Home Archive by category Fresh News (Page 852)

ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ರೈತರ ಹತ್ಯೆ ಘಟನೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ವಾಹನ ಹರಿಸಿ ಮೂರು ಜನ ರೈತರ ಹತ್ಯೆ ಮಾಡಿರುವುದನ್ನು ಖಂಡಿಸಿ ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ರೈತ, ದಲಿತ, ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ

ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾದ ಭೂಪ

ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ 2017ರ ಜೂನ್ 18ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ

ನಂದಿಕೂರಿನಲ್ಲಿ ಭಾರತಮಾತ ಪೂಜನಾ ಕಾರ್ಯಕ್ರಮ ಹಾಗೂ ದುರ್ಗಾ ದೌಡ್ ಬಗೆಗಿನ ಪೂರ್ವಭಾವಿ ಸಭೆ

ಹಿಂದು ಜಾಗರಣಾ ವೇದಿಕೆ ನಂದಿಕೂರು ಘಟಕದ ಉಡುಪಿಯಲ್ಲಿ ನಡೆಯಲಿರುವ ಭಾರತ ಮಾತಾ ಪೂಜನಾ ಕಾರ್ಯಕ್ರಮ ಮತ್ತು ದುರ್ಗಾ ದೌಡ್ ಪೂರ್ವಭಾವಿಯಾಗಿ ವಿಶೇಷ ಬೈಠಕ್ ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಪ್ರತೀಕ್ ಕೋಟ್ಯಾನ್ ನವರ ನಂದಿಕೂರಿನ ಮನೆಯಲ್ಲಿ ನಡೆಯಿತು. ಈ ಸಂದರ್ಭ ನಾಗರಾಜ ಭಟ್ ರವರು ಕಾಶಿ,ಅಯೋಧ್ಯೆ ಕ್ಷೇತ್ರ ಸಂದರ್ಶಿಸಿ ತಂದಿದ್ದ ಪವಿತ್ರವಾದ ತೀರ್ಥಪ್ರಸಾದವನ್ನು ಸದಸ್ಯರಿಗೆ ನೀಡಿ ದೀಪ ಬೆಳಗಿಸಿ ಪುಷ್ಪಾರ್ಚನೆಗೈದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಸ್ಕ್ರೂ ಬಳಸಿ ಸ್ವಾಮಿ ವಿವೇಕಾನಂದರ ಕಲಾಕೃತಿ ರಚಿಸಿದ ಚಾರ್ಲ್ಸ್ ಕೆ.ಸಿ.

ಮಂಗಳೂರಿನ ಸೃಜನಶೀಲ ಕಲಾವಿದ ಚಾರ್ಲ್ಸ್ ಕೆ.ಸಿ ಅವರು ಸ್ಕ್ರೂಗಳನ್ನು ಬಳಸಿ ಸ್ವಾಮಿ ವಿವೇಕಾನಂದರ ಕಲಾಕೃತಿಯನ್ನು ಬಿಡಿಸಿ ವಿಶ್ವ ದಾಖಲೆ ಸೃಷ್ಠಿಸಿದ್ದಾರೆ. ಅವರು 2,768 ಸ್ಕ್ರೂಗಳನ್ನು ಬಳಸಿ ಸ್ವಾಮಿ ವಿವೇಕಾನಂದ ಕಲಾಕೃತಿಯನ್ನು ರಚಿಸಿ ದಾಖಲೆ ನಿರ್ಮಿಸಿದ್ದಾರೆ. ಡಾ. ಸೋನಿಯಾ ನೊರೊಹ್ನಾ ಹಾಗೂ ಕಾಲೇಜಿನ ಡೀನ್ ಪ್ರೊ. ಕೀರ್ತನ್ ರಾಜ್ ಅವರ ಮಾರ್ಗದರ್ಶನದಲ್ಲಿ ಚಾರ್ಲ್ಸ್ ಅವರು ಈ ಒಂದು ಕಲಾಕೃತಿಯನ್ನು ರಚಿಸಿದ್ದಾರೆ. ಚಾರ್ಲ್ಸ್ ಅವರ ಈ ಕಲಾಕೃತಿಗೆ ವ್ಯಾಪಕ

