ಪುತ್ತೂರು:ಪುತ್ತೂರಿನಲ್ಲಿ ಅಪ್ರಾಪ್ತರನ್ನು ಭಿಕ್ಷಾಟನೆಗೆ ಕಳುಹಿಸುವ ಮೂಲಕ ಮಕ್ಕಳಿಗೆ ಹಿಂಸೆ ನೀಡುತ್ತಿದ್ದಾರೆಂಬ ದೂರಿನ ಮೇರೆಗೆ ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆಯ ಅಧಿಕಾರಿಗಳು ನೆಲ್ಲಿಕಟ್ಟೆಯಲ್ಲಿ ಕಾರ್ಯಾಚರಣೆ ನಡೆಸಿ 6 ವರ್ಷದ ಬಾಲಕ ಮತ್ತು 8 ವರ್ಷದ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಸಂಗೀತ ಎಂಬ ಮಹಿಳೆಯು ಇತ್ತೀಚೆಗೆ
ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ.ಗಾಯಾಳು ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಪಕೀರ್ ಸಾಹೇಬ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಯಸ್. ಐ. ರಾಮ ನಾಯ್ಕ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.
ಆಸ್ಕರ್ ಫೆರ್ನಾಂಡಿಸ್ ಮೃತದೇಹ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ತಲುಪಿದ್ದು ಆಸ್ಕರ್ ಮೃತದೇಹ ತಲುಪಿದ್ದು ಉಡುಪಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ, ಫಾದರ್ ಡೆನ್ನಿಸ್, ಫಾದರ್ ಚಾರ್ಲ್ಸ್ ಉಪಸ್ಥಿತಿಯಲ್ಲಿ ಪ್ರಾರ್ಥನೆ ನಡೆಯಲಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಆಗಮಿಸಿದ್ದಾರೆ. ಬಳಿಕ ಅವರ ಪಾರ್ಥಿವ ಶರೀರವನ್ನು ಕಾಂಗ್ರೆಸ್ ಭವನಕ್ಕೆ ಕೊಂಡೊಯ್ದು ಅಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಉಡುಪಿ: ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಮಂಗಳೂರಿನ ಎನಾಪೋಯ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರ ಇಂದು ಬೆಳಗ್ಗೆ 9:15 ಕ್ಕೆ ಉಡುಪಿ ಶೋಕ ಮಾತಾ ದೇವಾಲಯಕ್ಕೆ ಆಗಮಿಸಲಿದೆ ಎಂದು ಉಡುಪಿ ಧರ್ಮ ಪ್ರಾಂತ್ಯದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಕುಟುಂಬದ ಇಚ್ಛೆಯಂತೆ ಬೆಳಿಗ್ಗೆ 9:30 ಕ್ಕೆ ಪ್ರಾರ್ಥನಾ ವಿಧಿಗಳನ್ನು
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿನ್ನೆ ಸೋಮವಾರ ಮಧ್ಯಾಹ್ನ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಶವಾಗಾರದಿಂದ ಉಡುಪಿಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ. ಪಾರ್ಥಿವ ಶರೀರಕ್ಕೆ ಭಾರತದ ಧ್ವಜ ಹೊದಿಸಿ ಮಂಗಳೂರು ಪೊಲೀಸರು ಗೌರವ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಯು.ಟಿ.ಖಾದರ್, ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಆಸ್ಕರ್ ಪತ್ನಿ ಬ್ಲಾಸಂ,
ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು ಹಾಗೂ ಮಕ್ಕಳಿಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದ್ದಾರೆ.ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸೆಪ್ಟೆಂಬರ್ 17ರಂದು 8,9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ,
Mangaluru girl Ruth Clare D’silva has secured All India first rank (Old scheme) in Chartered Accountants (CA) July 2021 examination conducted by the Institute of Chartered Accountants of India (ICAI). The results were declared on Monday. ‘ She is the first candidate to secure top rank in CA exams from this region. She did the […]
ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. “ರಾಜ್ಯಸಭಾ ಸಂಸದ ಆಸ್ಕರ್ ಫೆರ್ನಾಂಡೀಸ್ ರ ನಿಧನದಿಂದ ದುಃಖವಾಗಿದೆ. ಈ ನೋವಿನ ವೇಳೆಯಲ್ಲಿ ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಪ್ರಾರ್ಥನೆ ಮತ್ತು ಸಂತಾಪಗಳನ್ನು
ಭೋಪಾಲ್: ಭೂಪೇಂದ್ರಬಾಯ್ ಪಟೇಲ್ ಸೋಮವಾರ ಮಧ್ಯಾಹ್ನ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲರಾದ ಆಚಾರ್ಯ ದೇವವ್ರತ ಅವರು ಪ್ರಮಾಣವಚನ ಬೋಧಿಸಿದರು. ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷವು ಅವರನ್ನು ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಿತು. ರಾಜ್ಯ ವಿಧಾನಸಭೆಯಲ್ಲಿ ಒಟ್ಟು 182 ಸ್ಥಾನಗಳನ್ನು ಹೊಂದಿದ್ದು, ಬಿಜೆಪಿ 112 ಸದಸ್ಯರನ್ನು ಹೊಂದಿದೆ. ಅವರೆಲ್ಲ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು. ಶನಿವಾರ
ಮಂಗಳೂರು:ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶರಾಗಿದ್ದಾರೆ.ಆಸ್ಕರ್ ಫೆರ್ನಾಂಡಿಸ್ ಅವರಿಗೆ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಈ ಹಿನ್ನೆಲೆಯಲ್ಲಿ, ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.


















