Home Archive by category Fresh News (Page 853)

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ: ಮಂಗಳೂರು ವಿವಿ ಕುಲಪತಿ ತಂಡ ಚಾಂಪಿಯನ್

ಮಂಗಳೂರು: ಮಂಗಳೂರು ವಿವಿ ಕುಲಪತಿ ತಂಡ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತ, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅಡ್ಯಾರ್‌ನ ಸಹ್ಯಾದ್ರಿ

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ಗೆ ’ಸಿದ್ಧಗಂಗಾ ಶ್ರೀ ರಾಜ್ಯ ಪ್ರಶಸ್ತಿ’

ಮಂಗಳೂರು: ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಸೊಸೈಟಿ ಬೆಂಗಳೂರು ಹಾಗೂ ಜ್ಞಾನ ಮಂದಾರ ಟ್ರಸ್ಟ್ (ರಿ) ಬೆಂಗಳೂರು ಇದರ ನೇತೃತ್ವದಲ್ಲಿ ವಿವಿಧ ಕ್ಷೇತ್ರದ ಗಣ್ಯರನ್ನು ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಕ್ರೀಡಾ ಬರವಣಿಗೆಗಾಗಿ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಪ್ರತಿಷ್ಠಿತ ’ ಸಿದ್ಧಗಂಗಾ ಶ್ರೀ ರಾಜ್ಯ ಪ್ರಶಸ್ತಿ’ಗೆ ಪಾತ್ರರಾಗಿದ್ದಾರೆ. ಜಗದೀಶ್ಚಂದ್ರ ಅಂಚನ್ ಸುಮಾರು 30 ವರ್ಷಗಳಿಂದ ಕ್ರೀಡಾ ಅಂಕಣ ಹಾಗೂ ಕ್ರೀಡಾ ಲೇಖನಗಳ ಮೂಲಕ ರಾಜ್ಯ, ಅಂತರ್

ಸಮುದ್ರಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಮಂಗಳೂರಿನ ಪಣಂಬೂರು  ಬೀಚಿನಲ್ಲಿ  ಸಮುದ್ರದ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗುತ್ತಿದ್ದ ಬೆಂಗಳೂರಿನ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.   ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಕೃಷ್ಣ ಪ್ರಸಾದ್ (20) ಮತ್ತು  ರಕ್ಷಿತ್ (20) ಎಂಬಿಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದರು.  ಸಂಜೆಯ ವೇಳೆಗೆ ಪಣಂಬೂರು ಬೀಚಿಗೆ ಬಂದಿದ್ದು ಸಮುದ್ರಕ್ಕೆ ಇಳಿದಿದ್ದರು. ಕೆಲ ಹೊತ್ತಿನಲ್ಲಿ ಸಮುದ್ರದ ಸೆಳೆತಕ್ಕೆ ಇವರು ಸಿಲುಕಿಕೊಂಡು ಅಪಾಯಕ್ಕೆ

ಮೂಡುಬಿದಿರೆ ಸಂಸ್ಕೃತ ಗುರು ಅನಂತ ಜೋಷಿ ನಿಧನ

ಮೂಡುಬಿದಿರೆ: ಇಲ್ಲಿನ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸಹಿತ ಹಲವು ಧಾರ್ಮಿಕ ಮುಖಂಡರ ಸಂಸ್ಕೃತ ಗುರು, ಆಧ್ಯಾತ್ಮ ಅವದೂತ ಮೂಲತಃ ಬೆಳಗಾವಿ ಖಾನಪುರದ ಅನಂತ ಜೋಷಿ(81) ಅವರು ಪಾರ್ಶ್ವಕೀರ್ತಿ ಅತಿಥಿಗೃಹದಲ್ಲಿ  ನಿಧನರಾದರು. ಅವರು ಕಳೆದ ಕೆಲವು ವರ್ಷಗಳಿಂದ ರಮಾರಾಣಿ ಶೋದ ಸಂಸ್ಥಾನದಲ್ಲಿ ಸಂಸ್ಕೃತ ಪಾಠ ಬೋಧಿಸುತ್ತದ್ದರು. ಬನಾರಸ್ ಬೈದನಿಘಾಟ್ ನಲ್ಲಿ ಸುಮಾರು 30 ವರ್ಷ ಮೊದಲು ಮೂಡುಬಿದಿರೆ ಭಟ್ಟಾರಕಶ್ರೀ ಅವರಿಗೆ

ಕಡಬ ತಹಶಿಲ್ದಾರ್ ಕಛೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜಯಂತಿ ಆಚರಣೆ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶಿಲ್ದಾರ್ ಅನಂತಶಂಕರ್ ಮಾತನಾಡಿ ಗಾಂಧೀಜಿವರು ತತ್ವಾದರ್ಶ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಇಂದಿನ ಯುವಜನತೆ ಹಿಂದೆ ಬೀಳುತ್ತಿದೆ. ಸಮಗ್ರಭಾರತವನ್ನು ಸದೃಢವಾಗಿ ಕಟ್ಟುವಲ್ಲಿ ಯವಜನರ ಪಾತ್ರ

