ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಆಸ್ಕರ್ ಫೆರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆಯಲ್ಲಿ ಇಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಆಸ್ಕರ್ ಅವರ ಕುಟುಂಬಿಕರಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಅವರು, ಕೊಂಕಣ್
ಉಡುಪಿಯಲ್ಲಿ “ಹಡೀಲು ಭೂಮಿ ಕೃಷಿ ಆಂದೋಲನ”ದಡಿ ಉಡುಪಿ ನಗರಸಭಾ ವ್ಯಾಪ್ತಿಯ ಹಡಿಲು ಭೂಮಿಗಳ ಕಡೇ ನಾಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ನಾಟಿ ಕಾರ್ಯದಲ್ಲಿ ಪಾಲ್ಗೊಂಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಒಬ್ಬ ಜನಪ್ರತಿನಿಧಿ ಕೇವಲ ಮತದ ಲೆಕ್ಕಾಚಾರಗಳನ್ನು ಹಾಕುವುದಲ್ಲ. ವಿಭಿನ್ನವಾದ ಕಾರ್ಯಗಳನ್ನು ಮಾಡಬೇಕು. ಇಂದು ನಶಿಸಿ ಹೋಗುತ್ತಿದ್ದ ಕೃಷಿ ಪರಂಪರೆಯನ್ನು ಉಳಿಸುವ ಕೆಲಸವಾಗಿದೆ. ಕೃಷಿಯ ಮೇಲಿನ ಪ್ರೀತಿ,
ಕಾಪು ಠಾಣಾ ವ್ಯಾಪ್ತಿಯ ಮೂಳೂರು ಮುಖ್ಯ ರಸ್ತೆಯ ಬಳಿಯ ಮೂರು ಮನೆಗಳಿಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ನಗನಗದು ಕಳವು ಗೈದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಮೂಳೂರು ಈಸ್ಟ್ ವೆಸ್ಟ್ ನರ್ಸರಿ ಸಮೀಪದ ಮಹಮ್ಮದ್ ರಫೀಕ್, ಮಧುರ ಕಾಂಪೌಂಡ್ ನಿವಾಸಿ ಇಬ್ರಾಹಿಂ ಹಾಗೂ ಶಹನಾಜ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಅಪಾರ ನಗ ಹಾಗೂ ನಗದು ಕಳವು ಗೈದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಯಾದರೂ ಮೌಲ್ಯ ಇನ್ನಷ್ಟೇ ತಿಳಿದು ಬರ ಬೇಕಾಗಿದೆ. ಈ ಮೂರೂ ಮನೆ […]
ಬೇಲೂರು ತಾಲೂಕಿನ ಮಲೆನಾಡು ಪ್ರದೇಶವಾದ ಅರೆಹಳ್ಳಿ ಮತ್ತು ಬಿಕ್ಕೋಡು ಹೋಬಳಿಯ ಸುತ್ತಮುತ್ತಲ ಹಳ್ಳಿಗಳಲ್ಲಿ ಕಳೆದ ಒಂದು ವಾರಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಸುಂಡೆಕೆರೆ ಹಾಗೂ ನಾರ್ವೆ ಪೇಟೆ ಸಂಪರ್ಕಿಸುವ ಸೇತುವೆ ಮುಳುಗಡೆ ಯಾಗಿದೆ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಹಾಗೂ ರಸ್ತೆಬದಿಯ ಮರಗಳು ನೆಲಕಚ್ಚಿದ್ದು ಅನೇಕ ಹಳ್ಳಿಗಳಲ್ಲಿ ವಿದ್ಯುತ್ ಕಡಿತಗೊಂಡಿದೆ ಕೆರೆ-ಕಟ್ಟೆ
ಬಂಟ್ವಾಳ ತಾಲೂಕಿನ ವಿಟ್ಲದ ಕೊಳ್ನಾಡು ಗ್ರಾಮದ ಮದಕ, ಪಡಾರು, ಮಾದಕಟ್ಟೆ, ಬಾರೆಬೆಟ್ಟು, ಮುಂಡತ್ತಜೆ ಮತ್ತು ತಾಳಿತ್ತನೂಜಿ ಸುತ್ತಮುತ್ತ ಕಳೆದ ಎರಡು ತಿಂಗಳಿಂದ ಮಿತಿಮೀರಿದ ಚಿರತೆಗಳ ಕಾಟದಿಂದ ಬೇಸತ್ತ ಸಾರ್ವಜನಿಕರು ಬೋನು ಅಳವಡಿಸಿದ್ದಾರೆ. ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದರೂ ಒಂದು ಬಾರಿ ಮಾತ್ರ ಸ್ಥಳಕ್ಕಾಗಮಿಸಿ ಹರಕೆ ತೀರಿಸಿದ್ದಾರೆ. ಬೋನು ತಂದಿಟ್ಟು ಚಿರತೆ ಹಿಡಿಯುವಂತೆ ಸ್ಥಳೀಯರು ಅಂಗಲಾಚಿದ್ದರೂ ತಂದಿರಿಸುತ್ತೇವೆಂದು ತಿಳಿಸಿದ್ದರು. ಅದಾದ ಬಳಿಕ
ಮಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಉಡುಪಿ ಅದಮಾರು ಮಠದ ವಿಶ್ವಪ್ರೀಯ ತಿರ್ಥ ಸ್ವಾಮೀಜಿ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ರು. ಇದೇ ವೇಳೆ ಆಸ್ಕರ್ ಕುಟುಂಬಿಕರಿಗೆ ಧೈರ್ಯ ತುಂಬಿದರು. ಅದಮಾರು ಮಠ, ಗುರುಗಳು ಅಂದರೆ ಅಸ್ಕರ್ ಅವರಿಗೆ ಬಹಳ ಗೌರವ, ಇವರ ತಂದೆಯವರು ನಮ್ಮ ಗುರುಗಳಿಗೆ ಹೆಡ್ ಮಾಸ್ಟರ್ ಅಗಿದ್ದವರು. ಆಸ್ಕರ್ ಅವರು ಮಾಡಿದ ಸಮಾಜ ಸೇವೆ ಅನನ್ಯ.
