ಮೈಸೂರು ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೂ ಅನಧಿಕೃತ ದೇವಸ್ಥಾನ ಇಲ್ಲ ಇರೋದೆಲ್ಲವೂ ಅಧೀಕೃತ ದೇವಸ್ಥಾನಗಳೇ ಅನಧಿಕೃತ ಇದ್ರೆ ಅದನ್ನು ಅಧೀಕೃತ ವನ್ನಾಗಿ ಮಾಡಬೇಕು ಕಾನೂನು ಯಾರನ್ನೂ ಬಿಡೋದಿಲ್ಲ ಕಾನೂನನ್ನು ಎಲ್ಲರೂ ಪಾಲನೆ ಮಾಡಬೇಕು
ಸುರತ್ಕಲ್ : ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡುವ ಅತ್ಯತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿಯವರಿಂದ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಸುರತ್ಕಲ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಕೋವಿಡ್ 19 ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ.ರಾಜೇಂದ್ರ ಅವರು ಉದ್ಘಾಟಿಸಿದ್ರು.ತದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ
ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯೂರಿನ ಚೆನ್ನಪ್ಪ ಅಜಿಲಾಯ ಎಂಬವರ ಮೇಲೆ ಸ್ಥಳೀಯ ದಲಿತ ಸಮುದಾಯಕ್ಕೆ ಸೇರಿದ ಯುವತಿಯ ಹೆಸರಿನಲ್ಲಿ ಅವರ ನಕಲಿ ಸಹಿ ಬಳಸಿ ಸುಳ್ಳು ದೂರು ನೀಡಲಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಎಚ್ಚರಿಸಿದ್ದಾರೆ. ಅವರು ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಚೆನ್ನಪ್ಪ ಅಜಿಲಾಯ
ನಗರದ ಶ್ರೀನಿವಾಸ್ ವಿಶ್ವವಿದ್ಯಾಲಯದ, ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು, ಭೋದಕೇತರ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಶಿಬಿರವು ಸೆ. 17 ರ ಶುಕ್ರವಾರದಂದು ಜರಗಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಐತಾಳ್ ಕೋವಿಡ್ ವಾರಿಯರ್ಸ್‌ಗಳನ್ನು ಈ ಸಂದರ್ಭ ಅಭಿನಂದಿಸಿದರು. ಈ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಲಾದ ಕೋವಿಡ್ 19
ಬೆಂಗಳೂರು ; ದೇಶದ ಯುವ ಸಮೂಹ ಸೇರಿದಂತೆ ಎಲ್ಲಾ ವರ್ಗಗಳನ್ನು ಅತೀವ ಸಂಕಷ್ಟದೂಡಿರುವ, ನಿರುದ್ಯೋಗ ಸಮಸ್ಯೆ ನಿವಾರಿಸಲು ವಿಫಲವಾಗಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ವಿರುದ್ಧ ಪ್ರದೇಶ ಯುವ ಕಾಂಗ್ರೆಸ್ ನಿಂದ ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಯಿತು. ನರೇಂದ್ರ ಮೋದಿ ಅವರ ಜನ್ಮ ದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಯುವ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣವನ್ನು ಖಂಡಿಸಿ ಮೂಡಬಿದ್ರೆಯಲ್ಲಿ ಎಸ್‌ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಸಿಫ್ ಕೋಟೆಬಾಗಿಲು,ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಶೀಘ್ರ ಮುಕ್ತಾಯಗೊಳಿಸಿ ಆರೋಪಿಗಳಿಗೆ ಮರಣದಂಡನೆ ವಿಧಿಸುವ ಹೊಸ ಕಾನೂನನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ರು. ಹೋರಾಟಗಾರ ಅಚ್ಯುತ ಸಂಪಿಗೆ
ಶೈಕ್ಷಣಿಕ ಮತ್ತು ಮೆಡಿಕಲ್ ಹಬ್ ಎಂದೇ ಗುರುತಿಸಲ್ಪಟ್ಟಿರುವ ಕುತ್ತಾರ್-ದೇರಳಕಟ್ಟೆ ಪರಿಸರದ ಪ್ರಮುಖ ರಸ್ತೆಯ ಬದಿ ಅಂದರೆ ಮದನಿ ನಗರದ ಮೂರನೆ ಅಡ್ಡರಸ್ತೆಯ ಬಳಿ ರಾಶಿ ಹಾಕಲಾಗಿದ್ದ ತ್ಯಾಜ್ಯ ವಸ್ತುವನ್ನು ಮುನ್ನೂರು ಗ್ರಾಮದ 5ನೆ ವಾರ್ಡಿನ ಸದಸ್ಯೆ ರೆಹನಾ ಭಾನು ತಡರಾತ್ರಿಯವರೆಗೂ ಸ್ವತಃ ನಿಂತು ತೆರವುಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಕಳೆದೊಂದು ವಾರದಿಂದ ತ್ಯಾಜ್ಯ ವಸ್ತುಗಳು ರಾಶಿ ಬೀಳುತ್ತಿತ್ತು. ಇದರಿಂದ ಪರಿಸರ ಗಬ್ಬೆದ್ದು ನಾರುತ್ತಿತ್ತಲ್ಲದೆ
ಮೀರಾರೋಡ್ : ಬಂಟರ ಸಂಘ ಮುಂಬಯಿ ಇದರ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಸೆ. 14ರಂದು ಮೀರಾ ರೋಡ್ ಪೂರ್ವದ ಸಿನೆಮೆಕ್ಸ್ ಥಿಯೇಟರ್ ಎದುರಗಡೆ ಹೋಟೆಲ್ ಕೃಷ್ಣಾ ಪ್ಯಾಲೇಸನ ಸಭಾಂಗಣದಲ್ಲಿ ಹಳದಿ – ಕುಂಕುಮ , ಭಜನೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸ್ಥಳೀಯ ಬಂಟ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ್ ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ


