ಬೀಚ್ ಫ್ರೆಂಡ್ಸ್ ಹೆಜಮಾಡಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೀಚ್ ಫ್ರೆಂಡ್ಸ್,(ರಿ) ಹೆಜಮಾಡಿ ಇದರ ವತಿಯಿಂದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರು ಶಾಸ್ತ್ರೀ ಯವರ ಜನ್ಮದಿನಾಚರಣೆಯ ಅಂಗವಾಗಿ ಸಂಸ್ಥೆಯ ಅಧ್ಯಕ್ಷ ಶ್ರೀ ಅಮಿತ್ ಕುಮಾರ್ ನೇತ್ರತ್ವದಲ್ಲಿ ಸ್ವಚ್ಚ ಭಾರತ ಅಭಿಯಾನ ನಡೆಯಿತು. ಸರ್ವಸದಸ್ಯರು ಶ್ರೀ ಶನೀಶ್ವರ ಮಂಡಳಿ ಪರಿಸರ ಮತ್ತು ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಖಾದಿ ಬಟ್ಟೆ ಖರೀದಿ ಮೂಲಕ ಬಿಜೆಪಿ ವತಿಯಿಂದ ಗಾಂಧೀಜಿ ಜಯಂತಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ನಗರದ ಕಾರ್‌ ಸ್ಟ್ರೀಟ್ ನಲ್ಲಿರುವ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಅವರು, ಖಾದಿ ಬಟ್ಟೆಯನ್ನು ಖರೀದಿ ಮೂಲಕ ಗಾಂಧಿ ಜಯಂತಿಯನ್ನ ಆಚರಣೆ ಮಾಡಲಾಯ್ತು, ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರು, ಸ್ವದೇಶಿ

ಪೊಲೀಸ್ ಸಿಬ್ಬಂದಿ ಸಿದ್ಧಾರ್ಥ್ ಹೃದಯಾಘಾತದಿಂದ ನಿಧನ

ಪುತ್ತೂರು: ನೆಹರುನಗರ ರಕ್ತೇಶ್ವರಿ ನಿವಾಸಿ ಊರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿದ್ದಾರ್ಥ್ ಅವರು ಅ.1 ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. 2002 ನೇ ಬ್ಯಾಚಿನವರಾದ ಇವರು ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮಂಗಳೂರಿನಲ್ಲಿ ಏಕಕಾಲದಲ್ಲಿ ಬೃಹತ್ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ

ಮಂಗಳೂರು: ಮಹಾತ್ಮಾ ಗಾಂಧೀಜಿಯವರು ತಮ್ಮ ಜೀವನದುದ್ದಕ್ಕೂ ಅಹಿಂಸೆಯ ಜೊತೆ ಜೊತೆಗೆ ಸ್ವಚ್ಛತೆ ಹಾಗೂ ನೈರ್ಮಲೀಕರಣಕ್ಕೆ ಅತೀ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದರು. ಸ್ವಚ್ಛತೆ -ನೈರ್ಮಲೀಕರಣ ಒಂದು ಅಭಿಯಾನವಾಗಿ ದೇಶದಾದ್ಯಂತ ಜನರಲ್ಲಿ ಅರಿವು ಮೂಡಿಸುವುದು ಹಾಗೂ ಸ್ವಚ್ಛತಾ ಕ್ರಮಗಳನ್ನು ದೈನಂದಿನ ಜೀವನದಲ್ಲಿ ಅನುಸರಿಸುವುದು ಅವಶ್ಯಕವಾಗಿದೆ. ಆದ ಕಾರಣ ಅ. 2ರ ಗಾಂಧೀ ಜಯಂತಿಯ ಪ್ರಯುಕ್ತ ರಾಜ್ಯಾದ್ಯಂತ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ವಸತಿ ಶಾಲೆ ಮತ್ತು

ಪತ್ರಕರ್ತ, ಸಾಹಿತಿ ಫಾರೂಕ್ ಗೂಡಿನಬಳಿ ನಿಧನ

ಬಂಟ್ವಾಳ : ಪತ್ರಕರ್ತ,ಸಾಹಿತಿ ಫಾರೂಕ್ ಗೂಡಿನಬಳಿ( 38) ಅವರು ಸುದೀರ್ಘ ಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ಗೂಡಿನಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ವಿವಿಧ ಪತ್ರಿಕೆಗಳಿಗೆ ಬಂಟ್ವಾಳದಿಂದ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದರು. ಪಾಣೆಮಂಗಳೂರು ಸಮೀಪದ ಗೂಡಿನಬಳಿ ನಿವಾಸಿಯಾಗಿರುವ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಗ್ರಾಪಂ.ಸದಸ್ಯರಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಹಾಗೂ ಮಕ್ಕಳ ಹಕ್ಕಿನ