ಕಡಬ: ಆರ್ಥಿಕವಾಗಿ ಶಕ್ತರಾಗಿರುವವರು ಸಮಾಜಕ್ಕೆ ಸಹಾಯವಾಗುವ ರೀತಿಯಲ್ಲಿ ಕೊಡುಗೆ ನೀಡಿ ಸಮಾಜದ ಋಣ ತೀರಿಸಬೇಕು ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಅವರು ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಕಾರ್ಡಿಯಾಲಾಜಿ ಎಟ್ ಡೋರ್ ಸ್ಟೆಪ್ಸ್ ಫೌಂಡೇಷನ್ ಟ್ರಸ್ಟ್ , ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಹಾಗೂ ಭಾರತೀಯ ಜನೌಷಧಿ ಕೇಂದ್ರ ಇದರ ಸಹಯೋಗದಲ್ಲಿ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯ ಕಾರ್ಡಿಯಾಲಾಜಿ
ಕುಂದಾಪುರ: ಉತ್ತರಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಮುರ್ಡೇಶ್ವರದ 21 ವರ್ಷದ ಯುವತಿ ಯಮುನಾ ನಾಯ್ಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಧಾರವಾಡದ ಉಚ್ಚ ನ್ಯಾಯಾಲಯದ ಪೀಠ ಮಹತ್ವದ ತೀರ್ಪು ನೀಡಿದೆ. ಅತ್ಯಾಚಾರ, ಕೊಲೆ ಪ್ರಕರಣ ನಡೆದು ಸುಮಾರು 11 ವರ್ಷಗಳ ಬಳಿಕ ಮರು ತನಿಖೆ ನಡೆಸುವಂತೆ ನ್ಯಾಯಾಲಯ ತೀರ್ಪು ನೀಡಿದ್ದು ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವೆಂಕಟೇಶ್ ಹರಿಕಾಂತ್ ಎನ್ನುವ ವ್ಯಕ್ತಿ
ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ) ಮಂಗಳೂರು ಇದರ ಆಶ್ರಯದಲ್ಲಿ ’ಬ್ಯಾರಿ ದಫ್, ಕೋಲ್ಕಲಿ, ಒಪ್ಪನೆ ಪಾಟ್, ಕೈಕೊಟ್ಟ್ ಪಾಟ್ ಜಾನಪದ ಕಲೆಗಳ ಕೋರ್ಸ್ ತರಬೇತಿಯ ಪ್ರಮಾಣ ಪತ್ರ ವಿತರಣಾ ಹಾಗೂ ಪ್ರತಿಭಾ ಪ್ರದರ್ಶನ ಸಮಾರಂಭ ಕಾರ್ಯಕ್ರಮವು ಶನಿವಾರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಮಾಫೇಯಿ ಸೆಂಟರ್ ಏರಿಕ್ ಮಥಾಯಸ್ ಸಭಾಂಗಣದಲ್ಲಿ ನಡೆಯಿತು. ದಫ್, ಕೋಲ್ಕಲಿ ಬಾರಿಸೋ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
ದ.ಕ. ಜಿಲ್ಲೆಯಾದ್ಯಂತ ಹಾಗೂ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಸೇರಿದಂತೆ ಹಲವಾರು ಅಪರಾಧ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರಿಗೆ ಸಹಕಾರ ನೀಡಿರುವ ಪೊಲೀಸ್ ಶ್ವಾನ ’ಸುಧಾ’ ಕೊನೆಯುಸಿರೆಳೆದಿದೆ. ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಮೈದಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಸುಧಾಗೆ ಭಾವಪೂರ್ಣ ಅಂತಿಮ ನಮನವನ್ನು ಸಲ್ಲಿಸಲಾಯಿತು. ಬಿಳಿ ವಸ್ತ್ರದಲ್ಲಿ ಶ್ವಾನ ಸುಧಾಳ ಮೃತದೇಹವನ್ನು ಸುತ್ತಿ, ಹೂವಿನಿಂದ ಅಲಂಕರಿಸಿ ಪೊಲೀಸ್ ವಾದ್ಯ, ತೋಪು ಹಾರಿಸುವಿಕೆ


















