ಸ್ವಾತಂತ್ರ್ಯ ಪೂರ್ವದ ಕನಸಾದ ಪ್ರತಿ ಮನೆಯಲ್ಲೂ ವಿದ್ಯುಚ್ಛಕ್ತಿ ಒದಗಿಸಬೇಕು ಎಂಬ ಯೋಜನೆಯಿಂದ ಇಂದು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ನಮ್ಮ ನಾಯಕರೇ ಹೇಳುವಂತೆ 2 ಸಾವಿರದ ಇಪ್ಪತ್ತ ಐದರ ಒಳಗೆ ಪ್ರತಿ ಮನೆಯಲ್ಲೂ ಸಹ ವಿದ್ಯುತ್ ಇರಬೇಕು ಯಾವುದೇ ಮನೆ ಕತ್ತಲೆಯಲ್ಲಿ ಇರಬಾರದು ಎಂದು ಹೇಳುತ್ತಾರೆ ಆದರೆ ಇಲ್ಲಿರುವ ದಾರಿಯೇ ಬೇರೆಯಾಗಿದೆ ಕೆಲವು
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ನೀತಿಗಳಿಂದ ಜನಸಾಮಾನ್ಯರು ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಳ್ಳುತ್ತಿದ್ದಾರೆ. ಮನಮೋಹನ್ ಸಿಂಗ್ ಸರಕಾರದ ಅವಧಿಯಲ್ಲಿ ಬಿಜೆಪಿ ಪ್ರಬಲವಾಗಿ ವಿರೋಧಿಸಿದ್ದ ಖಾಸಗೀಕರಣ, ವ್ಯಾಪಾರೀಕರಣದ ನೀತಿಗಳನ್ನು ಈಗ ರಭಸವಾಗಿ ಜಾರಿಗೆ ತರುವ ಮೂಲಕ ಶಿಕ್ಷಣ, ಆರೋಗ್ಯ, ಉದ್ಯೋಗ ಜನಸಾಮಾನ್ಯರಿಗೆ ನಿಲುಕದಂತಾಗಿದೆ. ದೇಶದ ಸಂಪತ್ತು ಬಹುರಾಷ್ಟ್ರೀಯ ಕಂಪೆನಿಗಳ ಪಾಲಾಗುತ್ತಿವೆ. ಬಿಜೆಪಿ ಸರಕಾರದ ವಿರುದ್ಧ ರೂಪುಗೊಳ್ಳುತ್ತಿರುವ
ಉಳ್ಳಾಲ: ಮಾಸ್ತಿಕಟ್ಟೆ ಬಳಿಯಿರುವ ಶ್ರೀ ಪಾಡಂಗರ ಭಗವತಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಹಲವು ಸೊತ್ತುಗಳನ್ನು ಕಳವು ನಡೆಸಿದ್ದಾರೆ. ಪಂಚಲೋಹದ ಮೊಗವನ್ನು ಕಳ್ಳರು ದೋಚಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವರ್ಷದ ಹಿಂದೆಯಷ್ಟೇ ಮೊಗವನ್ನು ದೈವಕ್ಕೆ ಹಾಕಲಾಗಿತ್ತು.
ಕಾಪುವಿನ ಕೊಪ್ಪಲಂಗಡಿಯಲ್ಲಿ ಕಳೆದ ತಡರಾತ್ರಿ ನಡೆದ ಕಾರು ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದ್ದು ಒರ್ವನ ಸ್ಥಿತಿ ಗಂಭೀರ ವಾಗಿದೆ ಎನ್ನಲಾಗಿದೆ. ಬೆಂಗಳೂರು ನೋಂದಾಣಿ ಸಂಖ್ಯೆಯ ಮಾರುತಿ ಕಾರಿನಲ್ಲಿ ಉಡುಪಿ ಮೂಲದವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಕೊಪ್ಪಲಂಗಡಿಯಲ್ಲಿ ಕಾರು ಮೋರಿಯೊಂದರ ತಡೆಗೋಡೆಗೆ ಡಿಕ್ಕಿಯಾಗಿ ಮೋರಿಗೆ ಬಿದ್ದ ಕಾರು
ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಪಡೆದ ಮಂಗಳೂರಿನ ರುತ್ ಕ್ಲೇರ್ ಡಿಸಿಲ್ವಾ ಅವರಿಗೆ V4 ಸ್ಟುಡಿಯೋದಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲೆಯ ವಿವಿಧ ಸಂಘ ಸಂಸ್ಥೆಯ ವತಿಯಿಂದ ಸನ್ಮಾನ ನೀಡಿ ಗೌರವಿಸಲಾಯಿತು. ಮಂಗಳೂರಿನ ಯೆಯ್ಯಾಡಿಯಲ್ಲಿರುವ ವಿ4 ನ್ಯೂಸ್ ಸ್ಟುಡಿಯೋದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಹಲವಾರು ಸಂಘ ಸಂಸ್ಥೆಗಳು, ರಾಜಕೀಯ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ರು.
ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಕಾಡುಕೊಣಗಳ ಉಪಟಳದಿಂದ ಅಲ್ಲಿನ ಕೃಷಿಕರು ಬೇಸತ್ತಿದ್ದಾರೆ. ಗ್ರಾಮದ ಕರಂಬಿತ್ತಿಳು ಎಂಬಲ್ಲಿ ಸುಮಾರು15 ಕುಟುಂಬಗಳು ವಾಸಿಸುತ್ತಿವೆ. ಅಲ್ಲಿನ ನಿವಾಸಿಗಳು ದಿನಾಲೂ ರಾತ್ರಿ ನಿದ್ದೆಗೆಟ್ಟು ಕಾಡು ಕೋಣಗಳನ್ನು ಓಡಿಸುವಂತಾಗಿದೆ. ನಿನ್ನೆ ಬೆಳಿಗ್ಗೆ ಎರಡು ಕಾಡು ಕೋಣಗಳು ಜಿದ್ದಾ ಜಿದ್ದಿಗೆ ನಿಂತಿದ್ದು ಸುಮಾರು ಅರ್ಧ ಗಂಟೆ ಕಾಲ ಕಾದಾಡಿವೆ. ಕೃಷಿಕರ ಅಡಿಕೆ ತೋಟ, ಕೊಕ್ಕೋ ಗಿಡ ಹಾಗೂ ಇತರ ಕೃಷಿಗಳನ್ನು ನಾಶ ಮಾಡುತ್ತಿದೆ.
ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಗೋವಿಗಾಗಿ ಮೇವು ಅಭಿಯಾನದ ಭಾಗವಾಗಿ ಇಂದು ಕೋಟತಟ್ಟು ಗ್ರಾಮಪಂಚಾಯತ್ ನ 5ನೇ ವಾರ್ಡ್ ನ ಸದಸ್ಯರಾದ ವಿದ್ಯಾ ಸಾಲ್ಯಾನ್, ರಾಬರ್ಟ್ ರೋಡ್ರಿಗಸ್ ,ಸಹೀರಾ ಬಾನು ಇವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತದ ಪರಿಕಲ್ಪನೆಯಡಿ ರಸ್ತೆಯ ಇಕ್ಕೆಡೆಗಳಲ್ಲಿ ಇರುವ ಹಸಿ ಹುಲ್ಲನ್ನು ಕಟಾವು ಮಾಡಿ ನೀಲಾವರ ಗೋಶಾಲೆಗೆ ನೀಡಲಾಯಿತು. ಈ ಸಂದರ್ಭದಲ್ಲಿ
ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ,ಬೈಲೂರು ವಾರ್ಡಿನ ನಗರ ಸಭಾ ಸದಸ್ಯ ರಮೇಶ್ ಕಾಂಚನ್ ರವರನ್ನು ನೇಮಕ ಗೊಳಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇಮಕಾತಿ ಅದೇಶ ಹೊರಡಿಸಿದ್ದು, ಪಕ್ಷ ಸಂಘಟನೆ ಬಲವರ್ಧನೆ ಕಾರ್ಯನ್ಮೋಕರಾಗಬೇಕೆಂದು ಸೂಚಿಸಿದ್ದಾರೆ. ಉಡುಪಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ಸೇರಿದಂತೆ ಇತರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು
ಕುಂದಾಪುರ: ವಿಪರೀತ ಮದ್ಯ ಸೇವಿಸಿದ ಚಾಲಕನೋರ್ವ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಯದ್ವಾತದ್ವ ಕಂಟೇನರ್ ಚಲಾಯಿಸಿ ಕೆಲಹೊತ್ತು ಆತಂಕ ಸೃಷ್ಠಿಸಿದ ಘಟನೆ ತಾಲೂಕಿನ ಮುಳ್ಳಿಕಟ್ಟೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಕುರುಚಲು ಹುಲ್ಲು ಸಾಗಿಸುತ್ತಿದ್ದ ಛತ್ತೀಸ್ ಗಡ ಮೂಲದ ನೋಂದಣಿಯ ಕಂಟೇನರ್ ಚಾಲಕ ವಿಪರೀತವಾಗಿ ಮದ್ಯ ಸೇವಿಸಿ ಕಂಟೇನರ್ ಚಲಾಯಿಸಿದ ಪರಿಣಾಮ ಮುಳ್ಳಿಕಟ್ಟೆ ಜಂಕ್ಷನ್ ನಲ್ಲಿ ಇತ್ತೀಚೆಗಷ್ಟೇ ಹೊಸದಾಗಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ಅನ್ನು ಬರೋಬ್ಬರಿ
ಕಸ್ಬಾ ಬೆಂಗ್ರೆಯ ಸಾಂಪ್ರದಾಯಿಕ, ನಾಡದೋಣಿಗಳು ತಂಗುವ ತೀರದಲ್ಲಿ ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದೆ, ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಮೀನುಗಾರರು ವೃತ್ತಿ ನಿರ್ವಹಿಸಲು ಸಮಸ್ಯೆಗಳು ಉಂಟಾಗಿದ್ದು, ಅದ್ಯತೆಯಿಂದ ವಿದ್ಯುತ್ ಬೆಳಕು, ರಸ್ತೆ ಸಂಪರ್ಕ ಒದಗಿಸುವಂತೆ ಒತ್ತಾಯಿಸಲಾಯಿತು. ನಿಯೋಗದಲ್ಲಿ ಪಲ್ಗುಣಿ ನಾಡದೋಣಿ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ, ಅಧ್ಯಕ್ಷರಾದ ಅಬ್ದುಲ್ ತಯ್ಯೂಬ್,ಸರ್ಫರಾಝ್,ಸಾವಲ್, ಫಹಾಝ್,ಮುದಸ್ಸಿರ್,ಇಮ್ತಿಯಾಝ್,


