ಅಮೆಝಾನ್ ಲೀಗಲ್ ಫೀ ಪ್ರಕರಣ: ಪ್ರಧಾನಿ ಮೋದಿ ಸ್ಪಷ್ಟನೆ ನೀಡಲಿ: ಡಾ. ಅಮೀ ಯಜ್ಞಿಕ್

 ಇ ಕಾಮರ್ಸ್ ಸಂಸ್ಥೆಯಾದ ಅಮೆಝಾನ್‌ನ ಕಾನೂನು ಸಲಹೆಗಾರರು ಭಾರತದ ಸರಕಾರದ ಅಧಿಕಾರಿಗಳಿಗೆ ನೀಡಿದ್ದಾರೆನ್ನುವ ೮,೫೪೬ ಕೋಟಿ ರೂ.ಗಳು ಲಂಚ ಪ್ರಕರಣವಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟ ಪಡಿಸಬೇಕು ಎಂದು ಎಐಸಿಸಿ ವಕ್ತಾರೆ, ರಾಜ್ಯಸಭಾ ಸದಸ್ಯೆ ಡಾ. ಅಮೀ ಯಜ್ಞಿಕ್ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಇದೊಂದು ಬಹುದೊಡ್ಡ ಹಗರಣವಾಗಿದೆ. ಈ ಹಣ ಎಲ್ಲಿಗೆ ಹೋಗುತ್ತಿದೆ.

ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ಕಾರ್ಯಕಾರಿಣಿ ಸಭೆ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ದೇರೆಬೈಲು ಕೊಂಚಾಡಿ ಶ್ರೀ ಮಹಾಂಕಾಳಿ ದೈವಸ್ಥಾನದ ಬಳಿ ನಡೆದ ಕಾರ್ಯಕಾರಿಣಿ ಸಭೆಯನ್ನು ಶಾಸಕ ಡಾ. ವೈ.ಭರತ್ ಶೆಟ್ಟಿ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಮಂಡಲ ಎ ಸ್ ಸಿ ಮೋರ್ಚಾ ಅಧ್ಯಕ್ಷ ಆನಂದ ಪಾಂಗಳ, ಮೋರ್ಚಾ ಜಿಲ್ಲಾ ಅಧ್ಯಕ್ಷ ವಿನಯ ನೇತ್ರ ,ಮಂಡಲ ಪ್ರದಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಮ.ನ.ಪಾ ಸದಸ್ಯೆಯರಾದ ರಂಜಿನಿ

ಪ್ರಧಾನಿ ಮೋದಿ ಜನ್ಮದಿನಾಚರಣೆ ಪ್ರಯುಕ್ತ ಸೇವಾ ಸಮರ್ಪಣ ಕಾರ್ಯಕ್ರಮ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನ ಪ್ರಯುಕ್ತ “ಸೇವಾ ಸಮರ್ಪಣ ” ಎಂಬ ಕಾರ್ಯಕ್ರಮದ ಅಂಗವಾಗಿ ಪಡುಬಿದ್ರಿ ಗ್ರಾ.ಪಂ. ಸದಸ್ಯ ಮಹೇಂದ್ರ ಎಂಬವರ ಮನೆಯಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಅಧ್ಯಕ್ಷತೆಯಲ್ಲಿ ಭಾನುವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತದನಂತರ ಭಾರತ ಮಾತೆ, ಪಂಡಿತ್ ದೀನ್ ದಯಾಳ್ ,ಶ್ಯಾಮ ಪ್ರಸಾದ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಭವಾನಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು

ಭವಾನಿಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58,389 ಮತಗಳಿಂದ ಜಯಗಳಿಸಿದ್ದಾರೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದು, ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರು. ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ ಅವರನ್ನು 58 ಸಾವಿರ ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಮಮತಾ ಬ್ಯಾನರ್ಜಿಗೆ ಉಪಚುನಾವಣೆ ಗೆಲುವು ಮುಖ್ಯವಾಗಿತ್ತು. ಆರಂಭಿಕ

ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆ ಹಾಸ್ಯಾಸ್ಪದ: ಕಾಂಗ್ರೆಸ್ ಮುಖಂಡರ ಜಂಟಿ ಸುದ್ದಿಗೋಷ್ಟಿ

ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂಬ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್ ಹೇಳಿಕೆ ಹಾಸ್ಯಸ್ಪದ ಎಂಬುದಾಗಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ ಹಾಗೂ ಕೆ.ಪಿ.ಸಿ.ಸಿ ಸಂಯೋಜಕ ನವೀನ್‌ಚಂದ್ರ ಜೆ. ಶೆಟ್ಟಿ ತಿಳಿಸಿದ್ದಾರೆ. ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ಜಂಟಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಾದ-ವಿವಾದ