ಮಂಗಳೂರು: ಕರ್ನಾಟಕದ ರಾಜ್ಯದ ದ್ವಿತೀಯ ಪಿಯುಸಿಯ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ 14ನೇ ರಾಂಕ್ ಮತ್ತು ಮಂಗಳೂರಿಗೆ 6ನೇ ರಾಂಕ್ ಗಳಿಸಿರುವ ಕುಮಾರಿ ರಶ್ಮಿತಾ ರಾಜು ಕುಲಾಲ್ ಇವರ ಉನ್ನತ ವ್ಯಾಸಾಂಗಕ್ಕೆ ಕುಲಾಲ ಪ್ರತಿಷ್ಠಾನ ಮಂಗಳೂರು ಇದರು ವತಿಯಿಂದ ಸುಮಾರು 25 ಸಾವಿರವನ್ನು ನೆರವನ್ನು ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯ ಯಾನೆ ಕುಲಾಲರ ಮಾತೃ ಸಂಘದಲ್ಲಿ
ಕುರಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ 2025- 26 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಅಭಿವಿನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಎ.ಓ.ಎಲ್.ಇ ಕಮಿಟಿ ‘ಬಿ” ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳ ಪೋಷಕರು ನಮ್ಮ ಸಂಸ್ಥೆಯ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ನಾವು ಬದ್ಧರಿದ್ದೇವೆ
ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ನಗರದ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ ನಾಟಕ ಆರಂಭವಾಗಿತ್ತು ಎಂಬ ವಿಚಾರವನ್ನು ತಮ್ಮ ಲಕ್ಷಣ ಅವರು ಈ ಸಂದರ್ಭದಲ್ಲಿ
ಸರಕಾರಿ ನೇಮಕಾತಿಗಳು ಅದರಲ್ಲೂ ಅಗ್ನಿಪಥ್ ಮತ್ತು SSC GD ಸೇರಿದಂತೆ ಸಶಸ್ತ್ರ ಪಡೆಗಳಿಗೆ ತರಬೇತಿ ನೀಡುವ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಸದ್ಯ SSC GD ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂಬರುವ ದೈಹಿಕ ಸದೃಢತೆಯ ಪರೀಕ್ಷೆಗೆ (physical fitness) ತಯಾರಾಗುತ್ತಿರುವವರಿಗೆ ಮತ್ತು ಅಗ್ನಿಪಥ್ ನೇಮಕಾತಿಗೆ ಮೈದಾನ ತರಬೇತಿಯನ್ನು ಉಚಿತವಾಗಿ ನೀಡಲು ಉದ್ದೇಶಿಸಲಾಗಿದೆ. ಈಗಾಗಲೇ ಅತ್ಯುತ್ತಮ ತರಬೇತಿಯ ಮೂಲಕ 26 ಯುವಕರು
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಸ್ವಸ್ಥವೃತ್ತ ವಿಭಾಗ, ಎನ್ಎಸ್ಎಸ್ ವಿಭಾಗ ಹಾಗೂ ಆಯುಷ್ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ 11ನೇ ಅಂತರಾಷ್ಟಿಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಕೆ ವಿ ಚಿದಾನಂದ, ಅಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಸಂಸ್ಥೆಯ ವಿದ್ಯಾರ್ಥಿ
ತುಂಬೆ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ|ತುಂಬೆ ಮೊಯ್ದಿನ್ ಅವರಿಗೆ ಪೋಲಂಡ್‌ನ ಲ್ಯುಬ್ಲಿನ್ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿದೆ. ಜಾಗತಿಕ ಆರೋಗ್ಯ ಸೇವೆ, ವ್ಯೆದ್ಯಕೀಯ ಶಿಕ್ಷಣ ಹಾಗೂ ಸಮುದಾಯ ಅಭಿವೃದ್ಧಿ ಉದ್ದೇಶದ ಸಂಶೋಧನಾ ಕ್ಷೇತ್ರಕ್ಕೆ ಅವರ ಕೊಡುಗೆಯನ್ನು ಆಧರಿಸಿ ಈ ಗೌರವ ನೀಡಲಾಗಿದೆ. ಇದು ಅವರಿಗೆ ಲಭಿಸುತ್ತಿರುವ ಐದನೇ ಗೌರವ ಡಾಕ್ಟರೇಟ್. ಸಮುದಾಯ ಪ್ರಗತಿಗೆ ಡಾ|ಮೊಯ್ದಿನ್ ಅವರ ಪ್ರಯತ್ನ ಮತ್ತು ಅದಕ್ಕಾಗಿ ತುಂಬೆ ಇಂಟರ್‌ನ್ಯಾಷನಲ್
ಸಾಮಾನ್ಯ ಜನರ ಕನಸುಗಳಿಗೆ ರೂಪ ಕೊಡುವ ಮಹತ್ವಾಕಾಂಕ್ಷೆಯೊಂದಿಗೆ ಡ್ರೀಮ್ ಡೀಲ್ ಗ್ರೂಪ್ ದೇಶದಾದ್ಯಂತ ತನ್ನ ವಿಸ್ತರಣೆಯನ್ನು ಮುಂದುವರೆಸಿದೆ. *ಕೇವಲ ತಿಂಗಳಿಗೆ 1,೦೦೦ ರೂಪಾಯಿ ಮಾತ್ರ ಉಳಿತಾಯ ಮಾಡಿ* ಲಕ್ಷಾಂತರ ರೂಪಾಯಿ ಬೆಲೆಯ ಮನೆ, ಕಾರು, ವಿದೇಶಿ ಪಯಣ, ಚಿನ್ನದ ಆಭರಣಗಳನ್ನು ಗೆಲ್ಲುವ ಅವಕಾಶವನ್ನು ನೀಡಿದೆ. ೨೦ ಕಂತುಗಳಲ್ಲಿ ಭಾಗವಹಿಸುವ ಅವಕಾಶವಿದೆ. ಪ್ರತಿ ಡ್ರಾದಲ್ಲಿ ಕಾರು, ಬೈಕ್, ಮೊಬೈಲ್, ಚಿನ್ನ, ಬೆಲೆಬಾಳುವ ಮನೆ, ಪ್ಲಾಟ್ಸ್, ಇನ್ನಿತರ ಗೃಹೋಪಯೋಗಿ
ಮಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ
ಸುಳ್ಯ: ಸುಳ್ಯದ ಅಡ್ಕಾರ್‌ನಲ್ಲಿ ಡಸ್ಟರ್ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ. ಕಾರು ಕೇರಳ ರಾಜ್ಯದ ನೋಂದಣಿ ಹೊಂದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬಂಟ್ವಾಳದ ಬೆಂಜನಪದವಿನಲ್ಲಿ ಕಲ್ಲು ತೆಗೆದು ನಿರ್ಮಾಣಗೊಂಡ ನೀರು ನಿಂತ ಹಳ್ಳವೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಬೆಂಜನಪದವು ನಿವಾಸಿ ಸಾಗರ್(28) ಮೃತಪಟ್ಟ ಯುವಕ. ಶನಿವಾರದಿಂದ ಸಾಗರ್ ನಾಪತ್ತೆಯಾಗಿದ್ದರು. ಮನೆಮಂದಿ ಹುಡುಕಾಟ ನಡೆಸಿದ್ದರು. ಆದರೆ ಆತ ಎಲ್ಲೂ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ ಸಾಗರ್ ಮೃತದೇಹ ಹಳ್ಳವೊಂದರಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.




























