ಮಂಗಳೂರು: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಆಗಸ್ಟ್ 30ರ ಸೋಮವಾರದಂದು ನಗರದ ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ತುಳು ಸಾಹಿತ್ಯ ಅಕಾಡೆಮಿಯ ಭವನದ ಕಾಮಗಾರಿಗೆ ಹೆಚ್ಚುವರಿ ಅನುದಾನ ನೀಡುವಂತೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್‍ಸರ್ ಈ
ಕೊಣಾಜೆ ವಿವಿಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ ನೀಡುತ್ತಿದ್ದಂತೆಯೇ ಕ್ಯಾಂಪಸ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿವಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮಂಗಳಾ ಸಭಾಂಗಣದ ಹೊರಾಂಗಣದಲ್ಲಿ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದು ಧಿಕ್ಕಾರ ಘೋಷಣೆ ಕೂಗಿದ್ದಾರೆ. ತಕ್ಷಣ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಸಿಎಫ್‌ಐ
ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಇಂಡಿಯನ್ ಐಡಲ್ ಫೈನಲಿಸ್ಟ್ ನಿಹಾಲ್ ತಾವ್ರೋ ಅವರಿಗೆ ಭಾನುವಾರ ಉಡುಪಿ ಮಳಿಗೆಯಲ್ಲಿ ಅಭಿನಂದಿಸಲಾಯಿತು. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಸಮಾಜ ಸೇವಕರಾದ ಲೀಲಾಧರ್ ಶೆಟ್ಟಿ ಮಜೂರು,ಹಾಸ್ಯ ಭಾಷಣಕಾರ್ತಿ ಸಂಧ್ಯಾ ಪೈ ಅವರು ನಿಹಾಲ್ ತಾವ್ರೋ ಗೆ ಶಾಲು ಹೊದಿಸಿ ಫಲಪುಷ್ಪ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ವೇಳೆ ಮಾತನಾಡಿದ ಸಂಧ್ಯಾ ಪೈ ನಿಹಾಲ್ ತನ್ನ
ಹಿಂದೂಸ್ತಾನಿಯ ಖ್ಯಾತ ಸಂಗೀತ ಕಲಾವಿದೆ, ಕರಾವಳಿಯ ಪ್ರತಿಭೆ ವಿದ್ವಾನ್ ವಿಭಾ ಎಸ್.ನಾಯಕ್ ಅವರು ಸಂಗೀತ ನಿರ್ದೇಶಿಸಿ, ತಾವೇ ಹಾಡಿರುವ ’ರಂಗ ನಿನ್ನ’ ಎಂಬ ಶ್ರೀಕೃಷ್ಣ ದೇವರ ಕುರಿತ ಭಕ್ತಿ ಪ್ರಧಾನ ಅಲ್ಬಾಂ ಸಾಂಗ್ ಅನಾವರಣಗೊಂಡಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ರಂಗ ನಿನ್ನ ಅಲ್ಬಾಂ ಸಾಂಗ್ ಬಿಡುಗಡೆ ಸಮಾರಂಭ ನಡೆಯಿತು. ಶ್ರೀಕೃಷ್ಣ ಜನ್ಮಾಷ್ಠಮಿಯ ಹಿನ್ನೆಲೆಯಲ್ಲಿ ಶ್ರೀಕೃಷ್ಣನ ಕುರಿತು ಶ್ರೀ ವ್ಯಾಸರಾಯರು ಬರೆದಿರುವ ಹಾಡಿಗೆ ವಿದ್ವಾನ್ ವಿಭಾ ಎಸ್.ನಾಯಕ’
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯ್ತು.ಇನ್ನು ಕಾರ್ಯಕ್ರಮ ವನ್ನ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ತದ ಬಳಿಕ ಮಾತನಾಡಿದ ಅವರು, ಈ ಬಾರಿ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿ, ದೇವರ ಅನುಗ್ರಹದಿಂದ
ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರನ್ನು ನೇಮಕ ಮಾಡಲಾಗಿದ್ದು, ಜಿ ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಉಳ್ಳಾಲ: ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ನಡೆದಿದೆ. ವಿಚಾರ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿ ತೋಟದ ಮಾಲೀಕನೇ ಕೋಣವನ್ನು ಬೇರೆಯವರ ಮೂಲಕ ಹತ್ಯೆ ನಡೆಸಿರುವುದಾಗಿ ಆರೋಪಿಸಿದ್ದಾರೆ.ಬಲ್ಯ ಎಂಬಲ್ಲಿರುವ ಜಯರಾಮ ಶೆಟ್ಟಿ ಎಂಬವರ ತೋಟದ ಬಳಿ ಕೃತ್ಯ ನಡೆದಿದೆ. ಕೋಣದ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಕಡಿದ ಸ್ಥಿತಿಯಲ್ಲಿದ್ದು,
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು. ನಗರದ ಕೆಪಿಟಿಯಿಂದ ಮೇರಿಹಿಲ್ ತನಕ ಮನಪಾ ಅಧಿಕಾರಿಗಳು ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ.ರಸ್ತೆಯ ಬದಿಯಲ್ಲಿದ್ದಂತಹ ಅನಧಿಕೃತ ಗೂಡಂಗಡಿಗಳನ್ನು ತೆರವು ಮಾಡಲಾಯಿತು.
ಮಂಗಳೂರಿನ ಯೆಯ್ಯಾಡಿಯ ಬಾರೆಬೈಲ್‌ನಲ್ಲಿ ನಡೆದು ಹೋಗುತ್ತಿದ್ದ ವಿ೪ನ್ಯೂಸ್‌ನ ಪತ್ರಕರ್ತೆ ಕಾವ್ಯ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಯೋರ್ವ ಎಳೆದು ಪರಾರಿಯಾದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ವೇಳೆ ಕಚೇರಿಯಿಂದ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಯೋರ್ವ ಬೈಕ್‌ನಲ್ಲಿ ಆಗಮಿಸಿ, ಆಕೆಯ ಕುತ್ತಿಯಲ್ಲಿದ್ದ ಚಿನ್ನದ ಸರವನ್ನ ದೋಚಿ ಪರಾರಿಯಾಗಿದ್ದಾನೆ. ಸರವನ್ನು ಎಳೆಯುವ ಸಂದರ್ಭದಲ್ಲಿ ರಸ್ತೆಗೆ ಉರುಳಿ ಬಿದ್ದು
ಅಥಣಿ ಪುರಸಭೆ ನಿರ್ಮಿಸಿದ 21 ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಪುರಸಭಾ ಕಾರ್ಯಾಲಯದಲ್ಲಿ ನಡೆಯಿತು. ನೆಲ ಮಹಡಿಯ11 ಮತ್ತು ಮೊದಲ ಮಹಡಿಯ 10 ಮಳಿಗೆಗಳನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ಹರಾಜು ಪುರಸಭಾ ಮುಖ್ಯಾಧಿಕಾರಿ ಈರಣ್ಣಾ ದಡ್ಡಿ ನೇತೃತ್ವದಲ್ಲಿ ನಡೆಯಿತು. ಹರಾಜಿನಲ್ಲಿ ನೂರಾರು ಜನ ಭಾಗವಹಿಸಿದ್ದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಹರಾಜುಗಾರರನ್ನು ಉದ್ದೇಶಿಸಿ ಮಾತನಾಡಿದ ಪುರಸಭಾ ಮುಖ್ಯಾಧಿಕಾರಿ ಈರಣ್ಣಾ ದಡ್ಡಿ, ಹರಾಜು


















