ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದು ಅವರನ್ನು ಅವರ ಅಭಿಮಾನಿಗಳು ಸ್ವಾಗತಿಸಿದರು. ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಸೋಮವಾರ ಪ್ರದಾನ ಮಾಡಲಾಯಿತು. ಪದ್ಮಶ್ರೀ ಸ್ವೀಕರಿಸಿ ಮಂಗಳೂರು ತಲುಪಿದ ಹರೇಕಳ
ಉಜಿರೆಯಲ್ಲಿ ಜ.8,9 ರಂದು ಎರಡು ದಿನಗಳ ಕಾಲ ನಡೆಯಲಿರುವ ಅಖಿಲಭಾರತ ಸಾಹಿತ್ಯ ಪರಿಷತ್ತಿನ ರಾಜ್ಯ ಮಟ್ಟದ ಮೂರನೇ ರಾಜ್ಯ ಸಮ್ಮೇಳನದ ಕುರಿತಾಗಿ ಪೂರ್ವ ತಯಾರಿ ಸಭೆ ಇತ್ತೀಚೆಗೆ ಉಜಿರೆ ಶಾರದ ಮಂಟಪದಲ್ಲಿ ನಡೆಯಿತು.ಅಖಿಲಭಾರತ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ಈ ಸಂದರ್ಭ ಮಾತನಾಡಿ ಉಜಿರೆಯಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ರಾಜ್ಯದಾದ್ಯಂತ ಅತೀ ಹೆಚ್ಚು ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಲು ಆಸಕ್ತರು ಕಾತುರದಿಂದ ಕಾಯುತ್ತಿದ್ದಾರೆ. ರಾಜ್ಯದ
ಕೊರೊನಾ ಆತಂಕ ಮರೆಯಾಗುತ್ತಿದ್ದಂತೆ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿದ್ದು, ಬರೋಬ್ಬರಿ ಒಂದೂವರೆ ವರ್ಷಗಳ ಬಳಿಕ ಅಂಗನವಾಡಿಗಳಲ್ಲಿ ಮಕ್ಕಳ ಕಲರವ ಮೊಳಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಅಂಗನವಾಡಿ ಶಾಲೆಗಳನ್ನು ಆರಂಭಿಸಲಾಗಿದೆ. ಇಂದು ಶಾಲೆಗೆ ಬಂದ ಮಕ್ಕಳಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಅಂಗನವಾಡಿ ಶಾಲೆಯ ಸಿಬ್ಬಂದಿ ವರ್ಗದವರು ಪುಟಾಣಿ ಮಕ್ಕಳನ್ನು ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು.
AJAY KAUSHIK NORONHA has completed Ph.D from Srinivas university in Mechanical Engineering with topic “A STUDY ONIMPLEMENTATION OF LEAN SIX SIGMA STRATEGY IN DENTAL COLLEGE HOSPITAL” under the guidance of Dr Suma Bhat of Srinivas University and Dr Shreeranga Bhat of St Joseph Engineering College Mangalore
ಸುರತ್ಕಲ್ ಪರಿಸರಕ್ಕೆ ವೀರ ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ : ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ
ಸುರತ್ಕಲ್ ಪರಿಸರಕ್ಕೆ ವೀರಾ ಸಾವರ್ಕರ್ ಹೆಸರಿಡುವ ವಿಚಾರ ಬಗ್ಗೆ ಕಾಂಗ್ರೆಸ್ ಇತರ ಪಕ್ಷಗಳಿಂದ ವಿರೋಧ ಪ್ರತಿಭಟನೆ ವ್ಯಕ್ತವಾಗಿದೆ. ವೀರ ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ. ಅವ್ರೇನು ದೇಶ ದ್ರೋಹಿ ಅಲ್ಲ …ದುರಾದೃಷ್ಟ ಅವರನ್ನು ದೇಶ ದ್ರೋಹಿ ಎಂದು ಬಿಂಬಿಸುತ್ತಾರೆ. ದೇಶದಲ್ಲಿ ಅನೇಕ ಕಡೆ ವಿದೇಶಿಯರ ಹೆಸರಿದೆ ಅದಕ್ಕೆ ಯಾರೂ ವಿರೋಧ ವ್ಯಕ್ತ ಪಡಿಸಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು. ಅವರು ಮಂಗಳೂರಿನ ಬಿಜೆಪಿ
