Home Archive by category Fresh News (Page 866)

ನಾಪತ್ತೆಯಾಗಿದ್ದ ವಿದ್ಯಾರ್ಥಿ ಸಂಬಂಧಿಕರ ಮನೆಯಲ್ಲಿ ಪತ್ತೆ

ವಿದ್ಯಾರ್ಥಿ ನಿಲಯದಿಂದ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಕಾಣೆಯಾದ ಬಗ್ಗೆ ನಿನ್ನೆ ವರದಿಯಾಗಿತ್ತು, ಇಂದು ಆತ ಸಂಬಂಧಿಕರ ಮನೆಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ನಿನ್ನೆ ಕಡಬದ ಶ್ರೀ ರಾಮಕುಂಜೆಶ್ವರ ಪದವಿ ಪೂರ್ವ ಕಾಲೇಜು ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಂಜನ್ ಸಿ.ಎಮ್ ಎಂಬ ಅಪ್ರಾಪ್ತ ಬಾಲಕ ಬೆಳಿಗ್ಗೆ 9 ಗಂಟೆಗೆ

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ : ವಿಟಿಯು ಪರೀಕ್ಷೆಯಲ್ಲಿ ಶೇ.100ರ ಫಲಿತಾಂಶ

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಯ ವಿಟಿಯು ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಮತ್ತು ನಮ್ಮ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಅತ್ಯುತ್ತಮ ಉದ್ಯೋಗಾವಕಾಶ ಲಭಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಶ್ರೀನಿವಾಸ ಮಯ್ಯ ಡಿ. ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, 2006ರಲ್ಲಿ ಪ್ರಾರಂಭಗೊಂಡ ಈ ಸಂಸ್ಥೆ ತಮ್ಮ ಪ್ರಥಮ ಬ್ಯಾಚ್‍ನ ವಿದ್ಯಾರ್ಥಿಗಳಿಂದ ಈ ವರೆಗೂ

ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಚಂದ್ರಶೇಖರ್

ಬಂಟ್ವಾಳ: ದೇಶದಲ್ಲಿ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗಿದ್ದು ಇದನ್ನು ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಫಲವಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಚಂದ್ರಶೇಖರ ಪೂಜಾರಿ ಆರೋಪಿಸಿದರು. ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಡೀಸೆಲ್ ಕಚ್ಛಾ ಸಾಮಾಗ್ರಿಗಳ ದರ ವಿದೇಶದಲ್ಲಿ ಸಂಪೂರ್ಣ ಇಳಿಕೆಯಾಗಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರ ಹೆಚ್ಚುವರಿ ತೆರಿಗೆಯನ್ನು ವಿಧಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲು

ಟೀಮ್ ಬಿ- ಹ್ಯೂಮನ್ ಮಂಗಳೂರು : ಉಚಿತ ಕೋವಿಡ್ ಲಸಿಕಾ ಶಿಬಿರ

ಟೀಮ್ ಬಿ-ಹ್ಯೂಮನ್(ರಿ) ಮಂಗಳೂರು ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೋಸೈಟಿ ಹಾಗೂ ಟೀಂ ಮೇಕ್-ಎ-ಚೇಂಜ್ ಇದರ ಸಹಭಾಗಿತ್ವದಲ್ಲಿ ಉಚಿತ ಕೋರೋನ ಲಸಿಕಾ ಶಿಬಿರವು ಬಲ್ಮಠದ ಬಿಷಪ್ ಜತ್ತನ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಇದು ಟೀಂ ಬಿ-ಹ್ಯೂಮನ್ ತಂಡವು ಆಯೋಜಿಸಿದ ಆರನೇ ಲಸಿಕಾ ಶಿಬಿರವಾಗಿತ್ತು. ಅತ್ಯಂತ ವ್ಯವಸ್ಥಿತವಾಗಿ ಸಂಘಟಿಸಿದಂತಹ ಈ ಲಸಿಕಾ ಶಿಬಿರದಲ್ಲಿ ಸುಮಾರು 272 ಜನಸಾಮಾನ್ಯರು,ಹೋಟೆಲ್ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ವಿಶೇಷ

ಕಾರು ಮತ್ತು ಆಟೋ ನಡುವೆ ಪರಸ್ಪರ ಡಿಕ್ಕಿ ಆಟೊ ಚಾಲಕ ಸ್ಥಳದಲ್ಲೇ ಸಾವು

ಹಾಸನ : ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯಲ್ಲಿ ಇಂದು ಕಾರು ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿದು. ಇದರಿಂದಾಗಿ ಆಟೋ ಚಾಲಕ ಐಚನಹಳ್ಳಿಯ ನಾಗಯ್ಯ (ನಾಗ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕನ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು , ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಇತರರು ಕೂಡ ಗಾಯಗೊಂಡಿರುವ ಘಟನೆ ನಡೆದಿದೆ. ಹೊಳೆನರಸೀಪುರ ಆನಂತರ

ಎರಡು ದಿನಗಳ ಬಳಿಕ ನೀರುಪಾಲಾದ ಯುವಕನ ಮೃತದೇಹ ಪತ್ತೆ

ಕುಂದಾಪುರ: ಮೊವಾಡಿ ಸೇತುವೆ ಬಳಿ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. ಇಲ್ಲಿನ ತ್ರಾಸಿ ಸಮೀಪದ ಹೋಲಿಕ್ರಾಸ್ ನಿವಾಸಿ ಮಹೇಂದ್ರ (24) ಮೃತ ಯುವಕ. ಭಾನುವಾರ ಸಂಜೆ ಮೊವಾಡಿಯ ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ

ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಬಾಲಕೃಷ್ಣ ರೈ (74) ನಿಧನ

ಕರಾವಳಿ ಜಿಲ್ಲೆಯಲ್ಲಿ ಬಹುಪ್ರಸಿದ್ಧಿ ಪಡೆದಿರುವ ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಕನಕಪ್ಪಾಡಿ ಬಿ . ಬಾಲಕೃಷ್ಣ ರೈ ಕದ್ರಿ ಕಂಬ್ಲ ಅವರು ಇಂದು ನಿಧನರಾದರು . ಬಾಲಕೃಷ್ಣ ರೈ ಅವರು ಕನಕಪ್ಪಾಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರರಾಗಿಯೂ‌ ಸೇವೆ ಸಲ್ಲಿಸಿದ್ದರು .ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು . ಮೃತರುಪತ್ನಿ , ಮೂವರು ಹೆಣ್ಣು ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿರುತ್ತಾರೆ . #

ಪಾಲಿಕೆಯ ಘನ ತ್ಯಾಜ್ಯ ನಿರ್ವಹಣೆಯ ಪ್ರಸ್ತಾವನೆಗೆ ಖಂಡನೆ

ಮಂಗಳೂರು ದಕ್ಷಿಣದ ಮಾಜಿ ಶಾಸಕರಾದ ಜೆ. ಆರ್. ಲೋಬೊ, ಪಾಲಿಕೆಯ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಇಂದು ನಗರದ ಸ್ವಚ್ಛತೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಬಹಳಷ್ಟು ಅನುಭವ ಇರುವ ಶ್ರೀ ರಾಮಕೃಷ್ಣ ಮಠದ ಸ್ವಾಮಿ ಜಿತಾಕಮನಂದಜಿ ಹಾಗೂ ಶ್ರೀ ಏಕಗಮ್ಯನಂದ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಅವರೊಡನೆ ಸಮಾಲೋಚನೆ ನಡೆಸಿದರು. ಮಂಗಳೂರು ಮಹಾನಗರ ಪಾಲಿಕೆಯ ಘನ ತ್ಯಾಜ್ಯ ನಿರ್ವಹಣೆಯ ಬಗ್ಗೆ ಸಮಾಲೋಚನೆ ನಡೆಸಿ

ಕೇರಳ ಕೋ-ಆಪರೇಟಿವ್ ಎಂಪ್ಲೋಯಿಸ್ ಕೌನ್ಸಿಲ್ ಮಂಜೇಶ್ವರ : ಬಸ್ಸು ತಂಗುದಾಣ ಕೊಡುಗೆ

ಮಂಜೇಶ್ವರ : ಕೇರಳ ಕೋ- ಆಪರೇಟಿವ್ ಎಂಪ್ಲೋಯೀಸ್ ಕೌನ್ಸಿಲ್ ಮಂಜೆಶ್ವರ ಯೂನಿಟ್ ಇವರ ವತಿಯಿಂದ ಕೊಡುಗೆಯಾಗಿ ಸುಮಾರು ಎರಡೂವರೆ ಲಕ್ಷ ರೂ. ವೆಚ್ಚದಲ್ಲಿ ಮಂಜೇಶ್ವರ ಒಳಪೇಟೆಯಲ್ಲಿ ನಿರ್ಮಿಸಲಾದ ಸುಸಜ್ಜಿತ ಹೈಟೆಕ್ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಸೋಮವಾರದಂದು ಸಂಜೆ ಲೋಕಾರ್ಪಣೆಗೊಂಡಿತು.   ಜನನಿಬಿಡ ಪ್ರದೇಶವಾದ ಮಂಜೇಶ್ವರ ಒಳಪೇಟೆಯಲ್ಲಿ ಮೂಲಭೂತ ಸೌಕರ್ಯಗಳಲ್ಲೊಂದಾದ ಹೈಟೆಕ್ ಮಾದರಿಯ ಶೌಚಾಲಯಗಳನ್ನೊಳಗೊಂಡ ಬಸ್ಸು ತಂಗುದಾಣ ಲೋಕಾರ್ಪಣೆಗೊಂಡಿರುವುದು

ಆದ್ಯಪಾಡಿ ಪರಿಸರದಲ್ಲಿ ’ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

ಮಂಗಳೂರು: ವಿಮಾನ ನಿಲ್ದಾಣ ವ್ಯಾಪ್ತಿಯ ಅದ್ಯಪಾಡಿ ಸುತ್ತಮುತ್ತಲಿನ ಪರಿಸರದಲ್ಲಿ ಸಿಐಎಸ್‌ಎಫ್ ಏರ್ ಪೋರ್ಟ್ ಘಟಕದ ವತಿಯಿಂದ, ಬಜ್ಪೆ ಪೊಲೀಸ್ ಠಾಣಾ ಸಹಯೋಗದೊಂದಿಗೆ ’ಸುರಕ್ಷತಾ ಜಾಗೃತಿ’ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಸ್ಥಳೀಯ ನಾಗರಿಕರಲ್ಲಿ ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭ ಸಿಐಎಸ್‌ಎಫ್ ಡೆಪ್ಯುಟಿ ಕಮಾಂಡೆಂಟ್ ಕೃಷ್ಣ ಪ್ರಕಾಶ್, ಬಜ್ಪೆ