು ಇಳಿಸಿ ಟೋಲ್ ಗೇಟ್ ಪಕ್ಕದಲ್ಲೇ ನಿಲುಗಡೆಯನ್ನು ನೀಡುವುದನ್ನು ಪ್ರತಿಭಟಿಸಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಸ್ಥಳೀಯ ವ್ಯಾಪಾರಿಗಳ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಿದರು. ಎಲ್ಲಾ ಖಾಸಗಿ ಬಸ್ಸುಗಳು ಕೊರೊನ ಲಾಕ್ ಡೌನ್ ಗಿಂತ ಮೊದಲು ಯಾವರೀತಿಯಲ್ಲಿ ಯಾವ ಸ್ಥಳಗಳಲ್ಲಿ ನಿಲುಗಡೆಯಾಗುತಿತ್ತೋ ಅದನ್ನೇ
ಪುತ್ತೂರು ತಾಲೂಕಿನ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾರ್ಪಾಡಿ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 21 ರಂದು ಆರಂಭಗೊಂಡು ಜನವರಿ 7 ರ ತನಕ ನಿರಂತರ 48 ದಿನಗಳ ಕಾಲ (ಒಂದು ಮಂಡಲ) ಸಂಜೆ ವಿಶೇಷ ರಂಗಪೂಜೆ ನಡೆಯಲಿದೆ. ಮೂರನೇ ವರ್ಷದಲ್ಲಿ ನಡೆಯುತ್ತಿರುವ ಈ ವಿಶೇಷ ರಂಗಪೂಜೆಯು ಕಾರ್ಪಾಡಿ, ಶ್ರೀ. ಸುಬ್ರಹ್ಮಣ್ಯ ಕ್ಷೇತ್ರದ ವಿಶೇಷತೆಗಳಲ್ಲಿ ಒಂದು. ನಿರಂತರ 48 ದಿನಗಳ ಕಾಲ ನಡೆಯುವ ರಂಗಪೂಜೆಯಲ್ಲಿ ಪ್ರತೀದಿನ 12 ಕುಟುಂಬಗಳಿಗೆ ಸೇವೆ ಮಾಡಿಸಲು ಅವಕಾಶವಿದೆ.
ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ವಿದೇಶಿ ಮಿಷನರಿಗಳು ಸಲ್ಲಿಸಿದ ಸೇವೆಗಳು ಸ್ಮರಣೀಯ. ಇದಕ್ಕೆ ಪೂರಕವಾಗಿ ದೇಶೀಯ ಸಭಾ ಪಾಲಕರುಗಳು ಸಭಾ ಪ್ರಾಂತ್ಯದ ಅಭಿವೃದ್ಧಿಗಾಗಿ ಸಭಾ ಸೇವೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ. ಇಂಥವರಲ್ಲಿ ರೆ. ಜಾರ್ಜ್ ಎ. ಬೆರ್ನಾಡ್ ಕೂಡ ಒಬ್ಬರು. ಇಂಥವರನ್ನು ಸ್ಮರಿಸಿ ಇವರ ಹೆಸರಿನಲ್ಲಿ ಕರ್ನಾಟಕ ಥಿಯಲಾಜಿಕಲ್ ಕಾಲೇಜಿನ ಮುಖಾಂತರ ಗಾರ್ಡನ್ ಒಂದನ್ನು ನಿರ್ಮಾಣ ಮಾಡಿರುವುದು ಅಭಿನಂದನೀಯ ಎಂದು ಚರ್ಚ್ ಆಫ್ ಸೌತ್ ಇಂಡಿಯಾ
ಕೇಂದ್ರ ಸರ್ಕಾರ ಕೊನೆಗೂ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದಿದೆ. ಇದರಿಂದ ಪ್ರಪಂಚದಲ್ಲಿ ಚಳುವಳಿಗಳಿಗೆ ಜಯ ಯಾವತ್ತೂ ಸಿಗುತ್ತದೆ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೇಳಿದರು.ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಮಸೂದೆಯನ್ನು ವಾಪಸ್ ಪಡೆಯುತ್ತೇವೆ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇಡೀ ಭಾರತದ ದೇಶದಲ್ಲಿ ಎಲ್ಲಾ ಜನರು ಒಗ್ಗಟ್ಟಾಗಿ ಹೋರಾಟಕ್ಕೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಾಯಿನಾಥ ಶೇಟ್ ಅವರನ್ನು ದೈವಜ್ಞ ಬ್ರಾಹ್ಮಣ ಸಮಾಜ ಕುಂದಾಪುರ ವತಿಯಿಂದ ಸನ್ಮಾನಿಸಲಾಯಿತು. ಇದೆ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಸ್ವಾತಿ ಜಿ ಶೇಟ್ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾತ್ವಿಕ್ ಕೋಟೇಶ್ವರ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜ್ಯುವೆಲ್ ಅಸೋಸಿಯೇಷನ್ ಕುಂದಾಪುರ ಇದರ ಅಧ್ಯಕ್ಷರಾದ ಸತೀಶ್ ಶೇಟ್ ನಾಡ, ಅನುಗ್ರಹ
ಉಪಚುನಾವಣೆ ಸೋಲು ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಹಾಗಾಗಿ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ಸಾಧ್ಯವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಹೇಳಿದರು. ಅವರು, ಕೃಷಿ ಮಸೂದೆ ವಿರೋಧಿಸಿ ಹೋರಾಟ ನಡೆಸಿದ ರೈತರ ಹೋರಾಟಕ್ಕೆ ಗೆಲುವು ಸಿಕ್ಕಿರುವುದಕ್ಕೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿ ಮಾತನಾಡಿದರು. ರೈತರ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಸೋಲಿನಿಂದ ಮೋದಿ ಸರ್ಕಾರ
ಸುರತ್ಕಲ್ ಮುಕ್ಕದ ಶ್ರೀನಿವಾಸ ವಿಶ್ವವಿದ್ಯಾಲಯ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಸಂಧ್ಯಾ ಶೆಣೈ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ವೈಜ್ಞಾನಿಕ ಪ್ರಬಂಧಗಳಿಗೆ ಇತರ ಸಂಶೋಧಕರಿಂದ ಸಿಗುವ ಉಲ್ಲೇಖಗಳನ್ನಾಧರಿಸಿ ರಾಯಲ್ ಸೊಸೈಟಿ ಆಫ್ ಕೆಮಿಸ್ಟ್ರಿ, ಲಂಡನ್ ಅವರು ತಯಾರಿಸಿದ ಪಟ್ಟಿಯಲ್ಲಿ ಡಾ. ಸಂಧ್ಯಾ ಶೆಣೈ ಸ್ಥಾನ ಪಡೆದುಕೊಂಡಿದ್ದಾರೆ. ವಸ್ತು ವಿಜ್ಞಾನ ಮತ್ತು ರಸಾಯನ


