ಬಲ್ಲಾಳ್ ಭಾಗ್‍ನಲ್ಲಿ ಹಿಂದೂಗಳ ಮೇಲೆ ಅನ್ಯಧರ್ಮದವರಿಂದ ನಡೆದಿರುವ ದೌರ್ಜನ್ಯದ ಬಗ್ಗೆ ಕೂಲಂಕುಷವಾಗಿ ಮತ್ತು ಪಾರದರ್ಶಕವಾಗಿ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುವಂತೆ ಬಲ್ಲಾಳ್ ಭಾಗ್ ಫ್ರೆಂಡ್ಸ್‍ನ ರಕ್ಷಿತ್ ಕೊಟ್ಟಾರಿ ಅವರು ಆಗ್ರಹಿಸಿದ್ದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಲ್ಲಾಳ್ ಭಾಗ್ ಪರಿಸರದ ಸುತ್ತಮುತ್ತ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸೇವೆ
ಕಡಬ: ನಮ್ಮದು ಅತೀ ಹೆಚ್ಚು ಸಂಖ್ಯೆಯಲ್ಲಿ ಯುವಜನರನ್ನು ಹೊಂದಿರುವ ದೇಶ. ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಪ್ರಮುಖವಾದುದು. ಆದುದರಿಂದ ಯುವಜನರು ದೇಶಪ್ರೇಮವನ್ನು ಮೈಗೂಡಿಸಿಕೊಂಡು ಸಂಘಟನಾತ್ಮಕವಾಗಿ ಬಲಗೊಳ್ಳಬೇಕು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ನುಡಿದರು. ಅವರು ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಜರಗಿದ ಕಡಬ ತಾಲೂಕು ಯುವಜನ ಒಕ್ಕೂಟದ ಪದಾದಿಕಾರಿಗಳ ಪದಗ್ರಹಣ ಸಮಾರಂಭವನ್ನು
ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಂಬೇಡ್ಕರ್ ಅಪತ್ ಬಾಂಧವ ಟ್ರಸ್ಟ್ ನ ಅಧ್ಯಕ್ಷನ ವಿರುದ್ದ ನ .7ರಂದು ಪೊಕ್ಸೋ ಪ್ರಕರಣ ದಾಖಲಾಗಿದೆ. ರಾಜು ಹೊಸ್ಮಠ ಆರೋಪಿಯಾಗಿದ್ದು ಈತನ ವಿರುದ್ದ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತ: ಕೌಡಿಚ್ಚಾರ್ ನಿವಾಸಿ ಸದ್ಯ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಸಂತ್ರಸ್ತೆಯ ಕುಟುಂಬವೂ ವಾಸಿಸುತಿದೆ. ಸಂತ್ರಸ್ತೆಗೆ ಆರೋಪಿಯ ಪರಿಚಯವೂ 2019 ರಲ್ಲಿ ಆಗಿತ್ತು ಎಂದು
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿಗಳು ಮತ್ತು ಅಂಗನವಾಡಿಗಳು ಆರಂಭವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳ ಕಲರವ ಮನೆಮಾಡಿದೆ. ಇಂದಿನಿಂದ ಅಂಗನವಾಡಿ, ಎಲ್‍ಕೆಜಿ ಮತ್ತು ಯುಕೆಜಿ ತರಗತಿ ಆರಂಭವಾಗಿದ್ದು ಮಕ್ಕಳ ಶಾಲೆಗಳ ಕಡೆ ಮುಖ ಮಾಡಿದ್ದಾರೆ. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ತೆರೆಯಬಹುದಾಗಿದೆ. ಮುಂದಿನ ಸೂಚನೆವರೆಗೆ ಪೂರಕ ಪೌಷ್ಟಿಕ ಆಹಾರವನ್ನು
ವಿಜಯಪುರ ನಗರದ ಗಾಂಧಿ ಚೌಕ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಖತರ್ನಾಕ್ ಬೈಕ್ ಕಳ್ಳರನ್ನು ಬಂಧಿಸಿ ಅವರಿಂದ 36 ಬೈಕ್‌ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಜಯಪುರ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಅವರು ಒಟ್ಟು 36 ವಿವಿಧ ಕಂಪನಿಯ ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ, ಬೈಕ್ ಕಳ್ಳತನ ನಡೆಸುತ್ತಿದ್ದ ತೌಸೀಫ್ ಮಹಿಬೂಬ ಕಲಾದಗಿ, ಸಮೀರ


















