ಬೆಂಗಳೂರು,: ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ಅವರು ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ರಾಜ್ಯದ ಪೊಲೀಸ್ ಇಲಾಖೆ ಅತ್ಯಂತ ದಕ್ಷ, ನಿಷ್ಪಕ್ಷಪಾತ ಹಾಗೂ
ಬೆಂಗಳೂರು: ಈಗ ಹೆಚ್ಚು ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣ ಎಲೆಕ್ಟ್ರಿಕ್ ರಿಚಾರ್ಜ್ ಸೆಂಟರ್‍ಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಶ್ರೀ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಲು ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ
ರಾಜ್ಯ ಪ್ರವಾಸದಿಂದ ಮರಳಿ ಮಂಗಳೂರಿಗೆ ಬರುವಾಗ ಹಾಸನ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಸಿಲುಕಿದ್ದ ಸಾರ್ವಜನಿಕರನ್ನು ಸುರಕ್ಷಿತವಾಗಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೆರವಾಗಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ತಕ್ಷಣವೇ ನಳಿನ್ ಕುಮಾರ್ ಕಟೀಲ್ ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದ ಶ್ರೀಮತಿ ಸರಸ್ವತಿ ಕಾಮತ್ ಅವರ ಮೇಲೆ ಚುನಾವಣೆಯ ಸಂದರ್ಭದಲ್ಲಿ ಹಲ್ಲೆ ನಡೆಸಿದ ಕೇಸಿಗೆ ಒಳಗಾಗಿದ್ದ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ಇತರ 14 ಮಂದಿಗೆ ಸುಳ್ಯ ನ್ಯಾಯಾಲಯ ಜೈಲು ಶಿಕ್ಷೆಯ ತೀರ್ಪು ನೀಡಿದೆ. 2013 ರ ಚುನಾವಣೆ ಸಂದರ್ಭ ಮರ್ಕಂಜದ ಕುದ್ಕುಳಿ ಎಂಬಲ್ಲಿ ಘಟನೆ ನಡೆದಿತ್ತು.ಹರೀಶ್ ಕಂಜಿಪಿಲಿ ಮತ್ತು ಇತರ 14 ಮಂದಿ ಮದುವೆ ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದಾಗ ತನ್ನ ವಾಹನವನ್ನು ಅಡ್ಡಗಟ್ಟಿ,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಜಿನಿಯರಿಂಗ್ ಘಟಕ, ಮಂಗಳೂರು, ಉಪವಿಭಾಗದ ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರವು ಸುಮಾರು 45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ನೂತನ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನೂತನ ರೀತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಗೊಂಡಿದೆ. ಮುಂದಿನ ದಿನಗಳಲ್ಲಿ ಇಲ್ಲಿನ ಜನತೆಗೆ ಈ
ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲೂ ಬಿಗಿ ಕ್ರಮ ಕೈಗೊಳ್ಳಲಾಗವುದು. ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕೇರಳ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಕೆಲವು ನಿರ್ಬಂಧಗಳನ್ನು ಹೇರಲಾಗಿದ್ದು, ಅದನ್ನು ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಹೇಳಿದರು. ನಿಫಾ
ವಿಟ್ಲ: ರಾಜ್ಯ ಸರ್ಕಾರ ಅನುದಾನ ಕೊಡುವುದಕ್ಕೆ ಗುತ್ತಿಗೆದಾರರಿಂದ ಶೇ.15ಕ್ಕೂ ಮೇಲ್ಪಟ್ಟು ವಸೂಲಿ ಮಾಡುತ್ತಿದೆ. ಕಾಂಗ್ರೆಸ್ ಮುಕ್ತವಾದರೆ ಭ್ರಷ್ಟಾಚಾರ ಮುಕ್ತ ಎಂಬ ಹೇಳಿಕೆಯನ್ನು ಹೇಳಿರುವ ಪುತ್ತೂರು ಶಾಸಕರಿಗೆ ಇದು ಗಮನದಲ್ಲಿ ಇಲ್ಲವಾ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚ ನೋಡಲ್ಲ ಎಂಬ ಗಾದೆ ಮಾತಿನಂತೆ ಬಿಜೆಪಿ ಸರ್ಕಾರದ ಪರಿಸ್ಥಿಯಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು ಹೇಳಿದರು. ವಿಟ್ಲದಲ್ಲಿ ಕರೆದ
ಕನಸು ಕಾಣುವುದು ಬಹಳ ಸುಲಭ ಆ ಕನಸನ್ನು ನನಸಾಗುವುದು ಕಷ್ಟ. ಗುರಿ, ಛಲ, ಸತತ ಪರಿಶ್ರಮ ನಮ್ಮಲ್ಲಿದ್ದರೆ ನಾವು ಏನು ಬೇಕಾದರೂ ಸಾಧಿಸಬಹುದು. ಸಾವಿರ ಕಷ್ಟಗಳ ಮಧ್ಯೆಯು ಗುರಿ ತಲುಪುತ್ತೇನೆ ಎಂಬ ಛಲ ಗುರಿ ತಲುಪಲು ಎಷ್ಟು ಸಾಧ್ಯವೋ ಅಷ್ಟು ಪರಿಶ್ರಮ ನಮ್ಮಲ್ಲಿರಬೇಕು ಆಗ ಮಾತ್ರ ನಮ್ಮ ಭವಿಷ್ಯದ ದಾರಿಸುಗಮವಾಗಿರುತ್ತದೆ.ಇಂತಹ ಸವಾಲನ್ನು ಗೆದ್ದು ತನ್ನ ಕನಸನ್ನು ನನಸು ಮಾಡಿಕೊಂಡವರಲ್ಲಿ ಶಶಿರಾಜ್ ಕೂಡಾ ಒಬ್ಬರು. ಮೂಲತಃ ಬೆಂಗಳೂರಿನವರಾದ ಶಶಿರಾಜ್ ಒಬ್ಬ ಕಲಾವಿದ, ನಟ.
ಮಂಗಳೂರು: ಮಂಗಳೂರಲ್ಲಿ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂವನ್ನು ಮರು ಪರಿಶೀಲಿಸುವಂತೆ ಶಾಸಕ ಯುಟಿ ಖಾದರ್ ಒತ್ತಾಯಿಸಿದ್ದಾರೆ. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಾರಾಂತ್ಯ ಕರ್ಫ್ಯೂವಿನ ಹಿಂದಿನ ತರ್ಕ ಏನೆಂದು ಅರ್ಥವಾಗುತ್ತಿಲ್ಲ. ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಪಾದರಕ್ಷೆ, ಜವಳಿ ಮುಂತಾದ ಇತರ ಅಂಗಡಿಗಳಿಗೆ ಏಕೆ ಅನುಮತಿ ಇಲ್ಲ. ಜಿಲ್ಲಾಡಳಿತವು
ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಸಂಬಂಧ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರ್ಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಈ ಮೂರು ಮಹಾ ನಗರ ಪಾಲಿಕೆ, ತರೀಕೆರೆ, ದೊಡ್ಡಬಳ್ಳಾಪುರ ಹಾಗೂ ಮೈಸೂರಿನ ಪಾಲಿಕೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತ ನೀಡಿದ ಎಲ್ಲಾ ಮತದಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ.ಬೆಳಗಾವಿಯಲ್ಲಿ ನಿರೀಕ್ಷಿತ ಫಲಿತಾಂಶ


















